ಜೆಡಿಎಸ್ ಅಧಿಕಾರಕ್ಕೆ ಬಂದರೆ ಮಹಿಳೆಗೆ ಡಿಸಿಎಂ ಸ್ಥಾನ ಕೊಡುವುದಾಗಿ ಘೋಷಿಸಿದ ಹೆಚ್​ಡಿ ಕುಮಾರಸ್ವಾಮಿ

| Updated By: ವಿವೇಕ ಬಿರಾದಾರ

Updated on: Nov 22, 2022 | 1:20 PM

ಜೆಡಿಎಸ್ ಅಧಿಕಾರಕ್ಕೆ ಬಂದರೆ ಮಹಿಳೆಗೆ ಉಪಮುಖ್ಯಮಂತ್ರಿ ಸ್ಥಾನ ನೀಡುವುದಾಗಿ ಕೋಲಾರದಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್. ಡಿ ಕುಮಾರಸ್ವಾಮಿ ಘೋಷಿಸಿದ್ದಾರೆ.

ಜೆಡಿಎಸ್ ಅಧಿಕಾರಕ್ಕೆ ಬಂದರೆ ಮಹಿಳೆಗೆ ಡಿಸಿಎಂ ಸ್ಥಾನ ಕೊಡುವುದಾಗಿ ಘೋಷಿಸಿದ ಹೆಚ್​ಡಿ ಕುಮಾರಸ್ವಾಮಿ
ಹೆಚ್ ಡಿ ಕುಮಾರಸ್ವಾಮಿ
Follow us on

ಕೋಲಾರ: ರಾಜ್ಯ, ವಿಧಾನಸಭೆ ಚುನಾವಣೆಯ ಹೊಸ್ತಿಲಿನಲ್ಲಿ ಇದ್ದು, ಜೆಡಿಎಸ್​ ಪಕ್ಷ ಮಿಷನ್​ 123 ಗುರಿಯಾಗಿಸಿಕೊಂಡು ಪಂಚರತ್ನ ರಥಯಾತ್ರೆ ಮಾಡುತ್ತಿದೆ. ಈ ರಥಯಾತ್ರೆ ಉದ್ದೇಶಗಳಲ್ಲಿ ಒಂದಾದ ಮಹಿಳಾ ಸಬಲೀಕರಣಕ್ಕೆ ಪೂರಕ ನೀಡುವಂತೆ ಜೆಡಿಎಸ್ (JDS) ಅಧಿಕಾರಕ್ಕೆ ಬಂದರೆ ಮಹಿಳೆಗೆ ಉಪಮುಖ್ಯಮಂತ್ರಿ ಸ್ಥಾನ ನೀಡುವುದಾಗಿ ಕೋಲಾರದಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್. ಡಿ ಕುಮಾರಸ್ವಾಮಿ (HD Kumaraswamy) ಘೋಷಿಸಿದ್ದಾರೆ.

ಸೋಮವಾರ (ನ.21) ಕೋಲಾರ, ಮಾಲೂರಿನಲ್ಲಿ ರೋಡ್‌ಶೋ ನಡೆಸಿ ಮಾತನಾಡಿದ ಅವರು ಮುಸ್ಲಿಂ ಸಮುದಾಯದವರು ಮುಖ್ಯಮಂತ್ರಿ ಕೂಡ ಆಗಬಹುದು. ಮುಸ್ಲಿಮರು ಯಾಕೆ ರಾಜ್ಯದ ಸಿಎಂ ಆಗಬಾರದು? ಎಂದು ಹೆಚ್ ಡಿ ಕುಮಾರಸ್ವಾಮಿ ಪ್ರಶ್ನೆ ಮಾಡಿದ್ದಾರೆ.

ಮಹಿಳೆಯರ ‌ಪ್ರಾಮಾಣಿಕ ಅಭಿವೃದ್ಧಿಗೆ ಜೆಡಿಎಸ್ ಬದ್ದವಾಗಿದೆ. ಶಾಲೆಗೆ ಹೋಗುವ ಮಕ್ಕಳು ಬಂದು‌ ನೀವು ಸಿಎಂ ಆಗ್ಬೇಕು ಅಂದರು, ಆರತಿ ಮಾಡಿದಾಗ ದಕ್ಷಿಣೆ ಕೊಟ್ಟಾಗ ದುಡ್ಡು ಬೇಡ ಒಳ್ಳೆ ಶಾಲೆ ಮಾಡಿ ಅಂತ ಮಕ್ಕಳು ಹೇಳಿದರು ಎಂದು ತಿಳಿಸಿದರು.

ಮುಂದೆ ದುಡ್ಡು ಕೊಟ್ಟು‌ ಮತ ಪಡೆಯೋದನ್ನು ಜನ ನಿಷೇಧ ಮಾಡಿತ್ತಾರೆ. ಐದು ವರ್ಷಗಳ ಆಡಳಿತ ಸಿಕ್ಕರೆ ಇನ್ಮುಂದೆ ಜನರು ಹಣವನ್ನು‌ ಪಡೆಯಬಾರದು, ಆ ರೀತಿಯಾಗಿ ಜನರನ್ನು ಅಭಿವೃದ್ಧಿ ‌ಮಾಡುತ್ತೇನೆ ಎಂದು ಭರವಸೆ ನೀಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:16 pm, Tue, 22 November 22