ಕೋಲಾರ ಎಪಿಎಂಸಿ ಮಾರುಕಟ್ಟೆಯಲ್ಲಿ ರೈತರಿಗೆ ಆಘಾತ; ಟೊಮ್ಯಾಟೊ ಬೆಲೆಯಲ್ಲಿ ದಿಢೀರ್ ಕುಸಿತ

ಬಾಕ್ಸ್ ಟೊಮ್ಯಾಟೋಗೆ 2000 ರಿಂದ 3000 ರೂಪಾಯಿ ನಿಗದಿಯಾಗಿದೆ ಎಂದು ವಿಡಿಯೋ ಮಾಡಿ ವ್ಯಾಪಾರಿಗಳು ಹರಿಬಿಟ್ಟ ಪರಿಣಾಮ ಕೋಲಾರದ ಎಪಿಎಂಸಿ ಮಾರುಕಟ್ಟೆಗೆ ಆಂಧ್ರ ಪ್ರದೇಶ, ತಮಿಳುನಾಡಿನಿಂದಲೂ ಟೊಮೆಟೋ ಹೆಚ್ಚಿನ ಪ್ರಮಾಣದಲ್ಲಿ ಬಂದಿದೆ. ಇದರಿಂದಾಗಿ ಬೆಲೆಯಲ್ಲಿ ತೀವ್ರ ಕುಸಿತ ಕಂಡುಬಂದಿದೆ.

ಕೋಲಾರ ಎಪಿಎಂಸಿ ಮಾರುಕಟ್ಟೆಯಲ್ಲಿ ರೈತರಿಗೆ ಆಘಾತ; ಟೊಮ್ಯಾಟೊ ಬೆಲೆಯಲ್ಲಿ ದಿಢೀರ್ ಕುಸಿತ
ಟೊಮ್ಯಾಟೊ
Follow us
TV9 Web
| Updated By: preethi shettigar

Updated on:Nov 26, 2021 | 2:56 PM

ಕೋಲಾರ: ಜಿಲ್ಲೆಯ ಎಪಿಎಂಸಿ ಮಾರುಕಟ್ಟೆಯಲ್ಲಿ ರೈತರಿಗೆ ಆಘಾತ ಎದುರಾಗಿದೆ. ಇಂದು (ನವೆಂಬರ್ 26) ಟೊಮೆಟೋ ಬೆಲೆಯಲ್ಲಿ ದಿಢೀರ್ ಕುಸಿತ ಉಂಟಾಗಿದ್ದು, 15 ಕೆಜಿ ಟೊಮ್ಯಾಟೋಗೆ  400 ರಿಂದ 500 ರೂಪಾಯಿ ನಿಗದಿಯಾಗಿದೆ. 15 ಕೆಜಿ ಬಾಕ್ಸ್ ಟೊಮ್ಯಾಟೋಗೆ ನಿನ್ನೆ 800 ರಿಂದ 1000 ರೂಪಾಯಿ ಇತ್ತು. ಆದರೆ ಇಂದು ಬೆಲೆ ಕುಸಿತವಾಗಿದೆ.

ಬಾಕ್ಸ್ ಟೊಮ್ಯಾಟೋಗೆ 2000 ರಿಂದ 3000 ರೂ. ಎಂದು ವಿಡಿಯೋ ಬಾಕ್ಸ್ ಟೊಮ್ಯಾಟೋಗೆ 2000 ರಿಂದ 3000 ರೂಪಾಯಿ ನಿಗದಿಯಾಗಿದೆ ಎಂದು ವಿಡಿಯೋ ಮಾಡಿ ವ್ಯಾಪಾರಿಗಳು ಹರಿಬಿಟ್ಟ ಪರಿಣಾಮ ಕೋಲಾರದ ಎಪಿಎಂಸಿ ಮಾರುಕಟ್ಟೆಗೆ ಆಂಧ್ರ ಪ್ರದೇಶ, ತಮಿಳುನಾಡಿನಿಂದಲೂ ಟೊಮೆಟೋ ಹೆಚ್ಚಿನ ಪ್ರಮಾಣದಲ್ಲಿ ಬಂದಿದೆ. ಇದರಿಂದಾಗಿ ಬೆಲೆಯಲ್ಲಿ ತೀವ್ರ ಕುಸಿತ ಕಂಡುಬಂದಿದೆ.

ಸದ್ಯ ಸ್ಥಳೀಯ ರೈತರು ಬೆಲೆ ಇಲ್ಲದೆ ಕಂಗಾಲಾಗಿದ್ದಾರೆ. ಮಳೆಯಿಂದ ಹಾನಿಗೊಳಗಾಗಿ ಅಳಿದು ಉಳಿದ ಬೆಳೆಯನ್ನು ತಂದಿದ್ದ ಜಿಲ್ಲೆಯ ರೈತರು, ಉತ್ತಮ ಬೆಲೆಯ ನಿರೀಕ್ಷೆಯಲ್ಲಿದ್ದರು. ಆದರೆ ವಿಡಿಯೋದಿಂದಾಗಿ ರೈತರಿಗೆ ನಿರಾಸೆಯಾಗಿದೆ.

ಭಾರೀ ಮಳೆಗೆ ಐದು ಲಕ್ಷ ಹೆಕ್ಟೇರ್ ಬೆಳೆ ನಾಶ; ದುಪ್ಪಟ್ಟಾದ ತರಕಾರಿ ಬೆಲೆ ರಾಜ್ಯದಲ್ಲಿ ನಿರಂತರ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ಥವಾಗಿದೆ. ಒಂದು ಕಡೆ ಸಂಚಾರಕ್ಕೆ ತೊಂದರೆಯಾದರೆ ಇನ್ನೊಂದು ಕಡೆ ಕಟಾವಿಗೆ ಸಿದ್ಧವಾದ ಬೆಳೆಗಳು ನೀರು ಪಾಲಾಗಿದೆ. ಅದರಲ್ಲೂ ಬೆಳೆಯನ್ನೇ ನಂಬಿಕೊಂಡು ಜೀವನ ನಡೆಸುವ ರೈತರ ಸ್ಥಿತಿ ಹೇಳತೀರದು. ಗದ್ದೆಗಳಲ್ಲಿ, ತೋಟಗಳಲ್ಲಿ ನೀರು ತುಂಬಿಕೊಂಡಿದ್ದು, ರೈತರು ಆತಂಕದಲ್ಲೇ ಜೀವನ ಸಾಗಿಸುವಂತಾಗಿದೆ. ಹೀಗಿರುವಾಗಲೇ ತರಕಾರಿಗಳ ಬೆಲೆ ಏರಿಕೆಯಾಗಿದೆ. ಇದಕ್ಕೆ ಕಾರಣ ಫಸಲು ಸರಿಯಾಗಿ ಮಾರುಕಟ್ಟೆ ಸೇರದಿರುವುದು. ಅದರಲ್ಲೂ ಈ ಹಿಂದೆ ರಸ್ತೆಗೆ ಟೊಮೆಟೋಗಳನ್ನು ಸುರಿದು ಪ್ರತಿಭಟನೆ ನಡೆಸುತ್ತಿದ್ದ ಕೋಲಾರ ಜಿಲ್ಲೆಯಲ್ಲಿ ಕೆಜಿ ಟೊಮೆಟೋಗೆ 210 ರೂಪಾಯಿ ಬೆಲೆ ನಿಗದಿಯಾಗಿದೆ. ಅದರಲ್ಲೂ ಇದೇ ಮೊದಲ ಬಾರಿಕೆ 15 ಕೆಜಿಯ ಒಂದು ಬಾಕ್ಸ್​ನಲ್ಲಿ ಟೊಮೆಟೋ ಬೆಲೆ 3 ಸಾವಿರ ರೂಪಾಯಿ ಗಡಿ ದಾಟಿದೆ. ಅಂದರೆ ರೈತರು ಹೇಳುವ ಪ್ರಕಾರ ದಾಖಲೆಯ ಮೊತ್ತಕ್ಕೆ ಟೊಮೆಟೋ ಮಾರಾಟವಾಗುತ್ತಿದೆ. ಪರಿಸ್ಥಿತಿ ಕೂಡ ಹಾಗೆ ಇದೆ. ಅಲ್ಪಸ್ವಲ್ಪ ಕೆಟ್ಟ ಟೊಮೆಟೋ ಕೂಡ ಮಾರಾಟವಾಗುತ್ತಿದೆ. ಇದಕ್ಕೆ ಕಾರಣ ಮಾರುಕಟ್ಟೆಗೆ ಟೊಮೆಟೋ ಪೂರೈಕೆಯಾಗುತ್ತಿಲ್ಲ. ಇನ್ನು ಒಂದು ಅಥವಾ ಎರಡು ಟೊಮೆಟೋವಿನ ಪ್ಯಾಕೆಟ್ ಕೂಡ ಮಾರುಕಟ್ಟೆಗೆ ಬಂದಿದ್ದು, ಗಗನಕ್ಕೇರಿದ ಬೆಲೆಗೆ ಪ್ರತ್ಯಕ್ಷ ಸಾಕ್ಷಿ ಎಂಬಂತಾಗಿದೆ. ಇನ್ನಿತರ ತರಕಾರಿ ಮಾರಾಟ ಕೂಡ ಭಿನ್ನವಾಗಿಲ್ಲ ಎನ್ನುವುದು ವಿಪರ್ಯಾಸ.

ಭಾರೀ ಮಳೆಗೆ ಐದು ಲಕ್ಷ ಹೆಕ್ಟೇರ್ ಬೆಳೆ ನಾಶ ಈ ಬಗ್ಗೆ ಸರ್ಕಾರ ಕೂಡ ಗಮನಹರಿಸಿದ್ದು, ಆಯಾ ಜಿಲ್ಲೆಗಳಲ್ಲಿನ ಬೆಳೆ ನಷ್ಟದ ಕುರಿತು ವರದಿಯನ್ನು ಸಲ್ಲಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿದೆ. ಚುನಾಯಿತ ಪ್ರತಿನಿಧಿಗಳು ಸಂತ್ರಸ್ತ ಪ್ರದೇಶಗಳಿಗೆ ಇನ್ನೂ ಭೇಟಿ ನೀಡಿಲ್ಲ ಎಂಬ ದೂರು ಕೇಳಿ ಬರುತ್ತಿದ್ದಂತೆಯೇ, ನಿನ್ನೆ (ನವೆಂಬರ್​ 22) ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜ್ಯದ ಮಳೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ್ದು, ಮಳೆಯಿಂದ ನಷ್ಟ ಅನುಭವಿಸಿದ ರೈತರಿಗೆ ಪರಿಹಾರ ನೀಡುವುದಾಗಿ ಭರವಸೆ ನೀಡಿದ್ದಾರೆ. ಪ್ರಾಥಮಿಕ ಅಂದಾಜಿನ ಪ್ರಕಾರ, ಐದು ಲಕ್ಷ ಹೆಕ್ಟೇರ್ ಬೆಳೆ ನಾಶವಾಗಿದ್ದು, 30,114 ಹೆಕ್ಟೇರ್ ತೋಟಗಾರಿಕಾ ಬೆಳೆ ನಷ್ಟವಾಗಿದೆ.

ಇದನ್ನೂ ಓದಿ:

ಭಾರೀ ಮಳೆಗೆ ಐದು ಲಕ್ಷ ಹೆಕ್ಟೇರ್ ಬೆಳೆ ನಾಶ; ದುಪ್ಪಟ್ಟಾದ ತರಕಾರಿ ಬೆಲೆ, ಪ್ಯಾಕೆಟ್ ಒಂದರಲ್ಲಿ 2 ಟೊಮೆಟೋ ಮಾರಾಟ!

ಕೊಪ್ಪಳ: ಟೊಮೆಟೋ ದರ ಕುಸಿತ; ಬೆಳೆದ ಟೊಮೆಟೋವನ್ನೆಲ್ಲಾ ಬೀದಿಗೆ ಸುರಿದು ರೈತರಿಂದ ಆಕ್ರೋಶ

Published On - 2:50 pm, Fri, 26 November 21

ಸರ್ಕಾರೀ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಸಲು ಸಿಎಸ್​ಗೆ ಸಿಎಂ ಸೂಚನೆ
ಸರ್ಕಾರೀ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಸಲು ಸಿಎಸ್​ಗೆ ಸಿಎಂ ಸೂಚನೆ
ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು