ಹಳ್ಳದಲ್ಲಿ ಕೊಚ್ಚಿಹೋದ ಭದ್ರತೆಗೆ ತೆರಳಿದ್ದ ಇಬ್ಬರು ಪೊಲೀಸ್ ಸಿಬ್ಬಂದಿಗಳು

ಗದಗ ಜಿಲ್ಲೆ ಗಜೇಂದ್ರಗಡಕ್ಕೆ ಬಂದೋಬಸ್ತ್​​ಗೆ ತೆರಳಿದ್ದ ಇಬ್ಬರು ಪೊಲೀಸ್ ಕಾನ್ಸ್ಟೇಬಲ್​ಗಳು ಹಳ್ಳದಲ್ಲಿ ಕೊಚ್ಚಿಹೋದ ಘಟನೆ ಯಲಬುರ್ಗಾ ತಾಲೂಕಿನ ಬಂಡಿಹಾಳ ಗ್ರಾಮದ ಬಳಿ ನಡೆದಿದೆ. ಸದ್ಯ ಇಬ್ಬರಿಗಾಗಿ ಶೋಧಕಾರ್ಯ ಮುಂದುವರೆದಿದೆ.

ಹಳ್ಳದಲ್ಲಿ ಕೊಚ್ಚಿಹೋದ ಭದ್ರತೆಗೆ ತೆರಳಿದ್ದ ಇಬ್ಬರು ಪೊಲೀಸ್ ಸಿಬ್ಬಂದಿಗಳು
ಹಳ್ಳದಲ್ಲಿ ಕೊಚ್ಚಿ ಹೋದ ಪೊಲೀಸ್ ಸಿಬ್ಬಂದಿಗಳಾದ ಮಹೀಶ್ ಮತ್ತು ನಿಂಗಪ್ಪ
Follow us
TV9 Web
| Updated By: Rakesh Nayak Manchi

Updated on:Sep 06, 2022 | 12:38 PM

ಕೊಪ್ಪಳ: ಗದಗ ಜಿಲ್ಲೆ ಗಜೇಂದ್ರಗಡಕ್ಕೆ ಬಂದೋಬಸ್ತ್​​ಗೆ ತೆರಳಿದ್ದ ಇಬ್ಬರು ಪೊಲೀಸ್ ಕಾನ್ಸ್ಟೇಬಲ್​ಗಳು ಹಳ್ಳದಲ್ಲಿ ಕೊಚ್ಚಿಹೋದ ಘಟನೆ ಯಲಬುರ್ಗಾ ತಾಲೂಕಿನ ಬಂಡಿಹಾಳ ಗ್ರಾಮದ ಬಳಿ ನಡೆದಿದೆ. ರೈತರ ಪ್ರತಿಭಟನೆ ಹಿನ್ನೆಲೆ ಭದ್ರತೆಗೆ ತೆರಳಿದ್ದ ಪೊಲೀಸ್ ಸಿಬ್ಬಂದಿಗಳಾದ ಮಹೇಶ್ ಮತ್ತು ನಿಂಗಪ್ಪ ಅವರು ನಿನ್ನೆ ರಾತ್ರಿ ಹಿಂದಿರುಗುವಾಗ ಹಳ್ಳದಲ್ಲಿ ಕೊಚ್ಚಿಹೋಗಿದ್ದಾರೆ. ಸದ್ಯ ಇಬ್ಬರು ಹುಡುಕಾಟದಲ್ಲಿ ಅಗ್ನಿಶಾಮಕ ದಳದ ಸಿಬ್ಬಂದಿಗಳು ನಿರತರಾಗಿದ್ದಾರೆ.

ಗದಗ ಜಿಲ್ಲೆಯ ಗಜೇಂದ್ರ ಗಡದಲ್ಲಿ ರೈತರು ಪ್ರತಿಭಟನೆ ಹಮ್ಮಿಕೊಂಡಿದ್ದರು. ಇಲ್ಲಿ ಭದ್ರತೆ ಒದಗಿಸುವ ನಿಟ್ಟಿನಲ್ಲಿ ಮುಂಡರಗಿ ಪೊಲೀಸ್ ಠಾಣೆಯ ಕಾನ್ಸ್ಟೇಬಲ್​ಗಳಾದ ಮಹೇಶ್ ಹಾಗೂ ನಿಂಗಪ್ಪ ಅವರನ್ನು ಕಳುಹಿಸಲಾಗಿತ್ತು. ಪ್ರತಿಭಟನೆ ಮುಕ್ತಾಯದ ನಂತರ ವಾಪಸ್ಸಾಗುತ್ತಿದ್ದ ವೇಳೆ ಇಬ್ಬರು ಸೋಮವಾರ ತಡರಾತ್ರಿ ಹಳದಲ್ಲಿ ಹರಿಯುತ್ತಿದ್ದ ನೀರಿಗೆ ಸಿಲುಕಿ ಕೊಚ್ಚಿ ಹೋಗಿದ್ದಾರೆ. ಸದ್ಯ ಇಬ್ಬರಿಗಾಗಿ ಶೋಧಕಾರ್ಯ ಮುಂದುವರೆದಿದೆ.

ಹಿರೇಹಳ್ಳ ಡ್ಯಾಂನಿಂದ ನೀರು ಬಿಡುಗಡೆ

ಕೊಪ್ಪಳ‌ ತಾಲೂಕಿನ ಕಿನ್ನಾಳ ಬಳಿ‌ ಇರುವ ಹಿರೇಹಳ್ಳ ಡ್ಯಾಂನಿಂದ ಅಪಾರ ಪ್ರಮಾಣದಲ್ಲಿ ನೀರನ್ನು ಹೊರಕ್ಕೆ ಬಿಡಲಾಗಿದೆ. ನಿರಂತರ ಮಳೆಯ ಪರಿಣಾಮ ನೀರಿನ ಒಳಹರಿವು ಹೆಚ್ಚಾಗಿದ್ದು, ನಾಲ್ಕು ಗೇಟ್ ಮೂಲಕ ನೀರು ಬಿಡುಗಡೆ‌ ಮಾಡಲಾಗಿದೆ. ನೀರಿನ ಪ್ರಮಾಣ ಹೆಚ್ಚಾದ ಹಿನ್ನಲೆ ಅಕ್ಕ ಪಕ್ಕದ ಜಮೀನುಗಳಿಗೂ ನೀರು ನುಗ್ಗಿದ್ದು, ಕೋಳುರ ಬಳಿ ಇರುವ ಬ್ರಿಡ್ಜ್ ಕಂ ಬ್ಯಾರೇಜ್ ಪಕ್ಕದ ಜಮೀನಿನ ಮಣ್ಣು‌ ಕುಸಿತಗೊಂಡಿದೆ. ನಿರಂತರವಾಗಿ ಮಣ್ಣು ಕುಸಿಯುತ್ತಿರುವ ಪರಿಣಾಮ ಕೋಳುರ, ಕಾಟ್ರಳ್ಳಿ ಭಾಗದ ರೈತರಲ್ಲಿ ಆತಂಕ ಮನೆ ಮಾಡಿದೆ. ಇದರೊಂದಿಗೆ ಜನಮೀನುಗಳಿಗೆ ನೀರು ನುಗ್ಗುವ ಆತಂಕವೂ ಎದುರಾಗಿದೆ.

ಕೊಚ್ಚಿಹೋಗಿದ್ದ ರೈತ ಮಹಿಳೆ ಶವ ಪತ್ತೆ

ಗದಗ: ಹಳ್ಳಿಕೇರಿ ಬಳಿ ಕೊಚ್ಚಿಹೋಗಿದ್ದ ರೈತ ಮಹಿಳೆ ಶವ ಪತ್ತೆಯಾಗಿದ್ದು, ಸ್ಥಳಕ್ಕೆ ಮುಂಡರಗಿ ತಹಶೀಲ್ದಾರ್, ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಹಳ್ಳಿಕೇರಿ ಗ್ರಾಮದಲ್ಲಿ ನಿನ್ನೆ ಸಂಜೆ ಜಮೀನಿನಿಂದ ಮನೆಗೆ ಬರುವಾಗ ನಾಗಮ್ಮ ಕವಲೂರು(52) ಕೊಚ್ಚಿಹೋಗಿದ್ದರು. ಸದ್ಯ ಘಟನೆ ನಡೆದ ಸ್ಥಳದಿಂದ 1.5 ಕಿ.ಮೀ. ದೂರದಲ್ಲಿ ಶವ ಪತ್ತೆಯಾಗಿದೆ.

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:35 pm, Tue, 6 September 22