KGF​ನಲ್ಲಿ ಕೈಗಾರಿಕಾ ಟೌನ್ ಶಿಪ್ ನಿರ್ಮಾಣ, ಕೋಚಿಮುಲ್​ ವಿಭಜಿಸಲ್ಲ: ಸಿಎಂ ಸಿದ್ದರಾಮಯ್ಯ ಭರವಸೆ

ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಕೆಸಿ ವ್ಯಾಲಿ ಹಾಗೂ ಹೆಚ್.ಎನ್.ವ್ಯಾಲಿ ನೀರಾವರಿ ಕೊಟ್ಟಿದ್ದು ನಾನು (ಸಿದ್ದರಾಮಯ್ಯ) ಮುಖ್ಯಮಂತ್ರಿಯಾಗಿದ್ದಾಗ. ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ಕೆಸಿ ವ್ಯಾಲಿ ವಿಷ ಎಂದು ಟೀಕೆ ಮಾಡುತ್ತಿದ್ದರು. ಆದರೆ ಕೆಸಿ ವ್ಯಾಲಿಗೆ ವಿಶ್ವಸಂಸ್ಥೆಯವರು ಶಬ್ಬಾಷ್​​ ಗಿರಿ ಕೊಟ್ಟಿದ್ದಾರೆ. ಇದು ಒಳ್ಳೆಯ ಯೋಜನೆ ಎಂದು ಹೇಳಿದ್ದಾರೆ. ಮಿಸ್ಟರ್ ಹೆಚ್​ಡಿ ಕುಮಾರಸ್ವಾಮಿ ಕೇಳಿ ತಿಳಿದುಕೊಳ್ಳಿ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ಮಾಡಿದರು.

KGF​ನಲ್ಲಿ ಕೈಗಾರಿಕಾ ಟೌನ್ ಶಿಪ್ ನಿರ್ಮಾಣ, ಕೋಚಿಮುಲ್​ ವಿಭಜಿಸಲ್ಲ: ಸಿಎಂ ಸಿದ್ದರಾಮಯ್ಯ ಭರವಸೆ
ಸಿಎಂ ಸಿದ್ದರಾಮಯ್ಯ
Follow us
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Updated By: ವಿವೇಕ ಬಿರಾದಾರ

Updated on: Nov 11, 2023 | 3:03 PM

ಕೋಲಾರ ನ.11: ನಗರದ ಅಭಿವೃದ್ಧಿ ಹಾಗೂ ಉದ್ಯೋಗಾವಕಾಶ ಒದಗಿಸುವ ನಿಟ್ಟಿನಲ್ಲಿ ಕೆಜಿಎಫ್​ನಲ್ಲಿ (KGF) ಕೈಗಾರಿಕಾ ಟೌನ್ ಶಿಪ್ ನಿರ್ಮಾಣಕ್ಕೆ ಅನುಮತಿ ನೀಡಿದ್ದೇನೆ. ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲೆ ಹಾಲು ಒಕ್ಕೂಟ (ಕೋಚಿಮುಲ್​) ವಿಭಜನೆ ಮಾಡುವುದಿಲ್ಲ. ಕೋಲಾರ (Kolar) ಹಾಲು ಒಕ್ಕೂಟಕ್ಕೆ ಸೋಲಾರ್ ಪ್ಲಾಂಟ್ ನಿರ್ಮಾಣಕ್ಕೆ ಅನುಮತಿ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಭರವಸೆ ನೀಡಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು (ನ.11) ಬಂಗಾರಪೇಟೆ ತಾಲ್ಲೂಕು ಯರಗೋಳ್ ಗ್ರಾಮದ ಬಳಿ ನಿರ್ಮಾಣ ಮಾಡಿರುವ ಯರಗೋಳ್ ಅಣೆಕಟ್ಟನ್ನು ಲೋಕಾರ್ಪಣೆ ಮಾಡಿ, ಭಾಗಿನ‌ ಅರ್ಪಿಸಿದರು. ಬಳಿಕ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಕೆಸಿ ವ್ಯಾಲಿ ಹಾಗೂ ಹೆಚ್.ಎನ್.ವ್ಯಾಲಿ ನೀರಾವರಿ ಕೊಟ್ಟಿದ್ದು ನಾನು (ಸಿದ್ದರಾಮಯ್ಯ) ಮುಖ್ಯಮಂತ್ರಿಯಾಗಿದ್ದಾಗ. ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ಕೆಸಿ ವ್ಯಾಲಿ ವಿಷ ಎಂದು ಟೀಕೆ ಮಾಡುತ್ತಿದ್ದರು. ಆದರೆ ಕೆಸಿ ವ್ಯಾಲಿಗೆ ವಿಶ್ವಸಂಸ್ಥೆಯವರು ಶಬ್ಬಾಷ್​​ ಗಿರಿ ಕೊಟ್ಟಿದ್ದಾರೆ. ಇದು ಒಳ್ಳೆಯ ಯೋಜನೆ ಎಂದು ಹೇಳಿದ್ದಾರೆ. ಮಿಸ್ಟರ್ ಹೆಚ್​ಡಿ ಕುಮಾರಸ್ವಾಮಿ ಕೇಳಿ ತಿಳಿದುಕೊಳ್ಳಿ ಎಂದು ವಾಗ್ದಾಳಿ ಮಾಡಿದರು.

ಕೆ.ಸಿ.ವ್ಯಾಲಿ ಮಾಡಬೇಡಿ, ಜನರಿಗೆ ವಿಷ ಕೊಡುತ್ತಾರೆ ಎಂದು ಕುಮಾರಸ್ವಾಮಿ ಹೇಳುತ್ತಿದ್ದರು. ವಿಷದ ನೀರು ಎಂದು ಹೇಳುತ್ತಿದ್ದರು. ಇದರಿಂದ ಜಾನುವಾರುಗಳು ಸತ್ತಿವೆಯಾ? ಇದಕ್ಕೆ ಕುಮಾರಸ್ವಾಮಿ ಅವರಿಗೆ ಉತ್ತರ ಕೊಡಿ. ವಿಶ್ವಸಂಸ್ಥೆ ಅವರೇ ಬಂದು ಪರೀಕ್ಷೆ ನಡೆಸಿ ಹೋಗಿದ್ದಾರೆ. ಅವರನ್ನಾದರೂ ಕೇಳಿ ತಿಳಿದುಕೊಳ್ಳಿ.

ಇದನ್ನೂ ಓದಿ: ಬಹುನಿರೀಕ್ಷಿತ ಯರಗೋಳ್ ಡ್ಯಾಂ ಕುಡಿಯುವ ನೀರಿನ ಯೋಜನೆ ಲೋಕಾರ್ಪಣೆ

ರಾಜಕೀಯಕ್ಕೋಸ್ಕರ ಟೀಕೆ ಮಾಡಬೇಡಿ. ಜನರನ್ನ ದಾರಿ ತಪ್ಪಿಸುವ ಕೆಲಸ ಮಾಡಬಾರದು, ಜನರಿಗೆ ವಿರುದ್ಧವಾದ ಕೆಲಸ ಮಾಡಬಾರದು. ಸಂಪೂರ್ಣ ಕೋಲಾರ ಮಲೆನಾಡು ಆಗೇ ಆಗುತ್ತದೆ ಎಂದು ಭರವಸೆ ನೀಡಿದರು. ರೈತರ ಪಂಪ್ ಸೆಟ್​ಗಳಿಗೆ ಏಳು ಗಂಟೆ ವಿದ್ಯುತ್ ಕೊಡಬೇಕೆಂದು ಹೇಳಿದ್ದೇವೆ, ಯಾವುದೇ ಕಾರಣಕ್ಕೂ ತಪ್ಪದಂತೆ ವಿದ್ಯುತ್ ನೀಡಬೇಕೆಂದು ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇನ್ನು ಸಿಎಂ ಸಿದ್ದರಾಮಯ್ಯ ಭಾಷಣದ ಭರದಲ್ಲಿ ಕೆ.ಸಿ. ವ್ಯಾಲಿ ಯೋಜನೆಗೆ ಶ್ರಮವಹಿಸಿದ ಜಿಲ್ಲೆಯ ಕಾಂಗ್ರೆಸ್​ ಶಾಸಕರ ಹೆಸರು ಹೇಳುತ್ತಾ ಹೆಚ್​​ ಡಿ ಕುಮಾರಸ್ವಾಮಿ ಅವರ ಹೆಸರು ಹೇಳಿದರು. ಆಮೇಲೆ ಹೆಚ್​ಡಿ ಕುಮಾರಸ್ವಾಮಿ ಅಲ್ಲ ಎಂಬ ಪ್ರಸಂಗವೂ ನಡೆಯಿತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್
ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್