ಕೋಲಾರ: ಇತ್ತೀಚೆಗೆ ರಾಜ್ಯದಲ್ಲಿ ಮಕ್ಕಳ ಮಾರಾಟ ಪ್ರಕರಣಗಳು ಹೆಚ್ಚಾಗುತ್ತಿವೆ. ಸದ್ಯ ಕೋಲಾರದಲ್ಲಿ ಮಕ್ಕಳ ಮಾರಾಟ ಮಾಡಿರುವ ಆರೋಪ ಕೇಳಿಬಂದಿದ್ದು, ಇಬ್ಬರು ಆಶಾ ಕಾರ್ಯಕರ್ತೆಯರು ಮತ್ತು ಮಗುವಿನ ಪೋಷಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೋಲಾರ ಜಿಲ್ಲೆ ಕೆಜಿಎಫ್ ತಾಲೂಕಿನ ಪಂತನಹಳ್ಳಿ ಗ್ರಾಮದ ನೀಲಮ್ಮ ಮತ್ತು ಬಾಬು ದಂಪತಿ ಮಗುವನ್ನು ಮಾರಾಟ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಮಾರಾಟದದಲ್ಲಿ ಆಶಾ ಕಾರ್ಯಕರ್ತೆಯರು ಮಧ್ಯಸ್ಥಿಕೆ ವಹಿಸಿದ್ದಾರೆ ಎಂದು ಹೇಳಲಾಗುತ್ತಿದೆ.
ಮಗು ಮಾರಾಟದಲ್ಲಿ ಆಶಾ ಕಾರ್ಯಕರ್ತೆಯರು ಮಧ್ಯಸ್ಥಿಕೆ ವಹಿಸಿದಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ಸಂಧ್ಯಾ ಮತ್ತು ರೂಪಾ ಎಂಬುವವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇವರ ಹಿಂದೆ ಮಕ್ಕಳ ಮಾರಾಟ ಜಾಲವಿರುವ ಶಂಕೆಯೂ ವ್ಯಕ್ತವಾಗಿದೆ. ಸದ್ಯ ಬೇತಮಂಗಲ ಪೊಲೀಸ್ ಠಾಣೆ ಪೊಲೀದರು ತನಿಖೆಯನ್ನು ಮುಂದುವರಿಸಿದ್ದಾರೆ.
ವ್ಯಕ್ತಿಯ ಶವ ಪತ್ತೆ
ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಗೌನಿಪಲ್ಲಿಯಲ್ಲಿ ಅರೆಬೆಂದ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆಯಾಗಿದೆ.
ಆಂಜನೇಯ ದೇಗುಲದ ಬಳಿ ಮೃತದೇಹ ಪತ್ತೆಯಾಗಿದ್ದು, ಸ್ಥಳಕ್ಕೆ ಗೌನಿಪಲ್ಲಿ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಮುಂಜಾನೆ ಗ್ರಾಮ ಪಂಚಾಯತಿ ಸಿಬ್ಬಂದಿ ಕಸ ವಿಲೇವಾರಿ ಮಾಡುವ ವೇಳೆ ಮೃತದೇಹ ಪತ್ತೆಯಾಗಿದೆ.
ಇದನ್ನೂ ಓದಿ
ಅನ್ಯಕೋಮಿನ ಯುವತಿ ಪ್ರೀತಿಸಿದ್ದಕ್ಕೆ ಯುವಕನ ಕೊಲೆ ಪ್ರಕರಣ; ಆರೋಪಿಗಳ ಬಂಧನಕ್ಕೆ ಶಾಸಕಿ ಅಂಜಲಿ ನಿಂಬಾಳ್ಕರ್ ಒತ್ತಾಯ
ಬಲ್ಲಾಳಸಮುದ್ರ ಗ್ರಾಮದಲ್ಲಿ ಮತಾಂತರದ ಆರೋಪ; ಕ್ರೈಸ್ತ ಪ್ರಾರ್ಥನಾ ಮಂದಿರದ ಬಳಿ 2 ಗುಂಪಿನ ಮಧ್ಯೆ ವಾಗ್ವಾದ