ಕೋಲಾರದ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಸರಣಿ ಅಪಘಾತ: ಮಕ್ಕಳು ಸೇರಿ 17 ಜನರಿಗೆ ಗಾಯ

ಕೋಲಾರದ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಬೈಕ್, ಟಾಟಾ ಏಸ್ ವಾಹನ, ಆಟೋ ನಡುವೆ ಸರಣಿ ಅಪಘಾತ ಸಂಭವಿಸಿದ್ದು ಘಟನೆಯಲ್ಲಿ ನಾಲ್ಕು ಮಕ್ಕಳು ಸೇರಿದಂತೆ 17 ಜನರಿಗೆ ಗಾಯಗಳಾಗಿವೆ. ಮೂವರ ಪರಿಸ್ಥಿತಿ ಗಂಭೀರವಾಗಿದೆ. ಎಲ್ಲರೂ ಆಂಧ್ರದ ಬಾಯಿಕೊಂಡ ಗಂಗಮ್ಮ ದೇಗುಲಕ್ಕೆ ಹೊರಟಿದ್ದರು. ಈ ವೇಳೆ ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಕೋಲಾರ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕೋಲಾರದ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಸರಣಿ ಅಪಘಾತ: ಮಕ್ಕಳು ಸೇರಿ 17 ಜನರಿಗೆ ಗಾಯ
ಅಪಘಾತ ನಡೆದ ಸ್ಥಳ
Follow us
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Updated By: ಆಯೇಷಾ ಬಾನು

Updated on: Nov 14, 2023 | 11:04 AM

ಕೋಲಾರ, ನ.14: ಕೋಲಾರ ತಾಲೂಕಿನ ಕೆಂದಟ್ಟಿ ಬಳಿ ಸರಣಿ ಅಪಘಾತ ನಡೆದಿದೆ. ಅಪಘಾತದಲ್ಲಿ ನಾಲ್ಕು ಮಕ್ಕಳು ಸೇರಿದಂತೆ 17 ಜನರಿಗೆ ಗಾಯಗಳಾಗಿವೆ (Serial Accident on National Highway 75). ಹೌದು, ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಬೈಕ್, ಟಾಟಾ ಏಸ್ ವಾಹನ, ಆಟೋ ನಡುವೆ ಸರಣಿ ಅಪಘಾತ ಸಂಭವಿಸಿದ್ದು ಘಟನೆಯಲ್ಲಿ ನಾಲ್ಕು ಮಕ್ಕಳು ಸೇರಿದಂತೆ 17 ಜನರಿಗೆ ಗಾಯಗಳಾಗಿವೆ. ಮೂವರ ಪರಿಸ್ಥಿತಿ ಗಂಭೀರವಾಗಿದ್ದು ಗಾಯಾಳುಗಳನ್ನು ಕೋಲಾರ ಜಿಲ್ಲಾಸ್ಪತ್ರೆಗೆ (Kolar District Hospital) ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಎಲ್ಲರೂ ಆಂಧ್ರದ ಬಾಯಿಕೊಂಡ ಗಂಗಮ್ಮ ದೇಗುಲಕ್ಕೆ ಹೊರಟಿದ್ದರು. ಈ ವೇಳೆ ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಕೋಲಾರ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ದ್ವಿಚಕ್ರ ವಾಹನಕ್ಕೆ ಸ್ಕಾರ್ಪಿಯೋ ವಾಹನ ಡಿಕ್ಕಿ, ಸವಾರ ಸಾವು ​

ವಿಜಯನಗರದ ಡಾನಾಪುರ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ದ್ವಿಚಕ್ರ ವಾಹನಕ್ಕೆ ಸ್ಕಾರ್ಪಿಯೋ ಕಾರು ಡಿಕ್ಕಿಯಾಗಿ ಬೈಕ್ ಸವಾರ ಚನ್ನಬಸವ(61) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತ ಬೈಕ್ ಸವಾರ ಚನ್ನಬಸವ ಅವರು ಪೂಜೆಗೆ ಎಂದು ಹೂ ತೆಗೆದುಕೊಂಡು ಹೋಗುತ್ತಿದ್ದರು. ಈ ವೇಳೆ ವೇಗದಿಂದ ಬಂದ ಸ್ಕಾರ್ಪಿಯೋ ವಾಹನ ಬೈಕ್‍ಗೆ ಡಿಕ್ಕಿ ಹೊಡೆದಿದೆ. ಈ ಪರಿಣಾಮ ಸಾವು ಸಂಭವಿಸಿದೆ.

ದಾವಣಗೆರೆ ಮೂಲದ ಕಾರು ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮರಿಯಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಅಪಘಾತದ ಸಿಸಿ ಟಿವಿ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿವೆ.

ಇದನ್ನೂ ಓದಿ: ನೆಲಮಂಗಲ: ಓಲೊ ಎಲೆಕ್ಟ್ರಿಕ್ ಬೈಕ್​ನಲ್ಲಿ ಬೆಂಕಿ, ಮೂರುವರೆ ಲಕ್ಷ ಮೌಲ್ಯದ ಬೈಕ್​ಗಳು ಭಸ್ಮ

ಮೃತದೇಹವನ್ನು 1 ಕಿ.ಮೀ. ಎಳೆದೊಯ್ದ ಲಾರಿ

ತರಕಾರಿ ಸಾಗಿಸುತ್ತಿದ್ದ ಲಾರಿ ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಬಿದರಹಳ್ಳಿ ಬಳಿ ನಡೆದಿದೆ. ಬಾಳೆಹಳ್ಳಿ ಗ್ರಾಮದ ನಿವಾಸಿ ಮಂಜುನಾಥ ಮೃತ ದುರ್ದೈವಿಯಾಗಿದ್ದು, ಅಪಘಾತದ ನಂತರ ಲಾರಿ ಮೃತದೇಹವನ್ನು 1 ಕಿ.ಮೀ. ಎಳೆದೊಯ್ದಿದೆ. ಮಂಜುನಾಥ್ ಜತೆ ಬೈಕ್​ನಲ್ಲಿ ತೆರಳುತ್ತಿದ್ದ ತಂದೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಕುಡಿದ ಅಮಲು, JCB ಚಾಲಕನ ಅಟ್ಟಹಾಸ

ಕುಡಿದ ಮತ್ತಿನಲ್ಲಿ ಜೆಸಿಬಿ ಚಾಲಕನೊಬ್ಬ ಅಟ್ಟಹಾಸ ಮೆರೆದಿದ್ದಾನೆ. ಸಂತೆ ನಡೆಯುತ್ತಿದ್ದ ಸ್ಥಳಕ್ಕೆ ಇಷ್ಟ ಬಂದಂತೆ ಜೆಸಿಬಿ ನುಗ್ಗಿಸಿದ್ದಾನೆ. ಮಂಡ್ಯ ಜಿಲ್ಲೆ ನಾಗಮಂಗಲದ ಬೆಳ್ಳೂರಲ್ಲಿ ಈ ಘಟನೆ ನಡೆದಿದೆ. ಬಿಹಾರ ಮೂಲದ ರಾಜ್​​ಕುಮಾರ್ ರಸ್ತೆ ಬದಿಯ ಅಂಗಡಿಗಳ ಮೇಲೆಲ್ಲ ಜೆಸಿಬಿ ಹರಿಸಿದ್ದಾನೆ.ಜನ ಜೆಸಿಬಿ ಚಾಲಕನನ್ನ ಬೆನ್ನತ್ತಿ ಹಿಡಿದು ಧರ್ಮದೇಟು

ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ನಿಜಾಮನ ರಜಾಕರು ಮುಸಲ್ಮಾನರಲ್ಲ ಅಂತ ಪ್ರಿಯಾಂಕ್ ಹೇಳುತ್ತಾರೆ: ಯತ್ನಾಳ್
ನಿಜಾಮನ ರಜಾಕರು ಮುಸಲ್ಮಾನರಲ್ಲ ಅಂತ ಪ್ರಿಯಾಂಕ್ ಹೇಳುತ್ತಾರೆ: ಯತ್ನಾಳ್
‘ಸುಮ್ಮನಿರುವ ಮಗ ನಾನಲ್ಲ’: ಸಿಡಿದೆದ್ದ ಧನರಾಜ್; ಸಮಾಧಾನ ಮಾಡಿದ ಹನುಮ
‘ಸುಮ್ಮನಿರುವ ಮಗ ನಾನಲ್ಲ’: ಸಿಡಿದೆದ್ದ ಧನರಾಜ್; ಸಮಾಧಾನ ಮಾಡಿದ ಹನುಮ
ಜೆಡಿಎಸ್ ಕೇವಲ ಒಂದು ಕುಟುಂಬದ ಪಕ್ಷವಾಗಿ ಉಳಿದುಬಿಟ್ಟಿದೆ: ಯೋಗೇಶ್ವರ್
ಜೆಡಿಎಸ್ ಕೇವಲ ಒಂದು ಕುಟುಂಬದ ಪಕ್ಷವಾಗಿ ಉಳಿದುಬಿಟ್ಟಿದೆ: ಯೋಗೇಶ್ವರ್
ಪ್ರತಿ ಹುಟ್ಟುಹಬ್ಬಕ್ಕೆ ಇಬ್ರಾಹಿಂ ನನಗೆ ವಿಶ್ ಮಾಡುತ್ತಾರೆ: ಜಿಟಿ ದೇವೇಗೌಡ
ಪ್ರತಿ ಹುಟ್ಟುಹಬ್ಬಕ್ಕೆ ಇಬ್ರಾಹಿಂ ನನಗೆ ವಿಶ್ ಮಾಡುತ್ತಾರೆ: ಜಿಟಿ ದೇವೇಗೌಡ
ದೊಡ್ಮನೆಗೆ ಬರೋಕಿಂತ ಮುನ್ನ ಧರ್ಮ, ಅನುಷಾ ರೈ ನಡುವೆ ಬ್ರೇಕಪ್ ಆಗಿತ್ತಾ?
ದೊಡ್ಮನೆಗೆ ಬರೋಕಿಂತ ಮುನ್ನ ಧರ್ಮ, ಅನುಷಾ ರೈ ನಡುವೆ ಬ್ರೇಕಪ್ ಆಗಿತ್ತಾ?
ಯೋಗೇಶ್ವರ್ ಕೇವಲ ಅಭಿವೃದ್ಧಿ ಕೆಲಸಗಳನ್ನು ಉಲ್ಲೇಖಿಸಿ ಮತ ಕೇಳಿದರು: ಶಾಸಕ
ಯೋಗೇಶ್ವರ್ ಕೇವಲ ಅಭಿವೃದ್ಧಿ ಕೆಲಸಗಳನ್ನು ಉಲ್ಲೇಖಿಸಿ ಮತ ಕೇಳಿದರು: ಶಾಸಕ
ಸಿಎಂ ಇಬ್ರಾಹಿಂ ಮತ್ತು ಜಿಟಿ ದೇವೇಗೌಡ ನೊಂದಜೀವಿ ಮತ್ತು ಸಮಾನಮನಸ್ಕರು
ಸಿಎಂ ಇಬ್ರಾಹಿಂ ಮತ್ತು ಜಿಟಿ ದೇವೇಗೌಡ ನೊಂದಜೀವಿ ಮತ್ತು ಸಮಾನಮನಸ್ಕರು
‘ಯಾರೂ ನನ್ನನ್ನು ಕಣ್ಣಲ್ಲಿ ಕಣ್ಣಿಟ್ಟು ನೋಡಂಗಿಲ್ಲ’: ಉಗ್ರಂ ಮಂಜು ಆಜ್ಞೆ
‘ಯಾರೂ ನನ್ನನ್ನು ಕಣ್ಣಲ್ಲಿ ಕಣ್ಣಿಟ್ಟು ನೋಡಂಗಿಲ್ಲ’: ಉಗ್ರಂ ಮಂಜು ಆಜ್ಞೆ
ಕುಮಾರಸ್ವಾಮಿ ಹೇಳಿದ್ದರಲ್ಲಿ ತಪ್ಪಿಲ್ಲ, ಮುಸ್ಲಿಂ ಮತದಾರ ಕೈಬಿಟ್ಟ: ಅಶೋಕ
ಕುಮಾರಸ್ವಾಮಿ ಹೇಳಿದ್ದರಲ್ಲಿ ತಪ್ಪಿಲ್ಲ, ಮುಸ್ಲಿಂ ಮತದಾರ ಕೈಬಿಟ್ಟ: ಅಶೋಕ
ನಾನಿಲ್ಲದಿದ್ದರೂ ಕಾಂಗ್ರೆಸ್ ಅಸ್ತಿತ್ವಕ್ಕೆ ಯಾವುದೇ ತೊಂದರೆಯಿಲ್ಲ: ಡಿಕೆಶಿ
ನಾನಿಲ್ಲದಿದ್ದರೂ ಕಾಂಗ್ರೆಸ್ ಅಸ್ತಿತ್ವಕ್ಕೆ ಯಾವುದೇ ತೊಂದರೆಯಿಲ್ಲ: ಡಿಕೆಶಿ