ಕರ್ನಾಟಕದಲ್ಲಿ ಮತ್ತೊಂದು ದರೋಡೆ: ಕೋಲಾರದಲ್ಲಿ SBI ಎಟಿಎಂ ದೋಚಿದ ಖದೀಮರು

ಇತ್ತೀಚೆಗೆ ಕರ್ನಾಟಕದಲ್ಲಿ ಬ್ಯಾಂಕ್ ಹಾಗೂ ಎಟಿಎಂ ದರೋಡೆ ಪ್ರಕರಣಗಳು ಹೆಚ್ಚಾಗುತ್ತಿವೆ. ಬೀದರ್, ಕಲಬುರಗಿ, ಮಂಗಳೂರು ಸೇರಿದಂತೆ ಹಲವೆಡೆ ಬ್ಯಾಂಕ್ ಹಾಗೂ ಎಟಿಎಂನಲ್ಲಿ ಕಳ್ಳತನವಾಗಿದ್ದು, ಈ ಪೈಕಿ ಪೊಲೀಸರು, ಕೆಲ ಪ್ರಕರಣದಲ್ಲಿ ಆರೋಪಿಗಳನ್ನು ಬಂಧಿಸಿದ್ದು, ಕೆಲ ಕಳ್ಳರನ್ನು ಹಿಡಿಯಲು ಇದುವರೆಗೂ ಸಾಧ್ಯವಾಗಿಲ್ಲ. ಇದರ ಬೆನ್ನಲ್ಲೇ ಇದೀಗ ಕೋಲಾರದಲ್ಲಿ ಎಟಿಎಂ ದರೋಡೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ.

ಕರ್ನಾಟಕದಲ್ಲಿ ಮತ್ತೊಂದು ದರೋಡೆ: ಕೋಲಾರದಲ್ಲಿ SBI ಎಟಿಎಂ ದೋಚಿದ ಖದೀಮರು
Kolar Sbi Atm Theft
Edited By:

Updated on: Jun 16, 2025 | 2:38 PM

ಕೋಲಾರ, (ಜೂನ್ 16): ಕೋಲಾರ ನಗರದ ಎಸ್​​ಬಿಐನಲ್ಲಿ (SBI ATM Theft)ದರೋಡೆಯಾಗಿದೆ. ಕೋಲಾರ (Kola) ನಗರದ ಗಲ್ ಪೇಟೆ ಪೋಲೀಸ್ ಠಾಣೆ ಸಮೀಪದ ಸಹಕಾರ ನಗರದಲ್ಲಿರುವ ಎಸ್​​ಬಿಐ ಎಟಿಎಂನಲ್ಲಿ ಕಳ್ಳತನವಾಗಿದ್ದು, ಎಟಿಎಂ ಮಷಿನ್​​ ನಲ್ಲಿದ್ದ (ATM Machine) ಸುಮಾರು 27 ಲಕ್ಷ ರೂಪಾಯಿ ದೋಚಿಕೊಂಡು ಪರಾರಿಯಾಗಿದ್ದಾರೆ. ಕಳ್ಳತನದ ವಿಷಯ ಗೊತ್ತಾಗುತ್ತಿದ್ದಂತೆಯೇ ಸ್ಥಳಕ್ಕೆ ಕೋಲಾರ ಎಸ್ಪಿ ನಿಖಿಲ್ ಸೇರಿದಂತೆ ಬೆರಳಚ್ವು ತಜ್ಞರು, ಶ್ವಾನದಳ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇನ್ನು ಈ ಬಗ್ಗೆ ಗಲ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಕೈಗೊಂಡಿದ್ದಾರೆ.

Published On - 2:34 pm, Mon, 16 June 25

Rajendra Simha BL

18 ವರ್ಷಗಳ ಹಿಂದೆ ಉತ್ತಮ ಸಮಾಜಕ್ಕಾಗಿ ಟಿವಿ9 ಚಾನೆಲ್​​ ಆರಂಭವಾದಾಗಿನಿಂದ ನನ್ನ ಮಾಧ್ಯಮ ಕಾಯಕವೂ ಆರಂಭ ಪಡೆಯಿತು. ಸ್ನಾತಕೋತ್ತರ ಪದವಿ ಮುಗಿಸಿದ್ದ ನಾನು ಚಿನ್ನದ ನಾಡು, ಕೃಷಿಕರ ಬೀಡು ಕೋಲಾರ ಜಿಲ್ಲೆಯ ಹಿರಿಯ ಪ್ರತಿನಿಧಿಯಾಗಿ ಕೆಲಸ ಮಾಡುತ್ತಾ ಬಂದಿದ್ದೇನೆ. ಟಿವಿ9 ಸಂಸ್ಥೆಯ ಆಶೋತ್ತರಗಳಿಗೆ ತಕ್ಕಂತೆ ಕೋಲಾರ ಜನತೆಯ ಪರವಾಗಿ ಧ್ವನಿ ಎತ್ತುವ ಕೆಲಸ ಮಾಡಿದ್ದೇನೆ. ನನ್ನದು ಸಾಮಾಜಿಕ ಕಳಕಳಿ ಇರುವ ಟಿವಿ9 ಸಂಸ್ಥೆಯಲ್ಲಿ ಕೆಲಸ ಅನ್ನೋದಕ್ಕಿಂತ ಉತ್ತಮ ಸಮಾಜಕ್ಕಾಗಿ ನನ್ನ ಸೇವೆ ಅನ್ನುವ ಭಾವನೆಯಲ್ಲಿ ಕೆಲಸ ಮಾಡಿಕೊಂಡು ಬಂದಿದ್ದೇನೆ.

Read More
Follow Us