ಹುಲಿಹೈದರ್ ಘರ್ಷಣೆ ಪ್ರಕರಣ: ಮತ್ತೆ 7 ಮಂದಿ ಅರೆಸ್ಟ್, ಪೊಲೀಸರಿಗೆ ಶರಣಾದ ಬಾಷಾವಲಿ ಕೊಲೆ ಆರೋಪಿ

ಕನಕಗಿರಿ ತಾಲೂಕಿನ ಹುಲಿಹೈದರ್ ಗ್ರಾಮದಲ್ಲಿ ನಡೆದ ಘರ್ಷಣೆಯಿಂದ ಇಬ್ಬರ ಸಾವನ್ನಪ್ಪಿದ ಪ್ರಕರಣ ಸಂಬಂಧ ಮತ್ತೆ ಏಳು ಮಂದಿಯನ್ನು ಪೊಲೀಸರು ಬಂಧಿಸಿದ್ದು, ಒಟ್ಟು ಬಂಧಿತರ ಸಂಖ್ಯೆ 56ಕ್ಕೆ ಏರಿಕೆಯಾಗಿದೆ.

ಹುಲಿಹೈದರ್ ಘರ್ಷಣೆ ಪ್ರಕರಣ: ಮತ್ತೆ 7 ಮಂದಿ ಅರೆಸ್ಟ್, ಪೊಲೀಸರಿಗೆ ಶರಣಾದ ಬಾಷಾವಲಿ ಕೊಲೆ ಆರೋಪಿ
ಘರ್ಷಣೆಯ ನಂತರ ಕನಕಗಿರಿ ಆಸ್ಪತ್ರೆ ಆವರಣದಲ್ಲಿ ಗಾಯಾಳು ಮತ್ತು ಮೃತರ ಸಂಬಂಧಿಕರು
Follow us
TV9 Web
| Updated By: Rakesh Nayak Manchi

Updated on:Aug 18, 2022 | 10:12 AM

ಕೊಪ್ಪಳ: ಜಿಲ್ಲೆಯ ಕನಕಗಿರಿ ತಾಲೂಕಿನ ಹುಲಿಹೈದರ್ ಗ್ರಾಮದಲ್ಲಿ ನಡೆದ ಘರ್ಷಣೆಯಿಂದ ಇಬ್ಬರ ಸಾವನ್ನಪ್ಪಿದ ಪ್ರಕರಣ ಸಂಬಂಧ ಆರೋಪಿಗಳ ಹೆಡೆಮುರಿ ಕಟ್ಟುವ ಕಾರ್ಯದಲ್ಲಿ ಪೊಲೀಸರು ತೊಡಗಿದ್ದು, ಬುಧವಾರ ರಾತ್ರಿ ಮತ್ತೆ ಏಳು ಮಂದಿಯನ್ನು ಬಂಧಿಸಿದೆ. ಆ ಮೂಲಕ ಬಂಧಿತರ ಸಂಖ್ಯೆ 56ಕ್ಕೆ ಏರಿಕೆಯಾಗಿದೆ. ಅಷ್ಟೇ ಅಲ್ಲದೆ ಕೊಲೆ ಪ್ರಕರಣದಲ್ಲಿ ಎರಡನೇ ಆರೋಪಿಯಾಗಿದ್ದ ಪಂಪಾಪತಿ ನಾಯಕ್ ಪೊಲೀಸರ ಮುಂದೆ ಶರಣಾಗಿದ್ದಾನೆ. ಕೃತ್ಯ ನಡೆದ ಘಟನೆಯ ನಂತರ ಈತ ತಲೆಮರೆಸಿಕೊಂಡಿದ್ದನು. ಬುಧವಾರ ಕುಷ್ಟಗಿ ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದಾನೆ.

ಹುಲಿಹೈದರ್ ಗುಂಪು ಘರ್ಷಣೆ ಸಂಬಂಧ ಆರೋಪಿಗಳ ಬಂಧನಕ್ಕೆ ಎಸ್​ಪಿ ಅರುಣಾಂಗ್ಷು ಗಿರಿ ಅವರು ಐದು ವಿಶೇಷ ತನಿಖಾ ತಂಡ ರಚನೆ ಮಾಡಿದ್ದರು. ಅದರಂತೆ ಬುಧವಾರ ಏಳು ಮಂದಿಯನ್ನು ಬಂಧಿಸಲಾಗಿದೆ. ಪ್ರಕರಣ ಸಂಬಂಧ 58 ಮಂದಿ ವಿರುದ್ಧ ಪ್ರಕರಣ ದಾಖಲಾಗಿದ್ದು, ಈ ಪೈಕಿ 56 ಮಂದಿಯನ್ನು ಈಗಾಗಲೇ ಬಂಧಿಸಲಾಗಿದೆ.

ಈ ನಡುವೆ, ಘರ್ಷಣೆಯಲ್ಲಿ ನಡೆದ ಬಾಷಾವಲಿ ಕೊಲೆ ಪ್ರಕರಣದಲ್ಲಿ ಪೊಲೀಸರಿಗೆ ಚಳ್ಳೆಹಣ್ಣುತಿನ್ನಿಸಿ ಪರಾರಿಯಾಗಿದ್ದ ಆರೋಪಿ ಪಂಪಾಪತಿ ನಾಯಕ್ ಪೊಲೀಸರಿಗೆ ಶರಣಾಗತಿಯಾಗಿದ್ದಾನೆ. ಈತ ಕೊಲೆ ಪ್ರಕರಣದ 2ನೇ ಆರೋಪಿಯಾಗಿದ್ದಾನೆ. ಗಲಾಟೆ ನಡೆದ ಬಳಿಕ ಎರಡು ಮೊಬೈಲ್ ತನ್ನ ಮನೆಯಲ್ಲಿ ಬಿಟ್ಟು ಪರಾರಿಯಾಗಿ ಕೊಪ್ಪಳ, ಗಂಗಾವತಿ, ಕುಷ್ಟಗಿ ಹೀಗೆ ವಿವಿಧ ಕಡೆಗಳಲ್ಲಿ ನೆಲೆಸಿದ್ದನು. ಅಷ್ಟೇ ಅಲ್ಲದೆ, ತನಗೆ ಅವಶ್ಯ ಬಿದ್ದಾಘ ಮತ್ತೊಬ್ಬರ ಮೊಬೈಲ್ ಬಳಿಸಿ ಮಾತಾನಡುತ್ತಿದ್ದನು. ಹೀಗೆ ಮಾತಾನಡಿ ಮತ್ತೆ ಅಲ್ಲಿಂದ ತಲೆಮರೆಸಿಕೊಳ್ಳುತ್ತಿದ್ದನು. ಇದೀಗ ಪಂಪಾಪತಿ ಪೊಲೀಸರ ಮುಂದೆ ಶರಣಾಗಿದ್ದಾನೆ.

ರಸ್ತೆ ದುರಸ್ಥಿಗೆ ಆಗ್ರಹಿಸಿ ಪ್ರತಿಭಟನೆ, ಗ್ರಾಮಸ್ಥರು-ಪೊಲೀಸರ ನಡುವೆ ವಾಗ್ವಾದ

ರಸ್ತೆ ದುರಸ್ಥಿಗೆ ಆಗ್ರಹಿಸಿ ಕೊಪ್ಪಳ ಜಿಲ್ಲೆ ಕಾರಟಗಿ ತಾಲೂಕಿನ‌ ಉಳೇನೂರ ಗ್ರಾಮದಲ್ಲಿ ನಡೆಯುತ್ತಿದ್ದ ಪ್ರತಿಭಟನಾ ಸ್ಥಳಕ್ಕೆ ತಡರಾತ್ರಿ ಸ್ಥಳಕ್ಕೆ ಗಂಗಾವತಿ ಡಿವೈಎಸ್​ಪಿ ರುದ್ರೇಶ್ ಉಜ್ಜನಕೊಪ್ಪ ಭೇಟಿ ನೀಡಿದರು. ಈ ವೇಳೆ ಡಿವೈಎಸ್​ಪಿ ಮತ್ತು ಯುವಕರ ನಡುವೆ ಮಾತಿನ ಚಕಾಮಕಿ ನಡೆದಿದೆ. ಸ್ಥಳಕ್ಕೆ ಭೇಟಿ ನಡಿದ್ದ ಎಸ್​ಪಿ ರುದ್ರೇಶ್, ನಾವು ಕೇಸ್ ಹಾಕಿದರೆ ನಿಮಗೆ ಗೊತ್ತಾಗತ್ತದೆ ಎಂದು ಪ್ರತಿಭಟನಾಕಾರರಿಗೆ ಎಚ್ಚರಿಸಿದ್ದಾರೆ. ಇದಕ್ಕೆ ಪ್ರತಿಯಾಗಿ ಗ್ರಾಮದ ಯುವಕರು, ಜನ ಪ್ರತಿನಿಧಿಗಳ ಮೇಲೆ ಯಾಕೆ ಕೇಸ್ ಹಾಕಲ್ಲ ಎಂದು ಡಿವೈಎಸ್​ಪಿ ಅವರನ್ನೇ ಪ್ರಶ್ನಿಸಿದ್ದಾರೆ. ಈ ವೇಳೆ ಜನಪ್ರತಿನಿಧಿಗಳ ಮೇಲೆ ಕೇಸ್ ಹಾಕುವ ಕಾನೂನು ಬದಲಾವಣೆ ತೆಗೆದುಕೊಂಡು ಬನ್ನಿ ಎಂದು ಡಿವೈಎಸ್​ಪಿ ಹೇಳಿದ್ದಾರೆ. ಇದಕ್ಕೆ ರಸ್ತೆ ಅಪಘಾತದಲ್ಲಿ ಸತ್ತರೆ ಯಾರ ವಿರುದ್ಧ ಕೇಸ್ ಹಾಕುತ್ತೀರಿ ಎಂದು ಯುವಕರು ಪ್ರಶ್ನಿಸಿದ್ದಾರೆ. ಇದಕ್ಕೆ ಉತ್ತರಿಸಿದ ಡಿವೈಎಸ್​ಪಿ ರಸ್ತೆ ಸರಿ ಇದ್ದರೂ ಅಪಘಾತವಾಗುತ್ತದೆ. ಹೀಗಾಗಿ ಘಟನೆಯ ಸತ್ಯಾಸತ್ಯತೆ ತಿಳಿದ ನಂತರವಷ್ಟೇ ಪ್ರಕರಣ ದಾಖಲಿಸಲಾಗುತ್ತದೆ ಎಂದಿದ್ದಾರೆ.

ಇನ್ನಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:11 am, Thu, 18 August 22

Video: ಕಜಾಕಿಸ್ತಾನ ವಿಮಾನ ಪತನದ ಮೊದಲು ಹಾಗೂ ನಂತರದ ಭಯಾನಕ ವಿಡಿಯೋ
Video: ಕಜಾಕಿಸ್ತಾನ ವಿಮಾನ ಪತನದ ಮೊದಲು ಹಾಗೂ ನಂತರದ ಭಯಾನಕ ವಿಡಿಯೋ
ಸುಖಾಸುಮ್ಮನೆ ವಿರಾಟ್ ಕೊಹ್ಲಿ ಕಿರಿಕ್: ತಿರುಗಿ ನಿಂತ ಸ್ಯಾಮ್ ಕೊನ್​ಸ್ಟಾಸ್
ಸುಖಾಸುಮ್ಮನೆ ವಿರಾಟ್ ಕೊಹ್ಲಿ ಕಿರಿಕ್: ತಿರುಗಿ ನಿಂತ ಸ್ಯಾಮ್ ಕೊನ್​ಸ್ಟಾಸ್
ಬಡತನದಿಂದ ಮುಕ್ತಿ ಹೊಂದಲು, ಮನೆಯಲ್ಲಿ ನೆಮ್ಮದಿಗೆ ಇಲ್ಲಿದೆ ಸುಲಭ ಉಪಾಯ
ಬಡತನದಿಂದ ಮುಕ್ತಿ ಹೊಂದಲು, ಮನೆಯಲ್ಲಿ ನೆಮ್ಮದಿಗೆ ಇಲ್ಲಿದೆ ಸುಲಭ ಉಪಾಯ
ಸಫಲ ಏಕಾದಶಿಯ ಈ ದಿನ ನಿಮ್ಮ ರಾಶಿ ಭವಿಷ್ಯ ಹೇಗಿರಲಿದೆ ನೋಡಿ
ಸಫಲ ಏಕಾದಶಿಯ ಈ ದಿನ ನಿಮ್ಮ ರಾಶಿ ಭವಿಷ್ಯ ಹೇಗಿರಲಿದೆ ನೋಡಿ
ಜೊಮ್ಯಾಟೊ ಡೆಲಿವರಿ ಬಾಯ್​ ಧರಿಸಿದ್ದ ಸಾಂತಾಕ್ಲಾಸ್​ ಡ್ರೆಸ್ ಬಿಚ್ಚಿಸಿದ ಹಿಂ
ಜೊಮ್ಯಾಟೊ ಡೆಲಿವರಿ ಬಾಯ್​ ಧರಿಸಿದ್ದ ಸಾಂತಾಕ್ಲಾಸ್​ ಡ್ರೆಸ್ ಬಿಚ್ಚಿಸಿದ ಹಿಂ
ದೇವರು ನನ್ನ ಹೊಟ್ಟೆಗೆ ಕಲ್ಲು ಮಣ್ಣು ತುಂಬಿಸಿ ಬಿಟ್ಟ: ತಾಯಿ ಆಕ್ರಂದನ
ದೇವರು ನನ್ನ ಹೊಟ್ಟೆಗೆ ಕಲ್ಲು ಮಣ್ಣು ತುಂಬಿಸಿ ಬಿಟ್ಟ: ತಾಯಿ ಆಕ್ರಂದನ
ಬಿಪಿಎಸ್‌ಸಿ ಪರೀಕ್ಷೆ ರದ್ದುಗೊಳಿಸಲು ಪ್ರತಿಭಟನೆ; ಪೊಲೀಸರ ಲಾಠಿ ಚಾರ್ಜ್
ಬಿಪಿಎಸ್‌ಸಿ ಪರೀಕ್ಷೆ ರದ್ದುಗೊಳಿಸಲು ಪ್ರತಿಭಟನೆ; ಪೊಲೀಸರ ಲಾಠಿ ಚಾರ್ಜ್
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಮುನಿರತ್ನ ಮೇಲೆ ಒತ್ತಡ: ವಿಜಯೇಂದ್ರ
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಮುನಿರತ್ನ ಮೇಲೆ ಒತ್ತಡ: ವಿಜಯೇಂದ್ರ
ಸಿಟಿ ರವಿ ಬಂಧನ ಕೇಸ್: ಸಿಪಿಐನ ಅಮಾನತು ಮಾಡಿದ್ಯಾಕೆ? ಕಾರಣ ಕೊಟ್ಟ ಸಿಎಂ
ಸಿಟಿ ರವಿ ಬಂಧನ ಕೇಸ್: ಸಿಪಿಐನ ಅಮಾನತು ಮಾಡಿದ್ಯಾಕೆ? ಕಾರಣ ಕೊಟ್ಟ ಸಿಎಂ
ಡಿ 31ರಿಂದ ಬಸ್​ಗಳು ಸಂಚರಿಸುವುದಿಲ್ಲ: ಪ್ರಯಾಣಿಕರಿಗೆ ಕರಪತ್ರ ಹಂಚಿಕೆ
ಡಿ 31ರಿಂದ ಬಸ್​ಗಳು ಸಂಚರಿಸುವುದಿಲ್ಲ: ಪ್ರಯಾಣಿಕರಿಗೆ ಕರಪತ್ರ ಹಂಚಿಕೆ