
ಕೋಲಾರ, ಅಕ್ಟೋಬರ್ 06: ಚೆನ್ನೈ-ಬೆಂಗಳೂರು ಎಕ್ಸ್‌ಪ್ರೆಸ್ ವೇಯಲ್ಲಿ ಸರಣಿ ಭೀಕರ ರಸ್ತೆ ಅಪಘಾತ (Serial accident) ಸಂಭವಿಸಿದ್ದು, ಇಬ್ಬರು ಸಾವನ್ನಪ್ಪಿರುವಂತಹ (death) ಘಟನೆ ನಡೆದಿದೆ. ಸುಮಾರು 10ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗಳಾಗಿದ್ದು, ಬಂಗಾರಪೇಟೆ, ಕೆಜಿಎಫ್ ಹಾಗೂ ಕೋಲಾರ ಆಸ್ಪತ್ರೆಗೆ ರವಾಸಲಾಗಿದೆ. ಬಂಗಾರಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಬೆಂಗಳೂರು-ಚೆನೈ ಎಕ್ಸ್‌ಪ್ರೆಸ್ ವೇನಲ್ಲಿ ಟೆಂಪೋ ವಾಹನಕ್ಕೆ ಈಚರ್ ವಾಹನ ಡಿಕ್ಕಿ ಹೊಡೆದ ರಭಸಕ್ಕೆ ಟೆಂಪೋ, ಆ್ಯಂಬುಲೆನ್ಸ್ಗೆ ಡಿಕ್ಕಿ ಹೊಡೆದು ಸರಣಿ ಅಪಘಾತ ಸಂಭವಿಸಿದೆ. ಆ್ಯಂಬುಲೆನ್ಸ್ ಚಾಲಕ ವಿಕ್ರಮ್ ಪಾಲ್ ಮತ್ತು ಟೆಂಪೋ ಚಾಲಕ ಶಿವರಾಜ್ ಮೃತರು.
ಇದನ್ನೂ ಓದಿ: ಪ್ರತ್ಯೇಕ ಘಟನೆ: ಬೈಕ್ಗೆ ಟಿಟಿ ವಾಹನ ಡಿಕ್ಕಿಯಾಗಿ ದಂಪತಿ ಸಾವು; ಸೇತುವೆ ಮೇಲಿಂದ ಕಾರು ಬಿದ್ದು ಓರ್ವ ದುರ್ಮರಣ
ಟೆಂಪೋದಲ್ಲಿ ಬೆಂಗಳೂರಿನ ಎಸ್ಕೆಸಿ ಕ್ಯಾಟರಿಂಟ್ನ 15 ಜನ ಸಿಬ್ಬಂದಿ ಪ್ರಯಾಣಿಸುತ್ತಿದ್ದರು. ಸುಮಾರು ಹತ್ತಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ. ಸದ್ಯ ಸ್ಥಳಕ್ಕೆ ಎಸ್ಪಿ ಶಿವಾಂಶು ರಜಪೂತ್ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.
ತುಂಗಭದ್ರಾ ಡ್ಯಾಮ್ನ ಹಿನ್ನೀರಿನಲ್ಲಿ ಮುಳುಗಿ ಇಬ್ಬರು ಯುವಕರು ಸಾವನ್ನಪ್ಪಿರುವಂತಹ ಘಟನೆ ವಿಜಯನಗರ ಜಿಲ್ಲೆ ಹೊಸಪೇಟೆಯ ತುಂಗಭದ್ರಾ ಡ್ಯಾಮ್ನ ಹಿನ್ನೀರಿನಲ್ಲಿ ನಡೆದಿದೆ. ಗ್ರಾಮಲೆಕ್ಕಿಗ ಇಮಾಮ್(24) ಮತ್ತು ಕೂಲಿ ಕಾರ್ಮಿಕ ರಾಜಾಭಕ್ಷಿ(25) ಮೃತರು.
ಇದನ್ನೂ ಓದಿ: ತುಮಕೂರು: ಕಾರಿಗೆ ಖಾಸಗಿ ಬಸ್ ಡಿಕ್ಕಿ; ಧರ್ಮಸ್ಥಳಕ್ಕೆ ತೆರಳುತ್ತಿದ್ದ ಮೂವರು ದುರ್ಮರಣ
ಮೃತರು ಹೊಸಪೇಟೆ ತಾಲೂಕಿನ ಹಂಪಿನಕಟ್ಟೆ ಗ್ರಾಮದ ನಿವಾಸಿಗಳು ಎಂದು ಗುರುತಿಸಲಾಗಿದೆ. ಘಟನಾ ಸ್ಥಳಕ್ಕೆ ಮರಿಯಮ್ಮನಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಸದ್ಯ ಅಗ್ನಿಶಾಮಕ ದಳದ ಸಿಬ್ಬಂದಿ ಇಬ್ಬರ ಮೃತದೇಹವನ್ನು ಹೊರತೆಗೆದಿದ್ದಾರೆ.
ಬೈಕ್ಗೆ ಟ್ರ್ಯಾಕ್ಟರ್ ಡಿಕ್ಕಿ ಹೊಡೆದು ವಿದ್ಯಾರ್ಥಿ ಸಾವನ್ನಪ್ಪಿರುವಂತಹ ಘಟನೆ ಚಿಕ್ಕಬಳ್ಳಾಪುರದ ಕೊತ್ತನೂರು ಗೇಟ್ ಬಳಿ ನಡೆದಿದೆ. ದೇವನಹಳ್ಳಿ ಮೂಲದ ಸುದೀಪ್ ಮೃತ ಎಸ್ಜೆಸಿಐಟಿ ಕಾಲೇಜು ವಿದ್ಯಾರ್ಥಿ. ಸದ್ಯ ಮೃತದೇಹವನ್ನು ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ. ಚಿಕ್ಕಬಳ್ಳಾಪುರ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 8:17 pm, Mon, 6 October 25