Kolar News: ಮೇಲಾಧಿಕಾರಿಗಳಿಂದ ಕಿರುಕುಳ ಆರೋಪ; ಕೆಎಸ್​ಆರ್​ಟಿಸಿ ಬಸ್ ಕಂಡಕ್ಟರ್ ಆತ್ಮಹತ್ಯೆಗೆ ಶರಣು

ಮಂಡ್ಯದಲ್ಲಿ ಕಂಡಕ್ಟರ್​ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಾಸುವ ಮುನ್ನವೇ ಇದೀಗ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಉಪ್ಪುಕುಂಟೆ ಗ್ರಾಮದಲ್ಲಿ ಕೆಎಸ್​ಆರ್​ಟಿಸಿ ಬಸ್ ಕಂಡಕ್ಟರ್ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

Kolar News: ಮೇಲಾಧಿಕಾರಿಗಳಿಂದ ಕಿರುಕುಳ ಆರೋಪ; ಕೆಎಸ್​ಆರ್​ಟಿಸಿ ಬಸ್ ಕಂಡಕ್ಟರ್ ಆತ್ಮಹತ್ಯೆಗೆ ಶರಣು
ಬಸ್​ ಕಂಡಕ್ಟರ್​ ಆತ್ಮಹತ್ಯೆ
Follow us
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Updated By: ಕಿರಣ್ ಹನುಮಂತ್​ ಮಾದಾರ್

Updated on:Jul 21, 2023 | 12:45 PM

ಕೋಲಾರ: ಮಂಡ್ಯದಲ್ಲಿ ಕಂಡಕ್ಟರ್​ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಾಸುವ ಮುನ್ನವೇ ಇದೀಗ ಕೋಲಾರ(Kolar) ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಉಪ್ಪುಕುಂಟೆ ಗ್ರಾಮದಲ್ಲಿ ಕೆಎಸ್​ಆರ್​ಟಿಸಿ(KSRTC) ಬಸ್ ಕಂಡಕ್ಟರ್ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಉಪ್ಪುಕುಂಟೆ ಗ್ರಾಮದ ಸೋಮಾಚಾರಿ (50) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ‌. ಮೃತ ಕಂಡಕ್ಟರ್​ ಇತ್ತೀಚೆಗೆ ಪೆರಾಲಿಸಿಸ್ ಕಾಯಿಲೆಗೆ ತುತ್ತಾಗಿದ್ದರು. ಈ ಮಧ್ಯೆ ಕೆಲಸದ ವೇಳೆ ಶ್ರೀನಿವಾಸಪುರ ಡಿಪೋ ಮ್ಯಾನೇಜರ್ ವೆಂಕಟೇಶ್ ಎಂಬುವವರು ಉದ್ದೇಶಪೂರ್ವಕವಾಗಿ ಕಿರುಕುಳ ನೀಡುತ್ತಿದ್ದರು ಎಂದು ಆರೋಪ ಕೇಳಿಬಂದಿದ್ದು, ಇದರಿಂದ ಮಾನಸಿಕವಾಗಿ ನೊಂದಿದ್ದ ಸೋಮಾಚಾರಿ ಅವರು, ಇಂದು(ಜು.21) ಬೆಳಗಿನ ಜಾವ ಅವರ ತೋಟದಲ್ಲಿಯೇ ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಕುರಿತು ಶ್ರೀನಿವಾಸಪುರ ಪೊಲೀಸ್ ಠಾಣಾ‌ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚೆಗಷ್ಟೇ ಮಂಡ್ಯದಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದ ಕಂಡಕ್ಟರ್​

ಹೌದು ಇದೇ ತಿಂಗಳ ಜು.5ರಂದು ಮಂಡ್ಯ ಜಿಲ್ಲೆಯ ನಾಗಮಂಗಲ ಡಿಪೋ ಎದುರು ಕೆಎಎಸ್​ಆರ್​​ಟಿಸಿ ಬಸ್ ಚಾಲಕ ಜಗದೀಶ್​ ಎಂಬುವವರು, ಸಚಿವ ಎನ್. ಚಲುವರಾಯಸ್ವಾಮಿಯವರು ರಾಜಕೀಯ ದ್ವೇಷದಿಂದ ನನ್ನನ್ನು ವರ್ಗಾವಣೆ ಮಾಡಿದ್ದಾರೆ ಎಂದು ಆರೋಪಿಸಿ, ವರ್ಗಾವಣೆಯಿಂದ ಬೇಸತ್ತು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿತ್ತು. ಕೂಡಲೇ ಅಸ್ವಸ್ಥಗೊಂಡ ಜಗದೀಶ್ ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿ, ಚಿಕಿತ್ಸೆ ಪಡೆದು ಪ್ರಾಣಾಪಾಯದಿಂದ ಪಾರಾಗಿದ್ದರು.

ಇದನ್ನೂ ಓದಿ:ಉಚಿತ ಬಸ್ ಪಾಸ್ ಘೋಷಣೆ ಆಗಿದ್ದೆ ಕಂಡಕ್ಟರ್​​, ಡ್ರೈವರ್ಸ್​​​ ಫುಲ್​ ಖುಷ್​: ವಜಾಗೊಂಡ ಸಾರಿಗೆ ನೌಕರರಿಗೆ ಸಿಹಿ ಸುದ್ದಿ ನೀಡ್ತಾರಾ ರಾಮಲಿಂಗಾ ರೆಡ್ಡಿ?

ಚುನಾವಣೆ ಸಂದರ್ಭದಲ್ಲಿ ಜೆಡಿಎಸ್ ಪರ ಕೆಲಸ ಮಾಡಿದ್ದಕ್ಕಾಗಿ ನನ್ನನ್ನು, ರಾಜಕೀಯ ದ್ವೇಷದಿಂದ ವರ್ಗಾವಣೆ ಮಾಡಿದ್ದಾರೆ ಎಂದು ಸಚಿವ ಎನ್. ಚಲುವರಾಯಸ್ವಾಮಿ ವಿರುದ್ಧ ಜಗದೀಶ್ ಆಕ್ರೋಶ ವ್ಯಕ್ತಪಡಿಸಿದ್ದರು. ಹೌದು ಚಾಲಕ ಜಗದೀಶ್ ಡಿಪೋ ಬಳಿ ಸಚಿವರಿಗೆ ಬಾಯಿಗೆ ಬಂದಂತೆ ಬೈದು, ಬಳಿಕ ವಿಷ ಸೇವಿಸಿದ್ದರು. ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿ, ನಂತರ ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಆದಿಚುಂಚನಗಿರಿ ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿತ್ತು. ಈ ಕಹಿ ಘಟನೆ ಮಾಸುವ ಮುನ್ನವೇ ಇದೀಗ ಮತ್ತೊಬ್ಬ ಕೆಎಸ್​ಆರ್​ಟಿಸಿ ಕಂಡಕ್ಟರ್​ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:45 pm, Fri, 21 July 23

ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು