AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು, ಕಾರವಾರ, ಗೋವಾ ಮತ್ತು ಮುಂಬೈ ಪ್ರಯಾಣಿಕರ ಗಮನಕ್ಕೆ: ಈ ರೈಲ್ವೆ ಮಾರ್ಗಕ್ಕೆ ಜೂ.15 ರಿಂದ ಹೊಸ ಮುಂಗಾರು ವೇಳಾಪಟ್ಟಿ

ಕೊಂಕಣ ರೈಲ್ವೆ ಕಾರ್ಪೊರೇಷನ್ (KRCL) ಮುಂಗಾರು ಅವಧಿಯಲ್ಲಿ ರೈಲುಗಳ ಸುರಕ್ಷಿತ ಸಂಚಾರಕ್ಕಾಗಿ ವಿಶೇಷ ವೇಳಾಪಟ್ಟಿ ಪ್ರಕಟಿಸಿದೆ. ಜೂನ್ 15 ರಿಂದ ಅಕ್ಟೋಬರ್ 20, 2026 ರವರೆಗೆ ಜಾರಿಯಲ್ಲಿರುವ ಈ ವೇಳಾಪಟ್ಟಿಯು ಗುಡ್ಡ ಕುಸಿತ ಮತ್ತು ನೀರು ನಿಲ್ಲುವಿಕೆ ತಪ್ಪಿಸಲು ರೈಲುಗಳ ವೇಗ ನಿಯಂತ್ರಿಸುತ್ತದೆ. ಮಂಗಳೂರು, ಗೋವಾ ಮಾರ್ಗದ ಪ್ರಯಾಣಿಕರು ತಮ್ಮ ರೈಲುಗಳ ನವೀಕೃತ ಸಮಯವನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಪರಿಶೀಲಿಸಿಕೊಳ್ಳುವಂತೆ ಮನವಿ ಮಾಡಲಾಗಿದೆ. ಸುರಕ್ಷಿತ ಪ್ರಯಾಣಕ್ಕೆ ಇದು ಅತ್ಯಗತ್ಯ.

ಮಂಗಳೂರು, ಕಾರವಾರ, ಗೋವಾ ಮತ್ತು ಮುಂಬೈ ಪ್ರಯಾಣಿಕರ ಗಮನಕ್ಕೆ: ಈ ರೈಲ್ವೆ ಮಾರ್ಗಕ್ಕೆ ಜೂ.15 ರಿಂದ ಹೊಸ ಮುಂಗಾರು ವೇಳಾಪಟ್ಟಿ
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on: Jun 04, 2026 | 2:26 PM

Share

ಮಂಗಳೂರು, ಜೂ.4 : ಕೊಂಕಣ ರೈಲ್ವೆ ಮಾರ್ಗದಲ್ಲಿ ಮುಂಗಾರು ಮಳೆಯ (Monsoon) ಅವಧಿಯಲ್ಲಿ ರೈಲುಗಳ ಸುರಕ್ಷಿತ ಕಾರ್ಯಾಚರಣೆಯನ್ನು ಖಚಿತಪಡಿಸಿಕೊಳ್ಳಲು ಕೊಂಕಣ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್ (KRCL) ಮಹತ್ವದ ನಿರ್ಧಾರ ಕೈಗೊಂಡಿದೆ. ಈ ಮಾರ್ಗದಲ್ಲಿ ಚಲಿಸುವ ರೈಲುಗಳಿಗಾಗಿ ವಿಶೇಷ ಮುಂಗಾರು ವೇಳಾಪಟ್ಟಿಯನ್ನು (Monsoon Time Table) ಪ್ರಕಟಿಸಲಾಗಿದೆ. ಈ ಹೊಸ ವೇಳಾಪಟ್ಟಿಯು ಜೂನ್ 15, 2026 ರಿಂದ ಜಾರಿಗೆ ಬರಲಿದ್ದು, ಅಕ್ಟೋಬರ್ 20, 2026 ರವರೆಗೆ ಜಾರಿಯಲ್ಲಿರಲಿದೆ.

ಪಶ್ಚಿಮ ಕರಾವಳಿ ಮತ್ತು ಕೊಂಕಣ ಭಾಗದಲ್ಲಿ ಮುಂಗಾರು ಮಳೆಯು ಅತ್ಯಂತ ಭೀಕರವಾಗಿರುತ್ತದೆ. ಈ ಅವಧಿಯಲ್ಲಿ ಗುಡ್ಡ ಕುಸಿತ, ಹಳಿಗಳ ಮೇಲೆ ನೀರು ನಿಲ್ಲುವುದು ಮತ್ತು ಮರಗಳು ಉರುಳುವಂತಹ ಘಟನೆಗಳು ಹೆಚ್ಚಾಗಿ ಸಂಭವಿಸುತ್ತವೆ. ಹೀಗಾಗಿ, ಯಾವುದೇ ರೀತಿಯ ಅಪಘಾತಗಳು ಸಂಭವಿಸದಂತೆ ಮುನ್ನೆಚ್ಚರಿಕೆ ವಹಿಸಲು ಮತ್ತು ಪ್ರಯಾಣಿಕರ ಸುರಕ್ಷತೆಯನ್ನು ಕಾಪಾಡಲು ರೈಲುಗಳ ವೇಗವನ್ನು ನಿಯಂತ್ರಿಸಲಾಗುತ್ತದೆ. ಇದರ ಪರಿಣಾಮವಾಗಿ ರೈಲುಗಳ ಸಂಚಾರದ ಸಮಯದಲ್ಲಿ ಕೆಲವು ಬದಲಾವಣೆಗಳನ್ನು ಮಾಡಲಾಗುತ್ತದೆ.

ಇದನ್ನೂ ಓದಿ: ಪ್ರಯಾಣಿಕರೇ ಗಮನಿಸಿ: ಬೆಂಗಳೂರಿನ ಈ ಮಾರ್ಗದಲ್ಲಿ 2 ರೈಲುಗಳು ರದ್ದು, 6 ರೈಲುಗಳ ಸಂಚಾರ ಭಾಗಶಃ ರದ್ದು

ಇಲ್ಲಿದೆ ನೋಡಿ ಪೋಸ್ಟ್​​:

ಮಂಗಳೂರು, ಕಾರವಾರ, ಗೋವಾ ಮತ್ತು ಮುಂಬೈ ಮಾರ್ಗವಾಗಿ ಸಂಚರಿಸುವ ಸಾವಿರಾರು ಪ್ರಯಾಣಿಕರ ಮೇಲೆ ಈ ವೇಳಾಪಟ್ಟಿ ಪ್ರಭಾವ ಬೀರಲಿದೆ. ಆದ್ದರಿಂದ ಜೂನ್ 15 ರ ನಂತರ ಕೊಂಕಣ ರೈಲ್ವೆ ಮಾರ್ಗದಲ್ಲಿ ಪ್ರಯಾಣಿಸಲು ಟಿಕೆಟ್ ಕಾಯ್ದಿರಿಸಿರುವ ಅಥವಾ ಪ್ರಯಾಣ ಯೋಜಿಸುತ್ತಿರುವ ನಾಗರಿಕರು, ರೈಲು ನಿಲ್ದಾಣಕ್ಕೆ ಹೊರಡುವ ಮುನ್ನ ತಮ್ಮ ರೈಲಿನ ನವೀಕೃತ ಸಮಯವನ್ನು ಅಧಿಕೃತ ವೆಬ್‌ಸೈಟ್ ಅಥವಾ ಹೆಲ್ಪ್‌ಲೈನ್ ಮೂಲಕ ಪರಿಶೀಲಿಸಿಕೊಳ್ಳುವಂತೆ ಕೊಂಕಣ ರೈಲ್ವೆ ಇಲಾಖೆ ವಿನಂತಿಸಿದೆ.

ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಅಕ್ಷಯ್​ ಪಲ್ಲಮಜಲು​​
ಅಕ್ಷಯ್​ ಪಲ್ಲಮಜಲು​​

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ
‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ
ಮುಸ್ಲಿಂ ಮತದಾರರ ಹೆಸರು ಡಿಲೀಟ್ ಆರೋಪ
ಮುಸ್ಲಿಂ ಮತದಾರರ ಹೆಸರು ಡಿಲೀಟ್ ಆರೋಪ
ಡೀಸೆಲ್​ ಟ್ಯಾಂಕರ್​​ನಲ್ಲಿ ತಾಂತ್ರಿಕ ದೋಷ, ಬಸ್​ ಸಂಚಾರ ಸ್ಥಗಿತ
ಡೀಸೆಲ್​ ಟ್ಯಾಂಕರ್​​ನಲ್ಲಿ ತಾಂತ್ರಿಕ ದೋಷ, ಬಸ್​ ಸಂಚಾರ ಸ್ಥಗಿತ
ಮಂತ್ರಿಗಳ ಮೇಲೆ ರಹಸ್ಯ ಕ್ಯಾಮೆರಾ ಕಣ್ಣು: ಸಚಿವರನ್ನ ಎಚ್ಚರಿಸಿದ ಡಿಕೆಶಿ
ಮಂತ್ರಿಗಳ ಮೇಲೆ ರಹಸ್ಯ ಕ್ಯಾಮೆರಾ ಕಣ್ಣು: ಸಚಿವರನ್ನ ಎಚ್ಚರಿಸಿದ ಡಿಕೆಶಿ
'ಸಿಎಂ ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್ ಮಾಡಿದ್ದರು'
'ಸಿಎಂ ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್ ಮಾಡಿದ್ದರು'