AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಳೆ ಅಭಾವದ ಎಫೆಕ್ಟ್​​​​: ಕೃಷಿ ಬಿಟ್ಟು ಕೂಲಿಗೆ ಹೊರಟ ಕೋಲಾರದ ರೈತರು!

ಕೋಲಾರ ಮತ್ತು ಕೆಜಿಎಫ್ ತಾಲೂಕುಗಳಲ್ಲಿ ಭೀಕರ ಮಳೆ ಕೊರತೆಯಿಂದಾಗಿ ಜೀವನ ನಿರ್ವಹಣೆಗೆಗಾಗಿ ಕೃಷಿ ಬಿಟ್ಟು ದಿನಗೂಲಿ ಕೆಲಸಕ್ಕೆ ತೆರಳುವ ಅನಿವಾರ್ಯತೆಗೆ ರೈತರು ಸಿಲುಕಿದ್ದಾರೆ. ಇನ್ನು ಕೆಲವರು ಜಾನುವಾರು ಸಾಕಾಣಿಕೆ ಮೂಲಕ ಜೀವನ ಸಾಗಿಸುತ್ತಿದ್ದಾರೆ. ಜಿಲ್ಲೆಯ ಪ್ರಮುಖ ಬೆಳೆಗಳಲ್ಲಿ ಒಂದಾಗಿರು ಟೊಮೆಟೊ ಫಸಲಿನ ಮೇಲೂ ಮಳೆಯ ಅಭಾವದ ಕರಿನೆರಳು ಬಿದ್ದಿದೆ. ಮಳೆಯ ಕೊರತೆಯಿಂದಾಗಿ ಬೆಳೆ ವ್ಯಾಪಕವಾಗಿ ಹಾನಿಗೊಳಗಾಗಿದ್ದು, ಬೆಳೆ ಬೆಳೆದಿದ್ದ ಹಲವರು ಕೈಸುಟ್ಟುಕೊಂಡಿದ್ದಾರೆ.

ಮಳೆ ಅಭಾವದ ಎಫೆಕ್ಟ್​​​​: ಕೃಷಿ ಬಿಟ್ಟು ಕೂಲಿಗೆ ಹೊರಟ ಕೋಲಾರದ ರೈತರು!
ಸಾಂದರ್ಭಿಕ ಚಿತ್ರImage Credit source: Getty Images
ಪ್ರಸನ್ನ ಹೆಗಡೆ
|

Updated on:Oct 31, 2026 | 8:15 AM

Share

ಕೋಲಾರ, ಅಕ್ಟೋಬರ್​​ 31: ಮಳೆಯ ಕೊರತೆಯಿಂದಾಗಿ ಕರ್ನಾಟಕದ ಅನ್ನದಾತರು ತೀವ್ರ ಕಂಗಾಲಾಗಿದ್ದು, ಜೀವನ ನಿರ್ವಹಣೆಗಾಗಿ ಬೇರೆ ಬೇರೆ ದಾರಿಗಳನ್ನು ಅನಿವಾರ್ಯವಾಗಿ ಹುಡುಕುತ್ತಿದ್ದಾರೆ. ಕೋಲಾರ ಮತ್ತು ಕೆಜಿಎಫ್ ತಾಲೂಕುಗಳಲ್ಲಿ ರೈತರು ಕೃಷಿ ಬಿಟ್ಟು ಕೂಲಿಗೆ ತೆರಳಲು ಆರಂಭಿಸಿರೋದು ಭರದ ಭೀಕರತೆಗೆ ಹಿಡಿದ ಕೈಗನ್ನಡಿಯಾಗಿದೆ. ಇನ್ನು ಕೆಲವರು ಜಾನುವಾರು ಸಾಕಾಣಿಕೆಯ ಮೂಲಕ ಜೀವನ ಸಾಗಿಸುತ್ತಿದ್ದಾರೆ. ಮಳೆಯ ಪರಿಸ್ಥಿತಿ ಸುಧಾರಿಸಿದರೆ ಮತ್ತೆ ತಮ್ಮ ಜಮೀನಿನಲ್ಲಿ ಕೃಷಿ ಆರಂಭಿಸಬೇಕೆಂಬ ತೀರ್ಮಾನದಲ್ಲಿ ಅವರಿದ್ದಾರೆ.

ಸಂಕಷ್ಟದಲ್ಲಿ ಕೃಷಿಕರ ಬದುಕು

ಕೃಷಿಯಿಂದ ಉತ್ತಮ ಆದಾಯ ಗಳಿಸುತ್ತಿದ್ದ ಜಿಲ್ಲೆಯ ಕೆಲ ರೈತರ ಬದುಕನ್ನು ಮಳೆಯ ಕೊರತೆ ಸಂಕಷ್ಟಕ್ಕೆ ದೂಡಿದೆ. ಇದರ ಜೊತೆಗೆ ಕೃಷಿ ಕಾರ್ಮಿಕರ ಸಮಸ್ಯೆಯೂ ತಲೆದೋರಿರೋದು ಮತ್ತೊಂದು ಪ್ರಮುಖ ಸಮಸ್ಯೆಯಾಗಿ ಮಾರ್ಪಟ್ಟಿದೆ. ಹಿಂದೆಲ್ಲ ದಿನಕ್ಕೆ 150ರಿಂದ 175 ರೂ. ನೀಡಿದರೆ ಕಾರ್ಮಿಕರು ಸಿಗುತ್ತಿದ್ದರು. ಆದರೆ, ಈಗ 500 ರೂ. ಕೂಲಿ ನೀಡಿದರೂ ಕೆಲಸಗಾರರು ಸಿಗುತ್ತಿಲ್ಲ ಎಂದು ರೈತರು ಅಲವತ್ತುಕೊಂಡಿದ್ದಾರೆ. ಇವೆಲ್ಲದರ ಪರಿಣಾಮವಾಗಿ ಈಗ ತಾವೇ ದಿನಗೂಲಿ ಕೆಲಸಕ್ಕೆ ಹೋಗಿ ಜೀವನ ನಿರ್ವಹಣೆ ಮಾಡುವ ಸ್ಥಿತಿ ಇದೆ ಎಂದು ಹಲವರು ತಿಳಿಸಿದ್ದಾರೆ.

ಇದನ್ನೂ ಓದಿ:  ಕೊಲೆ, ಅನುಮಾನಾಸ್ಪದ ಸಾವುಗಳಿಂದ ಬೆಚ್ಚಿಬಿದ್ದಿದ್ದ ಕೋಲಾರ ಜನತೆಗೆ ರಿಲೀಫ್: ಅಕ್ರಮ ಕಲ್ಲುಗಣಿಗಾರಿಕೆಗೆ ತಕ್ಷಣದಿಂದಲೇ ಬ್ರೇಕ್‌

ಟೊಮೆಟೊ ಫಸಲಿನ ಮೇಲೂ ಮಳೆ ಅಭಾವದ ಎಫೆಕ್ಟ್​​

ಜಿಲ್ಲೆಯ ಪ್ರಮುಖ ಬೆಳೆಗಳಲ್ಲಿ ಒಂದಾಗಿರು ಟೊಮೆಟೊ ಫಸಲಿನ ಮೇಲೂ ಮಳೆಯ ಅಭಾವದ ಕರಿನೆರಳು ಬಿದ್ದಿದೆ. ಮಳೆಯ ಕೊರತೆಯಿಂದಾಗಿ ಬೆಳೆ ವ್ಯಾಪಕವಾಗಿ ಹಾನಿಗೊಳಗಾಗಿದ್ದು, ಬೋರ್‌ವೆಲ್‌ಗಳನ್ನು ಹೊಂದಿರುವ ರೈತರಿಗೂ ಉತ್ತಮ ಟೊಮೆಟೊ ಇಳುವರಿ ಪಡೆಯಲು ಸಾಕಷ್ಟು ಮಳೆಯ ಅಗತ್ಯವಿದೆ ಎಂಬುದು ಇಲ್ಲಿನ ರೈತರ ಅನಿಸಿಕೆ. ಹೀಗಾಗಿ ಹೆಚ್ಚಿನ ಬಂಡವಾಳ ಹೂಡಿಕೆ ಮಾಡದೆ, ಕಡಿಮೆ ಕಾರ್ಮಿಕರ ಅಗತ್ಯವಿರುವ ಮತ್ತು ತುಲನಾತ್ಮಕವಾಗಿ ಸುರಕ್ಷಿತ ಬೆಳೆ ಎಂದು ಪರಿಗಣಿಸಲಾಗುವ ಸೌತೆಕಾಯಿ ಬೆಳೆಯತ್ತ ಕೆಲ ರೈತರು ಮುಖ ಮಾಡಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 8:14 am, Sat, 31 October 26

Follow Us
ಪ್ರಸನ್ನ ಹೆಗಡೆ
ಪ್ರಸನ್ನ ಹೆಗಡೆ

ಪ್ರಸನ್ನ ಹೆಗಡೆ ಹುಟ್ಟಿದ್ದು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕು. 9 ವರ್ಷಗಳಿಂದ ಪತ್ರಕರ್ತನಾಗಿ ಕೆಲಸ ಮಾಡಿರುವ ಅನುಭವವಿದೆ. ಮುದ್ರಣ, ಟಿವಿ ಮತ್ತು ಡಿಜಿಟಲ್​ ಮಾಧ್ಯಮಗಳಲ್ಲಿ ವಿವಿಧ ಜವಾಬ್ದಾರಿ ನಿಭಾಯಿಸಿದ್ದೇನೆ. ರಾಜಕೀಯ, ಸಿನಿಮಾ ವಿಷಯಗಳಲ್ಲಿ ಹೆಚ್ಚಿನ ಆಸಕ್ತಿ ಇದೆ. ಕವನಗಳ ರಚನೆ, ಪುಸ್ತಕಗಳನ್ನ ಓದುವುದು ನೆಚ್ಚಿನ ಹವ್ಯಾಸಗಳು.

Read More
ಇಂದು ಈ ರಾಶಿಯವರು ಅತಿಯಾಗಿ ಯಾರಿಗೂ ಆಶ್ವಾಸನೆ ನೀಡಬೇಡಿ
ಇಂದು ಈ ರಾಶಿಯವರು ಅತಿಯಾಗಿ ಯಾರಿಗೂ ಆಶ್ವಾಸನೆ ನೀಡಬೇಡಿ
ಕೇದಾರನಾಥದಲ್ಲಿ ಈ ಋತುವಿನ ಮೊದಲ ಹಿಮಪಾತ; ಭಕ್ತರ ಮೇಲೆ ಹಿಮದ ಮಳೆ!
ಕೇದಾರನಾಥದಲ್ಲಿ ಈ ಋತುವಿನ ಮೊದಲ ಹಿಮಪಾತ; ಭಕ್ತರ ಮೇಲೆ ಹಿಮದ ಮಳೆ!
ಧನ್ವೀರ್ ವಿರುದ್ಧ ನಿರ್ಬಂಧಜಾಜ್ಞೆ: ದರ್ಶನ್ ಪರ ವಕೀಲರು ಹೇಳಿದ್ದಿಷ್ಟು
ಧನ್ವೀರ್ ವಿರುದ್ಧ ನಿರ್ಬಂಧಜಾಜ್ಞೆ: ದರ್ಶನ್ ಪರ ವಕೀಲರು ಹೇಳಿದ್ದಿಷ್ಟು
ರಷ್ಯಾದ ತೈಲ ಸಂಸ್ಕರಣಾಗಾದ ಮೇಲೆ ಉಕ್ರೇನ್​ನ ಡ್ರೋನ್ ದಾಳಿ
ರಷ್ಯಾದ ತೈಲ ಸಂಸ್ಕರಣಾಗಾದ ಮೇಲೆ ಉಕ್ರೇನ್​ನ ಡ್ರೋನ್ ದಾಳಿ
ಹೆಲಿಕಾಪ್ಟರ್​​ ದುರಂತದಲ್ಲಿ ಸಾವನ್ನಪ್ಪಿದ CCB ಇನ್ಸ್​ಪೆಕ್ಟರ್ ಅರುಣ್ ಯಾರು
ಹೆಲಿಕಾಪ್ಟರ್​​ ದುರಂತದಲ್ಲಿ ಸಾವನ್ನಪ್ಪಿದ CCB ಇನ್ಸ್​ಪೆಕ್ಟರ್ ಅರುಣ್ ಯಾರು
ದೇವೇಗೌಡರ ಭೇಟಿಯಾದ ಯಡಿಯೂರಪ್ಪ: ಕುತೂಹಲ ಮೂಡಿಸಿದ ಮಾಜಿ CM ನಡೆ
ದೇವೇಗೌಡರ ಭೇಟಿಯಾದ ಯಡಿಯೂರಪ್ಪ: ಕುತೂಹಲ ಮೂಡಿಸಿದ ಮಾಜಿ CM ನಡೆ
ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನಕ್ಕೆ ದಿನಾಂಕ ನಿಗದಿ, ರಜನೀಕಾಂತ್ ಅತಿಥಿ?
ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನಕ್ಕೆ ದಿನಾಂಕ ನಿಗದಿ, ರಜನೀಕಾಂತ್ ಅತಿಥಿ?
‘ಪ್ರೇಮದ ಊರಲಿ ಪಾರ್ಟ್ 2’ ಬರುತ್ತ? ನೇರವಾಗಿ ಉತ್ತರ ನೀಡಿದ ನಿರ್ದೇಶಕ ಮನೋಜ್
‘ಪ್ರೇಮದ ಊರಲಿ ಪಾರ್ಟ್ 2’ ಬರುತ್ತ? ನೇರವಾಗಿ ಉತ್ತರ ನೀಡಿದ ನಿರ್ದೇಶಕ ಮನೋಜ್
AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಅಶೋಕ್​​ ಸವಾಲು
AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಅಶೋಕ್​​ ಸವಾಲು
‘ಕೆಲಸ ಮಾಡಲ್ಲ ಅಂದ್ರೆ ಮಾಡಲ್ಲ’: ಸೌಂದರ್ಯಾ ಜೊತೆ ಗಗನ್ ಜಗಳ
‘ಕೆಲಸ ಮಾಡಲ್ಲ ಅಂದ್ರೆ ಮಾಡಲ್ಲ’: ಸೌಂದರ್ಯಾ ಜೊತೆ ಗಗನ್ ಜಗಳ