ಕರ್ನಾಟಕದಲ್ಲಿ ಮತ್ತೊಂದು ದರೋಡೆ: ಕೋಲಾರದಲ್ಲಿ SBI ಎಟಿಎಂ ದೋಚಿದ ಖದೀಮರು
ಇತ್ತೀಚೆಗೆ ಕರ್ನಾಟಕದಲ್ಲಿ ಬ್ಯಾಂಕ್ ಹಾಗೂ ಎಟಿಎಂ ದರೋಡೆ ಪ್ರಕರಣಗಳು ಹೆಚ್ಚಾಗುತ್ತಿವೆ. ಬೀದರ್, ಕಲಬುರಗಿ, ಮಂಗಳೂರು ಸೇರಿದಂತೆ ಹಲವೆಡೆ ಬ್ಯಾಂಕ್ ಹಾಗೂ ಎಟಿಎಂನಲ್ಲಿ ಕಳ್ಳತನವಾಗಿದ್ದು, ಈ ಪೈಕಿ ಪೊಲೀಸರು, ಕೆಲ ಪ್ರಕರಣದಲ್ಲಿ ಆರೋಪಿಗಳನ್ನು ಬಂಧಿಸಿದ್ದು, ಕೆಲ ಕಳ್ಳರನ್ನು ಹಿಡಿಯಲು ಇದುವರೆಗೂ ಸಾಧ್ಯವಾಗಿಲ್ಲ. ಇದರ ಬೆನ್ನಲ್ಲೇ ಇದೀಗ ಕೋಲಾರದಲ್ಲಿ ಎಟಿಎಂ ದರೋಡೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ.

Kolar Sbi Atm Theft
ಕೋಲಾರ, (ಜೂನ್ 16): ಕೋಲಾರ ನಗರದ ಎಸ್ಬಿಐನಲ್ಲಿ (SBI ATM Theft)ದರೋಡೆಯಾಗಿದೆ. ಕೋಲಾರ (Kola) ನಗರದ ಗಲ್ ಪೇಟೆ ಪೋಲೀಸ್ ಠಾಣೆ ಸಮೀಪದ ಸಹಕಾರ ನಗರದಲ್ಲಿರುವ ಎಸ್ಬಿಐ ಎಟಿಎಂನಲ್ಲಿ ಕಳ್ಳತನವಾಗಿದ್ದು, ಎಟಿಎಂ ಮಷಿನ್ ನಲ್ಲಿದ್ದ (ATM Machine) ಸುಮಾರು 27 ಲಕ್ಷ ರೂಪಾಯಿ ದೋಚಿಕೊಂಡು ಪರಾರಿಯಾಗಿದ್ದಾರೆ. ಕಳ್ಳತನದ ವಿಷಯ ಗೊತ್ತಾಗುತ್ತಿದ್ದಂತೆಯೇ ಸ್ಥಳಕ್ಕೆ ಕೋಲಾರ ಎಸ್ಪಿ ನಿಖಿಲ್ ಸೇರಿದಂತೆ ಬೆರಳಚ್ವು ತಜ್ಞರು, ಶ್ವಾನದಳ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇನ್ನು ಈ ಬಗ್ಗೆ ಗಲ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಕೈಗೊಂಡಿದ್ದಾರೆ.
Published On - 2:34 pm, Mon, 16 June 25




