AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಲ್ಲಾ ಗೊಂದಲಗಳಿಗೆ ತೆರೆ: ಮೈಸೂರು ದಸರಾ ಉದ್ಘಾಟನೆಗೆ ಕೊಪ್ಪಳ ಶ್ರೀಗಳಿಗೆ ಅಧಿಕೃತ ಆಹ್ವಾನ

ಈ ಬಾರಿಯ ಮೈಸೂರು ದಸರಾ 2026 ಉದ್ಘಾಟನೆಯನ್ನು ಕೊಪ್ಪಳ ಗವಿಮಠದ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ನೆರವೇರಿಸಲಿದ್ದಾರೆ. ಈ ಬಗ್ಗೆ ಸ್ವತಃ ಸಿಎಂ ಡಿಕೆ ಶಿವಕುಮಾರ್ ಅವರೇ ಸದನದಲ್ಲಿ ಘೋಷಣೆ ಮಾಡಿದ್ದರು. ಬಳಿಕ ದಸರಾ ಉದ್ಘಾಟನೆ ಆಹ್ವಾನವನ್ನು ಶ್ರೀಗಳು ತಿರಸ್ಕಾರ ಮಾಡಿದ್ದಾರೆ ಅಂತೆಲ್ಲಾ ಸುದ್ದಿ ಹಬ್ಬಿದ್ದು, ಬಳಿಕ ಇದು ಸುಳ್ಳು ಸುದ್ದಿ ಎನ್ನುವುದು ಸಾಬೀತಾಯ್ತು. ಇದೀಗ ಸರ್ಕಾರರಿಂದ ಶ್ರೀಗಳಿಗೆ ಅಧಿಕೃತ ಆಹ್ವಾನ ನೀಡಲಾಗಿದೆ.

ಎಲ್ಲಾ ಗೊಂದಲಗಳಿಗೆ ತೆರೆ: ಮೈಸೂರು ದಸರಾ ಉದ್ಘಾಟನೆಗೆ ಕೊಪ್ಪಳ ಶ್ರೀಗಳಿಗೆ ಅಧಿಕೃತ ಆಹ್ವಾನ
Abhinava Gavisiddeshwara Swamiji
ರಮೇಶ್ ಬಿ. ಜವಳಗೇರಾ
|

Updated on: Sep 28, 2026 | 2:58 PM

Share

ಕೊಪ್ಪಳ, (ಸೆಪ್ಟೆಂಬರ್ 28): ಈ ಬಾರಿ ವಿಶ್ವವಿಖ್ಯಾತ ಮೈಸೂರು ದಸರಾವನ್ನು ಕೊಪ್ಪಳ ಗವಿಮಠದ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ನೆರವೇರಿಸಲಿದ್ದಾರೆ. ಇಂದು (ಸೆಪ್ಟೆಂಬರ್ 28) ಖುದ್ದು ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ಹಾಗೂ ಜಿಲ್ಲೆಯ ಶಾಸಕರು ಗವಿಮಠಕ್ಕೆ ಭೇಟಿ ನೀಡಿ ಮೈಸೂರು ದಸರಾ ಉದ್ಘಾಟನೆಗೆ ಅಭಿನವ ಗವಿಸಿದ್ದೇಶ್ವರ ಶ್ರೀಗಳಿಗೆ ಅಧಿಕೃತವಾಗಿ ಆಹ್ವಾನ ನೀಡಿದ್ದಾರೆ.  ಇನ್ನು ಅಭಿನವ ಗವಿಸಿದ್ದೇಶ್ವ ಶ್ರೀಗಳು ಸಹ ಬಹಳ ಸಂತೋಷದಿಂದ ಆಹ್ವಾನವನ್ನು ಸ್ವೀಕರಿಸಿದ್ದಾರೆ. ಇದರೊಂದಿಗೆ ಎಲ್ಲಾ ಅಂತೆ ಕಂತೆಗಳಿಗೆ ತೆರೆ ಬಿದ್ದಿದೆ. ಇನ್ನು ಅಕ್ಟೋಬರ್ 11ರಂದು ದಸರಾಗೆ ಚಾಲನೆ ದೊರೆಯಲಿದ್ದು, ಅ.21 ರಂದು ವಿಜಯದಶಮಿ ಜಂಬೂಸವಾರಿ ಜರುಗಲಿದೆ.

ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಿಂದ ಆಹ್ವಾನ

ಉದ್ಘಾಟಕರನ್ನು ದಸರಾ ಕಮಿಟಿಯವರು ತೆರಳಿ ಆಹ್ವಾನ ನೀಡುವುದು ಸಂಪ್ರದಾಯ. ಅದರಂತೆ ಈ ಬಾರಿ ದಸರಾ ಉದ್ಘಾಟನೆಗೆ ಒಪ್ಪಿಕೊಂಡ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿಯನ್ನು ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ನೇತೃತ್ವದಲ್ಲಿ ಆಹ್ವಾನ ನೀಡಲಾಗಿದೆ. ಈ ಸಂದರ್ಭದಲ್ಲಿ ಸಂಸದ ರಾಜಶೇಖರ್ ಹಿಟ್ನಾಳ್ , ಶಾಸಕ ರಾಘವೇಂದ್ರ ಹಿಟ್ನಾಳ್, ಕೊಪ್ಪಳ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ್ ನಾಗಪ್ಪ, ವಿಧಾನ ಪರಿಷತ್ ಸದಸ್ಯ ಬಸನಗೌಡ ಬಾದರ್ಲಿ ಹಾಗೂ ಜಿಲ್ಲಾಧಿಕಾರಿ ಸುರೇಶ್ ಇಟ್ನಾಳ್ ಉಪಸ್ಥಿತರಿದ್ದರು.

ಇದನ್ನೂ ಓದಿ: ಮೈಸೂರು ದಸರಾ ಉದ್ಘಾಟನೆಗೆ ಗವಿಶ್ರೀಗಳ ತಿರಸ್ಕಾರ ವದಂತಿ ಹಬ್ಬಿಸಿದವರ ವಿರುದ್ಧ ಕೇಸ್ ಬುಕ್

ಶ್ರೀಗಳ ಆಹ್ವಾನದ ಬಗ್ಗೆ ಸಿಎಂ ಪ್ರತಿಕ್ರಿಯೆ

ಅತ್ತ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ಮೈಸೂರು ದಸರಾ ಉದ್ಘಾಟನೆಗೆ ಆಹ್ವಾನ ನೀಡಲಾಗಿದ್ದು ಇದಕ್ಕೆ ಸಿಎಂ ಡಿಕೆ ಶಿವಕುಮಾರ್ ಸಾಮಾಜಿಕ ಜಾತಾಣಗಳ ಮೂಲಕ ಪ್ರತಿಕ್ರಿಯಿಸಿದ್ದು, ನಾಡಹಬ್ಬ ಮೈಸೂರು ದಸರಾ ಉದ್ಘಾಟಿಸಲು ಪರಮಪೂಜ್ಯ ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮೀಜಿಗಳನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಶಿವರಾಜ್‌ ತಂಗಡಗಿ ಇಂದು ಅಧಿಕೃತವಾಗಿ ಆಹ್ವಾನಿಸಿದರು. ಸಂಸ್ಕೃತಿ, ಪರಂಪರೆ ಹಾಗೂ ಆಧ್ಯಾತ್ಮಿಕ ಮೌಲ್ಯಗಳ ಪ್ರತೀಕವಾಗಿರುವ ಪೂಜ್ಯ ಶ್ರೀಗಳ ದಿವ್ಯ ಸಾನ್ನಿಧ್ಯದಲ್ಲಿ ಐತಿಹಾಸಿಕ ಮೈಸೂರು ದಸರಾ ಉದ್ಘಾಟನೆಗೊಳ್ಳುತ್ತಿರುವುದು ಕನ್ನಡಿಗರೆಲ್ಲರಿಗೂ ಹೆಮ್ಮೆಯ ಸಂಗತಿಯಾಗಿದೆ ಎಂದು ಟ್ವೀಟ್ ಮಾಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ರಮೇಶ್ ಬಿ. ಜವಳಗೇರಾ
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More
ಚುನಾವಣಾ ಆಯೋಗದ ವಿರುದ್ಧ 84 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಾದಯಾತ್ರೆ
ಚುನಾವಣಾ ಆಯೋಗದ ವಿರುದ್ಧ 84 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಾದಯಾತ್ರೆ
‘ಬಿಗ್ ಬಾಸ್​ಗೆ ಮೂರು ಬಿಟ್ಟು ಬರ್ತಾರೆ ಅಂದುಕೊಂಡಿರಲಿಲ್ಲ’; ವೈಷ್ಣವಿ
‘ಬಿಗ್ ಬಾಸ್​ಗೆ ಮೂರು ಬಿಟ್ಟು ಬರ್ತಾರೆ ಅಂದುಕೊಂಡಿರಲಿಲ್ಲ’; ವೈಷ್ಣವಿ
ಛತ್ತೀಸ್​ಗಢ: 48 ಗಂಟೆಗಳ ಮಳೆಗೆ ಕುಸಿದ ಬೆಟ್ಟ
ಛತ್ತೀಸ್​ಗಢ: 48 ಗಂಟೆಗಳ ಮಳೆಗೆ ಕುಸಿದ ಬೆಟ್ಟ
ಲಾರಿ ಅಡ್ಡಗಟ್ಟಿದ ಗಜಪಡೆ: ಛಂಗನೆ ನೆಗೆದು ರಸ್ತೆ ದಾಟಿದ ಬೃಹತ್ ಚಿರತೆ!
ಲಾರಿ ಅಡ್ಡಗಟ್ಟಿದ ಗಜಪಡೆ: ಛಂಗನೆ ನೆಗೆದು ರಸ್ತೆ ದಾಟಿದ ಬೃಹತ್ ಚಿರತೆ!
'ಮನೆಯಲ್ಲಿ ಅಮ್ಮ ಇರಲಿಲ್ಲ, ಹೀಗಾಗಿ ಬರೋದು ತಡವಾಯ್ತು': ಸಚಿವ ಯತೀಂದ್ರ
'ಮನೆಯಲ್ಲಿ ಅಮ್ಮ ಇರಲಿಲ್ಲ, ಹೀಗಾಗಿ ಬರೋದು ತಡವಾಯ್ತು': ಸಚಿವ ಯತೀಂದ್ರ
ಸಮಯ ಪ್ರಜ್ಞೆ ಇಲ್ವೇನ್ರೀ: ಯತೀಂದ್ರ ಬಗ್ಗೆ ತನ್ವೀರ್ ಸೇಠ್ ಬಹಿರಂಗ ಅಸಮಾಧಾನ
ಸಮಯ ಪ್ರಜ್ಞೆ ಇಲ್ವೇನ್ರೀ: ಯತೀಂದ್ರ ಬಗ್ಗೆ ತನ್ವೀರ್ ಸೇಠ್ ಬಹಿರಂಗ ಅಸಮಾಧಾನ
ಬೆಂಗಳೂರಿನಲ್ಲಿ ಆನೆ ದಾಳಿಗೆ ವಾಕಿಂಗ್​ಗೆ ತೆರಳಿದ್ದ ವೃದ್ಧ ಬಲಿ!
ಬೆಂಗಳೂರಿನಲ್ಲಿ ಆನೆ ದಾಳಿಗೆ ವಾಕಿಂಗ್​ಗೆ ತೆರಳಿದ್ದ ವೃದ್ಧ ಬಲಿ!
ಸಖತ್ ಆಗವ್ರೆ ಅಂತ ಕಾಳು ಹಾಕೋಕೆ ಬಂದ ಯಶಸ್​ಗೆ ಮರೆಯಲಾರದ ಪಾಠ ಕಲಿಸಿದ ಗಾನವಿ
ಸಖತ್ ಆಗವ್ರೆ ಅಂತ ಕಾಳು ಹಾಕೋಕೆ ಬಂದ ಯಶಸ್​ಗೆ ಮರೆಯಲಾರದ ಪಾಠ ಕಲಿಸಿದ ಗಾನವಿ
ರಸ್ತೆ ಪರಿಶೀಲನೆ ವೇಳೆ ವ್ಯಕ್ತಿಗೆ ಕಪಾಳಮೋಕ್ಷ ಮಾಡಿದ ದೆಹಲಿ ಸಚಿವ ಪರ್ವೇಶ್
ರಸ್ತೆ ಪರಿಶೀಲನೆ ವೇಳೆ ವ್ಯಕ್ತಿಗೆ ಕಪಾಳಮೋಕ್ಷ ಮಾಡಿದ ದೆಹಲಿ ಸಚಿವ ಪರ್ವೇಶ್
ದಿನ ಭವಿಷ್ಯ: ರವಿ ಕನ್ಯಾ, ಚಂದ್ರ ಮೀನ ರಾಶಿಯ ರೇವತಿ ನಕ್ಷತ್ರದಲ್ಲಿ ಸಂಚಾರ
ದಿನ ಭವಿಷ್ಯ: ರವಿ ಕನ್ಯಾ, ಚಂದ್ರ ಮೀನ ರಾಶಿಯ ರೇವತಿ ನಕ್ಷತ್ರದಲ್ಲಿ ಸಂಚಾರ