AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೈಕ್‌ಗೆ ಕಾರು ಡಿಕ್ಕಿ ಹೊಡೆದು ಬಳಿಕ ಡಿವೈಡರ್‌ಗೆ ಗುದ್ದಿ ಪಲ್ಟಿ: ಓರ್ವ ವ್ಯಕ್ತಿ ಸಾವು

ಶ್ರೀನಿವಾಸಪುರ ತಾಲೂಕಿನ ಹಕ್ಕಿಪಿಕ್ಕಿ ಕಾಲೋನಿ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಅತಿ ವೇಗದ ಕಾರು ಬೈಕ್‌ಗೆ ಡಿಕ್ಕಿ ಹೊಡೆದು ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಈ ದುರ್ಘಟನೆಯಲ್ಲಿ ಕಾರಿನಲ್ಲಿದ್ದ ಆಂಧ್ರಪ್ರದೇಶ ಮೂಲದ ಬಶೀರ್ (40) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮತ್ತೊಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಬೈಕ್ ಸವಾರರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ರಾಯಲ್ಪಾಡು ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

ಬೈಕ್‌ಗೆ ಕಾರು ಡಿಕ್ಕಿ ಹೊಡೆದು ಬಳಿಕ ಡಿವೈಡರ್‌ಗೆ ಗುದ್ದಿ ಪಲ್ಟಿ: ಓರ್ವ ವ್ಯಕ್ತಿ ಸಾವು
ಕಾರು ಮತ್ತು ಬೈಕ್​ ಡಿಕ್ಕಿ
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Edited By: |

Updated on:Mar 04, 2026 | 9:42 PM

Share

ಕೋಲಾರ, ಮಾ.4: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಹಕ್ಕಿಪಿಕ್ಕಿ ಕಾಲೋನಿ ಬಳಿ ಭೀಕರ ರಸ್ತೆ ಅಪಘಾತವೊಂದು ಸಂಭವಿಸಿದೆ. ಅತಿ ವೇಗವಾಗಿ ಬಂದ ಕಾರೊಂದು ಬೈಕ್‌ಗೆ ಡಿಕ್ಕಿ ಹೊಡೆದ ಬಳಿಕ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಗುದ್ದಿ ಪಲ್ಟಿಯಾಗಿದೆ. ಈ ಘಟನೆಯಲ್ಲಿ ಕಾರಿನಲ್ಲಿದ್ದ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತ ವ್ಯಕ್ತಿಯನ್ನು ಆಂಧ್ರಪ್ರದೇಶ ಮೂಲದ ಬಶೀರ್ (40) ಎಂದು ಗುರುತಿಸಲಾಗಿದೆ.

ಕಾರಿನಲ್ಲಿದ್ದ ಮತ್ತೋರ್ವ ವ್ಯಕ್ತಿಯ ಸ್ಥಿತಿ ಗಂಭೀರವಾಗಿದ್ದು, ಅವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಕಾರು ಡಿಕ್ಕಿ ಹೊಡೆದ ರಭಸಕ್ಕೆ ಬೈಕ್‌ನಲ್ಲಿ ತೆರಳುತ್ತಿದ್ದ ಸವಾರರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಕಾರು ಬೈಕ್‌ಗೆ ಹಿಂಬದಿಯಿಂದ ಜೋರಾಗಿ ಡಿಕ್ಕಿ ಹೊಡೆದಿದೆ. ನಂತರ ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಮಧ್ಯದ ಡಿವೈಡರ್‌ಗೆ ಅಪ್ಪಳಿಸಿ ಪಲ್ಟಿಯಾಗಿದೆ. ಅಪಘಾತದ ತೀವ್ರತೆ ಎಷ್ಟಿತ್ತೆಂದರೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ.

ಇದನ್ನೂ ಓದಿ: “ಅಪ್ಪ ನಾನು ಮದುವೆಯಾಗಿದ್ದೇನೆ, ನನ್ನನ್ನು ಬಿಟ್ಟುಬಿಡಿ”: ಮಗಳ ಕಣ್ಣೀರಿಗೂ ಬೆಲೆ ಕೊಡದೆ ಎಳೆದೊಯ್ದ ತಂದೆ

ಘಟನಾ ಸ್ಥಳಕ್ಕೆ ರಾಯಲ್ಪಾಡು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ರಾಯಲ್ಪಾಡು ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಿಸಲಾಗಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:40 pm, Wed, 4 March 26

Follow Us
ಚಲಿಸುತ್ತಿದ್ದ ಬಸ್​​ನಿಂದ ಬಿದ್ದು ವೃದ್ಧೆ ಸಾವು
ಚಲಿಸುತ್ತಿದ್ದ ಬಸ್​​ನಿಂದ ಬಿದ್ದು ವೃದ್ಧೆ ಸಾವು
ಅನುಷಾ ರೈ ಜೊತೆ ಮದುವೆ ಆಗ್ತೀರಾ? ಧರ್ಮ ಕೀರ್ತಿರಾಜ್ ನೇರ ಉತ್ತರ
ಅನುಷಾ ರೈ ಜೊತೆ ಮದುವೆ ಆಗ್ತೀರಾ? ಧರ್ಮ ಕೀರ್ತಿರಾಜ್ ನೇರ ಉತ್ತರ
ಬೆಂಗಳೂರು: ಮಗಳನ್ನು ಕೊಂದು ಬಳಿಕ ತಾಯಿ ಆತ್ಮಹತ್ಯೆ, ಕಾರಣವೇನು?
ಬೆಂಗಳೂರು: ಮಗಳನ್ನು ಕೊಂದು ಬಳಿಕ ತಾಯಿ ಆತ್ಮಹತ್ಯೆ, ಕಾರಣವೇನು?
ಬಿಹಾರದ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಸಾಮ್ರಾಟ್ ಚೌಧರಿ ಹೇಳಿದ್ದೇನು?
ಬಿಹಾರದ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಸಾಮ್ರಾಟ್ ಚೌಧರಿ ಹೇಳಿದ್ದೇನು?
‘ಕ್ಯಾಲೆಂಡರ್’ ಸಿನಿಮಾ ಬಗ್ಗೆ ಸುಷ್ಮಿತಾ ಮತ್ತು ನಿವಿಷ್ಕಾ ಮಾತು
‘ಕ್ಯಾಲೆಂಡರ್’ ಸಿನಿಮಾ ಬಗ್ಗೆ ಸುಷ್ಮಿತಾ ಮತ್ತು ನಿವಿಷ್ಕಾ ಮಾತು
ಜಮೀರ್‌ ಅಹಮ್ಮದ್ ತಲೆದಂಡ: ಕಾಂಗ್ರೆಸ್ ಒಳ ಗುಟ್ಟು ಬಿಚ್ಚಿಟ್ಟ ರೇಣುಕಾಚಾರ್ಯ
ಜಮೀರ್‌ ಅಹಮ್ಮದ್ ತಲೆದಂಡ: ಕಾಂಗ್ರೆಸ್ ಒಳ ಗುಟ್ಟು ಬಿಚ್ಚಿಟ್ಟ ರೇಣುಕಾಚಾರ್ಯ
ಡೆಹ್ರಾಡೂನ್‌ನ ಕಾಳಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ
ಡೆಹ್ರಾಡೂನ್‌ನ ಕಾಳಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ
ರೀಲ್ಸ್ ಕ್ರೇಜ್; ಅತಿವೇಗಕ್ಕೆ ಡಿವೈಡರ್‌ಗೆ ಡಿಕ್ಕಿ ಹೊಡೆದ ಬೈಕ್,ಯುವತಿ ಸಾವು
ರೀಲ್ಸ್ ಕ್ರೇಜ್; ಅತಿವೇಗಕ್ಕೆ ಡಿವೈಡರ್‌ಗೆ ಡಿಕ್ಕಿ ಹೊಡೆದ ಬೈಕ್,ಯುವತಿ ಸಾವು
ಎರಡೂ ಪಂಚಮಸಾಲಿ ಟ್ರಸ್ಟ್‌ಗಳ ವಿರುದ್ಧ ಯತ್ನಾಳ್ ಗಂಭೀರ ಆರೋಪ
ಎರಡೂ ಪಂಚಮಸಾಲಿ ಟ್ರಸ್ಟ್‌ಗಳ ವಿರುದ್ಧ ಯತ್ನಾಳ್ ಗಂಭೀರ ಆರೋಪ
ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಹಲವು ಪ್ರಯಾಣಿಕರಿಗೆ ಗಾಯ
ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಹಲವು ಪ್ರಯಾಣಿಕರಿಗೆ ಗಾಯ