ಬಿಜೆಪಿಯ 17 ಶಾಸಕರಿಗೆ ಕಾಂಗ್ರೆಸ್ ಕಿರುಕುಳ ನೀಡುವ ಉದ್ದೇಶ‌ ಇಟ್ಟುಕೊಂಡಿದೆ: ಸಂಸದ ಮುನಿಸ್ವಾಮಿ

ಕರ್ನಾಟಕ ಕಾಂಗ್ರೆಸ್ ಆಪರೇಷನ್ ಹಸ್ತಾಕ್ಕೆ ಕೈ ಹಾಕುತ್ತಿದೆ. ವಿಪಕ್ಷಗಳಾದ ಬಿಜೆಪಿ-ಜೆಡಿಎಸ್ ಶಾಸಕರ ಸೆಳೆಯುವ ಯತ್ನಗಳನ್ನು ನಡೆಸುತ್ತಿದೆ. ಈ ಬಗ್ಗೆ ಆಕ್ರೋಶ ಹೊರಹಾಕಿದ ಕೋಲಾರ ಬಿಜೆಪಿ ಸಂಸದ ಎಸ್​.ಮುನಿಸ್ವಾಮಿ, ಬಿಜೆಪಿಯ 17 ಶಾಸಕರಿಗೆ ಕಿರುಕುಳ ನೀಡುವ ಉದ್ದೇಶವನ್ನು ಕಾಂಗ್ರೆಸ್ ಇಟ್ಟುಕೊಂಡಿದೆ ಎಂದಿದ್ದಾರೆ.

ಬಿಜೆಪಿಯ 17 ಶಾಸಕರಿಗೆ ಕಾಂಗ್ರೆಸ್ ಕಿರುಕುಳ ನೀಡುವ ಉದ್ದೇಶ‌ ಇಟ್ಟುಕೊಂಡಿದೆ: ಸಂಸದ ಮುನಿಸ್ವಾಮಿ
ಕೋಲಾರ ಸಂಸದ ಎಸ್.ಮುನಿಸ್ವಾಮಿ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್
Follow us
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Updated By: Rakesh Nayak Manchi

Updated on: Aug 20, 2023 | 9:29 PM

ಕೋಲಾರ, ಆಗಸ್ಟ್ 20: ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗೆ ಕನಸಿನಲ್ಲೂ ಯೋಚಿಸದಂತಹ ಹೊಡೆತ ನೀಡಿದ ಕಾಂಗ್ರೆಸ್, ಇದೀಗ ಆಪರೇಷನ್ ಹಸ್ತದ (Operation Hasta) ಮೂಲಕ ಕೇಸರಿ ಪಡೆಯ ಶಕ್ತಿಯನ್ನು ಮತ್ತಷ್ಟು ಕುಂದಿಸಲು ಯತ್ನಿಸುತ್ತಿದೆ. ಈ ಬಗ್ಗೆ ಆಕ್ರೋಶ ಹೊರಹಾಕಿದ ಕೋಲಾರದ ಸಂಸದ ಎಸ್​​.ಮುನಿಸ್ವಾಮಿ (S. Muniswamy), ಬಿಜೆಪಿ ಸೇರಿದ್ದ 17 ಶಾಸಕರಿಗೆ ಕಿರುಕುಳ ನೀಡುವ ಉದ್ದೇಶ ಕಾಂಗ್ರೆಸ್ ಪಕ್ಷ ಇಟ್ಟುಕೊಂಡಿದೆ ಎಂದು ಹೇಳಿದ್ದಾರೆ.

ಬಿಜೆಪಿ ಶಾಸಕ ಎಸ್. ಟಿ. ಸೋಮಶೇಖರ್ ಅವರ ಯಶವಂತಪುರ ವಿಧಾನಸಭೆ ಕ್ಷೇತ್ರಗಳಲ್ಲಿ ಕುಡಿಯುವ ನೀರಿನ ಕೊಳವೇ ಬಾವಿಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪಕ್ಷಪಾತ ಮಾಡುತಿದ್ದಾರೆ. ಈ ಬಗ್ಗೆ ಸ್ವತಃ ಸೋಮಶೇಖರ್ ಅವರೇ ತಮ್ಮ ಅಳಲು ತೋಡಿಕೊಂಡಿದ್ದಾರೆ. ಅವರಿಗೊಬ್ಬರಗಷ್ಟೆ ಅಲ್ಲ. ವಿರೋಧ ಪಕ್ಷದ ಎಲ್ಲ ಶಾಸಕರಿಗೂ ಇದೇ ರೀತಿ ಕಿರುಕುಳ ನೀಡುತಿದ್ದಾರೆ ಎಂದು ಆರೋಪಿಸಿದ್ದಾರೆ.

ಡಿಕೆ ಶಿವಕುಮಾರ್ ಅವರು ಅಧಿಕಾರಿಗಳನ್ನು ಕೈಗೊಂಬೆ ಮಾಡಿಕೊಂಡಿದ್ದಾರೆ. ಅಧಿಕಾರಿಗಳು ಕೇಳದಿದ್ದರೆ ವರ್ಗಾವಣೆಯ ಭಯ ಬೀಳಿಸುತ್ತಿದ್ದಾರೆ. ಕೋಲಾರದಲ್ಲಿ ಸಹ ಅಧಿಕಾರಿಗಳು ಶಿಷ್ಟಾಚಾರ ಪ್ರಕಾರ ನಡೆದುಕೊಳ್ಳುತಿಲ್ಲ ಎಂದು ಮುಳಬಾಗಿಲು ಶಾಸಕ ಹೇಳಿದ್ದಾಗಿ ಮುನಿಸ್ವಾಮಿ ತಿಳಿಸಿದರು.

ಇದನ್ನೂ ಓದಿ: ಆಪರೇಷನ್ ಹಸ್ತ: 20 ಶಾಸಕರಿಗೆ ಕಾಂಗ್ರೆಸ್ ಹೈಕಮಾಂಡ್ ಗಾಳ, ಹೊಸ ಬಂಬ್ ಸಿಡಿಸಿದ ಸತೀಶ್ ಜಾರಕಿಹೊಳಿ

ನರೇಂದ್ರ ಮೋದಿ ನಾಯಕತ್ವ ನೋಡಿ ಕಾಂಗ್ರೆಸ್ ಶಾಸಕರು ಬಿಜೆಪಿಗೆ ಬಂದಿದ್ದರು. ಬಲವಂತವಾಗಿ ಅವರನ್ನು ಪಕ್ಷಕ್ಕೆ ಮತ್ತೆ ಸೆಳೆಯುವ ಕೆಲಸ‌ ಕೈಬಿಡಬೇಕು. ಗ್ಯಾರಂಟಿ ಮೇಲೆ ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಅಧಿಕಾರಕ್ಕೆ‌ ಬಂದಿದೆ. ಈಗ ವಿಧಾನಸಭೆ ವಿಸರ್ಜನೆ‌ ಮಾಡಿದರೆ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ 60 ಸ್ಥಾನಗಳ್ನೂ ಗೆಲ್ಲಲ್ಲ ಎಂದರು.

ಕಾಂಗ್ರೆಸ್ ವಿರುದ್ಧ ಯಾರು ಮಾತಾಡುತ್ತಾರೋ ಅಂತಹವರ ವಿರುದ್ಧ ದ್ವೇಷ ಸಾಧಿಸುವ ಕೆಲಸ‌ ಮಾಡಲಾಗುತ್ತಿದೆ. ಕಿರುಕುಳ ಕೊಟ್ಟು ಬ್ಲ್ಯಾಕ್‌ಮೇಲ್ ಮಾಡುವುದನ್ನು ಬಿಡಬೇಕು. ಲೋಕಸಭೆ ಚುನಾವಣೆಯಲ್ಲಿ ನಿಮಗೆ ಜನರು ತಕ್ಕ ಪಾಠ ಕಲಿಸುತ್ತಾರೆ ಎಂದು ವಾಗ್ದಾಳಿ ನಡೆಸಿದರು.

ಖರ್ಗೆ ಸ್ಪರ್ಧಿಸಿದರೂ ಕೋಲಾರದಲ್ಲಿ ಬಿಜೆಪಿಯದ್ದೇ ಗೆಲುವು

ಕೋಲಾರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆಗೆ ಖರ್ಗೆಗೆ ಆಹ್ವಾನ ವಿಚಾರವಾಗಿ ಮಾತನಾಡಿದ ಮುನಿಸ್ವಾಮಿ, ಕೋಲಾರ ಕ್ಷೇತ್ರದಲ್ಲಿ ಯಾರೇ ಅಭ್ಯರ್ಥಿಯಾದರೂ ಎದುರಿಸಲು ಸಿದ್ಧ ಎಂದರು. ನರೇಂದ್ರ ಮೋದಿಯನ್ನು ಮತ್ತೆ ಪ್ರಧಾನಿ ಮಾಡಲು ಜನ ನಿರ್ಧರಿಸಿದ್ದಾರೆ. ಇಲ್ಲಿ ಖರ್ಗೆ ಸೇರಿದಂತೆ ಯಾರೇ ಅಭ್ಯರ್ಥಿ ಆದರೂ ಬಿಜೆಪಿ ಗೆಲುವು ಖಚಿತ. ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ನನಗೆ ಯಾವುದೇ ಆತಂಕವಿಲ್ಲ ಎಂದರು.

ನರೇಂದ್ರ ಮೋದಿ 3ನೇ ಅವಧಿಗೆ ಪ್ರಧಾನಿ ಆಗುವುದರಲ್ಲಿ ಸಂಶಯವಿಲ್ಲ. 40 ಅಲ್ಲ 80 ಪಕ್ಷಗಳು ಒಂದಾದರೂ ಅವರಿಗೆ ಪ್ರತಿಪಕ್ಷ ಸ್ಥಾನವೂ ಸಿಗಲ್ಲ ಎಂದು ಮುನಿಸ್ವಾಮಿ ಹೇಳಿದರು. ಕೋಲಾರದಿಂದ ಸ್ಪರ್ಧಿಸುವಂತೆ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಬಂಗಾರಪೇಟೆ ಶಾಸಕ ಎಸ್​​ಎನ್​ ನಾರಾಯಣಸ್ವಾಮಿ ಆಹ್ವಾನಿಸಿದ್ದರು.

ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್