ಕೋಲಾರ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆ: ಜೋರು ಮಳೆ ನಿರೀಕ್ಷೆ
ಜನ ಮತ್ತು ಜಾನುವಾರುಗಳಿಗೆ ಹಾನಿಯಾಗುವ ಸಾಧ್ಯತೆಯಿದೆ. ಈ ಕುರಿತು ಗಮನಹರಿಸಿ ಅಗತ್ಯ ಕ್ರಮ ತೆಗೆದುಕೊಳ್ಳುವಂತೆ ಡೂಚನೆ ನೀಡಲಾಗಿದೆ. ಎಲ್ಲ ತಹಶೀಲ್ದಾರ್, ಉಪತಹಶೀಲ್ದಾರ್, ಗ್ರಾಮಲೆಕ್ಕಾಧಿಕಾರಿಗಳು ಕೇಂದ್ರ ಸ್ಥಾನದಲ್ಲಿರಬೇಕು ಎಂದು ಜಿಲ್ಲಾಡಳಿತ ತಾಕೀತು ಮಾಡಿದೆ.
ಕೋಲಾರ: ಮುಂದಿನ 24 ಗಂಟೆಗಳಲ್ಲಿ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುವ ನಿರೀಕ್ಷೆಯಿದ್ದು ಜಿಲ್ಲೆಯ ವ್ಯಾಪ್ತಿಯಲ್ಲಿ ಆರೆಂಟ್ ಅಲರ್ಟ್ ಘೋಷಿಸಲಾಗಿದೆ. ಈ ಕುರಿತು ಪತ್ರಿಕಾ ಹೇಳಿಕೆ ಹೊರಡಿಸಿರುವ ಜಿಲ್ಲಾ ಜಿಲ್ಲಾ ಕೃಷಿ ಹವಾಮಾನ ಘಟಕ ಮುಂದಿನ 24 ಗಂಟೆಗಳಲ್ಲಿ ಹೆಚ್ಚಿನ ಪ್ರಮಾಣದ ಮಳೆಯಾಗುವ ನಿರೀಕ್ಷೆಯಿದೆ ಎಂದು ತಿಳಿಸಿದೆ. 24X7 ಕಂಟ್ರೋಲ್ ರೂಂ ತೆರೆಯುವಂತೆ ಎಲ್ಲ ತಹಶೀಲ್ದಾರ್ರಿಗೆ ಸೂಚನೆ ನೀಡಲಾಗಿದೆ. ಸಾರ್ವಜನಿಕ ಆಸ್ತಿ, ಜನ ಮತ್ತು ಜಾನುವಾರುಗಳಿಗೆ ಹಾನಿಯಾಗುವ ಸಾಧ್ಯತೆಯಿದೆ. ಈ ಕುರಿತು ಗಮನಹರಿಸಿ ಅಗತ್ಯ ಕ್ರಮ ತೆಗೆದುಕೊಳ್ಳುವಂತೆ ಡೂಚನೆ ನೀಡಲಾಗಿದೆ. ಎಲ್ಲ ತಹಶೀಲ್ದಾರ್, ಉಪತಹಶೀಲ್ದಾರ್, ಗ್ರಾಮಲೆಕ್ಕಾಧಿಕಾರಿಗಳು ಕೇಂದ್ರ ಸ್ಥಾನದಲ್ಲಿರಬೇಕು ಎಂದು ಜಿಲ್ಲಾಡಳಿತ ತಾಕೀತು ಮಾಡಿದೆ. ತುರ್ತು ಸಂದರ್ಭದಲ್ಲಿ ಜನರು ಕಂಟ್ರೋಲ್ ರೂಂಗೆ ಕರೆ ಮಾಡಬಹುದು. ಸಂಪರ್ಕ ಸಂಖ್ಯೆಗಳು 97400 50061 (ಗೋವಿಂದರಾಜು) ಮತ್ತು 99163 01221 (ವಿ.ಮಂಜುನಾಥ್).
ರಾಜ್ಯದ ವಿವಿಧೆಡೆ ಮುಂದುವರಿದ ಮಳೆ ಬೆಂಗಳೂರು, ಬಳ್ಳಾರಿ, ದಾವಣಗೆರೆ, ಮೈಸೂರು, ಮಲೆನಾಡು ಸೇರಿದಂತೆ ಕರ್ನಾಟಕದ 13 ಜಿಲ್ಲೆಗಳಲ್ಲಿ ಇಂದು ಮಳೆ (Heavy Rain) ಮುಂದುವರೆಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ತಿಳಿಸಿದೆ. ಭಾರೀ ಮಳೆಯಾಗುವುದರಿಂದ ಅರಬ್ಬಿ ಸಮುದ್ರ ಮತ್ತು ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ರಾಜ್ಯಾದ್ಯಂತ ಮಳೆ ಹೆಚ್ಚಾಗಿದೆ. ಬೆಂಗಳೂರಿನಲ್ಲಿ (Bengaluru Rain) ಕಳೆದ ಕೆಲವು ದಿನಗಳಿಂದ ಆಗಾಗ ಸುರಿದ ಮಳೆ ನ. 12ರವರೆಗೆ ಮುಂದುವರಿಯಲಿದೆ. ಇಂದು ಕರ್ನಾಟಕದ ಕೆಲವು ಪ್ರದೇಶಗಳಲ್ಲಿ ತುಂತುರು ಇಲ್ಲವೇ ಹಗುರ ಮಳೆ ಆಗಲಿದೆ. ನಂತರ ಹಿಂಗಾರು ತುಸು ಚುರುಕಾಗಲಿದ್ದು, ನ. 11ರಂದು ಗುಡುಗು, ಮಿಂಚು ಸಹಿತ ಭಾರೀ ಮಳೆ ಸುರಿಯಲಿದೆ. ಬೆಂಗಳೂರು ನಗರ ಜಿಲ್ಲೆಗೆ ಇಂದು ‘ಯೆಲ್ಲೋ ಅಲರ್ಟ್’ (Yellow Alert) ನೀಡಲಾಗಿದೆ.
ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ ಮತ್ತು ಶಿವಮೊಗ್ಗ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಇಂದು ಭಾರೀ ಮಳೆಯಿಂದ ಯೆಲ್ಲೋ ಅಲರ್ಟ್ (Yellow Alert) ಘೋಷಿಸಲಾಗಿದೆ. ನವೆಂಬರ್ 11ರಂದು ತಮಿಳುನಾಡನ್ನು ಸುಳಿಗಾಳಿ ಪ್ರವೇಶಿಸುವ ಸಾಧ್ಯತೆಯಿದೆ. ಇಂದು ಮತ್ತು ನವೆಂಬರ್ 11ರಂದು ಮೈಸೂರು, ಮಂಡ್ಯ, ಹಾಸನ, ಚಾಮರಾಜನಗರ, ರಾಮನಗರ, ಶಿವಮೊಗ್ಗ ಮತ್ತು ಕೊಡಗು ಜಿಲ್ಲೆಗಳನ್ನು ಹೊರತುಪಡಿಸಿ ಬೆಂಗಳೂರು ಗ್ರಾಮಾಂತರ ಮತ್ತು ಬೆಂಗಳೂರು ನಗರದಲ್ಲಿ ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಹಳದಿ ಅಲರ್ಟ್ ಘೋಷಿಸಿದೆ.
ಕರ್ನಾಟಕದ ದಕ್ಷಿಣ ಒಳನಾಡಿನ ಮಂಡ್ಯ ಮತ್ತು ಮೈಸೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆಯಾಗುವ ನಿರೀಕ್ಷೆಯಿದೆ. ರಾಜ್ಯದ ಉತ್ತರ ಒಳಭಾಗದ ಹಾವೇರಿ, ವಿಜಯನಗರ ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಮಲೆನಾಡಿನಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದ್ದು, ಕೊಡಗು, ಹಾಸನ, ಚಿಕ್ಕಮಗಳೂರು ಮತ್ತು ಶಿವಮೊಗ್ಗದಲ್ಲಿ ಚದುರಿದಂತೆ ಅತಿ ಹೆಚ್ಚು ಮಳೆಯಾಗುವ ನಿರೀಕ್ಷೆಯಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆಯೊಂದಿಗೆ ವ್ಯಾಪಕ ಸಾಧಾರಣ ಮಳೆಯ ಸಾಧ್ಯತೆಯಿದ್ದರೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಇದನ್ನೂ ಓದಿ: Chennai Rain ತಮಿಳುನಾಡು, ಪುದುಚೇರಿಯಲ್ಲಿ ರೆಡ್ ಅಲರ್ಟ್; ಮಳೆಗೆ ಬಲಿಯಾದವರ ಸಂಖ್ಯೆ 12ಕ್ಕೆ ಏರಿಕೆ ಇದನ್ನೂ ಓದಿ: Tamil Nadu Rains ತಮಿಳುನಾಡಿನ ಕೆಲವು ಭಾಗಗಳಲ್ಲಿ ಭಾರೀ ಮಳೆ ಸಾಧ್ಯತೆ; 9 ಜಿಲ್ಲೆಗಳಲ್ಲಿ ರಜೆ ಘೋಷಣೆ