AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಲಾರ ಈದ್​ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ಟೈನ್​ ಬಾವುಟ ಹಾರಾಟ, ಗಲಾಟೆ: ಪ್ರಕರಣ ದಾಖಲು

ಸೋಮವಾರ ಕೋಲಾರ ನಗರದಲ್ಲಿ ಈದ್​ ಮಿಲಾದ್​ ಮೆರವಣಿಗೆ ನಡೆಯಿತು. ಮೆರವಣಿಗೆಯಲ್ಲಿ ನೂರಾರು ಜನರು ಭಾಗಿಯಾಗಿದ್ದರು. ಮೆರವಣಿಗೆ ವೇಳೆ ನಡೆದ ಗುಂಪು ಘರ್ಷಣೆ ಮತ್ತು ಪ್ಯಾಲೆಸ್ಟೈನ್​ ಬಾವುಟ ಹಾರಿಸಿದ್ದಕ್ಕೆ ಎರಡು ಪ್ರತ್ಯೇಕ ಪ್ರಕರಣ ದಾಖಲಾಗಿವೆ.

ಕೋಲಾರ ಈದ್​ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ಟೈನ್​ ಬಾವುಟ ಹಾರಾಟ, ಗಲಾಟೆ: ಪ್ರಕರಣ ದಾಖಲು
ಈದ್​ ಮಿಲಾದ್​ ಮೆರವಣಿಗೆ
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Edited By: |

Updated on:Sep 17, 2024 | 9:32 AM

Share

ಕೋಲಾರ, ಸೆಪ್ಟೆಂಬರ್​ 17: ಸೋಮವಾರ ನಡೆದ ಈದ್ ಮಿಲಾದ್ (Eid Milad Procession) ಮೆರವಣಿಗೆ ವೇಳೆ ನಡೆದ ದುಷ್ಕೃತ್ಯಕ್ಕೆ ಸಂಬಂಧಿಸಿದಂತೆ ಕೋಲಾರ (Kolar) ನಗರ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣ ದಾಖಲಾಗಿವೆ. ಅಂಜುಮನ್ ಸಂಸ್ಥೆ ಬಳಿ ಫ್ರೀ ಪ್ಯಾಲೆಸ್ಟೈನ್ ಧ್ವಜ ಹಾರಾಟ ಮತ್ತು ಕ್ಲಾಕ್ ಟವರ್​ ಬಳಿ ಮೆರವಣಿಗೆ ಬಂದಾಗ ನಡೆದ ಗುಂಪು ಘರ್ಷಣೆ ವಿಚಾರವಾಗಿ ಪ್ರಕರಣ ದಾಖಲಾಗಿವೆ. ಗಲಾಟೆ ಸಂಬಂಧ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಕೋಲಾರ‌ದಲ್ಲಿ ಪೊಲೀಸ್ ಭದ್ರತೆ ಹೆಚ್ಚಿಸಲಾಗಿದೆ.

ಕ್ಲಾಕ್‌ ಟವರ್‌ ಬಳಿ ಗಲಾಟೆ

ಈದ್‌ ಮಿಲಾದ್ ಮೆರವಣಿಗೆ ವೇಳೆ ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪಿನ ನಡುವೆ ಮಾರಾಮರಿ ನಡೆದಿತ್ತು. ಕೋಲಾರದ ಕ್ಲಾಕ್‌ ಟವರ್‌ ಬಳಿ ಮೆರವಣಿಗೆ ಸಾಗುವಾಗ ಏಕಾಏಕಿ‌ ಮಾರಕಾಸ್ತ್ರ ಹಿಡಿದು ಬಂದ ಒಂದು ಗುಂಪು ಹಲ್ಲೆ‌ ಮಾಡಿತ್ತು. ಹಲ್ಲೆಯಿಂದ ಸೈಯದ್ ಸಲ್ಮಾನ್, ಸೈಫ್, ಹುಸೇನ್ ಕಾಷಿಪ್, ಕಲೀಲ್ ಅಹಮದ್, ಸೇರಿ ಆರು ಜನರಿಗೆ ಗಾಯವಾಗಿದ್ದು, ಎಸ್‌ಎನ್‌ಆರ್‌ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಸಯ್ಯದ್ ವಸೀಂ ಪಾಷಾ, ಥಾಹೀರ್ ಗುಂಪಿನಿಂದ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಲಾಗಿತ್ತು.

ಇದನ್ನೂ ಓದಿ: ವಕ್ಫ್​​ ತಂಟೆಗೆ ಬಂದರೆ ನಿಮ್ಮನ್ನು ಮುಸ್ಲಿಂ ಸಮಾಜ ಮುಗಿಸುತ್ತೆ ಅಂತ ಪ್ರಚೋದನಕಾರಿ ಹೇಳಿಕೆ ನೀಡಿದ್ದ SDPI ಮುಖಂಡನ ವಿರುದ್ಧ ಎಫ್​ಐಆರ್​

ವಿಚಾರ ತಿಳಿಯುತ್ತಿದ್ದಂತೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಬಿ.ನಿಖಿಲ್‌ ಸ್ಥಳಕ್ಕೆ ಧಾವಿಸಿದ್ದು, ಗುಂಪುಗೂಡಿದ್ದ ಜನರನ್ನು ಚದುರಿಸಿದ್ದರು. ಬಳಿಕ ಮೆರವಣಿಗೆ ಮುಂದೆ ಸಾಗಿತ್ತು. ನಗರದಲ್ಲಿ ಹೆಚ್ಚಿನ ಪೊಲೀಸರನ್ನು ನಿಯೋಜನೆ ಮಾಡಲಾಗಿದ್ದು, ಕೋಲಾರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿತ್ತು.

ಪ್ಯಾಲೆಸ್ಟೈನ್​ ಬಾವುಟ

ಈದ್ ಮಿಲಾದ್ ಮೆರವಣಿಗೆ ವೇಳೆ ಫ್ರೀ ಪ್ಯಾಲೆಸ್ಟೈನ್​​ ಎನ್ನುವ ಧ್ವಜ ಹಾರಾಡಿತ್ತು. ಎಂ.ಜಿ ರಸ್ತೆಯಲ್ಲಿರುವ ಅಂಜುಮನ್​ ಕಛೇರಿಯ ಬಳಿ ಧ್ವಜಾರೋಹಣ ಮಾಡಿ ಮೆರವಣಿಗೆಗೆ ಚಾಲನೆ ನೀಡಲಾಗಿತ್ತು. ಈ ವೇಳೆ ಮೆರವಣಿಗೆಯಲ್ಲಿ ಫ್ರೀ ಪ್ಯಾಲೆಸ್ಟೈನ್​​ ​ಎಂದು ಧ್ವಜದ ಮೇಲೆ ಬರೆಯಲಾಗಿತ್ತು. ಬರಹ ಕಾಣಿಸಿದ್ದೇ ತಡ ಕೂಡಲೇ ಪೊಲೀಸರು ಆ ಬಾವುಟವನ್ನು ತೆಗೆಸಿದ್ದಾರೆ. ಬಳಿಕ ಪೊಲೀಸರು ಬೇರೆ ದೇಶದ ಬಾವುಟಗಳನ್ನು ಹಾರಿಸದಂತೆ ವಿವಾದ ಸೃಷ್ಟಿಸದಂತೆ ತಿಳಿಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 9:29 am, Tue, 17 September 24

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ