ಕೋಲಾರ, ನ.26: ಮಚ್ಚಿನಿಂದ ಹಲ್ಲೆ ನಡೆಸಿ ಸೆಕ್ಯೂರಿಟಿ ಗಾರ್ಡ್ನನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ಕೋಲಾರ (Kolar) ಜಿಲ್ಲೆಯ ಮುಳಬಾಗಿಲು ತಾಲೂಕಿನ ಮಿಣಜೇನಹಳ್ಳಿಯಲ್ಲಿ ನಡೆದಿದೆ. ಮಂಜುನಾಥ್ (48) ಹತ್ಯೆಯಾದ ಸೆಕ್ಯೂರಿಟಿ ಗಾರ್ಡ್.
ಆರೋಪಿಗಳು ಕೊಲೆ ಮಾಡಿದ ನಂತರ ಕೃತ್ಯವನ್ನು ಅಪಘಾತ ಎಂದು ಬಿಂಬಿಸಲು ಯತ್ನಿಸಿದ್ದಾರೆ. ಸದ್ಯ, ಘಟನಾ ಸ್ಥಳಕ್ಕೆ ಆಗಮಿಸಿದ ಮುಳಬಾಗಿಲು ಗ್ರಾಮಾಂತರ ಠಾಣಾ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದು, ಪ್ರರಕಣ ದಾಖಲಿಸಿಕೊಂಡು ಆರೋಪಿಗಳ ಬಂಧನಕ್ಕೆ ತನಿಖೆ ಆರಂಭಿಸಿದ್ದಾರೆ. ಹಣಕಾಸಿನ ವ್ಯವಹಾರದ ವಿಚಾರವಾಗಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.
ಇದನ್ನೂ ಓದಿ: ಗದಗ ಜಿಲ್ಲೆಯಲ್ಲೊಂದು ಅಮಾನವೀಯ ಘಟನೆ! 9 ತಿಂಗಳ ಮೊಮ್ಮಗನನ್ನ ಉಸಿರು ಗಟ್ಟಿಸಿ ಕೊಲೆ ಮಾಡಿದ್ಲಾ ಅಜ್ಜಿ?
ಬೆಂಗಳೂರು: ಗೂಂಡಾ ಕಾಯ್ದೆಯಡಿ ರೌಡಿಶೀಟರ್ ಜಗದೀಶ್ ಅಲಿಯಾಸ್ ಕಾಮಿಯನ್ನು ಬೆಂಗಳೂರಿನ ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕಾಮಿ ವಿರುದ್ಧ ಕೊಲೆ, ಕೊಲೆ ಯತ್ನ, ಹಲ್ಲೆ, ದರೋಡೆಗೆ ಸಂಚು, ಅಪಹರಣ ಸೇರಿದಂತೆ ಒಟ್ಟು 16 ಪ್ರಕರಣಗಳು ದಾಖಲಾಗಿವೆ.
2017ರಲ್ಲಿ ಗೂಂಡಾ ಕಾಯ್ದೆಯಡಿ ಜಗದೀಶ್ನನ್ನು ಬಂಧಿಸಲಾಗಿತ್ತು. ಆರು ತಿಂಗಳು ಜೈಲಿನಲ್ಲಿದ್ದು ಬಂದಿದ್ದ ಕಾಮಿ, ಮತ್ತೆ ಅಕ್ರಮ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದನು. ಹೀಗಾಗಿ ಮತ್ತೊಮ್ಮೆ ಆತನ ವಿರುದ್ಧ ಗೂಂಡಾ ಕಾಯ್ದೆ ಪ್ರಯೋಗ ಮಾಡಲಾಗಿದೆ.
ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ