ಓಂ ಶಕ್ತಿ ದರ್ಶನ ಪಡೆದು ವಾಪಸಾಗುವಾಗ ಅಪಘಾತ: ಕೋಲಾರದ ನಾಲ್ವರ ಸಾವು

ತಮಿಳುನಾಡಿನ ರಾಣಿಪೇಟೆ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕೋಲಾರದ ನಾಲ್ವರು ಮೃತಪಟ್ಟಿದ್ದಾರೆ. ಓಂ ಶಕ್ತಿ ದರ್ಶನ ಪಡೆದು 50 ಮಂದಿ ಭಕ್ತರು ಕೋಲಾರಕ್ಕೆ ವಾಪಸ್ಸಾಗುವಾಗ ಅಪಘಾತ ಸಂಭವಿಸಿದೆ. ಓರ್ವ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ವೇಲೂರು ಸಿಎಂಸಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಓಂ ಶಕ್ತಿ ದರ್ಶನ ಪಡೆದು ವಾಪಸಾಗುವಾಗ ಅಪಘಾತ: ಕೋಲಾರದ ನಾಲ್ವರ ಸಾವು
ಕೆಎಸ್​ಆರ್​ಟಿಸಿ ಬಸ್​ ಅಪಘಾತ
Follow us
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Updated By: ವಿವೇಕ ಬಿರಾದಾರ

Updated on: Jan 09, 2025 | 10:22 AM

ಕೋಲಾರ, ಜನವರಿ 09: ತಮಿಳುನಾಡಿನ (Tamil Nadu) ರಾಣಿಪೇಟೆ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕೋಲಾರದ (Kolar) ನಾಲ್ವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಕೆಎಸ್​ಆರ್​ಟಿಸಿ ಬಸ್ (KSRTC Bus) ಹಾಗೂ ಕರ್ನಾಟಕದ (Karnataka) ಕ್ಯಾಂಟರ್ ನಡುವೆ ಅಪಘಾತ ಸಂಭವಿಸಿದೆ. ಕ್ಯಾಂಟರ್​ನಲ್ಲಿದ್ದ ನಾಲ್ವರು ಮತ್ತು ಕೆಎಸ್​ಆರ್​ಟಿಸಿ ಬಸ್​ ಚಾಲಕ ಮೃತಪಟ್ಟಿದ್ದಾರೆ. ಕೆಎಸ್​ಆರ್​ಟಿಸಿ ಬಸ್​ನಲ್ಲಿದ್ದ ಓರ್ವ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದಾರೆ.

ಕ್ಯಾಂಟರ್ ಚಾಲಕ ಮಂಜುನಾಥ್, ಕ್ಲೀನರ್ ಶಂಕರ್, ಸಹಾಯಕ ಸೋಮಶೇಖರ್, ವೆಂಕಟೇಶ್ ನಗರ ಗ್ರಾಮದ ರೈತ ಕೃಷ್ಣಪ್ಪ ಮೃತ ದುರ್ದೈವಿಗಳು ಎಂದು ಗುರುತಿಸಲಾಗಿದೆ. ನಲ್ಲೂರು ಗ್ರಾಮದ ಸರಸ್ವತಮ್ಮ ಸ್ಥಿತಿ ಗಂಭೀರವಾಗಿದೆ.

ಮುಳಬಾಗಿಲು ತಾಲೂಕಿನ ನಲ್ಲೂರು ಗ್ರಾಮದ 50 ಮಂದಿ ಭಕ್ತರು ಕೆಎಸ್​ಆರ್​​ಟಿಸಿ ಬಸ್​ನಲ್ಲಿ ತಮಿಳುನಾಡಿನ ಮೇಲ್ಮರವತ್ತೂರು ಓಂ ಶಕ್ತಿ ದೇವಾಲಯಕ್ಕೆ ಪ್ರವಾಸ ಹೋಗಿ ವಾಪಸಾಗುತ್ತಿದ್ದರು. ಕ್ಯಾಂಟರ್ ಶ್ರೀನಿವಾಸಪುರ ತಾಲೂಕು ಸೀಗೆಹಳ್ಳಿ ಗ್ರಾಮದಿಂದ ಚೆನೈಗೆ ತರಕಾರಿ ತುಂಬಿಕೊಂಡು ಹೋಗುತ್ತಿತ್ತು.

ಬುಧವಾರ ರಾತ್ರಿ ತಮಿಳುನಾಡಿನ ರಾಣಿಪೇಟೆ ಬಳಿ ಕೆಎಸ್​ಆರ್​ಟಿಸಿ ಮತ್ತು ಕ್ಯಾಂಟರ್​ ನಡುವೆ ಅಪಘಾತ ಸಂಭವಿಸಿದೆ. ನಾಲ್ವರು ಮೃತಪಟ್ಟಿದ್ದಾರೆ. ಗಾಯಾಳುಗಳನ್ನು ವೇಲೂರು ಸಿಎಂಸಿ ಆಸ್ಪತ್ರೆ, ರತ್ನಗಿರಿ ಮೆಡಿಕಲ್ ಕಾಲೇಜಿನಲ್ಲಿ ದಾಖಲಿಸಲಾಗಿದೆ. ರಾಣಿಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್