AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಲಾರದ ರೈತರಿಗೂ ತಟ್ಟಿತು ಬಾಂಗ್ಲಾದೇಶ ರಾಜಕೀಯ ಪ್ರಕ್ಷುಬದ್ಧತೆಯ ಬಿಸಿ! ಟೊಮೆಟೊ ದರ ಭಾರಿ ಕುಸಿತ

ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೀಕರ ಭೂಕುಸಿತ, ನೆರೆಯ ಬಾಂಗ್ಲಾದೇಶದಲ್ಲಿನ ರಾಜಕೀಯ ಅಸ್ಥಿರತೆಗಳ ಬಿಸಿ ಕರ್ನಾಟಕದ ಕೋಲಾರದ ರೈತರಿಗೂ ತಟ್ಟಿದೆ! ಹೌದು, ಈ ಬೆಳವಣಿಗೆಗಳ ಪರಿಣಾಮ ದೇಶದ ಅತಿದೊಡ್ಡ ಟೊಮೊಟೊ ಮಾರುಕಟ್ಟೆಗಳಲ್ಲಿ ಒಂದಾಗಿರುವ ಕೋಲಾರದ ಮೇಲಾಗಿದೆ. ಟೊಮೆಟೊ ದರ ಗಣನೀಯವಾಗಿ ಕುಸಿದಿದೆ. ವಿವರಗಳಿಗೆ ಮುಂದೆ ಓದಿ.

ಕೋಲಾರದ ರೈತರಿಗೂ ತಟ್ಟಿತು ಬಾಂಗ್ಲಾದೇಶ ರಾಜಕೀಯ ಪ್ರಕ್ಷುಬದ್ಧತೆಯ ಬಿಸಿ! ಟೊಮೆಟೊ ದರ ಭಾರಿ ಕುಸಿತ
ಬಾಂಗ್ಲಾದೇಶಕ್ಕೆ ಟೊಮೆಟೊ ರಫ್ತು ಸ್ಥಗಿತ: ಕೋಲಾರದ ರೈತರಿಗೆ ಬೆಲೆ ಕುಸಿತದ ಹೊಡೆತImage Credit source: Getty Images
Ganapathi Sharma
|

Updated on: Aug 16, 2024 | 7:38 AM

Share

ಬೆಂಗಳೂರು, ಆಗಸ್ಟ್ 16: ನೆರೆಯ ಬಾಂಗ್ಲಾದೇಶದ ರಾಜಕೀಯ ಪ್ರಕ್ಷುಬದ್ಧತೆ ಕೋಲಾರದ ಟೊಮೆಟೊ ಬೆಳೆಗಾರರ ಮೇಲೆ ಪರಿಣಾಮ ಬೀರಿದೆ. ಪಶ್ಚಿಮ ಬಂಗಾಳದ ವ್ಯಾಪಾರಿಗಳು ಬಾಂಗ್ಲಾದೇಶಕ್ಕೆ ಟೊಮೆಟೊ ರಫ್ತು ಮಾಡಲು ಸಾಧ್ಯವಾಗದ ಕಾರಣ ಬೆಲೆ ಕುಸಿದಿದೆ. ಕೋಲಾರದ ರೈತರು ಟೊಮೆಟೊ ಬೆಲೆ ಕುಸಿತದ ಹೊಡೆತ ಎದುರಿಸುವಂತಾಗಿದೆ.

ಬಾಂಗ್ಲಾದೇಶದಲ್ಲಿ ಅಶಾಂತಿ ಆರಂಭವಾಗುವ ಮುನ್ನ ಮೊದಲ ದರ್ಜೆಯ ಟೊಮೆಟೊ ಬಾಕ್ಸ್ (ಅಂದಾಜು 15 ಕೆಜಿ) ಸುಮಾರು 1,100 ರಿಂದ 1,200 ರೂ.ಗೆ ಮಾರಾಟವಾಗುತ್ತಿತ್ತು. ಈಗ 350 ರಿಂದ 480 ರೂ.ಗೆ ಮಾರಾಟವಾಗುತ್ತಿದೆ. ಕೋಲಾರ ಎಪಿಎಂಸಿಯಲ್ಲಿ ಹದಿನೈದು ದಿನಗಳ ಹಿಂದೆ ಕೆಜಿಗೆ 40 ರೂಪಾಯಿ ಇದ್ದ ಟೊಮೆಟೊ ಬೆಲೆ ಈಗ 12 ರೂಪಾಯಿಗೆ ಕುಸಿದಿದೆ. ಕೋಲಾರ ಎಪಿಎಂಸಿಯಲ್ಲಿ ಸಗಟು ದರ ಬಾಕ್ಸ್​​ಗೆ 100 ರಿಂದ 400 ರೂ. ಇದೆ ಎಂದು ‘ಡೆಕ್ಕನ್ ಹೆರಾಲ್ಡ್’ ವರದಿ ತಿಳಿಸಿದೆ. ಪಶ್ಚಿಮ ಬಂಗಾಳದ ವ್ಯಾಪಾರಿಗಳು ಟೊಮೆಟೊ ಖರೀದಿಯನ್ನು ಸುಮಾರು ಶೇ 50 ರಷ್ಟು ಕಡಿತಗೊಳಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿರುವುದಾಗಿ ವರದಿ ಉಲ್ಲೇಖಿಸಿದೆ.

ಪಶ್ಚಿಮ ಬಂಗಾಳಕ್ಕೆ ಟೊಮೆಟೊ ಸಾಗಣೆಯಲ್ಲಿ ಭಾರಿ ಕುಸಿತ

ಆಗಸ್ಟ್ ಮೊದಲ ವಾರದ ಮೊದಲು ಕೋಲಾರದಿಂದ ಪಶ್ಚಿಮ ಬಂಗಾಳಕ್ಕೆ ಪ್ರತಿದಿನ ಸುಮಾರು 40 ರಿಂದ 50 ಟ್ರಕ್‌ಗಳಷ್ಟು ಟೊಮೆಟೊ ಸಾಗಣೆಯಾಗುತ್ತಿತ್ತು. ಈಗ, ಅದು 20 ಟ್ರಕ್‌ಗಳಿಗೆ ಇಳಿಕೆಯಾಗಿದೆ ಎಂದು ಕೋಲಾರ ಎಪಿಎಂಸಿ ಕಾರ್ಯದರ್ಶಿ ಕಿರಣ ನಾರಾಯಣಸ್ವಾಮಿ ತಿಳಿಸಿದ್ದಾರೆ.

ಪಶ್ಚಿಮ ಬಂಗಾಳದ ವ್ಯಾಪಾರಿಗಳು ಸ್ಥಳೀಯ ಬಳಕೆಗಾಗಿ ಮತ್ತು ಬಾಂಗ್ಲಾದೇಶಕ್ಕೆ ರಫ್ತು ಮಾಡಲು ಕೋಲಾರದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯಿಂದ (ಎಪಿಎಂಸಿ) ಮೊದಲ ದರ್ಜೆಯ ಟೊಮೆಟೊಗಳನ್ನು ಖರೀದಿಸುತ್ತಿದ್ದರು. ಕೋಲಾರ ಎಪಿಎಂಸಿಯು ದೇಶದ ಟೊಮೇಟೊದ ದೊಡ್ಡ ಮಾರುಕಟ್ಟೆಗಳಲ್ಲಿ ಒಂದಾಗಿದೆ.

ಕರ್ನಾಟಕದ ಮಾರುಕಟ್ಟೆಯಲ್ಲಿಯೂ ಬೆಲೆ ಕುಸಿತ

ಕರ್ನಾಟಕದ ಮಾರುಕಟ್ಟೆಯಲ್ಲಿ ಕೂಡ ಟೊಮೆಟೊ ಚಿಲ್ಲರೆ ಬೆಲೆಯಲ್ಲಿ ಇಳಿಕೆಯಾಗಿದೆ. ಸದ್ಯ ರಾಜ್ಯಾದ್ಯಂತ ಟೊಮೆಟೊ ಕೆಜಿಗೆ 16 ರಿಂದ 20 ರೂ.ವರೆಗೆ ಮಾರಾಟವಾಗುತ್ತಿದೆ ಎಂದು ವರದಿ ತಿಳಿಸಿದೆ.

ಪಶ್ಚಿಮ ಬಂಗಾಳವನ್ನು ಹೊರತುಪಡಿಸಿ, ಕೋಲಾರದ ಟೊಮೆಟೊಗಳಿಗೆ ತಮಿಳುನಾಡು, ಕೇರಳ ಮತ್ತು ಆಂಧ್ರಪ್ರದೇಶದ ಮಾರುಕಟ್ಟೆಗಳಲ್ಲಿ ಹೆಚ್ಚಿನ ಬೇಡಿಕೆಯಿದೆ. ಜಿಲ್ಲೆಯಲ್ಲಿ ಸುಮಾರು 4,000 ಹೆಕ್ಟೇರ್ ಪ್ರದೇಶದಲ್ಲಿ ಬೆಳೆಯುವ ಟೊಮೆಟೊವನ್ನು ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವಾರು ಮಾರುಕಟ್ಟೆಗಳಿಗೆ ಸರಬರಾಜು ಮಾಡಲಾಗುತ್ತದೆ.

ವಯನಾಡಿನಲ್ಲಿ ಇತ್ತೀಚೆಗೆ ಸಂಭವಿಸಿದ ಭೂಕುಸಿತ ಕೇರಳಕ್ಕೆ ಟೊಮೆಟೊ ಮಾರಾಟದ ಮೇಲೆ ಪರಿಣಾಮ ಬೀರಿದೆ. ಇದು ಕೂಡ ಬೆಲೆ ಕುಸಿತಕ್ಕೆ ಒಂದು ಕಾರಣ ಎನ್ನುತ್ತಾರೆ ಸ್ಥಳೀಯ ವ್ಯಾಪಾರಿಗಳು.

ಇದನ್ನೂ ಓದಿ: ಕೋಲಾರ ನವ ವಧು-ವರ ಹೊಡೆದಾಟ ಕೇಸ್; ಮರಣೋತ್ತರ ಪರೀಕ್ಷೆಯಲ್ಲಿ ಬಯಲಾಯ್ತು ಆಘಾತಕಾರಿ ಅಂಶ

ಉತ್ತಮ ಮುಂಗಾರು ಮಳೆ ನಮಗೆ ಒಳ್ಳೆಯ ಇಳುವರಿ ದೊರೆಯಲಿದೆ ಹಾಗೂ ಹೆಚ್ಚಿನ ಬೆಲೆಗೆ ಮಾರಾಟವಾಗಬಹುದು ಎಂಬ ನಿರೀಕ್ಷೆ ಮೂಡಿಸಿತ್ತು. ಆದರೆ, ವಯನಾಡ್ ಭೂಕುಸಿತದ ಬೆನ್ನಲ್ಲೇ ಬೆಲೆ ಕುಸಿತ ಪ್ರಾರಂಭವಾಯಿತು ಎಂದು ರೈತರೊಬ್ಬರು ಹೇಳಿದ್ದಾರೆ.

ಬೆಲೆ ಇನ್ನಷ್ಟು ಕುಸಿಯುವ ಭೀತಿ

ಮಹಾರಾಷ್ಟ್ರ, ತಮಿಳುನಾಡು ಹಾಗೂ ಇತರೆ ರಾಜ್ಯಗಳ ರೈತರು ಕೂಡ ಈ ವರ್ಷ ಉತ್ತಮ ಪ್ರಮಾಣದಲ್ಲಿ ಟೊಮೆಟೊ ಬೆಳೆಯುತ್ತಿರುವುದರಿಂದ ಕೋಲಾರದ ಟೊಮೇಟೊ ಬೆಲೆ ಮತ್ತಷ್ಟು ಕುಸಿಯಬಹುದು ಎಂದು ಸ್ಥಳೀಯ ರೈತರು ಹಾಗೂ ವ್ಯಾಪಾರಿಗಳು ಆತಂಕ ವ್ಯಕ್ತಪಡಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!