ನೃತ್ಯಾಭ್ಯಾಸ ಮಾಡುವಾಗ ಕುಸಿದು ಬಿದ್ದು ವಿದ್ಯಾರ್ಥಿನಿ ಸಾವು

ನೃತ್ಯಾಭ್ಯಾಸ ಮಾಡುವಾಗ ಕುಸಿದು ಬಿದ್ದು ವಿದ್ಯಾರ್ಥಿನಿ ಸಾವು - ನೃತ್ಯಾಭ್ಯಾಸ ಮಾಡುವಾಗ ವಿದ್ಯಾರ್ಥಿನಿ ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ಕೆಜಿಎಫ್ ತಾಲೂಕಿನ ಟಿ.ಗೊಲ್ಲಹಳ್ಳಿಯಲ್ಲಿ ನಡೆದಿದೆ. ಶನಿವಾರ ಶಾಲಾ ವಾರ್ಷಿಕೋತ್ಸವ ಹಿನ್ನೆಲೆ ನೃತ್ಯಾಭ್ಯಾಸ ಮಾಡುತ್ತಿದ್ದ 9ನೇ ತರಗತಿಯಲ್ಲಿ ಓದುತ್ತಿದ್ದ ಪೂಜಿತಾ ಮೃತ ಪಟ್ಟ ವಿದ್ಯಾರ್ಥಿನಿ.

ನೃತ್ಯಾಭ್ಯಾಸ ಮಾಡುವಾಗ ಕುಸಿದು ಬಿದ್ದು ವಿದ್ಯಾರ್ಥಿನಿ ಸಾವು
ಸಾಧು ಶ್ರೀನಾಥ್​ Edited By:

Updated on: Jul 03, 2026 | 1:03 PM

ಕೋಲಾರ: ನೃತ್ಯಾಭ್ಯಾಸ ಮಾಡುವಾಗ ವಿದ್ಯಾರ್ಥಿನಿ ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ಕೆಜಿಎಫ್ ತಾಲೂಕಿನ ಟಿ.ಗೊಲ್ಲಹಳ್ಳಿಯಲ್ಲಿ ನಡೆದಿದೆ. ಶನಿವಾರ ಶಾಲಾ ವಾರ್ಷಿಕೋತ್ಸವ ಹಿನ್ನೆಲೆ ನೃತ್ಯಾಭ್ಯಾಸ ಮಾಡುತ್ತಿದ್ದ 9ನೇ ತರಗತಿಯಲ್ಲಿ ಓದುತ್ತಿದ್ದ ಪೂಜಿತಾ ಮೃತ ಪಟ್ಟ ವಿದ್ಯಾರ್ಥಿನಿ.

ನಿನ್ನೆ ಪೂಜಿತಾ ಶಾಲಾ ಕೊಠಡಿಯಲ್ಲಿ ನೃತ್ಯ ಮಾಡುತ್ತಲೆ ನೆಲಕ್ಕೆ ಕುಸಿದು ಬಿದ್ದಿರುವ ಸಿಸಿಟಿವಿ ದೃಶ್ಯಾವಳಿಗಳು ಲಭ್ಯವಾಗಿವೆ. ವಿಧ್ಯಾರ್ಥಿನಿ ಕೆಳಗೆ ಕುಸಿದು ಬಿದ್ದರು ಶಿಕ್ಷಕ ಸಹಾಯ ಮಾಡದೆ ಅಮಾನವೀಯತೆ ತೋರಿದ್ದಾನೆ. ದೃಶ್ಯಾವಳಿಯಲ್ಲಿ ಶಿಕ್ಷಕ ಎರಡು ಜೇಬಲ್ಲಿ ಕೈಯಿಟ್ಟು ನಿಂತು ನೋಡ್ತಿದ್ದ ದೃಶ್ಯ ಸೆರೆಯಾಗಿದೆ. ಬೇತಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Published On - 2:23 pm, Fri, 24 January 20

ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Loading...
Unable to load recommendations.
Follow Us