ಕೋಲಾರ: ಜಿಲ್ಲೆಯ ಮುಳಬಾಗಿಲು ತಾಲ್ಲೂರಿನಲ್ಲಿರುವ ರಾಕ್ ವ್ಯಾಲಿ ರೆಸಾರ್ಟ್() ಮೇಲೆ ಪೊಲೀಸರು ದಾಳಿ ಮಾಡಿದ್ದು, ವೇಶ್ಯಾವಾಟಿಕೆ (Prostitution) ದಂಧೆ ನಡೆಸುತ್ತಿದ್ದ ಹಲವರನ್ನು ಬಂಧಿಸಿದ್ದಾರೆ. ಕಳೆದ ಹಲವು ದಿನಗಳಿಂದ ರಾಕ್ ವ್ಯಾಲಿ ರೆಸಾರ್ಟ್ನಲ್ಲಿ ಮಾಂಸ ದಂಧೆ ನಡೆಯುತ್ತಿದೆ ಎನ್ನುವ ಮಾಹಿತಿ ಪೊಲೀಸರಿಗೆ ತಿಳಿದುಬಂದಿತ್ತು. ಇದನ್ನು ಖಚಿತಪಡಿಸಿಕೊಂಡ ಕೋಲಾರ(Kolar) ಮಹಿಳಾ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಬೈರರಾಮಪ್ಪ ನೇತೃತ್ವದಲ್ಲಿ ದಾಳಿ ಮಾಡಲಾಗಿದೆ. ಈ ಕಾರ್ಯಚರಣೆಯಲ್ಲಿ ಪೊಲೀಸರು 14 ಜನರನ್ನು ಬಂಧಿಸಿ, 6 ಮಹಿಳೆಯರನ್ನು ರಕ್ಷಣೆ ಮಾಡಿದ್ದಾರೆ.
ಮುಳಬಾಗಿಲು ತಾಲ್ಲೂಕು ಬೈರಕೂರು ಗ್ರಾಮದ ಬಳಿ ಇರುವ ರೆಸಾರ್ಟ್ಗೆ ಹೈದರಾಬಾದ್ ಮೂಲದ ಅಜಯ್ ಮಹಿಳೆಯರನ್ನು ಕರೆದುಕೊಂಡು ಬಂದು ವೇಶ್ಯಾವಾಟಿಕೆ ನಡೆಸುತ್ತಿದ್ದ, ದಾಳಿ ವೇಳೆ ಹೈದರಾಬಾದ್ ಮೂಲದ ಆರು ಮಹಿಳೆಯರನ್ನು ರಕ್ಷಣ ಮಾಡಲಾಗಿದ್ದು, ಸುಮಾರು ಹತ್ತಕ್ಕೂ ಹೆಚ್ಚು ಕಾರುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಬಗ್ಗೆ ಕೋಲಾರ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ