ಕೋಲಾರ: ಮರಕ್ಕೆ ಆಡಿ ಕಾರು ಡಿಕ್ಕಿಯಾಗಿ ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವು, ಓರ್ವ ಬಚಾವ್

ಕೋಲಾರ ‌ಹೊರವಲಯದ ಸಹಕಾರ ನಗರದ ಬಳಿ ಭೀಕರ ಅಪಘಾತ ಸಂಭವಿಸಿದೆ. ಆಡಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ನಾಲ್ವರು ರೇವಾ ಯೂನಿವರ್ಸಿಟಿ ವಿದ್ಯಾರ್ಥಿಗಳ ಪೈಕಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮತ್ತೋರ್ವ ಪವಾಡ ರೀತಿಯಲ್ಲಿ ಬಚಾವ್ ಆಗಿದ್ದಾರೆ. ಸ್ಥಳಕ್ಕೆ ಕೋಲಾರ ಗ್ರಾಮಾಂತರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕೋಲಾರ: ಮರಕ್ಕೆ ಆಡಿ ಕಾರು ಡಿಕ್ಕಿಯಾಗಿ ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವು, ಓರ್ವ ಬಚಾವ್
ಮರಕ್ಕೆ ಆಡಿ ಕಾರು ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವು, ಓರ್ವ ಬಚಾವ್
Follow us
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Updated By: ಆಯೇಷಾ ಬಾನು

Updated on:Aug 03, 2024 | 9:16 AM

ಕೋಲಾರ, ಆಗಸ್ಟ್.03: ಆಡಿ ಕಾರು ಮರಕ್ಕೆ ಡಿಕ್ಕಿಯಾಗಿ ಭೀಕರ ಅಪಘಾತ (Accident) ಸಂಭವಿಸಿದ್ದು ಕಾರ್​ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟ (Death) ಘಟನೆ ಕೋಲಾರ ‌ಹೊರವಲಯದ ಸಹಕಾರ ನಗರದ ಬಳಿ ನಡೆದಿದೆ. ಹಾಸನ ಮೂಲದ ಹರ್ಷವರ್ಧನ್, ಬಳ್ಳಾರಿ ಮೂಲದ‌ ಬಸವರಾಜ್, ಕೋಲಾರ ಜಿಲ್ಲೆ ಬಂಗಾರಪೇಟೆಯ ನಿಶ್ಚಲ್ ಮೃತ ದುರ್ದೈವಿಗಳು. ಇನ್ನು ಘಟನೆಯಲ್ಲಿ ಮತ್ತೋರ್ವ ಆಶ್ಚರ್ಯ ರೀತಿಯಲ್ಲಿ ಬಜಾವ್ ಆಗಿದ್ದಾರೆ. ಅದೃಷ್ಟವಶಾತ್​ ಬಂಗಾರಪೇಟೆಯ ಸಾಯಿ ಗಗನ್ ದುರಂತದಲ್ಲಿ ಬಚಾವ್ ಆಗಿದ್ದಾರೆ.

ಮೃತಪಟ್ಟ ಮೂವರು ರೇವಾ ಯೂನಿವರ್ಸಿಟಿ ವಿದ್ಯಾರ್ಥಿಗಳು ಎಂದು ತಿಳಿದುಬಂದಿದೆ. ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಸಾಯಿಗಗನ್ ಸೋದರಿ ಮದುವೆ ಆಮಂತ್ರಣ ಹಂಚಲು ಸ್ನೇಹಿತರೆಲ್ಲ ಕಾರಿನಲ್ಲಿ ಹೊರಟಿದ್ದಾಗ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ಕೋಲಾರ ಗ್ರಾಮಾಂತರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಡಿವೈಡರ್​ಗೆ ಕಾರು ಡಿಕ್ಕಿ, ಓರ್ವ ಸಾವು

ಇನ್ನು ಮತ್ತೊಂದೆಡೆ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ನಾಗಸಮುದ್ರ ಬಳಿಯ ರಾಷ್ಟ್ರೀಯ ಹೆದ್ದಾರಿ 150ಎ ರಲ್ಲಿ ಡಿವೈಡರ್​ಗೆ ಕಾರು ಡಿಕ್ಕಿಯಾಗಿ ಮಹಿಳೆ ಮೃತಪಟ್ಟ ಘಟನೆ ನಡೆದಿದೆ. ಘಟನೆಯಲ್ಲಿ ಓರ್ವನ ಸ್ಥಿತಿ ಗಂಭೀರವಾಗಿದ್ದು ಗಾಯಾಳುಗೆ ಬಳ್ಳಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ರಾಂಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಡಿವೈಡರ್​ಗೆ ಡಿಕ್ಕಿ ಆದ ಬಳಿಕ ಕಾರು ಪಕ್ಕದ ರಸ್ತೆಗೆ ಬಿದ್ದಿದ್ದು ಎದುರಿನ ರಸ್ತೆಯಲ್ಲಿ ಚಲಿಸುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಈವರೆಗೆ ಮೃತರ ಗುರುತು ತಿಳಿದು ಬಂದಿಲ್ಲ. ರಾಂಪುರ ಠಾಣೆ ಪಿಎಸ್​ಐ ಮಹೇಶ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: ಕಲಬುರಗಿಯಲ್ಲಿ ಪತ್ನಿಯಿಂದಲೇ ಪತಿಯ ಭೀಕರ ಹತ್ಯೆ; ಕಾರಣವೇನು ಗೊತ್ತಾ?

ಪತ್ನಿ ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪತಿಯೂ ಸಾವು

ಅನೈತಿಕ ಸಂಬಂಧ ಶಂಕೆಯಿಂದ ಸರ್ಕಾರಿ ಶಾಲೆ ಶಿಕ್ಷಕಿ ಕೊಂದು ಆತ್ಮಹತ್ಯೆಗೆ ಯತ್ನಿಸಿದ್ದ ಪತಿ ಮೃತಪಟ್ಟಿದ್ದಾರೆ. ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಗೌರಿಪುರ ಗ್ರಾಮದಲ್ಲಿ ಘಟನೆ ನಡೆದಿದ್ದು, ಜುಲೈ 31ರಂದು 58 ವರ್ಷದ ನಾಗಮ್ಮನನ್ನು ಪತಿ ಸತ್ಯಪ್ಪ ಕತ್ತು ಕೊಯ್ದು ಕೊಂದಿದ್ದ. ನಂತರ ತಾನು ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ. ಆದ್ರೆ, ರಕ್ಷಿಸಿ ಆಸ್ಪತ್ರೆಗೆ ದಾಖಲಾಗಿಸಿತ್ತು. ಆದ್ರೆ, ನಿನ್ನೆ ಚಿಕಿತ್ಸೆ ಫಲಿಸದೆ ಸತ್ಯಪ್ಪ ಮೃತಪಟ್ಟಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 7:39 am, Sat, 3 August 24

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ