ಕೋಲಾರ: ಗಾಂಜಾ ಮಾರಾಟ; ಉತ್ತರ ಪ್ರದೇಶ ಮೂಲದ ಇಬ್ಬರ ಬಂಧನ

| Updated By: ಕಿರಣ್ ಹನುಮಂತ್​ ಮಾದಾರ್

Updated on: Sep 02, 2023 | 8:01 PM

ಕೆಜಿಎಫ್ ನಗರ ಸೇರಿದಂತೆ ಸುತ್ತಮುತ್ತ ಗ್ರಾಮೀಣ ಭಾಗದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಉತ್ತರ ಪ್ರದೇಶ ಮೂಲದ ಇಬ್ಬರು ಆರೋಪಿಗಳನ್ನ ಕೆಜಿಎಫ್ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ ಒಂದುವರೆ ಲಕ್ಷ ಮೌಲ್ಯದ 2ಕೆ.ಜಿ 245 ಗ್ರಾಂ ಗಾಂಜಾ ವಶಕ್ಕೆ ಪಡೆಯಲಾಗಿದೆ. ಈ ಕುರಿತು ರಾಬರ್ಟ್‌ಸನ್ ಪೇಟೆ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡು ತನಿಖೆ ಕೈಗೊಂಡಿದ್ದಾರೆ.

ಕೋಲಾರ: ಗಾಂಜಾ ಮಾರಾಟ; ಉತ್ತರ ಪ್ರದೇಶ ಮೂಲದ ಇಬ್ಬರ ಬಂಧನ
ಬಂಧಿತ ಆರೋಪಿಗಳು
Follow us on

ಕೋಲಾರ, ಸೆ.02: ಜಿಲ್ಲೆಯ ಕೆಜಿಎಫ್‌(KGF) ನಗರದಲ್ಲಿ ಅಕ್ರಮವಾಗಿ ಗಾಂಜಾ ತಂದು ಮಾರಾಟ ಮಾಡುತ್ತಿದ್ದ ಉತ್ತರ ಪ್ರದೇಶ ಮೂಲದ ಇಬ್ಬರು ಆರೋಪಿಗಳನ್ನ ಕೆಜಿಎಫ್ ಪೊಲೀಸರು ಬಂಧಿಸಿದ್ದಾರೆ. ಉತ್ತರ ಪ್ರದೇಶ(Uttara Pradesh)ಮೂಲದ ಪೈಜಾಬ್ ಹಾಗೂ ಮೊಹ್ಮದ್ ಖಾಸಿಂ ಖಾನ್ ಬಂಧಿತ ಆರೋಪಿಗಳು. ಇವರು ಕೆಜಿಎಫ್ ನಗರ ಸೇರಿದಂತೆ ಸುತ್ತಮುತ್ತ ಗ್ರಾಮೀಣ ಭಾಗದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದರು. ಇಂದು ಕೆಜಿಎಫ್ ಹೊರ ವಲಯದ ಪಾರಂಡಹಳ್ಳಿ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ವೇಳೆ ಸಿಕ್ಕಿಬಿದ್ದಿದ್ದಾರೆ. ಆರೋಪಿಗಳಿಂದ ಒಂದುವರೆ ಲಕ್ಷ ಮೌಲ್ಯದ 2ಕೆ.ಜಿ 245 ಗ್ರಾಂ ಗಾಂಜಾ ವಶಕ್ಕೆ ಪಡೆಯಲಾಗಿದೆ. ಈ ಕುರಿತು ರಾಬರ್ಟ್‌ಸನ್ ಪೇಟೆ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡು ತನಿಖೆ ಕೈಗೊಂಡಿದ್ದಾರೆ.

ಬೀದಿನಾಯಿಗಳ ದಾಳಿಯಿಂದ ಬಾಲಕಿಗೆ ಗಂಭೀರ ಗಾಯ

ಆನೇಕಲ್ : ಕರ್ನಾಟಕದ ಗಡಿಭಾಗ ತಮಿಳುನಾಡಿನ ಹೊಸೂರಿನಲ್ಲಿ ಬೀದಿನಾಯಿಗಳು ಬಾಲಕಿ ಮೇಲೆ ದಾಳಿ ಮಾಡಿದ ಘಟನೆ ನಡೆದಿದೆ. ಮನೆಗೆ ನಡೆದುಕೊಂಡು ಹೋಗುತ್ತಿದ್ದಾಗ ಬಾಲಕಿ ಮೇಲೆ ದಾಳಿ ಮಾಡಿದ್ದು, ಈ ವೇಳೆ ಬಾಲಕಿಯ ಕಿರುಚಾಟ ಕೇಳಿ ಬಂದ ಸ್ಥಳೀಯ ನಿವಾಸಿಗಳು ರಕ್ಷಿಸಿದ್ದಾರೆ. ಗಂಭೀರ ಗಾಯಾಳು ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಬೀದಿ ನಾಯಿಗಳ ದಾಳಿ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ಇದನ್ನೂ ಓದಿ:ಬೆಂಗಳೂರಿಗೂ ಕಾಲಿಟ್ಟ ಗಾಂಜಾ ಚಾಕೊಲೇಟ್ ಮಾರಾಟ ಜಾಲ; ಓರ್ವ ಆರೋಪಿ ಬಂಧನ

ವೈದ್ಯರ ನಿರ್ಲಕ್ಷ್ಯಕ್ಕೆ ಬಾಲಕ ಸಾವು ಆರೋಪ

ಚಾಮರಾಜನಗರ: ವೈದ್ಯರ ನಿರ್ಲಕ್ಷ್ಯದಿಂದ ಬಾಲಕನೋರ್ವ ಸಾವನ್ನಪ್ಪಿದ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲದ ಜನನಿ ಆಸ್ಪತ್ರೆಯಲ್ಲಿ ನಡೆದಿದೆ. ಜನನಿ ಆಸ್ಪತ್ರೆಗೆ ದಾಖಲಾಗಿದ್ದ 10 ವರ್ಷದ ವಿಜಯ್ ಸಾವನ್ನಪ್ಪಿರುವ ವ್ಯಕ್ತಿ. ಅಪೆಂಡಿಕ್ಸ್ ಆಗಿದ್ದರಿಂದ ಬಾಲಕ ವಿಜಯ್ ಆಸ್ಪತ್ರೆಗೆ ದಾಖಲಾಗಿದ್ದ. ಬಳಿಕ ವಿಜಯ್ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ ಎಂದು ವೈದ್ಯರು ಹೇಳಿದ್ದರು. ನಂತರ ಉಸಿರಾಟದ ಸಮಸ್ಯೆಯಿಂದ ಮೃತಪಟ್ಟಿದ್ದಾನೆಂದು ಮಾಹಿತಿ ನೀಡಿದ್ದಾರೆ.

ವೈದ್ಯರ ನಿರ್ಲಕ್ಷ್ಯದಿಂದ ವಿಜಯ್ ಮೃತಪಟ್ಟಿದ್ದಾನೆಂದು ಕುಟುಂಬಸ್ಥರ ಆರೋಪ

ಇನ್ನು ಬಾಲಕ ವಿಜಯ್ ಸಾವನ್ನಪ್ಪಿರುವ ಕುರಿತು ವೈದ್ಯರು ಪೋಷಕರಿಗೆ ಮಾಹಿತಿ ನೀಡಿದ್ದಾರೆ. ವೈದ್ಯರು ಸರಿಯಾಗಿ ಅರಿವಳಿಕೆ ಚುಚ್ಚುಮದ್ದು ನೀಡಿಲ್ಲ, ಇದೀಗ ವೈದ್ಯರ ನಿರ್ಲಕ್ಷ್ಯದಿಂದ ವಿಜಯ್ ಮೃತಪಟ್ಟಿದ್ದಾನೆಂದು ಪೋಷಕರು ಆರೋಪಿಸಿದ್ದಾರೆ. ಜನನಿ ಆಸ್ಪತ್ರೆ ವೈದ್ಯರ ವಿರುದ್ಧ ಕ್ರಮ ಜರುಗಿಸುವಂತೆ ಪೋಷಕರ ಆಗ್ರಹಿಸಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ. ಸ್ಥಳಕ್ಕೆ ಕೊಳ್ಳೇಗಾಲ ಟೌನ್ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ