AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಪ್ಪಳದಲ್ಲಿ 9 ಪೌರಕಾರ್ಮಿಕ ಹುದ್ದೆಗಳ ನೇಮಕಾತಿ; ತಿಂಗಳಿಗೆ 46,650ರೂ. ವರೆಗೆ ವೇತನ

ಕೊಪ್ಪಳ ಜಿಲ್ಲಾಧಿಕಾರಿ ಕಚೇರಿಯಲ್ಲಿ 7ನೇ ಹಾಗೂ 10ನೇ ತರಗತಿ ಪಾಸಾದವರಿಗೆ ಪೌರಕಾರ್ಮಿಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 9 ಹುದ್ದೆಗಳಿದ್ದು, ಯಾವುದೇ ಲಿಖಿತ ಪರೀಕ್ಷೆ ಇಲ್ಲ. ಮೆರಿಟ್ ಆಧಾರದ ಮೇಲೆ ಆಯ್ಕೆ ನಡೆಯಲಿದ್ದು, ಮಾಸಿಕ 27,000 - 46,650 ರೂ. ವೇತನ ಸಿಗಲಿದೆ. ಆಸಕ್ತರು ಡಿಸೆಂಬರ್ 07 ರೊಳಗೆ ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಕೊಪ್ಪಳದಲ್ಲಿ 9 ಪೌರಕಾರ್ಮಿಕ ಹುದ್ದೆಗಳ ನೇಮಕಾತಿ; ತಿಂಗಳಿಗೆ 46,650ರೂ. ವರೆಗೆ ವೇತನ
ಪೌರಕಾರ್ಮಿಕ ಹುದ್ದೆImage Credit source: Getty Images
ಅಕ್ಷತಾ ವರ್ಕಾಡಿ
|

Updated on:Nov 18, 2026 | 3:22 PM

Share

ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿ. ಕೊಪ್ಪಳ ಜಿಲ್ಲೆಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ಖಾಲಿ ಇರುವ ಪೌರಕಾರ್ಮಿಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. 7ನೇ ಹಾಗೂ 10ನೇ ತರಗತಿ ಪಾಸಾದ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಒಟ್ಟು 9 ಪೌರಕಾರ್ಮಿಕ ಹುದ್ದೆಗಳು ಲಭ್ಯವಿದ್ದು, ಇವುಗಳಿಗೆ ಯಾವುದೇ ರೀತಿಯ ಲಿಖಿತ ಪರೀಕ್ಷೆ ಇರುವುದಿಲ್ಲ. ಮೆರಿಟ್ ಆಧಾರದ ಮೇಲೆ ಆಯ್ಕೆ ಪ್ರಕ್ರಿಯೆ ನಡೆಸಲಾಗುತ್ತದೆ.

ವಿದ್ಯಾರ್ಹತೆ ಮತ್ತು ವಯೋಮಿತಿ:

ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು 7ನೇ ಅಥವಾ 10ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು. ಅಲ್ಲದೆ, ಅದೇ ಇಲಾಖೆಯಲ್ಲಿ ಹಿಂದೆ ಕೆಲಸ ಮಾಡಿದ ಅಥವಾ ಪ್ರಸ್ತುತ ಕರ್ತವ್ಯ ನಿರ್ವಹಿಸುತ್ತಿರುವ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುತ್ತದೆ. ವಯೋಮಿತಿಯು ಕನಿಷ್ಠ 18 ವರ್ಷದಿಂದ ಗರಿಷ್ಠ 55 ವರ್ಷದವರೆಗೆ ನಿಗದಿಪಡಿಸಲಾಗಿದೆ. ಇಲಾಖೆಯ ನಿಯಮಗಳ ಅನುಸಾರ ವಯೋಮಿತಿ ಸಡಿಲಿಕೆ ಸಹ ಇರುತ್ತದೆ.

ಆಕರ್ಷಕ ವೇತನ ಶ್ರೇಣಿ:

ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳ ಪ್ರಕಾರ ಮಾಸಿಕ 27,000 ರಿಂದ 46,650ರೂ. ರವರೆಗೆ ಆಕರ್ಷಕ ವೇತನ ಶ್ರೇಣಿ ಇರುತ್ತದೆ. ಸಂದರ್ಶನ ಹಾಗೂ ದಾಖಲಾತಿ ಪರಿಶೀಲನೆಯ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಈ ಹುದ್ದೆಗಳಿಗೆ ನವೆಂಬರ್ 07 ರಿಂದ ಅರ್ಜಿ ಸಲ್ಲಿಕೆ ಪ್ರಾರಂಭವಾಗಿದ್ದು, ಡಿಸೆಂಬರ್ 07 ಕೊನೆಯ ದಿನಾಂಕವಾಗಿರುತ್ತದೆ. ಆಸಕ್ತರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಲು ಕೊಪ್ಪಳ ಜಿಲ್ಲಾಧಿಕಾರಿ ಕಚೇರಿಗೆ ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿ ಪಡೆಯಲು ಈ ಅಧಿಸೂಚನೆಯನ್ನು ಓದಿ

ಉದ್ಯೋಗಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 3:21 pm, Wed, 18 November 26

Follow Us
ಅಕ್ಷತಾ ವರ್ಕಾಡಿ
ಅಕ್ಷತಾ ವರ್ಕಾಡಿ

ಅಕ್ಷತಾ ವರ್ಕಾಡಿ – ಮೂಲತಃ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿಯವರು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು, ಟಿವಿ9 ಡಿಜಿಟಲ್​ ಮೂಲಕ ವೃತ್ತಿ ಜೀವನವನ್ನು ಆರಂಭಿಸಿದ್ದಾರೆ. ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇವರಿಗಿದೆ. ಸದ್ಯ ಆಧ್ಯಾತ್ಮ, ಶಿಕ್ಷಣ, ಉದ್ಯೋಗವಕಾಶ, ರಾಜಕೀಯ, ಕ್ರೈಂ ಸುದ್ದಿಗಳನ್ನು ಬರೆಯುತ್ತಿದ್ದು, ಇವರು ಓದುಗರಿಗೆ ಉತ್ತಮ ಹಾಗೂ ಆಸಕ್ತಿದಾಯಕ ಲೇಖನಗಳನ್ನು ಒದಗಿಸುತ್ತಿದ್ದಾರೆ.

Read More
ಲಷ್ಕರ್ ಕಮಾಂಡರ್ ಲತೀಫ್ ಭಟ್ ಹತ್ಯೆ, ಭದ್ರತಾ ಪಡೆಗಳ ಶೌರ್ಯ ಕೊಂಡಾಡಿದ ಶಾ
ಲಷ್ಕರ್ ಕಮಾಂಡರ್ ಲತೀಫ್ ಭಟ್ ಹತ್ಯೆ, ಭದ್ರತಾ ಪಡೆಗಳ ಶೌರ್ಯ ಕೊಂಡಾಡಿದ ಶಾ
ಸಿದ್ದರಾಮಯ್ಯ ಕಡೆಗಣನೆ ಆರೋಪಕ್ಕೆ ಡಿಸಿಎಂ ಪರಮೇಶ್ವರ್ ಸ್ಪಷ್ಟನೆ
ಸಿದ್ದರಾಮಯ್ಯ ಕಡೆಗಣನೆ ಆರೋಪಕ್ಕೆ ಡಿಸಿಎಂ ಪರಮೇಶ್ವರ್ ಸ್ಪಷ್ಟನೆ
ಮಂಡ್ಯ ಹೆದ್ದಾರಿಯಲ್ಲಿ ಕಾಂಗ್ರೆಸ್ ಮುಖಂಡನ ಬರ್ತ್‌ಡೇ ದರ್ಬಾರ್
ಮಂಡ್ಯ ಹೆದ್ದಾರಿಯಲ್ಲಿ ಕಾಂಗ್ರೆಸ್ ಮುಖಂಡನ ಬರ್ತ್‌ಡೇ ದರ್ಬಾರ್
‘ಡಾಲಿಯಿಂದ ಮೋಸ ಆಗಿದೆ’; ರೀಷ್ಮಾ ನಾಣಯ್ಯ ಆರೋಪಕ್ಕೆ ಕಾರಣ ಏನು?
‘ಡಾಲಿಯಿಂದ ಮೋಸ ಆಗಿದೆ’; ರೀಷ್ಮಾ ನಾಣಯ್ಯ ಆರೋಪಕ್ಕೆ ಕಾರಣ ಏನು?
ರಾಜ್ಯದಲ್ಲಿ ಆಸ್ತಿ ಮಾರ್ಗಸೂಚಿ ದರ ಏರಿಕೆ ಸಾಧ್ಯತೆ; ಸುಳಿವು ಕೊಟ್ಟ ಡಿಸಿಎಂ
ರಾಜ್ಯದಲ್ಲಿ ಆಸ್ತಿ ಮಾರ್ಗಸೂಚಿ ದರ ಏರಿಕೆ ಸಾಧ್ಯತೆ; ಸುಳಿವು ಕೊಟ್ಟ ಡಿಸಿಎಂ
ಗ್ರಾಮೀಣ ರಸ್ತೆ ಅಭಿವೃದ್ಧಿಗೆ ಸರ್ಕಾರದಿಂದ ಒಟ್ಟು 16 ಸಾವಿರ ಕೋಟಿ ಬಿಡುಗಡೆ
ಗ್ರಾಮೀಣ ರಸ್ತೆ ಅಭಿವೃದ್ಧಿಗೆ ಸರ್ಕಾರದಿಂದ ಒಟ್ಟು 16 ಸಾವಿರ ಕೋಟಿ ಬಿಡುಗಡೆ
ಮೇಲುಕೋಟೆಯಲ್ಲಿ ರಾಜಮುಡಿ ಉತ್ಸವಸ್ವಾಮಿಯ ದರ್ಶನಕ್ಕೆ ಹರಿದುಬಂದ ಭಕ್ತಗಣ
ಮೇಲುಕೋಟೆಯಲ್ಲಿ ರಾಜಮುಡಿ ಉತ್ಸವಸ್ವಾಮಿಯ ದರ್ಶನಕ್ಕೆ ಹರಿದುಬಂದ ಭಕ್ತಗಣ
ಉಡುಪಿ: ವಿದ್ಯುತ್ ತಂತಿ ತಗುಲಿ ಹುಲ್ಲು ಸಾಗಿಸುತ್ತಿದ್ದ ಲಾರಿಗೆ ಬೆಂಕಿ
ಉಡುಪಿ: ವಿದ್ಯುತ್ ತಂತಿ ತಗುಲಿ ಹುಲ್ಲು ಸಾಗಿಸುತ್ತಿದ್ದ ಲಾರಿಗೆ ಬೆಂಕಿ
ಗಾನವಿ ಖಾಸಗಿವಿಷಯ ಬಿಚ್ಚಟ್ಟ ಸೌಂದರ್ಯಾ
ಗಾನವಿ ಖಾಸಗಿವಿಷಯ ಬಿಚ್ಚಟ್ಟ ಸೌಂದರ್ಯಾ
ಎರಡು ದಿನಗಳ ಫಿಲಿಪೈನ್ಸ್​ ಪ್ರವಾಸ ಮುಗಿಸಿ ದೆಹಲಿಗೆ ಮರಳಿದ ಪ್ರಧಾನಿ ಮೋದಿ
ಎರಡು ದಿನಗಳ ಫಿಲಿಪೈನ್ಸ್​ ಪ್ರವಾಸ ಮುಗಿಸಿ ದೆಹಲಿಗೆ ಮರಳಿದ ಪ್ರಧಾನಿ ಮೋದಿ