ಅಪರಿಚಿತ ವಾಹನ ಡಿಕ್ಕಿ, ಬೆಂಗಳೂರಿಗೆ ಹೊರಟಿದ್ದ ಮೂವರು ದಾರುಣ ಸಾವು
ಕೋಲಾರ: ಶ್ರೀನಿವಾಸಪುರ ತಾಲೂಕಿನ ಹೊಗಳಗೆರೆ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಅಪರಿಚಿತ ವಾಹನ ಡಿಕ್ಕಿಯೊಡೆದು ಬೈಕ್‌ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಶ್ರೀನಿವಾಸಪುರದ ಗಾಂಧಿನಗರ ನಿವಾಸಿಗಳಾದ ಯಶವಂತ್ (20), ದೊಡ್ಡ ವೆಂಕಟೇಶಪ್ಪ (50) ಹಾಗೂ ಯಲ್ಲಪ್ಪ (18) ಮೃತ ದುರ್ದೈವಿಗಳು. ಶ್ರೀನಿವಾಸಪುರದಿಂದ ಬೆಂಗಳೂರಿಗೆ ತೆರಳಲು ರೈಲ್ವೆ ನಿಲ್ದಾಣಕ್ಕೆ ಬೈಕ್ನಲ್ಲಿ ಹೋಗುತ್ತಿದ್ದರು. ಈ ವೇಳೆ ಅಪರಿಚಿತ ವಾಹನ ಡಿಕ್ಕಿಯೊಡೆದು ಬೈಕ್‌ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಘಟನಾ ಸ್ಥಳಕ್ಕೆ ಶ್ರೀನಿವಾಸಪುರ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಕೋಲಾರ: ಶ್ರೀನಿವಾಸಪುರ ತಾಲೂಕಿನ ಹೊಗಳಗೆರೆ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಅಪರಿಚಿತ ವಾಹನ ಡಿಕ್ಕಿಯೊಡೆದು ಬೈಕ್‌ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಶ್ರೀನಿವಾಸಪುರದ ಗಾಂಧಿನಗರ ನಿವಾಸಿಗಳಾದ ಯಶವಂತ್ (20), ದೊಡ್ಡ ವೆಂಕಟೇಶಪ್ಪ (50) ಹಾಗೂ ಯಲ್ಲಪ್ಪ (18) ಮೃತ ದುರ್ದೈವಿಗಳು.
ಶ್ರೀನಿವಾಸಪುರದಿಂದ ಬೆಂಗಳೂರಿಗೆ ತೆರಳಲು ರೈಲ್ವೆ ನಿಲ್ದಾಣಕ್ಕೆ ಬೈಕ್ನಲ್ಲಿ ಹೋಗುತ್ತಿದ್ದರು. ಈ ವೇಳೆ ಅಪರಿಚಿತ ವಾಹನ ಡಿಕ್ಕಿಯೊಡೆದು ಬೈಕ್‌ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಘಟನಾ ಸ್ಥಳಕ್ಕೆ ಶ್ರೀನಿವಾಸಪುರ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.