Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಲವೇ ಕ್ಷಣಗಳಲ್ಲಿ ಬಹುನಿರೀಕ್ಷಿತ ಯರಗೋಳ್ ಡ್ಯಾಂ ಕುಡಿಯುವ ನೀರಿನ ಯೋಜನೆ ಲೋಕಾರ್ಪಣೆ, ಸಿಎಂ ಸಿದ್ದರಾಮಯ್ಯ ಸ್ವಾಗತಕ್ಕೆ ಸಿಂಗಾರಗೊಂಡ ಕೋಲಾರ

ಬಹತೇಕ ಅರ್ಧ ಟಿಎಂಸಿಯಷ್ಟು ನೀರು ಶೇಖರಣೆ ಸಾಮರ್ಥ್ಯ ಹೊಂದಿರುವ ಯರಗೋಳ್​ ಡ್ಯಾಂ ಸತತ 17 ವರ್ಷಗಳ ನಂತರ ಯೋಜನೆ ಪೂರ್ಣವಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಲೋಕಾರ್ಪಣೆ ಮಾಡಲಿದ್ದಾರೆ. ಈಗಾಗಲೆ ಜಿಲ್ಲಾಡಳಿತದ ವತಿಯಿಂದ ಬೃಹತ್ ಕಾರ್ಯಕ್ರಮಕ್ಕೆ ಸಿದ್ದತೆ ಸಾಗಿದೆ. ಕಾರ್ಯಕ್ರಮಕ್ಕೆ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಿಂದ ಸುಮಾರು 25 ಸಾವಿರ ಜನರು ಭಾಗವಹಿಸುವ ನಿರೀಕ್ಷೆ ಹೊಂದಲಾಗಿದೆ.‌

ಕೆಲವೇ ಕ್ಷಣಗಳಲ್ಲಿ ಬಹುನಿರೀಕ್ಷಿತ ಯರಗೋಳ್ ಡ್ಯಾಂ ಕುಡಿಯುವ ನೀರಿನ ಯೋಜನೆ ಲೋಕಾರ್ಪಣೆ, ಸಿಎಂ ಸಿದ್ದರಾಮಯ್ಯ ಸ್ವಾಗತಕ್ಕೆ ಸಿಂಗಾರಗೊಂಡ ಕೋಲಾರ
ಕೆಲವೇ ಕ್ಷಣಗಳಲ್ಲಿ ಬಹುನಿರೀಕ್ಷಿತ ಯರಗೋಳ್ ಡ್ಯಾಂ ಕುಡಿಯುವ ನೀರಿನ ಯೋಜನೆ ಲೋಕಾರ್ಪಣೆ
Follow us
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Updated By: ಸಾಧು ಶ್ರೀನಾಥ್​

Updated on:Nov 11, 2023 | 11:35 AM

ಅದು ಜಿಲ್ಲೆಯ ಬಹು ನಿರೀಕ್ಷಿತ ಕುಡಿಯುವ ನೀರಿನ ಯೋಜನೆ, ಜಿಲ್ಲೆಯ ಮೂರು ತಾಲೂಕುಗಳಿಗೆ ಶುದ್ದ ಕುಡಿಯುವ ನೀರಿನ ಸೌಲಭ್ಯ ಒದಗಿಸುವ ಜಲಾಶಯ, ಕಳೆದ‌ 17 ವರ್ಷಗಳಿಂದ ನೆನಗುದಿಗೆ ಬಿದಿದ್ದ ಯೋಜನೆ, ಸದ್ಯ ಯೋಜನೆ ಕಾಮಗಾರಿ ಮುಗಿದಿದ್ದು, ಇನ್ನೆನು ಕೆಲವೇ ಕ್ಷಣಗಳಲ್ಲಿ ಸಿಎಂ ಸಿದ್ದರಾಮಯ್ಯ ಅವರಿಂದ ಲೋಕಾರ್ಪಣೆಗೊಳ್ಳಲಿದೆ..ಯಾವುದು ಆ ಯೋಜನೆ ಅಂತೀರಾ ಈ ಸ್ಟೋರಿ…ತುಂಬಿ ತುಳುಕುತ್ತಿರುವ ಯರಗೋಳ್ ಡ್ಯಾಂ, ಸಿಎಂ ಬರುವ ಹಿನ್ನೆಲೆ ಕಾರ್ಯಕ್ರಮಕ್ಕೆ ಅಂತಿಮಹಂತದ ಸಿದ್ಧತೆ, ಮತ್ತೊಂದಡೆ ಹಳ್ಳಕೊಳ್ಳಗಳಿಂದ ಕೂಡಿದ ರಸ್ತೆಗಳಿಗೆ ಡಾಂಬರೀಕರಣದ ಭಾಗ್ಯ, ಇವೆಲ್ಲಾ ದೃಶ್ಯಗಳು ಕಂಡು ಬಂದಿದ್ದು ಕೋಲಾರದಲ್ಲಿ. ಹೌದು ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲ್ಲೂಕಿನ ಯರಗೋಳು ಗ್ರಾಮದ ಬಳಿ ವ್ಯರ್ಥವಾಗಿ ತಮಿಳುನಾಡಿಗೆ ಹರಿದು ಹೋಗುತ್ತಿದ್ದ ನೀರಿಗೆ ಅಡ್ಡಲಾಗಿ ಡ್ಯಾಂ ನಿರ್ಮಾಣ ಮಾಡಿ ಕೋಲಾರ, ಬಂಗಾರಪೇಟೆ, ಮಾಲೂರು ಪಟ್ಟಣ ಹಾಗೂ 45 ಗ್ರಾಮಗಳಿಗೆ ಕುಡಿಯುವ ನೀರು ಒದಗಿಸುವ ಯೋಜನೆ ಇದಾಗಿದೆ (Yergol Dam).

ಬಹತೇಕ ಅರ್ಧ ಟಿಎಂಸಿಯಷ್ಟು ನೀರು ಶೇಖರಣೆ ಸಾಮರ್ಥ್ಯ ಹೊಂದಿರುವ ಯರಗೋಳ್​ ಡ್ಯಾಂ ಸತತ 17 ವರ್ಷಗಳ ನಂತರ ಯೋಜನೆ ಪೂರ್ಣವಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಲೋಕಾರ್ಪಣೆ ಮಾಡಲಿದ್ದಾರೆ. ಬಂಗಾರಪೇಟೆ ನೀರು ಶುದ್ಧೀಕರಣ ಘಟಕ ಉದ್ಘಾಟನೆಯನ್ನು ನಗರಾಭಿವೃದ್ಧಿ ಮತ್ತು ಪಟ್ಟಣ ಯೋಜನೆ ಸಚಿವ ಬಿ.ಎಸ್.ಸುರೇಶ್ ನೆರವೇರಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಆಹಾರ ಮತ್ತು ನಾಗರೀಕರ ಪೂರೈಕೆ ಸಚಿವ ಕೆ.ಎಚ್. ಮುನಿಯಪ್ಪ, ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿ, ಇಂಧನ ಸಚಿವ ಕೆ.ಜೆ. ಜಾರ್ಜ್, ಸಮಾಜ ಕಲ್ಯಾಣ ಸಚಿವ ಡಾ. ಹೆಚ್.ಸಿ.ಮಹದೇವಪ್ಪ, ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ, ಗ್ರಾಮೀಣ ಅಭಿವೃದ್ಧಿ ಮತ್ತು ಅರಣ್ಯ ಸಚಿವ ಈಶ್ವರ ಖಂಡ್ರೆ ಸೇರಿದಂತೆ ಜಿಲ್ಲೆಯ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಕೋಲಾರ ಲೋಕಸಭಾ ಕ್ಷೇತ್ರದ ಸಂಸದ ಎಸ್.ಮುನಿಸ್ವಾಮಿ, ಸೇರಿದಂತೆ ಎಲ್ಲಾ ಶಾಸಕರು ಯರಗೋಳ್ ಯೋಜನೆಯನ್ನು ಲೋಕರ್ಪಣೆ ಮಾಡಲಿದ್ದು, ಈಗಾಗಲೆ ಜಿಲ್ಲಾಡಳಿತದ ವತಿಯಿಂದ ಬೃಹತ್ ಕಾರ್ಯಕ್ರಮಕ್ಕೆ ಸಿದ್ದತೆಗಳು ಭರದಿಂದ ಸಾಗಿದೆ. ಕಾರ್ಯಕ್ರಮಕ್ಕೆ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಿಂದ ಸುಮಾರು 25 ಸಾವಿರ ಜನರು ಭಾಗವಹಿಸುವ ನಿರೀಕ್ಷೆ ಹೊಂದಲಾಗಿದೆ.‌ಇನ್ನು ಮುಖ್ಯಮಂತ್ರಿಗಳು ಬರುವ‌ ಹಿನ್ನಲೆಯಲ್ಲಿ ಬಲಮಂದೆ ವ್ಯಾಪ್ತಿಯಲ್ಲಿ‌ ಹಳ್ಳಕೊಳ್ಳಗಳಿಂದ ಕೂಡಿದ್ದ ರಸ್ತೆಗಳಿಗೆ ಡಾಂಬರೀಕರಣದ ಭಾಗ್ಯ ಲಭಿಸಿದೆ.

2006 ಹೆಚ್​ ಡಿ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಯೋಜನೆಯ ಶಂಕುಸ್ಥಾಪನೆ ಮಾಡಲಾಗಿತ್ತು ಅಂದಿಗೆ 240 ಕೋಟಿ ವೆಚ್ಚಕ್ಕೆ ಡಿಪಿಆರ್ ಮಾಡಿ, ಅಣೆಕಟ್ಟು ಹಾಗೂ ನೀರು ನಿಲುಗಡೆಗಾಗಿ 300 ಎಕರೆ ಪ್ರದೇಶವನ್ನು ವಶಕ್ಕೆ ಪಡೆದು ಅದರಲ್ಲಿ 124 ಎಕರೆ ಅರಣ್ಯ ಭೂಮಿ, ಜೊತೆಗೆ 128 ಎರಕೆ ರೈತರಿಂದ ಸ್ವಾಧೀನ ಪಡಿಸಿಕೊಂಡು, ಯೋಜನೆ ಕಾಮಗಾರಿಗೆ ಚಾಲನೆ ನೀಡಲಾಯಿತು.ಆದರೆ ಯೋಜನೆ ನಿರೀಕ್ಷಿತ ಮಟ್ಟದಲ್ಲಿ ಕಾಮಗಾರಿ ನಡೆಯದ ಹಿನ್ನೆಲೆ 2006 ರಿಂದ 2009ರ ವರೆಗೂ ಯೋಜನೆ ಸ್ಥಗಿತವಾಗಿತ್ತು. 2009 ರಲ್ಲಿ ಮಾಜಿ ಸಚಿವ ವರ್ತೂರು ಪ್ರಕಾಶ್ ನೀರು ಸರಬರಾಜು ಮಂಡಳಿ ಅಧ್ಯಕ್ಷರಾಗಿದ್ದ ವೇಳೆ 80 ಕೋಟಿ ಹಣ ಪೈಪ್ ಲೈನ್ ಕಾಮಗಾರಿ ಮಾಡಿ ಯೋಜನೆ ಮತ್ತೆ ಸ್ಥಗಿತವಾಯಿತು.

2013ರಲ್ಲಿ ಜಿಲ್ಲೆಯ ಶಾಸಕರಗಳ ಒತ್ತಾಯದ ನಂತರ ಸಿಎಂ ಸಿದ್ದರಾಮಯ್ಯ ಅವರು ಯೋಜನೆಗೆ ಮರು ಅನುಮೋದನೆ ಹಾಗೂ ಶುದ್ದೀಕರಣ ಘಟಕಕ್ಕೆ ಹಣ ಬಿಡುಗಡೆ ಮಾಡಿದ್ದರು. ಸದ್ಯ 17 ವರ್ಷಗಳ ನಂತರ ಸದ್ಯ ಕೋಲಾರ ಜಿಲ್ಲೆಗೆ ಸ್ವತಂತ್ರ್ಯ ನಂತರ ಮಾಡಲಾಗಿರುವ ಮೊದಲ ಕುಡಿಯುವ ನೀರಿನ ಯೋಜನೆ ಇದಾಗಿದ್ದು 240 ಕೋಟಿಯಿಂದ ಆರಂಭವಾದ ಯೋಜನೆ ಕೊನೆಗೆ 315 ಕೋಟಿ ರೂಪಾಯಿಯಲ್ಲಿ ಮುಕ್ತಾಯವಾಗಿ ನಾಳೆ ಲೋಕಾರ್ಪಣೆಗೊಳ್ಳಲಿದೆ.

ಒಟ್ಟಾರೆ ಸ್ವತಂತ್ರ್ಯಾ ನಂತರ ಕೋಲಾರ ಜಿಲ್ಲೆಗೆ ಮಾಡಲಾದ ಮೊದಲ ಕುಡಿಯುವ ನೀರಿನ ಯೋಜನೆ ಇದಾಗಿದ್ದು, ಹತ್ತು ಹಲವು ಅಡೆತಡೆ ಗಳನ್ನು ಪೂರ್ಣಗೊಂಡು ಈಗ ಯೋಜನೆಯಿಂದ ಶುದ್ದ ನೀರು ಜನರಿಗೆ ತಲುಪುತ್ತಿರುವುದು ಜಿಲ್ಲೆಯ ಜನ್ರಲ್ಲಿ ಸಂತಾಸ ತಂದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 11:33 am, Sat, 11 November 23

ಪ್ರೇಕ್ಷಕರ ನಗು-ಅಳು ನೋಡಿ ‘ಮನದ ಕಡಲು’ ನಾಯಕಿಯರು ಹೇಳಿದ್ದೇನು ನೋಡಿ..
ಪ್ರೇಕ್ಷಕರ ನಗು-ಅಳು ನೋಡಿ ‘ಮನದ ಕಡಲು’ ನಾಯಕಿಯರು ಹೇಳಿದ್ದೇನು ನೋಡಿ..
ಟಿವಿ9 ನೆಟ್​ವರ್ಕ್ ಜಾಗತಿಕ ಪ್ರೇಕ್ಷಕರನ್ನು ಸೃಷ್ಟಿಸುತ್ತಿದೆ; ಪಿಎಂ ಮೋದಿ
ಟಿವಿ9 ನೆಟ್​ವರ್ಕ್ ಜಾಗತಿಕ ಪ್ರೇಕ್ಷಕರನ್ನು ಸೃಷ್ಟಿಸುತ್ತಿದೆ; ಪಿಎಂ ಮೋದಿ
0.14 ಸೆಕೆಂಡ್​ನಲ್ಲಿ ಸಾಲ್ಟ್​ಗೆ ಪೆವಿಲಿಯನ್ ಹಾದಿ ತೋರಿಸಿದ ಧೋನಿ
0.14 ಸೆಕೆಂಡ್​ನಲ್ಲಿ ಸಾಲ್ಟ್​ಗೆ ಪೆವಿಲಿಯನ್ ಹಾದಿ ತೋರಿಸಿದ ಧೋನಿ
ಯುವಕರು, ಮಹಿಳೆಯರು, ಭಾರತೀಯ ವಲಸಿಗರ ಮೇಲೆ ಮೋದಿ ಗಮನ; ಬರುಣ್ ದಾಸ್
ಯುವಕರು, ಮಹಿಳೆಯರು, ಭಾರತೀಯ ವಲಸಿಗರ ಮೇಲೆ ಮೋದಿ ಗಮನ; ಬರುಣ್ ದಾಸ್
ಪ್ರಧಾನಿ ಮೋದಿ, ಅಮಿತ್ ಶಾ ಗಮನಕ್ಕೆ ತಾರದೆ ಯತ್ನಾಳ್ ಉಚ್ಚಾಟನೆ: ಬೆಂಬಲಿಗರು
ಪ್ರಧಾನಿ ಮೋದಿ, ಅಮಿತ್ ಶಾ ಗಮನಕ್ಕೆ ತಾರದೆ ಯತ್ನಾಳ್ ಉಚ್ಚಾಟನೆ: ಬೆಂಬಲಿಗರು
ಮಚ್ಚು ಹಿಡಿದ ಕೇಸ್: ರಜತ್, ವಿನಯ್ ಗೌಡಗೆ ಜಾಮೀನು ಸಿಕ್ಕಿದ್ದು ಹೇಗೆ?
ಮಚ್ಚು ಹಿಡಿದ ಕೇಸ್: ರಜತ್, ವಿನಯ್ ಗೌಡಗೆ ಜಾಮೀನು ಸಿಕ್ಕಿದ್ದು ಹೇಗೆ?
ಯತ್ನಾಳ್​ರನ್ನು ಉಚ್ಚಾಟಿಸಿ ವರಿಷ್ಠರು ಉತ್ತಮ ಕೆಲಸ ಮಾಡಿದ್ದಾರೆ: ಗೋಪಾಲ
ಯತ್ನಾಳ್​ರನ್ನು ಉಚ್ಚಾಟಿಸಿ ವರಿಷ್ಠರು ಉತ್ತಮ ಕೆಲಸ ಮಾಡಿದ್ದಾರೆ: ಗೋಪಾಲ
ಪ್ರಧಾನಿಗೆ ವೇದಿಕೆಯಲ್ಲಿ ಗೌರವಿಸಿದ ಡಾ. ರಾಮೇಶ್ವರ್ ರಾವ್
ಪ್ರಧಾನಿಗೆ ವೇದಿಕೆಯಲ್ಲಿ ಗೌರವಿಸಿದ ಡಾ. ರಾಮೇಶ್ವರ್ ರಾವ್
ಯತ್ನಾಳ್ ಯಾವತ್ತೂ ಪಕ್ಷವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿಲ್ಲ: ಕುಮಾರ
ಯತ್ನಾಳ್ ಯಾವತ್ತೂ ಪಕ್ಷವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿಲ್ಲ: ಕುಮಾರ
ಚೆನ್ನೈನಲ್ಲೂ ಕೊಹ್ಲಿ ಫ್ಯಾನ್ಸ್​ದೇ ಹವಾ; ವಿಡಿಯೋ ನೋಡಿ
ಚೆನ್ನೈನಲ್ಲೂ ಕೊಹ್ಲಿ ಫ್ಯಾನ್ಸ್​ದೇ ಹವಾ; ವಿಡಿಯೋ ನೋಡಿ