AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿಗೆ ಮತ ಹಾಕ್ತೇವೆ ಎಂದಿದ್ದಕ್ಕೆ ಥಳಿತ: ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಹಲ್ಲೆ ಆರೋಪ

ಕೊಪ್ಪಳ ತಾಲೂಕಿನ ಯಲಮಗೇರಿ ಗ್ರಾಮದಲ್ಲಿ ಕಳೆದ ರಾತ್ರಿ ಕಾಂಗ್ರೆಸ್​ಗೆ ಮತ ಹಾಕಲ್ಲ, ನಾವು ಬಿಜೆಪಿಗೆ ಮತ ಹಾಕುತ್ತೇವೆ ಎಂದಿದ್ದಕ್ಕೆ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಹಲ್ಲೆ ಆರೋಪ ಕೇಳಿಬಂದಿದೆ. ಎಂಟಕ್ಕೂ ಹೆಚ್ಚು ಕಾಂಗ್ರೆಸ್​ ಕಾರ್ಯಕರ್ತರಿಂದ ದ್ಯಾಮಣ್ಣ ಮತ್ತು ಅವರ ಕುಟುಂಬದವರ ಮೇಲೆ ಹಲ್ಲೆ ಮಾಡಲಾಗಿದೆ. ಕೊಪ್ಪಳ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. 

ಬಿಜೆಪಿಗೆ ಮತ ಹಾಕ್ತೇವೆ ಎಂದಿದ್ದಕ್ಕೆ ಥಳಿತ: ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಹಲ್ಲೆ ಆರೋಪ
ಬಿಜೆಪಿಗೆ ಮತ ಹಾಕ್ತೇವೆ ಎಂದಿದ್ದಕ್ಕೆ ಥಳಿತ: ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಹಲ್ಲೆ ಆರೋಪ
Follow us
ಸಂಜಯ್ಯಾ ಚಿಕ್ಕಮಠ, ಕೊಪ್ಪಳ
| Updated By: ಗಂಗಾಧರ​ ಬ. ಸಾಬೋಜಿ

Updated on:May 05, 2024 | 1:51 PM

ಕೊಪ್ಪಳ, ಮೇ 05: ಕಾಂಗ್ರೆಸ್​ಗೆ (Congress) ಮತ ಹಾಕಲ್ಲ, ನಾವು ಬಿಜೆಪಿಗೆ (BJP) ಮತ ಹಾಕುತ್ತೇವೆ ಎಂದಿದ್ದಕ್ಕೆ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಹಲ್ಲೆ ಆರೋಪ ಕೇಳಿಬಂದಿದೆ. ಕೊಪ್ಪಳ ತಾಲೂಕಿನ ಯಲಮಗೇರಿ ಗ್ರಾಮದಲ್ಲಿ ಕಳೆದ ರಾತ್ರಿ ಘಟನೆ ನಡೆದಿದೆ. ದ್ಯಾಮಣ್ಣ ಬಾಲನಗೌಡರ ಮತ್ತು ಕುಟುಂಬದವರಿಗೆ ಎಂಟಕ್ಕೂ ಹೆಚ್ಚು ಜನರಿಂದ ಹಲ್ಲೆ ಮಾಡಲಾಗಿದೆ ಎನ್ನಲಾಗಿದೆ. ಘಟನೆಯಿಂದ ತೀರ್ವವಾಗಿ ಗಾಯಗೊಂಡಿರುವ ದ್ಯಾಮಣ್ಣರನ್ನು ಕೊಪ್ಪಳ ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಕಳೆದ ರಾತ್ರಿ ಗ್ರಾಮದಲ್ಲಿ ಕಾಂಗ್ರೆಸ್ ಪರವಾಗಿ ಕಾರ್ಯಕರ್ತರು ಪ್ರಚಾರ ಮಾಡುತ್ತಿದ್ದರು. ದ್ಯಾಮಣ್ಣ ಮನೆಗೆ ಬಂದ ಕಾರ್ಯಕರ್ತರು ಕಾಂಗ್ರೆಸ್​​ಗೆ ಓಟ ಹಾಕುವಂತೆ ಮನವಿ ಮಾಡಿದ್ದಾರೆ. ಈ ವೇಳೆ ದ್ಯಾಮಣ್ಣ ನಾನು ಕಾಂಗ್ರೆಸ್​​ಗೆ ಮತ ಹಾಕಲ್ಲ. ನಾವು ಬಿಜೆಪಿಗೆ ಮತ ಹಾಕುತ್ತೇವೆ ಅಂತ ಹೇಳಿದ್ದಾರೆ.

ಇದನ್ನೂ ಓದಿ: ಮೃಣಾಲ್‌ ಹೆಬ್ಬಾಳ್ಕರ್ ಪರ ಹಣ ಹಂಚಿಕೆ ಆರೋಪ; ಐವರನ್ನ ಪೊಲೀಸರಿಗೆ ಒಪ್ಪಿಸಿದ ಬಿಜೆಪಿ ಕಾರ್ಯಕರ್ತರು

ಇದೇ ಕಾರಣಕ್ಕೆ ಜಗಳ ಮಾಡಲಾಗಿದ್ದು, ಗವಿಸಿದ್ದಪ್ಪ, ಗಂಗಣ್ಣ, ನೀಲಪ್ಪ, ಬಸವರಾಜ್ ಸೇರಿದಂತೆ ಎಂಟಕ್ಕೂ ಹೆಚ್ಚು ಕಾಂಗ್ರೆಸ್​ ಕಾರ್ಯಕರ್ತರಿಂದ ದ್ಯಾಮಣ್ಣ ಮತ್ತು ಅವರ ಕುಟುಂಬದವರ ಮೇಲೆ ಹಲ್ಲೆ ಮಾಡಲಾಗಿದೆ. ಕೊಪ್ಪಳ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ರಾಜ್ಯದಲ್ಲಿ ಕಾಂಗ್ರೆಸ್ ದುರುಪಯೋಗ ಮಾಡಿಕೊಳ್ತಿದ್ದಾರೆ: ಆರ್ ಅಶೋಕ್

ಈ ವಿಚಾರವಾಗಿ ಬೆಂಗಳೂರಿನಲ್ಲಿ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಪ್ರತಿಕ್ರಿಯಿಸಿದ್ದು, ಇಂತಹ ಘಟನೆಗಳು ರಾಜ್ಯದಲ್ಲಿ ಒಂದಿಲ್ಲೊಂದು ನಡೆಯುತ್ತಿದೆ. ನನಗೆ ಅನ್ನಿಸುತ್ತೆ, ರಾಜ್ಯದಲ್ಲಿ ಕಾಂಗ್ರೆಸ್ ದುರುಪಯೋಗ ಮಾಡಿಕೊಳ್ತಿದ್ದಾರೆ. ಅಧಿಕಾರಿಗಳನ್ನ, ಪೊಲೀಸರನ್ನ ಹಲ್ಲೆ ಮಾಡ್ತಿದ್ದಾರೆ. ನಿನ್ನೆಯಷ್ಟೇ ಸುರಪುರದಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ಸುಮ್ಮನೆ ಹಲ್ಲೆ ನಡೆಸಿದ್ದಾರೆ. ಸುಳ್ಳು ದಾಖಲೆಗಳನ್ನ ಸೃಷ್ಟಿಸಿ ಬಿಜೆಪಿ ಕಾರ್ಯಕರ್ತರ ಮೇಲೆ ಕೇಸ್ ದಾಖಲಿಸುತ್ತಿದ್ದಾರೆ. ಚುನಾವಣೆಯಿಂದ‌ ದೂರು ಉಳಿಯಬೇಕು ಅನ್ನೋಕಾರಣಕ್ಕೆ ಹೀಗೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಬಿಜೆಪಿ ಕಾರ್ಯಕರ್ತರಿಂದ ಕಾಂಗ್ರೆಸ್​ ಕಾರ್ಯಕರ್ತನ ಮೇಲೆ ಹಲ್ಲೆ ಆರೋಪ

ಬೆಳಗಾವಿ: ಹೆಬ್ಬಾಳ್ಕರ್ ಸಹೋದರ ಎಂಎಲ್ಸಿ ಚನ್ನರಾಜ ಹಟ್ಟಿಹೊಳಿ ಹಾಗೂ ಕಾರ್ಯಕರ್ತರು ಮನೆ ಮನೆಗೆ ಪ್ರಚಾರಕ್ಕೆ ಹೋಗಿದ್ದರು. ಈ ವೇಳೆ ಬಿಜೆಪಿ ಕಾರ್ಯಕರ್ತರು ಅವರನ್ನ ತಡೆದು ಕಾಂಗ್ರೆಸ್​​ ಕಾರ್ಯಕರ್ತನ ಮೇಲೆ ಹಲ್ಲೆ ಮಾಡಿದ್ದಾರೆ.

ಇದನ್ನೂ ಓದಿ: ಅಶ್ಲೀಲ ವಿಡಿಯೋ ಕೇಸ್​: ಇಂದು ಮಂಗಳೂರು ಏರ್​ಪೋರ್ಟ್​ಗೆ ಪ್ರಜ್ವಲ್ ಆಗಮನ ಸಾಧ್ಯತೆ

ಶಾಸಕ ಅಭಯ್ ಪಾಟೀಲ್ ಮನೆಗೆ ಕರೆದುಕೊಂಡು ಹೋಗಿ ಅವರ ಸಮ್ಮುಖದಲ್ಲಿ ಹೊಡೆದಿದ್ದಾರೆ. ಬಳಿಕ ಕಾಂಗ್ರೆಸ್ ಅಭ್ಯರ್ಥಿ ಪರ ಹಣ ಹಂಚುತ್ತಿದ್ದೇವೆ ಎಂದು ನಮ್ಮ ಕಾರ್ಯಕರ್ತರಿಂದ ಒತ್ತಾಯ ಪೂರ್ವಕ ಹೇಳಿಕೆ ಪಡೆದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 12:17 pm, Sun, 5 May 24

ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!
Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!
ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್
ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಯತ್ನಾಳ್ ವಿರುದ್ಧ ಮುಸ್ಲಿಮರ ಪ್ರತಿಭಟನೆಯಲ್ಲಿ ಹಿಂದೂ ಸ್ವಾಮೀಜಿಗಳು!
ಯತ್ನಾಳ್ ವಿರುದ್ಧ ಮುಸ್ಲಿಮರ ಪ್ರತಿಭಟನೆಯಲ್ಲಿ ಹಿಂದೂ ಸ್ವಾಮೀಜಿಗಳು!