AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಲಾರ: ವಸತಿ ಶಾಲೆಯ ಶಿಕ್ಷಕನ ಬಂಧನ ಖಂಡಿಸಿ ವಿದ್ಯಾರ್ಥಿಗಳಿಂದಲೇ ಪ್ರತಿಭಟನೆ, ಉಪವಾಸದ ಎಚ್ಚರಿಕೆ

ಕೋಲಾರ ಜಿಲ್ಲೆಯ ಮಾಲೂರು ತಾಲ್ಲೂಕು ಯಲವಳ್ಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಮಕ್ಕಳನ್ನು ಮಲದ ಗುಂಡಿಗೆ ಇಳಿಸಿ ಕ್ಲೀನ್ ಮಾಡಿಸಿದ ಅಮಾನವೀಯ ಕೃತ್ಯ ನಡೆದಿತ್ತು. ಈ ವಿಚಾರವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿತ್ತು. ಅದರಂತೆ, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಪ್ರಾಂಶುಪಾಲೆ ಭಾರತಮ್ಮ ಮತ್ತು ಚಿತ್ರಕಲಾ ಶಿಕ್ಷಕರೊಬ್ಬರನ್ನು ಬಂಧಿಸಿದ್ದರು. ಇದೀಗ ಶಿಕ್ಷಕನ ಬಂಧನ ಖಂಡಿಸಿ ವಿದ್ಯಾರ್ಥಿಗಳೇ ಪ್ರತಿಭಟನೆ ನಡೆಸುತ್ತಿದ್ದಾರೆ.

ಕೋಲಾರ: ವಸತಿ ಶಾಲೆಯ ಶಿಕ್ಷಕನ ಬಂಧನ ಖಂಡಿಸಿ ವಿದ್ಯಾರ್ಥಿಗಳಿಂದಲೇ ಪ್ರತಿಭಟನೆ, ಉಪವಾಸದ ಎಚ್ಚರಿಕೆ
ಮಲದ ಗುಂಡಿಗೆ ವಿದ್ಯಾರ್ಥಿಗಳನ್ನು ಇಳಿಸಿ ಸ್ವಚ್ಛಗೊಳಿಸುತ್ತಿರುವುದು (ಎಡ ಚಿತ್ರ) ಮತ್ತು ಮೊರಾರ್ಜಿ ದೇಸಾಯಿ ವಸತಿ ಶಾಲೆ (ಎಡ ಚಿತ್ರ)
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Updated By: Rakesh Nayak Manchi|

Updated on: Dec 18, 2023 | 8:52 AM

Share

ಕೋಲಾರ, ಡಿ.18: ಮಕ್ಕಳನ್ನು ಮಲದ ಗುಂಡಿಗೆ ಇಳಿಸಿ ಕ್ಲೀನ್ ಮಾಡಿಸಿದ ಪ್ರಕರಣ ಸಂಬಂಧ ಕೋಲಾರದ (Kolar) ಮಾಲೂರು ತಾಲೂಕಿನಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಚಿತ್ರಕಲಾ ಶಿಕ್ಷಕನ ಬಂಧನ ಖಂಡಿಸಿ ಸ್ವತಃ ವಿದ್ಯಾರ್ಥಿಗಳೇ ಪ್ರತಿಭಟನೆ ನಡೆಸುತ್ತಿದ್ದಾರೆ. ಇಂದು ಬೆಳಗ್ಗೆಯಿಂದಲೇ ವಸತಿ ಶಾಲೆಯಲ್ಲಿ ಮಕ್ಕಳು ಪ್ರತಿಭಟನೆ ಆರಂಭಿಸಿದ್ದು, ಶಿಕ್ಷಕ ಮುನಿಯಪ್ಪ ವಿರುದ್ಧದ ಪ್ರಕರಣವನ್ನು ವಾಪಸ್ ಪಡೆಯುವಂತೆ ಒತ್ತಾಯಿಸುತ್ತಿದ್ದಾರೆ. ಅಲ್ಲದೆ, ಕೂಡಲೆ ಸ್ಥಳಕ್ಕೆ ಜಿಲ್ಲಾಧಿಕಾರಿಗಳು ಆಗಮಿಸುವಂತೆ ಒತ್ತಾಯಿಸುತ್ತಿರುವ ವಿದ್ಯಾರ್ಥಿಗಳು, ಊಟ ತಿಂಡಿ ಬಿಟ್ಟು ಪ್ರತಿಭಟನೆ ಮಾಡುವ ಎಚ್ಚರಿಕೆ ನೀಡಿದ್ದಾರೆ.

ಏನಿದು ಪ್ರಕರಣ?

ಯಲುವಹಳ್ಳಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಮಕ್ಕಳನ್ನು ಮಲದ ಗುಂಡಿಯೊಳಗೆ ಇಳಿಸಿ ಕ್ಲೀನ್ ಮಾಡಿಸಿದ್ದ ಪ್ರಕರಣ ಬೆಳಕಿಗೆ ಬಂದಿತ್ತು. ಇದರ ವಿಡಿಯೋ ಟಿವಿ9 ಕನ್ನಡಕ್ಕೆ ಲಭ್ಯವಾಗಿ ಟಿವಿ9ನ ‘ಹೇಗಿದೆ ನಮ್‌ ಶಾಲೆ’ ಎಂಬ ಅಭಿಯಾನದಲ್ಲಿ ವರದಿ ಬಿತ್ತರಿಸಲಾಗಿತ್ತು.

ಇದನ್ನೂ ಓದಿ: ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಮಕ್ಕಳಿಗೆ ಕಿರುಕುಳ: ಬೆತ್ತಲೆ ವಿಡಿಯೋ ಚಿತ್ರೀಕರಣ, ವಿದ್ಯಾರ್ಥಿನಿ ಆರೋಪ

ಇದರ ಬೆನ್ನಲ್ಲೇ ವಸತಿ ಶಾಲೆಗೆ ಭೇಟಿ ನೀಡಿದ್ದ ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಶ್ರೀನಿವಾಸ್, ಪರಿಶೀಲನೆ ನಡೆಸಿದ್ದರು. ಬಳಿಕ ಮಾತನಾಡಿದ್ದ ಅವರು, ಶೌಚಾಲಯ ಕ್ಲೀನ್ ಮಾಡಿಸಿದವರನ್ನು ಅಮಾನತು ಮಾಡುತ್ತೇವೆ ಎಂದಿದ್ದರು. ಅದರಂತೆ, ವಸತಿ ಶಾಲೆಯ ನಾಲ್ವರು ಸಿಬ್ಬಂದಿಯನ್ನು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಅಮಾನತು ಮಾಡಿದ್ದರು. ಬಳಿಕ ಪ್ರಾಂಶುಪಾಲೆ ಭಾರತಮ್ಮ ಮತ್ತು ಚಿತ್ರಕಲಾ ಶಿಕ್ಷಕ ಮುನಿಯಪ್ಪ ಅವರನ್ನು ಬಂಧಿಸಲಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?