AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಲಾರ: ಬೈಕ್​ಗೆ ಟ್ರ್ಯಾಕ್ಟರ್​ ಡಿಕ್ಕಿ; ಮಗಳು ಸೇರಿ ತಂದೆ-ತಾಯಿ ಸ್ಥಳದಲ್ಲೇ ದುರ್ಮರಣ

kolar news: ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ವಿ.ಗುಟ್ಟಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಭೀಕರ ಅಪಘಾತ ಸಂಭವಿಸಿದೆ. ಬೈಕ್‌ಗೆ ಟ್ರ್ಯಾಕ್ಟರ್ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮುಳಬಾಗಿಲು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮತ್ತೊಂದು ಪ್ರಕರಣದಲ್ಲಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದು ಸವಾರ ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ಮೆಣಸೆ ಸಮೀಪದ ಶಿಡ್ಲೆ ಬಳಿ ನಡೆದಿದೆ.

ಕೋಲಾರ: ಬೈಕ್​ಗೆ ಟ್ರ್ಯಾಕ್ಟರ್​ ಡಿಕ್ಕಿ; ಮಗಳು ಸೇರಿ ತಂದೆ-ತಾಯಿ ಸ್ಥಳದಲ್ಲೇ ದುರ್ಮರಣ
ಅಪಘಾತImage Credit source: tv9 kannada
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Edited By: |

Updated on: Jun 27, 2026 | 9:42 PM

Share

ಮುಖ್ಯಾಂಶಗಳು

  • ವಿ.ಗುಟ್ಟಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಅಪಘಾತ
  • ಮೂವರು ಸ್ಥಳದಲ್ಲೇ ದುರ್ಮರಣ
  • ಮುಳಬಾಗಿಲು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ

ಕೋಲಾರ, ಜೂನ್​ 27: ಟ್ರ್ಯಾಕ್ಟರ್​ ಡಿಕ್ಕಿ (accident) ಹೊಡೆದ ಪರಿಣಾಮ ಬೈಕ್​ನಲ್ಲಿ ತೆರಳುತ್ತಿದ್ದ ದಂಪತಿ ಹಾಗೂ  ಪುತ್ರಿ ಸ್ಥಳದಲ್ಲೇ ದುರ್ಮರಣ (death) ಹೊಂದಿರುವಂತಹ ಘಟನೆ ಜಿಲ್ಲೆಯ ಮುಳಬಾಗಿಲು ತಾಲೂಕಿನ ವಿ.ಗುಟ್ಟಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಅಪಘಾತ ಉಂಟಾಗಿದೆ. ಎನ್.ಚಮಕಲಹಳ್ಳಿ ಗ್ರಾಮದ ನಿವಾಸಿ ಅಬೂಬಕರ್(38), ಪತ್ನಿ ಸಾಬೀರಾ(37), ಪುತ್ರಿ ಜೋಯಾ(16) ಮೃತರು. ಕಲ್ಲು ಕೆಲಸಕ್ಕೆ ಹೋಗಿ ವಾಪಸ್ಸಾಗುವ ವೇಳೆ ದುರ್ಘಟನೆ ಸಂಭವಿಸಿದೆ. ಮುಳಬಾಗಿಲು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಓರ್ವ ಸವಾರ ಸಾವು

ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೊಬ್ಬ ಸವಾರ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ಮೆಣಸೆ ಸಮೀಪದ ಶಿಡ್ಲೆ ಬಳಿ ನಡೆದಿದೆ. ಕೊಟ್ಟಿಗೆಹಾರ ನಿವಾಸಿ ಅಭಿಷೇಕ್ (26) ಮೃತ ದುರ್ದೈವಿ. ಗಂಭೀರ ಗಾಯಗೊಂಡಿದ್ದ ಸಂಕೇತ್‌ಗೆ ಶೃಂಗೇರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ. ಶೃಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಅಂಜನಾದ್ರಿಗೆ ಹೋಗುವಾಗ ಬೈಕ್​ ಅಪಘಾತ: ಸವಾರ ಸಾವು

ಬೈಕ್​​ಗೆ ಟ್ರ್ಯಾಕ್ಟರ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲಿ ಸಾವನ್ನಪ್ಪಿರುವಂತಹ ಘಟನೆ ಕೊಪ್ಪಳ ತಾಲೂಕಿನ ಶಿವಪುರ ಬಳಿ ನಡೆದಿದೆ. ಜಿಲ್ಲೆಯ ಯಲಬುರ್ಗಾ ಪಟ್ಟಣದ ನಿವಾಸಿ ಪ್ರಕಾಶ್ (28) ಮೃತ ವ್ಯಕ್ತಿ. ಶನಿವಾರ ಹಿನ್ನೆಲೆ ಹನುಮನ ದರ್ಶನಕ್ಕೆ ಅಂಜನಾದ್ರಿಗೆ ಪ್ರಕಾಶ್ ಹಾಗೂ ಸ್ನೇಹಿತ ಹೊರಟಿದ್ದರು. ಈ ವೇಳೆ ಅಪಘಾತ ಸಂಭವಿಸಿದೆ. ಮುನಿರಾಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಅಪರಿಚಿತ ವಾಹನ ಡಿಕ್ಕಿ: ಸ್ಥಳದಲ್ಲೇ ಚಿರತೆ ಸಾವು

ಅಪರಿಚಿತ ವಾಹನ ಡಿಕ್ಕೆ ಹೊಡೆದಿದ್ದಕ್ಕೆ ಸ್ಥಳದಲ್ಲೇ ಚಿರತೆ ಸಾವನ್ನಪ್ಪಿರುವಂತಹ ಘಟನೆ ಮೈಸೂರು–ಹುಣಸೂರು ಹೆದ್ದಾರಿಯ ಅರಬ್ಬಿತಿಟ್ಟು ವನ್ಯಧಾಮದ ಬಳಿ ನಡೆದಿದೆ. ಅರಬ್ಬಿತಿಟ್ಟು ಸಂರಕ್ಷಿತ ಅರಣ್ಯದಿಂದ ಎದುರಿನ ಅರಣ್ಯದತ್ತ ಆಹಾರ ಅರಸಿ ರಸ್ತೆ ದಾಟುತ್ತಿದ್ದ ವೇಳೆ ಚಿರತೆಗೆ ವಾಹನ ಡಿಕ್ಕಿ ಹೊಡೆದಿದ್ದು, ಡಿಕ್ಕಿ ರಭಸಕ್ಕೆ ಸ್ಥಳದಲ್ಲೇ ಚಿರತೆ ಮೃತಪಟ್ಟಿದೆ.

ಇದನ್ನೂ ಓದಿ: ಕೊಪ್ಪಳ: ಭಾನಾಪೂರ ಬಳಿ ಭೀಕರ ಅಪಘಾತ, ನಾಲ್ವರು ಸಾವು

ಮಾಹಿತಿ ತಿಳಿದು ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಬಿಳಿಕೆರೆ ಠಾಣೆ ಪೊಲೀಸರಿಂದಲೂ ಪರಿಶೀಲನೆ ಮಾಡಲಾಗಿದ್ದು, ಅಪರಿಚಿತ ವಾಹನ ಪತ್ತೆಗೆ ಕಾರ್ಯಾಚರಣೆ ನಡೆದಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ತಾಯಿ ಹೇಳಿಕೊಟ್ಟ ಬದುಕಿನ ಪಾಠ ಮರೆಯಲಾಗಲ್ಲ: ಹೆಚ್​.ಡಿ. ಕುಮಾರಸ್ವಾಮಿ ಭಾವುಕ
ತಾಯಿ ಹೇಳಿಕೊಟ್ಟ ಬದುಕಿನ ಪಾಠ ಮರೆಯಲಾಗಲ್ಲ: ಹೆಚ್​.ಡಿ. ಕುಮಾರಸ್ವಾಮಿ ಭಾವುಕ
ಇಂದು ಈ ರಾಶಿಯವರಿಗೆ ದೈವಾನುಗ್ರಹದಿಂದ ಮಾಡಿದ ಕೆಲಸಗಳಲ್ಲಿ ಯಶಸ್ಸು
ಇಂದು ಈ ರಾಶಿಯವರಿಗೆ ದೈವಾನುಗ್ರಹದಿಂದ ಮಾಡಿದ ಕೆಲಸಗಳಲ್ಲಿ ಯಶಸ್ಸು
ದೇವೇಗೌಡ, ಕುಮಾರಸ್ವಾಮಿಗೆ ಸಾಂತ್ವನ ಹೇಳಿದ ಸಿದ್ದರಾಮಯ್ಯ
ದೇವೇಗೌಡ, ಕುಮಾರಸ್ವಾಮಿಗೆ ಸಾಂತ್ವನ ಹೇಳಿದ ಸಿದ್ದರಾಮಯ್ಯ
ಚೆನ್ನಮ್ಮನ ಆಸಿಡ್‌ ದಾಳಿ ಪ್ರಕರಣದ ಬಗ್ಗೆ ಎಳೆ ಎಳೆಯಾಗಿ ಬಿಚ್ಚಿಟ್ಟ ವಕೀಲ
ಚೆನ್ನಮ್ಮನ ಆಸಿಡ್‌ ದಾಳಿ ಪ್ರಕರಣದ ಬಗ್ಗೆ ಎಳೆ ಎಳೆಯಾಗಿ ಬಿಚ್ಚಿಟ್ಟ ವಕೀಲ
‘ಅವರು ನಮಗೆ ದೇವರು’: ಚೆನ್ನಮ್ಮ ಬಗ್ಗೆ ಸಹೋದರ ಭಾವುಕ ಮಾತು
‘ಅವರು ನಮಗೆ ದೇವರು’: ಚೆನ್ನಮ್ಮ ಬಗ್ಗೆ ಸಹೋದರ ಭಾವುಕ ಮಾತು
ಹೆಚ್​.ಡಿ.ದೇವೇಗೌಡರ ಪತ್ನಿ ಚೆನ್ನಮ್ಮ ಅಂತ್ಯಕ್ರಿಯೆ ಯಾವಾಗ-ಎಲ್ಲಿ?
ಹೆಚ್​.ಡಿ.ದೇವೇಗೌಡರ ಪತ್ನಿ ಚೆನ್ನಮ್ಮ ಅಂತ್ಯಕ್ರಿಯೆ ಯಾವಾಗ-ಎಲ್ಲಿ?
ದೇವೇಗೌಡರ ಪತ್ನಿ ಚೆನ್ನಮ್ಮನ ಮೇಲೆ ಆ್ಯಸಿಡ್ ದಾಳಿ ಯಾವಾಗ? ಎಲ್ಲಿ ಆಗಿತ್ತು?
ದೇವೇಗೌಡರ ಪತ್ನಿ ಚೆನ್ನಮ್ಮನ ಮೇಲೆ ಆ್ಯಸಿಡ್ ದಾಳಿ ಯಾವಾಗ? ಎಲ್ಲಿ ಆಗಿತ್ತು?
ತಮ್ಮ ಬೆನ್ನೆಲುಬಾಗಿದ್ದ ಪತ್ನಿಯ ಅಗಲಿಕೆಗೆ ಕಣ್ಣೀರಿಟ್ಟ ದೇವೇಗೌಡ್ರು
ತಮ್ಮ ಬೆನ್ನೆಲುಬಾಗಿದ್ದ ಪತ್ನಿಯ ಅಗಲಿಕೆಗೆ ಕಣ್ಣೀರಿಟ್ಟ ದೇವೇಗೌಡ್ರು
ಬಂಗಾಳದಲ್ಲಿ ಟಿಎಂಸಿ ನಾಯಕ ಅಭಿಷೇಕ್ ಬ್ಯಾನರ್ಜಿ ಕಚೇರಿ ನೆಲಸಮ
ಬಂಗಾಳದಲ್ಲಿ ಟಿಎಂಸಿ ನಾಯಕ ಅಭಿಷೇಕ್ ಬ್ಯಾನರ್ಜಿ ಕಚೇರಿ ನೆಲಸಮ
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಘೋಷಣೆ: ಲೈವ್ ನೋಡಿ
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಘೋಷಣೆ: ಲೈವ್ ನೋಡಿ