ಹೆಚ್ಚಾದ ಆನೆ ಹಾವಳಿ; ಕೋಲಾರ-ಆಂಧ್ರ ಗಡಿಯಲ್ಲಿ ಕಾಡಾನೆ ದಾಳಿಗೆ ಇಬ್ಬರು ಬಲಿ

ಒಂದೇ ದಿನ ಆನೆ ದಾಳಿಗೆ ಇಬ್ಬರು ಬಲಿಯಾದ ಘಟನೆ ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆ ಕುಪ್ಪಂ ತಾಲೂಕಿನ ಮಲ್ಲನೂರು ಗ್ರಾಮದಲ್ಲಿ ನಡೆದಿದೆ.

ಹೆಚ್ಚಾದ ಆನೆ ಹಾವಳಿ; ಕೋಲಾರ-ಆಂಧ್ರ ಗಡಿಯಲ್ಲಿ ಕಾಡಾನೆ ದಾಳಿಗೆ ಇಬ್ಬರು ಬಲಿ
ಆನೆಗಳು ಹಾಗೂ ಘಟನಾ ಸ್ಥಳದಲ್ಲಿ ನೆರೆದಿರುವ ಜನ
Follow us
ಆಯೇಷಾ ಬಾನು
|

Updated on:May 12, 2023 | 12:49 PM

ಕೋಲಾರ: ನಾಡಿನಲ್ಲಿ ಕಾಡು ಪ್ರಾಣಿಗಳ ಹಾವಳಿ ಹೆಚ್ಚಾಗುತ್ತಿದೆ. ಒಂದೇ ದಿನ ಆನೆ ದಾಳಿಗೆ ಇಬ್ಬರು ಬಲಿಯಾದ ಘಟನೆ ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆ ಕುಪ್ಪಂ ತಾಲೂಕಿನ ಮಲ್ಲನೂರು ಗ್ರಾಮದಲ್ಲಿ ನಡೆದಿದೆ. ಆನೆ ಹಾವಳಿಗೆ ಗ್ರಾಮದಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ಪತಿಚೇನು ಗ್ರಾಮದ ಮಹಿಳೆ ಹಾಗೂ ಮಲ್ಲನೂರು ಪಂಚಾಯಿತಿಯ ಸಪ್ಪನಿಕುಂಟಾ ಗ್ರಾಮದ ಶಿವಲಿಂಗಂ ಎಂಬುವ ವ್ಯಕ್ತಿ ಆನೆ ದಾಳಿಗೆ ಬಲಿಯಾಗಿದ್ದಾರೆ.

ಅರಣ್ಯಾಧಿಕಾರಿಗಳ ನಿರ್ಲಕ್ಷ್ಯದಿಂದ ಘಟನೆ ನಡೆದಿದೆ ಎಂದು ಮಲ್ಲನೂರು ಗ್ರಾಮಸ್ಥರು ಆಕ್ರೋಶ ಹೊರ ಹಾಕಿದ್ದಾರೆ. ಎರಡು ರಾಜ್ಯಗಳ ಗಡಿ ಗ್ರಾಮಗಳಲ್ಲಿ ಆನೆ ಹಾವಳಿಯಿಂದಾಗಿ ಗ್ರಾಮಸ್ಥರು ಮನೆಯಿಂದ ಆಚೆ ಬರಲು ಕೂಡ ಆತಂಕ ಪಡುವಂತಾಗಿದೆ.

ಡಿವೈಡರ್​ಗೆ ಕಾರು ಡಿಕ್ಕಿ, 5 ವರ್ಷದ ಮಗು​ ಸ್ಥಳದಲ್ಲೇ ಸಾವು

ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ಗೊಲ್ಲರಹಳ್ಳಿ ಬಳಿ ಚಾಲನಕ ನಿತಂತ್ರಣ ತಪ್ಪಿ ಡಿವೈಡರ್​ಗೆ ಕಾರು ಡಿಕ್ಕಿ ಹೊಡೆದಿದ್ದು 5 ವರ್ಷದ ಸೃಜನ್​ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಕಾಗಿನೆಲೆಯಲ್ಲಿ ನಡೆದ ಮದುವೆಗೆ ಹೋಗಿ ಹಿಂದಿರುಗುವಾಗ ದುರ್ಘಟನೆ ಸಂಭವಿಸಿದೆ. ಕಾರಿನಲ್ಲಿ ಮಲಗಿದ್ದ ಮಗು ಮೃತಪಟ್ಟಿದ್ದು ಸೃಜನ್ ತಂದೆಗೆ ಗಂಭೀರ ಗಾಯಗಳಾಗಿವೆ. ಗಾಯಾಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಹೊನ್ನಾಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: ನೇಣು ಬಿಗಿದ ಸ್ಥಿತಿಯಲ್ಲಿ ಬಿಜೆಪಿ ಕಾರ್ಯಕರ್ತನ ಶವ ಪತ್ತೆ: ಆತ್ಮಹತ್ಯೆಯಲ್ಲ, ಕೊಲೆ ಎನ್ನುತ್ತಿರುವ ಕುಟುಂಬಸ್ಥರು

 ಶಿವಮೊಗ್ಗ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ ಏರಿಕೆ

ಶಿವಮೊಗ್ಗ ತಾಲೂಕಿನ ಕುಂಸಿ ಬಳಿ 2 ಬಸ್‌ಗಳ ನಡುವೆ ಡಿಕ್ಕಿ ಸಂಭವಿಸಿದ್ದ ಪ್ರಕರಣಕ್ಕೆ ಸಂಬಂಧಿಸಿ ಭೀಕರ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ. ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಮಹೇಶಪ್ಪ(65) ಎಂಬುವವರು ಮೃತಪಟ್ಟಿದ್ದಾರೆ. ಮೃತ ಮಹೇಶಪ್ಪ ಶಿಕಾರಿಪುರ ತಾಲೂಕಿನ ಚಿಕ್ಕಜೋಗಿಹಳ್ಳಿ ನಿವಾಸಿ. 2 ಬಸ್‌ಗಳ ನಡುವೆ ಡಿಕ್ಕಿಯಾಗಿ ನಿನ್ನೆ ಇಬ್ಬರು ಮೃತಪಟ್ಟಿದ್ದರು. ನಿನ್ನೆ ಅರುಣ್ ಕುಮಾರ್(48), ತಿಪ್ಪೇಸ್ವಾಮಿ(46) ಮೃತಪಟ್ಟಿದ್ದರು. ಕುಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 12:14 pm, Fri, 12 May 23

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ