
ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿ. ಕೊಪ್ಪಳ ಜಿಲ್ಲೆಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ಖಾಲಿ ಇರುವ ಪೌರಕಾರ್ಮಿಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. 7ನೇ ಹಾಗೂ 10ನೇ ತರಗತಿ ಪಾಸಾದ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಒಟ್ಟು 9 ಪೌರಕಾರ್ಮಿಕ ಹುದ್ದೆಗಳು ಲಭ್ಯವಿದ್ದು, ಇವುಗಳಿಗೆ ಯಾವುದೇ ರೀತಿಯ ಲಿಖಿತ ಪರೀಕ್ಷೆ ಇರುವುದಿಲ್ಲ. ಮೆರಿಟ್ ಆಧಾರದ ಮೇಲೆ ಆಯ್ಕೆ ಪ್ರಕ್ರಿಯೆ ನಡೆಸಲಾಗುತ್ತದೆ.
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು 7ನೇ ಅಥವಾ 10ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು. ಅಲ್ಲದೆ, ಅದೇ ಇಲಾಖೆಯಲ್ಲಿ ಹಿಂದೆ ಕೆಲಸ ಮಾಡಿದ ಅಥವಾ ಪ್ರಸ್ತುತ ಕರ್ತವ್ಯ ನಿರ್ವಹಿಸುತ್ತಿರುವ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುತ್ತದೆ. ವಯೋಮಿತಿಯು ಕನಿಷ್ಠ 18 ವರ್ಷದಿಂದ ಗರಿಷ್ಠ 55 ವರ್ಷದವರೆಗೆ ನಿಗದಿಪಡಿಸಲಾಗಿದೆ. ಇಲಾಖೆಯ ನಿಯಮಗಳ ಅನುಸಾರ ವಯೋಮಿತಿ ಸಡಿಲಿಕೆ ಸಹ ಇರುತ್ತದೆ.
ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳ ಪ್ರಕಾರ ಮಾಸಿಕ 27,000 ರಿಂದ 46,650ರೂ. ರವರೆಗೆ ಆಕರ್ಷಕ ವೇತನ ಶ್ರೇಣಿ ಇರುತ್ತದೆ. ಸಂದರ್ಶನ ಹಾಗೂ ದಾಖಲಾತಿ ಪರಿಶೀಲನೆಯ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಈ ಹುದ್ದೆಗಳಿಗೆ ನವೆಂಬರ್ 07 ರಿಂದ ಅರ್ಜಿ ಸಲ್ಲಿಕೆ ಪ್ರಾರಂಭವಾಗಿದ್ದು, ಡಿಸೆಂಬರ್ 07 ಕೊನೆಯ ದಿನಾಂಕವಾಗಿರುತ್ತದೆ. ಆಸಕ್ತರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಲು ಕೊಪ್ಪಳ ಜಿಲ್ಲಾಧಿಕಾರಿ ಕಚೇರಿಗೆ ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿ ಪಡೆಯಲು ಈ ಅಧಿಸೂಚನೆಯನ್ನು ಓದಿ
ಉದ್ಯೋಗಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 3:21 pm, Wed, 18 November 26