Kolar News: ಸ್ತ್ರೀಶಕ್ತಿ ಸಂಘದ ಸಾಲ ಕಟ್ಟಿ ಎಂದು ಮನೆಗೆ ಬಂದ ಬ್ಯಾಂಕ್ ಅಧಿಕಾರಿಗೆ ಮಹಿಳೆಯರಿಂದ ತರಾಟೆ

| Updated By: ಆಯೇಷಾ ಬಾನು

Updated on: Jun 14, 2023 | 11:13 AM

ಮಹಿಳಾ ಸ್ತ್ರೀ ಶಕ್ತಿ ಸಂಘದ ಸಾಲ ಮನ್ನಾ ಒತ್ತಾಯ ವಿಚಾರಕ್ಕೆ ಮಹಿಳೆಯರು ನಡೆಸುತ್ತಿರುವ ಪ್ರತಿಭಟನೆ ತೀವ್ರಗೊಂಡಿದೆ. ಸಾಲ ಮರುಪಾವತಿಗೆ ನೋಟಿಸ್ ಜಾರಿ ಮಾಡಲು ಹೋದ ಅಧಿಕಾರಿ ಜೊತೆಗೆ ಮಹಿಳೆಯರು ವಾಗ್ವಾದಕ್ಕಿಳಿದಿದ್ದಾರೆ.

ಕೋಲಾರ: ಪ್ರಜಾಯಾತ್ರೆ ಸಮಾವೇಶಗಳಲ್ಲಿ ಭಾಷಣ ಮಾಡುವಾಗ ನಮ್ಮ ಪಕ್ಷಕ್ಕೆ ಮತ ನೀಡಿದರೆ ಸಹಕಾರ ಬ್ಯಾಂಕ್‌ಗಳಲ್ಲಿ ಪಡೆದಿರುವ ಸ್ತ್ರೀಶಕ್ತಿ ಸಾಲ ಮನ್ನಾ(waive off) ಮಾಡುವುದಾಗಿ ಸಿಎಂ ಸಿದ್ದರಾಮಯ್ಯ(Siddaramaiah) ಭರವಸೆ ನೀಡಿದ್ದರು. ಸದ್ಯ ಕಾಂಗ್ರೆಸ್ ಅಧಿಕಾರಕ್ಕೆ ಒಂದಿದ್ದು ಮತ ಪಡೆದ ಸಿದ್ದರಾಮಯ್ಯನವರು ಸಾಲ ಮನ್ನಾ ಮಾಡದೆ ಮಹಿಳೆಯರಿಗೆ ದ್ರೋಹ ಮಾಡಿದ್ದಾರೆಂದು ಸಾಲ ವಸೂಲಿಗಾರರು ಗ್ರಾಮಕ್ಕೆ ಪ್ರವೇಶ ಮಾಡದಂತೆ ಗ್ರಾಮದಲ್ಲಿ ಪ್ಲೆಕ್ಸ್ ಹಾಕಿ ನಿರ್ಭಂಧ ಹೇರಿ, ಸಾಲ ಕೇಳಲು ಬಾರದಂತೆ ಮಹಿಳೆಯರು ಎಚ್ಚರಿಕೆ ಕೊಟ್ಟಿರುವ ಘಟನೆ ಕೋಲಾರದಲ್ಲಿ ನಡೆದಿದೆ.

ಮಹಿಳಾ ಸ್ತ್ರೀ ಶಕ್ತಿ ಸಂಘದ ಸಾಲ ಮನ್ನಾ ಒತ್ತಾಯ ವಿಚಾರಕ್ಕೆ ಮಹಿಳೆಯರು ನಡೆಸುತ್ತಿರುವ ಪ್ರತಿಭಟನೆ ತೀವ್ರಗೊಂಡಿದೆ. ಸಾಲ ಮರುಪಾವತಿಗೆ ನೋಟಿಸ್ ಜಾರಿ ಮಾಡಲು ಹೋದ ಅಧಿಕಾರಿ ಜೊತೆಗೆ ಮಹಿಳೆಯರು ವಾಗ್ವಾದಕ್ಕಿಳಿದಿದ್ದಾರೆ. ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ವಟ್ರಕುಂಟೆ ಗ್ರಾಮದಲ್ಲಿ ಡಿಸಿಸಿ ಬ್ಯಾಂಕ್ ಸೆಕ್ರೆಟರಿ ವೆಂಕಟೇಶ್ ಜೊತೆಗೆ ಮಹಿಳೆಯರು ವಾಗ್ವಾದಕ್ಕಿಳಿದಿದ್ದಾರೆ.

ಸಾಲಮನ್ನಾ ಮಾಡೊದಾಗಿ ಸಿಎಂ ಸಿದ್ದರಾಮಯ್ಯ, ಹಾಗೂ ಸ್ಥಳೀಯ ಕಾಂಗ್ರೆಸ್ ಶಾಸಕ ನಾರಾಯಣಸ್ವಾಮಿ ಹೇಳಿದ್ದಾರೆ. ನಾವು ಸಾಲ ಕಟ್ಟೊಲ್ಲ ಎಂದು ಮಹಿಳೆಯರು ಖಡಕ್ ಆಗಿ ತಿಳಿಸಿದ್ದಾರೆ. ಸಾಲ ಮರುಪಾವತಿ ಮಾಡಲು ಅಧಿಕಾರಿಗಳಿಂದ ಮನವೊಲಿಸುವ ಯತ್ನ ವಿಫಲವಾಗಿದ್ದು ಸದ್ಯ ಕೋಲಾರ ಡಿಸಿಸಿ ಬ್ಯಾಂಕ್ ಗೆ ಸಾಲಮನ್ನಾ ವಿಚಾರ ತಲೆನೋವಾಗಿದೆ. ಸ್ವಸಹಾಯ ಸಂಘಗಳ ಸಾಲ ಮನ್ನಾಗೆ ಒತ್ತಡ ಹೆಚ್ಚಿದೆ.

ಇದನ್ನೂ ಓದಿ: Kolar News: ಸ್ತ್ರೀ ಸ್ವ ಸಹಾಯ ಸಂಘಗಳ ಸಾಲ ಮನ್ನಾ ವಿಚಾರ; ಗ್ರಾಮದಲ್ಲಿ ಮಹಿಳೆಯರಿಂದ ಪ್ಲೆಕ್ಸ್ ಹಾಕಿ ಸಾಲ ಕೇಳಲು ಬಾರದಂತೆ ಎಚ್ಚರಿಕೆ

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್​ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಕೋಲಾರ ಡಿಸಿಸಿ ಬ್ಯಾಂಕ್​ ಸಿಬ್ಬಂದಿಗೆ ಸ್ತ್ರೀಶಕ್ತಿ ಸ್ವಸಹಾಯ ಗುಂಪುಗಳಿಂದ ಸಾಲ ವಸೂಲಿ ಮಾಡೋದು ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಸಾಲ ಕೇಳಲು ಹೋಗುವ ಬ್ಯಾಂಕ್​ ಸಿಬ್ಬಂದಿಗಳ ಮೇಲೆ ಮಹಿಳೆಯರು ಹರಿಹಾಯ್ದು ಬೀಳುತ್ತಿದ್ದಾರೆ. ಅಷ್ಟೇ ಅಲ್ಲ ನಾವು ಯಾವುದೇ ಕಾರಣಕ್ಕೂ ಸಾಲ ಕಟ್ಟೋದಿಲ್ಲ ಎಂದು ಖಡಕ್ಕಾಗಿ ಹೇಳಿ ವಾಪಸ್​ ಕಳಿಸುತ್ತಿದ್ದಾರೆ.

ಒಂದು ವೇಳೆ ಬಲವಂತ ಮಾಡಿದ್ರೆ, ತಕ್ಕ ಶಾಸ್ತಿ ಮಾಡ್ತೀವಿ ಅನ್ನೋ ಮಾತುಗಳನ್ನಾಡುತ್ತಿದ್ದಾರೆ. ಸದ್ಯಕ್ಕೆ, ಸಾಲ ಕೊಟ್ಟಿರುವ ಡಿಸಿಸಿ ಬ್ಯಾಂಕ್​ನವರಿಗೆ ಹೋಬಳಿ ಮಟ್ಟದ ಹಾಗೂ ತಾಲ್ಲೂಕು ಮಟ್ಟದಲ್ಲಿ ಸಾಲ ಕೊಟ್ಟಿರುವ ಸೊಸೈಟಿಗಳಿಗೆ ಸಾಲ ವಸೂಲಿ ಮಾಡೋದೆ ದೊಡ್ಡ ತಲೆನೋವಾಗಿ ಪರಿಣಮಿಸುತ್ತಿದ್ದು, ಸಾಲ ವಸೂಲಿಯಾಗದೆ ಬ್ಯಾಂಕ್​ನ್ನು ಹೇಗಪ್ಪಾ ಮುನ್ನಡೆಸೋದು ಅನ್ನೋ ಆತಂಕ ಶುರುವಾಗಿದೆ. ಜೊತೆಗೆ ಸಾಲ ಸರಿಯಾಗಿ ಮರುಪಾವತಿ ಮಾಡಲಿಲ್ಲ ಎಂದರೆ ಮಹಿಳೆಯರಿಗೇ ಹೊರೆಯಾಗುತ್ತದೆ ಅನ್ನೋದು ಬ್ಯಾಂಕ್​ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ ಅವರ ಅಭಿಪ್ರಾಯಪಟ್ಟಿದ್ದಾರೆ.

ಕೋಲಾರಕ್ಕೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ