AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಪ್ಪಳದ ಹುಲಿಗೆಮ್ಮ ದೇವಸ್ಥಾನದ ಆವರಣದಲ್ಲಿ ನೂಕುನುಗ್ಗಲು; ಕಾಲ್ತುಳಿತದಂತಹ ಸ್ಥಿತಿ ನಿರ್ಮಾಣ

ಕೊಪ್ಪಳದ ಹುಲಿಗಿ ಗ್ರಾಮದ ಹುಲಿಗೆಮ್ಮ ದೇವಿ ದೇವಾಲಯಕ್ಕೆ ಸೀಗೆ ಹುಣ್ಣಿಮೆಯ ಹಿನ್ನಲೆಯಲ್ಲಿ ಲಕ್ಷಾಂತರ ಭಕ್ತಾದಿಗಳು ಆಗಮಿಸಿದ್ದರು. ಈ ಸಂದರ್ಭದಲ್ಲಿ ನೂಕುನುಗ್ಗಲು ಸಂಭವಿಸಿದ್ದು, ಕಾಲ್ತುಳಿತದಂತಹ ಸ್ಥಿತಿ ನಿರ್ಮಾಣವಾಗಿತ್ತು. ಜನರಲ್ಲಿ ಉಸಿರಾಟದ ಸಮಸ್ಯೆಯೂ ಎದುರಾಗಿತ್ತು. ಇದರೊಂದಿಗೆ ವಾಹನ ದಟ್ಟಣೆಯಿಂದಾಗಿ ಟ್ರಾಫಿಕ್ ಜಾಮ್ ಆಗಿದ್ದು, ಪೊಲೀಸರು ಘಟನೆಯನ್ನು ನಿಯಂತ್ರಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಕೊಪ್ಪಳದ ಹುಲಿಗೆಮ್ಮ ದೇವಸ್ಥಾನದ ಆವರಣದಲ್ಲಿ ನೂಕುನುಗ್ಗಲು; ಕಾಲ್ತುಳಿತದಂತಹ ಸ್ಥಿತಿ ನಿರ್ಮಾಣ
ಕೊಪ್ಪಳ ಹುಲಿಗೆಮ್ಮ ದೇವಾಲಯದಲ್ಲಿ ಜನಸ್ತೋಮ
ಭಾವನಾ ಹೆಗಡೆ
|

Updated on:Oct 08, 2025 | 11:09 AM

Share

ಕೊಪ್ಪಳ, ಅಕ್ಟೋಬರ್ 8: ಇತ್ತೀಚೆಗೆ  ಕಾಲ್ತುಳಿತಗಳ (Stampede) ಪ್ರಕರಣಗಳು ಹೆಚ್ಚಾಗಿವೆ. ಇದೀಗ ಕೊಪ್ಪಳದ ಹುಲಿಗಿ ಗ್ರಾಮದ ಹುಲಿಗೆಮ್ಮ ದೇವಿ ದರ್ಶನಕ್ಕೆ ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತ ಸಾಗರ ಹರಿದುಬಂದಿದ್ದು,ಕಾಲ್ತುಳಿತಂದಹ ಸ್ಥಿತಿ ನಿರ್ಮಾಣವಾಗಿತ್ತು. ಈ ಸಂದರ್ಭದಲ್ಲಿ ಮಹಿಳೆಯರು ಮತ್ತು ಮಕ್ಕಳೂ ಸೇರಿದಂತೆ ಹಲವು ಭಕ್ತರು ಜನಜಂಗುಳಿಯಲ್ಲಿ ಸಿಲುಕಿ ಉಸಿರಾಟ ತೊಂದರೆಯಿಂದ ಬಳಲಿದ್ದಾರೆ.

ದೇವಿ ದರ್ಶನಕ್ಕೆ ಬಂದ ಜನಸಂದಣಿಯಲ್ಲಿ ನೂಕುನುಗ್ಗಲು

ಸೀಗೆ ಹುಣ್ಣಿಮೆ ಹಿನ್ನೆಲೆ ಕಲ್ಯಾಣ ಕರ್ನಾಟಕ ಹಾಗೂ ಕೊಪ್ಪಳದ ಆರಾಧ್ಯದೇವಿ ರಾಜ್ಯದಲ್ಲಿ ಶಕ್ತಿ ದೇವತೆಗಳಲ್ಲಿ ಒಂದಾಗಿರುವ ತಾಲೂಕಿನ ಹುಲಿಗಿ ಗ್ರಾಮದ ಹುಲಿಗೆಮ್ಮ ದೇವಿ ದರ್ಶನಕ್ಕೆ ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತ ಸಾಗರ ಹರಿದು ಬಂದಿತ್ತು. ದರ್ಶನಕ್ಕೆ ಬಂದ ಭಕ್ತರಿಂದ ಒಂದಿಷ್ಟು ನೂಕುನುಗ್ಗಲು, ಕಾಲ್ತುಳಿತಂದಹ ಸ್ಥಿತಿ ನಿರ್ಮಾಣವಾಗಿತ್ತು. ದೇವಿ ದರ್ಶನಕ್ಕೆ ಮಂಗಳವಾರ ಸುಮಾರು ನಾಲ್ಕು ಲಕ್ಷಕ್ಕೂ ಹೆಚ್ಚು ಭಕ್ತರು ಆಗಮಿಸಿದ್ದ ಹಿನ್ನೆಲೆ ಟ್ರಾಫಿಕ್ ಜಾಮ್​ನಿಂದ ಭಕ್ತರು ಪರದಾಡುವಂತಾಯಿತು. ಸೋಮವಾರ ರಾತ್ರಿಯಿಂದಲೇ ಭಕ್ತರು ಹುಲಿಗೆಮ್ಮ ದರ್ಶನಕ್ಕೆ ಸರತಿ ಸಾಲಿನಲ್ಲಿ ನಿಂತಿದ್ದರು. ಅದಲ್ಲದೇ ದೇವಸ್ಥಾನದ ಆವರಣದಲ್ಲಿ ಭಕ್ತರ ಹಾಗೂ ವಾಹನಗಳ ದಟ್ಟಣೆ ಹೆಚ್ಚಾದ ಹಿನ್ನೆಲೆ ಜನಜಂಗುಳಿಯಲ್ಲಿ ಸಿಲುಕಿ ಉಸಿರಾಟ ತೊಂದರೆಯಿಂದ ಹಲವು ಭಕ್ತರು ಪರದಾಡಿದ ಘಟನೆ ಕಂಡುಬಂದಿದೆ.

ಜನಸ್ತೋಮ ನಿಯಂತ್ರಿಸಲು ಪೊಲೀಸರ ಪರದಾಟ

ಈ ಮಾಹಿತಿ ಹಿನ್ನೆಲೆ ಸ್ಥಳಕ್ಕೆ ಆಗಮಿಸಿದ ಎಸ್ಪಿ ಡಾ. ರಾಮ್ ಎಲ್ ಅರಸಿದ್ದಿ ವಾಹನಗಳ ದಟ್ಟಣೆಯನ್ನು ನಿಯಂತ್ರಣ ಮಾಡಿದರು. ಲಾಠಿ ಹಿಡಿದ ಅವರು ನಿಲ್ಲಿಸಿದ ವಾಹನಗಳಿಗೆ ಎಚ್ಚರಿಕೆ ನೀಡಿ ಮುಂದಕ್ಕೆ ಸಾಗಿಸುವಂತೆ ಸೂಚಿಸಿದರು.  ಪ್ರತಿ ಹುಣ್ಣಿಮೆ, ಮಂಗಳವಾರ, ಶುಕ್ರವಾರದ ದಿನಗಳಂದು ಮಹಾರಾಷ್ಟ್ರ, ತೆಲಂಗಾಣ, ಆಂಧ್ರ, ಕರ್ನಾಟಕದಿಂದ ಲಕ್ಷಾಂತರ ಭಕ್ತರು ಹುಲಿಗೆಮ್ಮ ದೇವಸ್ಥಾನಕ್ಕೆ ಬರುತ್ತಾರೆ. ಹತ್ತಿರದಲ್ಲಿಯೇ  ರೈಲ್ವೆ ಮೇಲ್ಸೆತುವೆ ನಿರ್ಮಾಣ ಆಗುತ್ತಿದ್ದು, ಸಾಕಷ್ಟು ವಿಳಂಬವಾಗುತ್ತಿದೆ. ಇದರಿಂದ ಸಾಕಷ್ಟು ಟ್ರಾಫಿಕ್ ಸಮಸ್ಯೆ ಎದುರಾಗುತ್ತಿದೆ. ಕೋಟಿ ಆದಾಯವಿದ್ದರೂ, ಮೂಲಭೂತ ಸೌಕರ್ಯಗಳ ಕೊರತೆಯಿಂದಾಗಿ ಭಕ್ತರು ಪರದಾಡುವ ಸ್ಥತಿ ಇದೆ. ಹಾಗಾಗಿ ಭಕ್ತರು ದೇವಸ್ಥಾನ ಆಡಳಿತ ಮಂಡಳಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:18 am, Wed, 8 October 25

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ