ಕೋಲಾರಕ್ಕೆ ರಾಹುಲ್ ಗಾಂಧಿ ಆಗಮನ; ಜೈ ಭಾರತ್ ಸಮಾವೇಶಕ್ಕೆ ಲಕ್ಷ ಜನ ಸೇರುವ ನಿರೀಕ್ಷೆ
ಕೋಲಾರದಲ್ಲಿ ನಡೆಯಲಿರುವ ಕಾಂಗ್ರೆಸ್‌ನ ಸತ್ಯಮೇವ ಜಯತೆ, ಜೈ ಭಾರತ್ ಸಮಾವೇಶದಲ್ಲಿ ರಾಹುಲ್ ಗಾಂಧಿ ಭಾಗಿಯಾಗಲಿದ್ದಾರೆ.
ಕೋಲಾರ: ರಾಜ್ಯ ವಿಧಾನಸಭಾ ಚುನಾವಣೆಗೆ ಕ್ಷಣಗಣನೆ ಶುರುವಾಗಿದ್ದು ಇಂದಿನಿಂದ 2 ದಿನಗಳ ಕಾಲ ರಾಹುಲ್ ಗಾಂಧಿ ರಾಜ್ಯ ಪ್ರವಾಸ ಕೈಗೊಳ್ಳಲಿದ್ದಾರೆ. ಇಂದು(ಏಪ್ರಿಲ್ 16) ಕೋಲಾರದಲ್ಲಿ ನಡೆಯಲಿರುವ ಕಾಂಗ್ರೆಸ್‌ನ ಸತ್ಯಮೇವ ಜಯತೆ, ಜೈ ಭಾರತ್ ಸಮಾವೇಶದಲ್ಲಿ ರಾಹುಲ್ ಗಾಂಧಿ ಭಾಗಿಯಾಗಲಿದ್ದಾರೆ. ಕೋಲಾರ ಹೊರವಲಯದ ಟಮಕ ಬಳಿ ಸಮಾವೇಶ ಆಯೋಜನೆ ಮಾಡಲಾಗಿದೆ. ಕಾಂಗ್ರೆಸ್ ಸಮಾವೇಶಕ್ಕೆ ಸುಮಾರು ಒಂದು ಲಕ್ಷ ಜನ ಸೇರುವ ನಿರೀಕ್ಷೆ ಇದೆ.
ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಜನರು ಈ ಸಮಾವೇಶಕ್ಕೆ ಬರುವ ಸಾಧ್ಯತೆ ಇದೆ. ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಕೆಸಿ ವೇಣುಗೋಪಾಲ್, ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸೇರಿದಂತೆ ಮೂರು ರಾಜ್ಯಗಳ ಮುಖ್ಯಮಂತ್ರಿಗಳು ರಾಷ್ಟ್ರ ಹಾಗೂ ರಾಜ್ಯದ ಎಲ್ಲಾ ನಾಯಕರು ಭಾಗಿಯಾಗಲಿದ್ದಾರೆ. 11.30ಕ್ಕೆ ಸಮಾವೇಶ ಆರಂಭವಾಗಲಿದ್ದು ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.
ರಾಹುಲ್ ಗಾಂಧಿ ವೇಳಾಪಟ್ಟಿ ಹೀಗಿದೆ
ಬೆಳಗ್ಗೆ 11.50ಕ್ಕೆ ಬೆಂಗಳೂರು ಏರ್ಪೋರ್ಟ್ಗೆ ರಾಹುಲ್ ಗಾಂಧಿ ಆಗಮಿಸಲಿದ್ದು ಮಧ್ಯಾಹ್ನ 12.25ಕ್ಕೆ ಕೋಲಾರಕ್ಕೆ ಕಾಲಿಡಲಿದ್ದಾರೆ. ಕೋಲಾರದಲ್ಲಿ ನಡೆಯುವ ಸಮಾವೇಶದಲ್ಲಿ ಭಾಗಿಯಾಗಿ ಮಧ್ಯಾಹ್ನ 2.40ಕ್ಕೆ ಕೋಲಾರದಿಂದ ಬೆಂಗಳೂರಿಗೆ ಪ್ರಯಾಣಿಸಲಿದ್ದಾರೆ. ಸಂಜೆ 5 ಗಂಟೆವರೆಗೆ ಶಾಂಗ್ರಿಲಾ ಹೋಟೆಲ್ನಲ್ಲಿ ವಿಶ್ರಾಂತಿ ಪಡೆದು ಸಂಜೆ 5.30ಕ್ಕೆ ಬೆಂಗಳೂರಿನ ಜೆ.ಪಿ.ನಗರದಲ್ಲಿ ಬೀದಿಬದಿ ವ್ಯಾಪಾರಿಗಳು, ಪೌರಕಾರ್ಮಿಕರ ಜೊತೆ ಸಂವಾದ ನಡೆಸಲಿದ್ದಾರೆ. ಸಂಜೆ 6.45ಕ್ಕೆ ಇಂದಿರಾ ಗಾಂಧಿ ಭವನ ಉದ್ಘಾಟಿಸಲಿದ್ದಾರೆ. ನಾಳೆ ಬೀದರ್ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದು ಭಾಲ್ಕಿ, ಹುಮ್ನಾಬಾದ್ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ.
ಈಗಾಗಲೇ ಕಾರ್ಕ್ರಮಕ್ಕಾಗಿ ಕೋಲಾರದಲ್ಲಿ ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಕೊಳ್ಳಲಾಗಿಎದ. ಬೃಹತ್ ವೇದಿಕೆ ಬಳಿ ಕಾಂಗ್ರೆಸ್ ನಾಯಕರ ಬೃಹತ್ ಫ್ಲೆಕ್ಸ್, ಬ್ಯಾನರ್, ಕಟೌಟ್‌ಗಳು ಹಾಗೂ ಸ್ವಾಗತ ಕಮಾನುಗಳನ್ನು ಹಾಕಲಾಗಿದೆ. ಮತ್ತೊಂದೆಡೆ ರಾಹುಲ್ ಗಾಂಧಿಯವರ ಜೈ ಭಾರತ್ ಸಮಾವೇಶ ಮೂರು ಬಾರಿ ಮೂಂದೂಡಿದ ಬಳಿಕ ಈಗ ಕಾರ್ಯಕ್ರಮ ನಿಗದಿಯಾಗಿದೆ. ಈ ಹಿನ್ನೆಲೆಯಲ್ಲಿ ಕೋಲಾರ ಹೊರವಲಯದ ಟಮಕ ಬಳಿ ನಿರ್ಮಾಣ ಮಾಡಲಾಗಿರುವ ಬೃಹತ್ ವೇದಿಕೆ ನಿರ್ಮಾಣವಾಗಿದೆ. ಸುಮಾರು ಒಂದುವರೆ ಲಕ್ಷ ಜನರು ಸೇರುವ ನಿರೀಕ್ಷೆ ಇದ್ದು, ಅದಕ್ಕಾಗಿ ಬೃಹತ್ತಾದ ಜರ್ಮನ್ ಟೆಂಟ್ ಹಾಕಲಾಗಿದೆ. ಸಮಾವೇಶದಲ್ಲಿ ಸಾವಿರಾರು ಕಾರ್ಯಕರ್ತರು ಸೇರಿದಂತೆ ರಾಹುಲ್ ಗಾಂಧಿ ಜೊತೆಗೆ ರಾಜ್ಯ ಹಾಗೂ ರಾಷ್ಟ್ರ ಮಟ್ಟದ ಘಟಾನುಘಟಿ ನಾಯಕರು ಭಾಗವಹಿಸಲಿದ್ದಾರೆ. ಇನ್ನೂ ಸಮಾವೇಶದ ಸ್ಥಳಕ್ಕೆ ಭೇಟಿ ನೀಡಿ ಸುದ್ದಿಗಾರರೊಂದಿಗೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಬಿಜೆಪಿಯವರು ರಾಹುಲ್ ಗಾಂಧಿಯವರ ಮಾತನ್ನ ಅಡಗಿಸಲು ಆರಂಭ ಮಾಡಿದ್ರೋ ಅಲ್ಲಿಂದಲೆ ಹೋರಾಟ ಮಾಡಲಾಗುತ್ತಿದೆ. ಗಾಂಧಿ ಕುಟುಂಬದ ತ್ಯಾಗ, ಬಲಿದಾನ ದೇಶಕ್ಕೆ ಒಂದು ದೊಡ್ಡ ಶಕ್ತಿ ಅದಕ್ಕಾಗಿ ಪಕ್ಷ ಭೇದ ಮರೆತು ಲಕ್ಷಕ್ಕೂ ಅಧಿಕ ಜನರು ಸಏರುವ ನಿರೀಕ್ಷೆ ಎಂದ್ರು.
ಇನ್ನೂ ರಾಹುಲ್ ಗಾಂಧಿಯವರ ಅನರ್ಹತೆ ಕುರಿತು ಮೇಲ್ಮನವಿ ಸಲ್ಲಿಸಿದ್ದ ಹಿನ್ನೆಲೆ ಕೆಲವೊಂದು ಕಾನೂನಿನ ತೊಡಕುಗಳು ಇದ್ದ ಹಿನ್ನೆಲೆಯಲ್ಲಿ ಕಾರ್ಯಕ್ರಮ ಮೂರು ಬಾರಿ ಮುಂದೂಡಲಾಗಿತ್ತು. ಸಮಾವೇಶಕ್ಕೆ ಬೇಕಾದ ಅನುಮತಿಯನ್ನು ಜಿಲ್ಲಾಡಳಿತ ಹಾಗೂ ಚುನಾವಣಾ ಅಧಿಕಾರಿಗಳಿಂದ ಪಡೆಯಲಾಗಿದ್ದು, ಉಳಿದಂತೆ ಮೂರು ಹೆಲಿಪ್ಯಾಡ್ ನಿರ್ಮಾಣ ಮಾಡಲಾಗಿದೆ. ಕಾರ್ಯಕ್ರಮಕ್ಕೆ ಬರುವ ರಾಹುಲ್ ಗಾಂಧಿ ಸೇರಿದಂತೆ ಹಲವು ಗಣ್ಯರು ಹೆಲಿಪ್ಯಾಡ್‌ಗೆ ಬಂದಿಳಿದು ನೇರವಾಗಿ ವೇದೆಕೆಗೆ ಆಗಮಿಸಲಿದ್ದಾರೆ. ಇನ್ನೂ ರಾಹುಲ್ ಗಾಂಧಿಯವರು ಕಳೆದ ಲೋಕಸಭಾ ಚುನಾವಣೆ ಪ್ರಚಾರದ ವೇಳೆ ಕೋಲಾರದಲ್ಲಿ ಮಾಡಿದ್ದ ಬಾಷಣದ ಹಿನ್ನೆಲೆಯಲ್ಲಿ ಅವರನ್ನ ಅನರ್ಹ ಮಾಡಲಾಗಿತ್ತು.
ಅದೇ ಕಾರಣಕ್ಕೆ ಕೋಲಾರದಿಂದಲೇ ಅವರನ್ನು ಕುತಂತ್ರ ಮಾಡಿ ಅನರ್ಹ ಮಾಡಿರುವ ಬಿಜೆಪಿ ಸರ್ಕಾರದ ವಿರುದ್ದ ದೇಶದಾಧ್ಯಂತ ಪ್ರತಿಭಟನೆ ಮಾಡಬೇಕು ಅನ್ನೋದು ಕಾಂಗ್ರೇಸ್ ಉದ್ದೇಶವಾಗಿದೆ. ಅದರಂತೆ ಈ ಜೈ ಭಾರತ್ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಇನ್ನೂ ಬಂದೋಬಸ್ತ್‌ಗಾಗಿ ಕೋಲಾರ, ಕೆಜಿಎಫ್, ರಾಮನಗರ, ತುಮಕೂರು ಸೇರಿದಂತೆ ಬೆಂಗಳುರು ಗ್ರಾಮಾಂತರ ಜಿಲ್ಲೆಯ ಸಾವಿರಾರು ಪೊಲೀಸರನ್ನ ನಿಯೋಜನೆ ಮಾಡಲಾಗಿದೆ. 5 ಎಸ್ಪಿ, 8 ಡಿವೈಎಸ್ಪಿ, 20 ಸಿಪಿಐ, 40 ಪಿಎಸ್‌ಐ, 400 ಕ್ಕೂ ಹೆಚ್ಚು ಸಿಬ್ಬಂದಿ, ನಾಲ್ಕು ಕೆಎಸ್ ಆರ್ ಪಿ ಹಾಗೂ 5 ಡಿಎಆರ್ ತುಕಡಿಗಳನ್ನ ನೇಮಕ ಮಾಡಲಾಗಿದೆ. ಅಲ್ಲದೆ ಕಾರ್ಯಕ್ರಮಕ್ಕೆ ಬೇಕಾದ ಎಲ್ಲಾ ರೀತಿಯ ತಯಾರಿಗಳನ್ನು ಮಾಡಿಕೊಳ್ಳಲಾಗಿದೆ. ಇನ್ನು ಇಂದು ಕೋಲಾರ ಕ್ಷೇತ್ರದ ಅಭ್ಯರ್ಥಿಯನ್ನಾಗಿ ಕೊತ್ತೂರು ಮಂಜುನಾಥ್ ಅವರನ್ನು ಕಾಂಗ್ರೆಸ್ ತನ್ನ ಮೂರನೇ ಪಟ್ಟಿಯಲ್ಲಿ ಘೋಷಣೆ ಮಾಡಿದ ಹಿನ್ನೆಲೆಯಲ್ಲಿ ಅಲ್ಪಸಂಖ್ಯಾತ ಮುಖಂಡರುಗಳು ಕಾಂಗ್ರೇಸ್ ಪಕ್ಷದ ವಿರುದ್ದ ಆಕ್ರೋಶ ಹೊರಹಾಕಿದ್ದಾರೆ. ಇನ್ನು ಅಲ್ಪಸಂಖ್ಯಾತರ ಮುಖಂಡರುಗಳು ಇಂದಿನ ರಾಹುಲ್ ಗಾಂಧಿ ಕಾರ್ಯಕ್ರಮದಲ್ಲೂ ಕೂಡಾ ತನ್ನ ಆಕ್ರೊಶ ಹೊರಹಾಕುವ ಸಾಧ್ಯತೆ ಇದೆ.
ವಿಧಾನಸಭಾ ಚುನಾವಣೆಗೆ ಸಂಬಂಧಿಸಿ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ
Published On - 8:05 am, Sun, 16 April 23