ಪಾರ್ಟಿ ಮಾಡಿ ತೆಪ್ಪದಲ್ಲಿ ರೌಂಡ್ಸ್ ಹಾಕುವಾಗ, ಕೆರೆಯಲ್ಲಿ ತೆಪ್ಪ ಮುಗುಚಿ ಮೂವರು ಯುವಕರು ಜಲಸಮಾಧಿ

ಇಂದು ಮುಂಜಾನೆ ಟೇಕಲ್ ನಲ್ಲಿ ರೈಲು ತಡವಾದ ಹಿನ್ನೆಲೆ ಊರಿಗೆ ವಾಪಸ್ ಆಗಿದ್ದ ಸ್ನೇಹಿತರು, ಕೆರೆ ಬಳಿ ಪಾರ್ಟಿ ಮಾಡಿ ತೆಪ್ಪದಲ್ಲಿ ರೌಂಡ್ಸ್ ಮಾಡಲು ಹೋಗಿದ್ದರು. ತೆಪ್ಪ ಮುಗುಚಿದ ವೇಳೆ ನೀರಿನಲ್ಲಿ ಮುಳುಗುತ್ತಿದ್ದವರ ರಕ್ಷಣೆಗೆ ಸ್ಥಳೀಯರು ಮುಂದಾಗಿದ್ದಾರೆ. ಕೆರೆ ಮಧ್ಯದಲ್ಲಿ ಸಿಲುಕಿದ್ದ ಕಾರಣವಾಗಿ ರಕ್ಷಣೆ ಮಾಡಲು ಸಾಧ್ಯವಾಗಿಲ್ಲ.

ಪಾರ್ಟಿ ಮಾಡಿ ತೆಪ್ಪದಲ್ಲಿ ರೌಂಡ್ಸ್  ಹಾಕುವಾಗ, ಕೆರೆಯಲ್ಲಿ ತೆಪ್ಪ ಮುಗುಚಿ ಮೂವರು ಯುವಕರು ಜಲಸಮಾಧಿ
ಪಾರ್ಟಿ ಮಾಡಿ ತೆಪ್ಪದಲ್ಲಿ ರೌಂಡ್ಸ್ ಹಾಕುವಾಗ, ಕೆರೆಯಲ್ಲಿ ತೆಪ್ಪ ಮುಗುಚಿ ಮೂವರು ಯುವಕರು ಜಲಸಮಾಧಿ
Follow us
TV9 Web
| Updated By: ಸಾಧು ಶ್ರೀನಾಥ್​

Updated on:Mar 09, 2022 | 5:06 PM

ಕೋಲಾರ: ಕೆರೆಯಲ್ಲಿ ತೆಪ್ಪ ಮುಗುಚಿ ಬಿದ್ದು ಮೂವರು ಯುವಕರು ಜಲಸಮಾಧಿಯಾಗಿರುವ ಘಟನೆ ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲ್ಲೂಕಿನ ನೇರಳೆಕೆರೆ ಬಳಿ ನಡೆದಿದೆ. ಚಿಕ್ಕವಲಗಮಾದಿ ನವೀನ್ (32), ನೇರಳೆಕೆರೆ ರಾಜೇಂದ್ರ (32) ಮತ್ತು ಮೋಹನ್ (28) ಮೃತಪಟ್ಟವರು. ಇವರ ಜೊತೆಗಿದ್ದ ಶಿವರಾಜ್ ಎಂಬಾತ ಊಟ ತರಲು ತೆರಳಿದ್ದರಿಂದ ಬದುಕುಳಿದಿದ್ದಾನೆ. ಇಂದು ಮುಂಜಾನೆ ಟೇಕಲ್ ನಲ್ಲಿ ರೈಲು ತಡವಾದ ಹಿನ್ನೆಲೆ ಊರಿಗೆ ವಾಪಸ್ ಆಗಿದ್ದ ಸ್ನೇಹಿತರು, ಕೆರೆ ಬಳಿ ಪಾರ್ಟಿ ಮಾಡಿ ತೆಪ್ಪದಲ್ಲಿ ರೌಂಡ್ಸ್ ಮಾಡಲು ಹೋಗಿದ್ದರು. ತೆಪ್ಪ ಮುಗುಚಿದ ವೇಳೆ ನೀರಿನಲ್ಲಿ ಮುಳುಗುತ್ತಿದ್ದವರ ರಕ್ಷಣೆಗೆ ಸ್ಥಳೀಯರು ಮುಂದಾಗಿದ್ದಾರೆ. ಕೆರೆ ಮಧ್ಯದಲ್ಲಿ ಸಿಲುಕಿದ್ದ ಕಾರಣವಾಗಿ ರಕ್ಷಣೆ ಮಾಡಲು ಸಾಧ್ಯವಾಗಿಲ್ಲ. ಮೂವರ ಶವಗಳಿಗಾಗಿ ಅಗ್ನಿಶಾಮಕ ದಳದ ಸಿಬ್ಬಂದಿ ಹುಡುಕಾಟ ನಡೆಸಿದ್ದಾರೆ. ಸ್ಥಳಕ್ಕೆ ಕೆಜಿಎಫ್ ಎಸ್​ಪಿ ಡಿ.ಕೆ. ಧರಣಿ ದೇವಿ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಬಂಗಾರಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಕೋಲಾರದಲ್ಲಿ ಸೈಲೆನ್ಸರ್​ ಮೇಲೆ ಬುಲ್ಡೋಜರ್ ಓಡಿಸಿದ ಪೊಲೀಸರು! ಕೋಲಾರ: ಕರ್ಕಶ ಶಬ್ದ ಮಾಡುತ್ತಿದ್ದ ದ್ವಿಚಕ್ರ ವಾಹನಗಳ ಸೈಲೆನ್ಸರ್‌ಗಳನ್ನು ಪೊಲೀಸರು ನಾಶಪಡಿಸಿದ್ದಾರೆ. ನಗರದ ಸರ್ಕಾರಿ ಬಾಲಕರ ಕಾಲೇಜು ವೃತ್ತದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ.ದೇವರಾಜ್ ನೇತೃತ್ವದಲ್ಲಿ ಸೈಲೆನ್ಸರ್‌ಗಳನ್ನು ನಾಶಪಡಿಸಲಾಯಿತು. ಕಳೆದ ಒಂದೂವರೆ ತಿಂಗಳಿನಿಂದ 85 ಬೈಕ್​ಗಳನ್ನು ವಶಕ್ಕೆ ಪಡೆದು, ₹ 1.85 ಲಕ್ಷ ದಂಡ ವಿಧಿಸಿದ್ದರು. ಭಾರಿ ಸದ್ದಿನೊಂದಿಗೆ ವ್ಹೀಲಿಂಗ್ ಮಾಡುತ್ತಿದ್ದವರನ್ನು ತಡೆದು ಬೈಕ್​ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದರು. ನಂತರ ಸೈಲೆನ್ಸರ್​ಗಳನ್ನು ಸಾಲಾಗಿ ಇರಿಸಿ, ಅದರ ಮೇಲೆ ರೋಡ್​ ರೋಲರ್ ಓಡಿಸಲಾಯಿತು. ಕೆಟ್ಟ ಸದ್ದಿನೊಂದಿಗೆ ಬೈಕ್ ಓಡಿಸುತ್ತಾ ಸಾರ್ವಜನಿಕರಿಗೆ ಕಿರಿಕಿರಿ ಮಾಡಿದರೆ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಪೊಲೀಸರು ಎಚ್ಚರಿಸಿದ್ದಾರೆ.

ಪತಿಯಿಂದಲೇ ಪತ್ನಿಯ ಹತ್ಯೆ ಬೆಂಗಳೂರು: ಪತಿಯೇ ಪತ್ನಿಯನ್ನು ಹತ್ಯೆ ಮಾಡಿರುವ ಘಟನೆ ಎಚ್‌ಎಎಲ್‌ನ ಕಾಳಪ್ಪ ಲೇಔಟ್‌ನಲ್ಲಿ ನಡೆದಿದೆ. ಮೃತರನ್ನು ನಾಗಮ್ಮ (37) ಎಂದು ಗುರುತಿಸಲಾಗಿದೆ. ಈಕೆಯ ಪತಿ ನೀಲಕಂಠನೇ ಪತ್ನಿಯ ಶೀಲ ಶಂಕಿಸಿ ಕುತ್ತಿಗೆ ಬಿಗಿದು ಹತ್ಯೆ ಮಾಡಿದ್ದ ಎಂದು ಹೇಳಲಾಗಿದೆ. ರಾಯಚೂರು ಮೂಲದ ಈ ದಂಪತಿಯ ಮದುವೆ 17 ವರ್ಷಗಳ ಹಿಂದೆ ಆಗಿತ್ತು. ನೀಲಕಂಠ ಬೆಂಗಳೂರಲ್ಲಿ ಬಂದು ಕ್ಯಾಬ್ ಚಾಲಕನಾಗಿ ಕೆಲಸ ಮಾಡುತ್ತಿದ್ದರು. ನಾಗಮ್ಮ ಮನೆಕೆಲಸ ಮಾಡಿಕೊಂಡಿದ್ದತು. ದಂಪತಿಗೆ ಎಂಟು ಮತ್ತು ಆರು ವರ್ಷದ ಇಬ್ಬರು ಹೆಣ್ಣು ಮಕ್ಕಳಿದ್ದಾರೆ. ಪತ್ನಿಯ ಶೀಲ‌ ಶಂಕಿಸಿ ಆರೋಪಿಯು ಆಗಾಗ ಜಗಳ ಮಾಡುತ್ತಿದ್ದ. ಮೊನ್ನೆ ಬೆಳಿಗ್ಗೆ ಕೂಡ ಇಬ್ಬರ ಮಧ್ಯೆ ಗಲಾಟೆಯಾಗಿತ್ತು, ಈ ವೇಳೆ ಡಿವೋರ್ಸ್ ಕೊಟ್ಟು ಹೋಗು ಎಂದು ಪತ್ನಿ ತಾಕೀತು ಮಾಡಿದ್ದರು. ಕೋಪಗೊಂಡ ನೀಲಕಂಠ ಬೆಲ್ಟ್​ನಿಂದ ಕುತ್ತಿಗೆ ಬಿಗಿದು ಕೊಲೆ ಮಾಡಿದ ಎಂದು ಪೊಲೀಸರು ಹೇಳಿದ್ದಾರೆ. ಪ್ರಸ್ತುತ ಆರೋಪಿ ನೀಲಕಂಠನನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.

ಜಾನುವಾರು ಕಳ್ಳತನ ಬೆಂಗಳೂರು: ನಗರದ ರಾಮಮೂರ್ತಿ ನಗರ ಬಡಾವಣೆಯ ಶೆಡ್‌ನಲ್ಲಿ ಕಟ್ಟಿಹಾಕಿದ್ದ ಮೂರು ಹಸುಗಳನ್ನು ಕಳವು ಮಾಡಲಾಗಿದೆ. ಜಾನುವಾರು ಕಳ್ಳತನದ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಆರೋಪಿಗಳ ಬಂಧನಕ್ಕೆ ರಾಮಮೂರ್ತಿನಗರ ಠಾಣೆ ಪೊಲೀಸರು ಕ್ರಮ ತೆಗೆದುಕೊಂಡಿದ್ದಾರೆ. ಮುನಿರಾಜು ಎನ್ನುವವರು ತಮ್ಮ ಮನೆ ಬಳಿಯ ಶೆಡ್​ನಲ್ಲಿ ಹಸುವನ್ನು ಕಟ್ಟಿದ್ದರು. ಟೆಂಪೊದಲ್ಲಿ ಬಂದಿದ್ದ ಕಳ್ಳರು ರಸ್ತೆಯವರೆಗೆ ಹಸುಗಳನ್ನು ನಡೆಸಿಕೊಂಡು ಬಂದು ಕದ್ದೊಯ್ದಿದ್ದಾರೆ. ಎಂಟು ಎಮ್ಮೆ ಹಾಗೂ ನಾಲ್ಕು ಹಸುಗಳನ್ನು ಸಾಕಿ ಈ ಕುಟುಂಬ ಜೀವನ ಸಾಗಿಸುತ್ತಿತ್ತು.

ಇದನ್ನೂ ಓದಿ: ಉಪ್ಪಾರಪೇಟೆ ಸುಖ್​ ಸಾಗರ್ ಹೋಟೆಲ್‌ನಲ್ಲಿ ಅಗ್ನಿ ಅವಘಡ

Published On - 4:54 pm, Wed, 9 March 22

ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು