ಕೊಪ್ಪಳ ಜಿಲ್ಲೆಯಲ್ಲಿ ಕುಡಿಯುವ ನೀರು ಸರಬರಾಜಿಗೆ ಪ್ರತಿ ತಾಲೂಕಿಗೆ 50 ಲಕ್ಷ, ಟ್ಯಾಂಕರ್ ನೀರು ಪೂರೈಕೆಗೆ 45 ಲಕ್ಷ ರೂ. ಮೀಸಲಿಟ್ಟ ಜಿಲ್ಲಾಡಳಿತ

ರಾಜ್ಯದಲ್ಲಿ ಬರ ಆವರಿಸಿದೆ. ಬಹುತೇಕ ಜಿಲ್ಲೆಗಳಲ್ಲಿ ಕುಡಿಯುವ ನೀರಿಗಾಗಿ ಹಾಹಾಕಾರ ಎದ್ದಿದೆ. ಹೀಗಾಗಿ ಕೊಪ್ಪಳ ಜಿಲ್ಲಾಡಳಿತ ಎಲ್ಲಾ ರೀತಿಯಿಂದ ತಯಾರಿ ನಡೆಸಿದ್ದು, ಜಿಲ್ಲೆಯಲ್ಲಿ ಕುಡಿಯುವ ನೀರಿನ ವ್ಯತ್ಯಯವಾಗದಂತೆ ಅಗತ್ಯ ಸಿದ್ಧತೆ ಮಾಡಿಕೊಂಡಿದೆ. ಕೊಪ್ಪಳ ಜಿಲ್ಲೆಯಲ್ಲಿ ಕುಡಿಯುವ ನೀರು ಸರಬರಾಜಿಗೆ ಪ್ರತಿ ತಾಲೂಕಿಗೆ 50 ಲಕ್ಷ, ಟ್ಯಾಂಕರ್ ನೀರು ಪೂರೈಕೆಗೆ 45 ಲಕ್ಷ ರೂ. ಮೀಸಲಿಡಲಾಗಿದೆ.

ಕೊಪ್ಪಳ ಜಿಲ್ಲೆಯಲ್ಲಿ ಕುಡಿಯುವ ನೀರು ಸರಬರಾಜಿಗೆ ಪ್ರತಿ ತಾಲೂಕಿಗೆ 50 ಲಕ್ಷ, ಟ್ಯಾಂಕರ್ ನೀರು ಪೂರೈಕೆಗೆ 45 ಲಕ್ಷ ರೂ. ಮೀಸಲಿಟ್ಟ ಜಿಲ್ಲಾಡಳಿತ
ಕೊಪ್ಪಳ ಜಿಲ್ಲಾಧಿಕಾರಿ ನಲಿನ್ ಅತುಲ್
Follow us
ಸಂಜಯ್ಯಾ ಚಿಕ್ಕಮಠ, ಕೊಪ್ಪಳ
| Updated By: ಆಯೇಷಾ ಬಾನು

Updated on: Feb 18, 2024 | 9:15 AM

ಕೊಪ್ಪಳ, ಫೆ.18: ಬಿಸಿಲನಾಡು ಕೊಪ್ಪಳ ಜಿಲ್ಲೆಯಲ್ಲಿ ಈಗಾಗಲೇ ಬಿಸಿಲಿನ ಆರ್ಭಟ ಜೋರಾಗಿದೆ. ಜೊತೆಗೆ ಬರಗಾಲದ ಪರಿಣಾಮ ಹಲವೆಡೆ ನೀರಿಗೆ ತತ್ವಾರ ಕೂಡಾ ಆರಂಭವಾಗಿದೆ. ಕೊಪ್ಪಳ (Koppal) ತಾಲೂಕಿನ ಇಂದಿರಾ ನಗರ ತಾಂಡಾ ಸೇರಿದಂತೆ ಹಲವೆಡೆ ನೀರಿಗಾಗಿ ಜನರ ಪರದಾಟ ಆರಂಭವಾಗಿದೆ (Drinking Water Crisis). ಈ ಬಗ್ಗೆ ಟಿವಿ9 ಡಿಜಿಟಲ್‌ ನಲ್ಲಿ ಅನೇಕ ಸುದ್ದಿಗಳು ವರದಿಯಾಗಿವೆ. ಈ ನಿಟ್ಟಿನಲ್ಲಿ ಎಚ್ಚೆತ್ತುಕೊಂಡಿರೋ ಕೊಪ್ಪಳ ಜಿಲ್ಲಾಡಳಿತ ಜಿಲ್ಲೆಯಲ್ಲಿ ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಅನೇಕ ಕ್ರಮಗಳನ್ನು ಕೈಗೊಳ್ಳಲು ಮುಂದಾಗಿದೆ.

ಕುಡಿಯುವ ನೀರಿನ ಸಲುವಾಗಿ ಈಗಾಗಲೇ ಜಿಲ್ಲಾಡಳಿತದಿಂದ ಎಲ್ಲಾ ರೀತಿಯಿಂದ ತಯಾರಿಯಾಗಿದ್ದು, ಜಿಲ್ಲೆಯಲ್ಲಿ ಕುಡಿಯುವ ನೀರಿನ ವ್ಯತ್ಯಯವಾಗದಂತೆ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಕೊಪ್ಪಳ ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರು ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಒಟ್ಟು 153 ಗ್ರಾಮ ಪಂಚಾಯಿತಿಗಳಿದ್ದು 722 ಗ್ರಾಮಗಳಿರುತ್ತವೆ. ಈ ಎಲ್ಲಾ ಗ್ರಾಮಗಳಲ್ಲಿ 430 ಗ್ರಾಮಗಳಿಗೆ ಡಿಬಿಓಟಿ ಎಂವಿಎಸ್ ಯೋಜನೆ ಮುಖಾಂತರ ಕುಡಿಯುವ ನೀರನ್ನು ಸರಬರಾಜು ಮಾಡಲಾಗುತ್ತದೆ. ಸದ್ಯಕ್ಕೆ ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರಿನ ಸಮಸ್ಯೆ ಇರುವುದಿಲ್ಲ. ಆದರೆ, ಮುಂದಿನ ದಿನಗಳಲ್ಲಿ 10 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಬರಬಹುದು ಎಂದು ಅಂದಾಜಿಸಲಾಗಿದೆ. ಇದಕ್ಕಾಗಿ 2334 ಸರ್ಕಾರಿ ಮತ್ತು 6366 ಖಾಸಗಿ ಬೋರ್‌ವೆಲ್‌ಗಳಿದ್ದು, ಇದರಲ್ಲಿ 898 ಖಾಸಗಿ ಬೋರ್‌ವೆಲ್‌ಗಳನ್ನು ಗುರುತಿಸಿದೆ. ಖಾಸಗಿ ಬೋರ್‌ವೆಲ್‌ಗಳ ಮಾಲೀಕರಿಂದ ಕರಾರು ಪತ್ರವನ್ನು ಮಾಡಿಸಿಕೊಳ್ಳಲಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿ: ಬರಡಾದ ಕೃಷ್ಣ; ಹನಿ ನೀರಿಗಾಗಿ ರಾಯಚೂರು ಗ್ರಾಮಗಳಲ್ಲಿ ಕಣ್ಣೀರು, ಸರ್ಕಾರದ ವಿರುದ್ಧ ವಾಗ್ದಾಳಿ

ಟ್ಯಾಂಕರ್ ಮೂಲಕ ಕುಡಿಯುವ ನೀರು ಸರಬರಾಜಿಗೆ ರೂ. 45 ಲಕ್ಷ

ಗ್ರಾಮೀಣ ಮಟ್ಟದಲ್ಲಿ ಅತಿಯಾಗಿ ಕುಡಿಯುವ ನೀರಿನ ಸಮಸ್ಯೆಯಾದರೆ, ಟ್ಯಾಂಕರ್ ಮೂಲಕ ಕುಡಿಯುವ ನೀರು ಸರಬರಾಜು ಮಾಡಿಕೊಳ್ಳಲು ಗ್ರಾಮೀಣ ಅಭಿವೃದ್ಧಿ ಇಲಾಖೆಯಿಂದ ಬಿಡುಗಡೆಯಾದ ಅನುದಾನದಲ್ಲಿ ರೂ. 45 ಲಕ್ಷಗಳನ್ನು ಟ್ಯಾಂಕರ್ ಮೂಲಕ ಕುಡಿಯುವ ನೀರು ಸರಬರಾಜು ಮಾಡುವ ಸಲುವಾಗಿ ಮೀಸಲಿರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹೇಳಿದ್ದಾರೆ.

ಕುಡಿಯುವ ನೀರು ಸರಬರಾಜಿಗೆ ಪ್ರತಿ ತಾಲ್ಲೂಕಿಗೆ ರೂ. 50 ಲಕ್ಷ ಅನುದಾನ

ಕೊಪ್ಪಳ ಜಿಲ್ಲೆಯ ಏಳು ತಾಲೂಕಿನ ತಹಶೀಲ್ದಾರರ ಪಿ.ಡಿ ಖಾತೆಯಲ್ಲಿ ಸಹ ತುರ್ತು ಕುಡಿಯುವ ನೀರಿನ ಸರಬರಾಜು ಸಲುವಾಗಿ ತಲಾ ರೂ. 50 ಲಕ್ಷಗಳನ್ನು ಕಾಯ್ದಿರಿಸಲಾಗಿದೆ. ಸದ್ಯಕ್ಕೆ ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರಿನ ಸಮಸ್ಯೆ ಇರುವುದಿಲ್ಲ ಹಾಗೂ ನಗರ ಪ್ರದೇಶದಲ್ಲಿ ಕುಡಿಯುವ ನೀರಿನ ಸಮಸ್ಯೆ ಇರುವುದಿಲ್ಲ ಎಂದು ಸ್ಥಳೀಯ ಸಂಸ್ಥೆಯ ಮುಖ್ಯಾಧಿಕಾರಿಗಳು ತಿಳಿಸಿದ್ದಾರೆ. ಹೀಗಾಗಿ ಕುಡಿಯುವ ನೀರು ಸಲುವಾಗಿ ಜಿಲ್ಲಾಡಳಿತದಿಂದ ಎಲ್ಲಾ ರೀತಿಯಿಂದ ಕ್ರಮ ಕೈಗೊಳ್ಳಲಾಗಿದೆ ಎಂದರು.

38 ವಾರಗಳ ಮೇವು ಲಭ್ಯ

ಜಿಲ್ಲೆಯಲ್ಲಿ ಇನ್ನೂ 5,71,66,5.11 ಮೆಟ್ರಿಕ್ ಟನ್ ಮೇವು ಲಭ್ಯವಿದ್ದು, ಇನ್ನೂ 38 ವಾರಕ್ಕೆ ಸಾಕಾಗುವಷ್ಟು ಮೇವು ಲಭ್ಯವಿರುತ್ತದೆ. ಜಿಲ್ಲೆಯಲ್ಲಿ ಮುಂದಿನ ದಿನಗಳಲ್ಲಿ ಮೇವಿನ ಸಮಸ್ಯೆ ಉಂಟಾದರೆ ಮೇವಿನ ಬ್ಯಾಂಕ್ ತೆರೆಯಲು ಕ್ರಮ ಕೈಗೊಳ್ಳಲಾಗಿದೆ. ರೈತರಿಗೆ ಮೇವಿನ ಕಿಟ್ ನೀಡಲು ಜಿಲ್ಲೆಯ ಪಶು ಸಂಗೋಪನಾ ಇಲಾಖೆಗೆ ಸರ್ಕಾರದಿಂದ 17,783 ಮಿನಿ ಕಿಟ್‌ಗಳು ಸರಬರಾಜು ಆಗಿದ್ದು, ಇದರಲ್ಲಿ 17,133 ಕಿಟ್‌ಗಳನ್ನು ಅವಶ್ಯವಿರುವ ರೈತರಿಗೆ ನೀಡಲಾಗಿದೆ. ಜಿಲ್ಲೆಯಲ್ಲಿ ಸದ್ಯಕ್ಕೆ ಮೇವಿನ ಸಮಸ್ಯೆ ಇರುವುದಿಲ್ಲ ಎಂದು ಹೇಳಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ