AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅರಹಳ್ಳಿ ಕೆರೆಯಲ್ಲಿ ದುರಂತ: ಮಕ್ಕಳನ್ನು ರಕ್ಷಿಸಲು ಹೋಗಿ ಜೀವ ತೆತ್ತ ಮಹಿಳೆಯರು

ಕೋಲಾರ ಜಿಲ್ಲೆಯ ಅರಹಳ್ಳಿ ಕೆರೆಯಲ್ಲಿ ಮಕ್ಕಳನ್ನು ರಕ್ಷಿಸಲು ಹೋಗಿ ಇಬ್ಬರು ಮಹಿಳೆಯರು ದುರಂತ ಸಾವನ್ನಪ್ಪಿದ್ದಾರೆ. ಬಟ್ಟೆ ತೊಳೆಯಲು ಕೆರೆಗೆ ತೆರಳಿದ್ದಾಗ ದುರ್ಘಟನೆ ಸಂಭವಿಸಿದೆ. ಸದ್ಯ ಕೋಲಾರ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಮತ್ತೊಂದು ಪ್ರಕರಣದಲ್ಲಿ ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್‌ವೇನಲ್ಲಿ ಭೀಕರ ಅಪಘಾತ ಸಂಭವಿಸಿದ್ದು ಯುವಕ ಸಾವನ್ನಪ್ಪಿದ್ದಾನೆ.

ಅರಹಳ್ಳಿ ಕೆರೆಯಲ್ಲಿ ದುರಂತ: ಮಕ್ಕಳನ್ನು ರಕ್ಷಿಸಲು ಹೋಗಿ ಜೀವ ತೆತ್ತ ಮಹಿಳೆಯರು
ಅರಹಳ್ಳಿ ಕೆರೆImage Credit source: tv9 kannada
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Edited By: |

Updated on: Apr 13, 2026 | 5:57 PM

Share

ಕೋಲಾರ, ಏಪ್ರಿಲ್​ 13: ಕೆರೆಗೆ ಬಿದ್ದಿದ್ದ ಮಕ್ಕಳನ್ನ ರಕ್ಷಿಸಲು ಹೋಗಿ ಇಬ್ಬರು ಮಹಿಳೆಯರು ನೀರುಪಾಲಾದ (death) ಘಟನೆ ಕೋಲಾರದ ಅರಹಳ್ಳಿ ಕೆರೆಯಲ್ಲಿ ನಡೆದಿದೆ. ಮೊಹಮದಿ(25) ಮತ್ತು ಸಲ್ಮಾ (26) ನೀರುಪಾಲಾದ ಮಹಿಳೆಯರು. ಮೃತ ಮಹಿಳೆಯರು ನಿಸಾರ್ ನಗರದ ನಿವಾಸಿಗಳು. ಸದ್ಯ ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕೋಲಾರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಸ್ಥಳಕ್ಕೆ ಕೋಲಾರ ಗ್ರಾಮಾಂತರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ನಡೆದಿದ್ದೇನು?

ಕೋಲಾರದ ಅರಹಳ್ಳಿ ಕೆರೆಗೆ ಮಹಿಳೆಯರು ಸೇರಿದಂತೆ ಮಕ್ಕಳು ಬಟ್ಟೆ ತೊಳೆಯಲು ಹೋಗಿದ್ದಾರೆ. ಈ ವೇಳೆ  ಮಕ್ಕಳು ನೀರಿಗೆ ಬಿದ್ದಿದ್ದಾರೆ. ಅವರನ್ನು ರಕ್ಷಣೆ ಮಾಡಲು ನೀರಿಗೆ ಇಳಿದ ಮೊಹಮದಿ ಮತ್ತು ಸಲ್ಮಾ ಸಾವನ್ನಪ್ಪಿದ್ದಾರೆ. ಮನೆಯಲ್ಲಿ ಕಾರ್ಯಕ್ರಮ ಹಿನ್ನೆಲೆ ಸಲ್ಮಾ ಬೆಂಗಳೂರಿಂದ ಬಂದಿದ್ದರು.

ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್‌ವೇನಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಡಿಕ್ಕಿಯಾಗಿ ಪಲ್ಟಿಯಾದ ಕಾರು, ಯುವಕ ಸಾವು!

ಇನ್ನು ನೂತನವಾಗಿ ನಿರ್ಮಾಣವಾಗಿರುವ ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್‌ವೇನಲ್ಲಿ ಇಂದು ಭೀಕರ ಅಪಘಾತ ಸಂಭವಿಸಿದೆ. ವೇಗವಾಗಿ ಬಂದ ಕಾರೊಂದು ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮ, ಓರ್ವ ಯುವಕ ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೊಬ್ಬನ ಸ್ಥಿತಿ ಗಂಭೀರವಾಗಿರುವ ಘಟನೆ ಕೋಲಾರ ಜಿಲ್ಲೆಯಲ್ಲಿ ನಡೆದಿದೆ.

ಕೋಲಾರ ಜಿಲ್ಲೆಯ ಕೆಜಿಎಫ್ ತಾಲ್ಲೂಕಿನ ಕೃಷ್ಣಾವರಂ ಗ್ರಾಮದ ಸಮೀಪ ಈ ದುರ್ಘಟನೆ ನಡೆದಿದೆ. ಬೆಂಗಳೂರಿನಿಂದ ಚೆನ್ನೈ ಕಡೆಗೆ ತೆರಳುತ್ತಿದ್ದ ಕ್ರೆಟಾ ಕಾರು, ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಮಧ್ಯದ ಡಿವೈಡರ್‌ಗೆ ಬಲವಾಗಿ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣವಾಗಿ ನುಜ್ಜುಗುಜ್ಜಾಗಿದೆ.

ಇದನ್ನೂ ಓದಿ: ಜಲ ಕಂಟಕ: ಕರ್ನಾಟಕದಲ್ಲಿ ಸೋಮವಾರ ಒಂದೇ ದಿನ 10 ಮಂದಿ ನೀರು ಪಾಲು

ಅಪಘಾತದಲ್ಲಿ ಬೆಂಗಳೂರು ಮೂಲದ ದೇವಾನಂದ್ (24) ಎಂಬುವವರು ಮೃತಪಟ್ಟಿದ್ದಾರೆ. ಕಾರಿನಲ್ಲಿದ್ದ ಸರ್ವೇಶ್ ಎಂಬುವರಿಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದು, ಅವರನ್ನು ತಕ್ಷಣವೇ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಮತ್ತೊಬ್ಬ ಪ್ರಯಾಣಿಕ ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಇನ್ನು ವಿಷಯ ತಿಳಿಯುತ್ತಿದ್ದಂತೆಯೇ ಬೇತಮಂಗಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಅಪಘಾತಕ್ಕೀಡಾದ ವಾಹನವನ್ನು ರಸ್ತೆಯಿಂದ ತೆರವುಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ. ಅತಿಯಾದ ವೇಗವೇ ಈ ಅಪಘಾತಕ್ಕೆ ಪ್ರಾಥಮಿಕ ಕಾರಣ ಎಂದು ಶಂಕಿಸಲಾಗಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ

18 ವರ್ಷಗಳ ಹಿಂದೆ ಉತ್ತಮ ಸಮಾಜಕ್ಕಾಗಿ ಟಿವಿ9 ಚಾನೆಲ್​​ ಆರಂಭವಾದಾಗಿನಿಂದ ನನ್ನ ಮಾಧ್ಯಮ ಕಾಯಕವೂ ಆರಂಭ ಪಡೆಯಿತು. ಸ್ನಾತಕೋತ್ತರ ಪದವಿ ಮುಗಿಸಿದ್ದ ನಾನು ಚಿನ್ನದ ನಾಡು, ಕೃಷಿಕರ ಬೀಡು ಕೋಲಾರ ಜಿಲ್ಲೆಯ ಹಿರಿಯ ಪ್ರತಿನಿಧಿಯಾಗಿ ಕೆಲಸ ಮಾಡುತ್ತಾ ಬಂದಿದ್ದೇನೆ. ಟಿವಿ9 ಸಂಸ್ಥೆಯ ಆಶೋತ್ತರಗಳಿಗೆ ತಕ್ಕಂತೆ ಕೋಲಾರ ಜನತೆಯ ಪರವಾಗಿ ಧ್ವನಿ ಎತ್ತುವ ಕೆಲಸ ಮಾಡಿದ್ದೇನೆ. ನನ್ನದು ಸಾಮಾಜಿಕ ಕಳಕಳಿ ಇರುವ ಟಿವಿ9 ಸಂಸ್ಥೆಯಲ್ಲಿ ಕೆಲಸ ಅನ್ನೋದಕ್ಕಿಂತ ಉತ್ತಮ ಸಮಾಜಕ್ಕಾಗಿ ನನ್ನ ಸೇವೆ ಅನ್ನುವ ಭಾವನೆಯಲ್ಲಿ ಕೆಲಸ ಮಾಡಿಕೊಂಡು ಬಂದಿದ್ದೇನೆ.

Read More
ಧಾರಾಕಾರ ಮಳೆಗೆ ವೈಟ್​ಫಿಲ್ಡ್, ಮಾರತ್ತಹಳ್ಳಿ, ಔಟರ್ ರಿಂಗ್ ರಸ್ತೆ ಜಲಾವೃತ
ಧಾರಾಕಾರ ಮಳೆಗೆ ವೈಟ್​ಫಿಲ್ಡ್, ಮಾರತ್ತಹಳ್ಳಿ, ಔಟರ್ ರಿಂಗ್ ರಸ್ತೆ ಜಲಾವೃತ
ಅಸಹ್ಯದಲ್ಲೇ ಅಸಹ್ಯ, ಅದಕ್ಕೆ ನಾಮಿನೇಟ್ ಮಾಡಿದೆ; ಕಿರಣ್​​ ನಾಮಿನೇಟ್
ಅಸಹ್ಯದಲ್ಲೇ ಅಸಹ್ಯ, ಅದಕ್ಕೆ ನಾಮಿನೇಟ್ ಮಾಡಿದೆ; ಕಿರಣ್​​ ನಾಮಿನೇಟ್
ರಾತ್ರಿಯಿಡೀ ಮಳೆ ಅಬ್ಬರ: ಮಲ್ಲೇಶ್ವರಂನಲ್ಲಿ ಮರಬಿದ್ದು 2 ಕಾರುಗಳು ಜಖಂ
ರಾತ್ರಿಯಿಡೀ ಮಳೆ ಅಬ್ಬರ: ಮಲ್ಲೇಶ್ವರಂನಲ್ಲಿ ಮರಬಿದ್ದು 2 ಕಾರುಗಳು ಜಖಂ
ಇಂದು ಸಂಕಷ್ಟ ಚತುರ್ಥಿ; ಗಜಗೌರಿ ವ್ರತ ಮಾಡುವವರಿಗೆ ಮಹತ್ವದ ದಿನ
ಇಂದು ಸಂಕಷ್ಟ ಚತುರ್ಥಿ; ಗಜಗೌರಿ ವ್ರತ ಮಾಡುವವರಿಗೆ ಮಹತ್ವದ ದಿನ
ವಿದ್ಯಾರ್ಥಿಗಳಿಗೆ ಟಂಟಂಗಳೇ ಆಸರೆ: ಸ್ವಲ್ಪ ಯಾಮಾರಿದ್ರೂ ಪ್ರಾಣಕ್ಕೇ ಕುತ್ತು
ವಿದ್ಯಾರ್ಥಿಗಳಿಗೆ ಟಂಟಂಗಳೇ ಆಸರೆ: ಸ್ವಲ್ಪ ಯಾಮಾರಿದ್ರೂ ಪ್ರಾಣಕ್ಕೇ ಕುತ್ತು
ಸ್ಪೀಕರ್​ನಲ್ಲಿ ಭಜನೆ ಹಾಕಿದ್ದಕ್ಕೆ ಪಕ್ಕದ ಮನೆಯವರಿಂದ ಅರ್ಚಕನ ಮೇಲೆ ಹಲ್ಲೆ
ಸ್ಪೀಕರ್​ನಲ್ಲಿ ಭಜನೆ ಹಾಕಿದ್ದಕ್ಕೆ ಪಕ್ಕದ ಮನೆಯವರಿಂದ ಅರ್ಚಕನ ಮೇಲೆ ಹಲ್ಲೆ
ಈ ಬಾರಿ ಮೈಸೂರು ದಸರಾದಲ್ಲಿ ಏರ್ ಶೋ, ಸೇನಾ ಪರೇಡ್
ಈ ಬಾರಿ ಮೈಸೂರು ದಸರಾದಲ್ಲಿ ಏರ್ ಶೋ, ಸೇನಾ ಪರೇಡ್
ಬಂಗಾಳದ ಪ್ರವಾಸದ ವೇಳೆ ಝಲ್ಮುರಿ ಸವಿದ ಬಿಜೆಪಿ ಅಧ್ಯಕ್ಷ ನಿತಿನ್ ನವೀನ್
ಬಂಗಾಳದ ಪ್ರವಾಸದ ವೇಳೆ ಝಲ್ಮುರಿ ಸವಿದ ಬಿಜೆಪಿ ಅಧ್ಯಕ್ಷ ನಿತಿನ್ ನವೀನ್
ನೇಪಾಳದಲ್ಲಿ ಭಾರೀ ಹಿಮಪಾತ; 4 ಮೃತದೇಹಗಳ ಪತ್ತೆ, 12 ಜನ ನಾಪತ್ತೆ
ನೇಪಾಳದಲ್ಲಿ ಭಾರೀ ಹಿಮಪಾತ; 4 ಮೃತದೇಹಗಳ ಪತ್ತೆ, 12 ಜನ ನಾಪತ್ತೆ
ದಸರಾ ರಜೆ: ಕ್ರಿಶ್ಚಿಯನ್ ಶಾಲೆಗಳಿಗೆ ಪ್ರಮೋದ್ ಮುತಾಲಿಕ್ ಖಡಕ್ ಎಚ್ಚರಿಕೆ
ದಸರಾ ರಜೆ: ಕ್ರಿಶ್ಚಿಯನ್ ಶಾಲೆಗಳಿಗೆ ಪ್ರಮೋದ್ ಮುತಾಲಿಕ್ ಖಡಕ್ ಎಚ್ಚರಿಕೆ