ಕೊಪ್ಪಳ: ಚುನಾವಣಾ ಸಿಬ್ಬಂದಿ ಮನೆಗೆ ಬಂದಾಗಲೇ ಮತ ಚಲಾಯಿಸುವ ಮುನ್ನ ವೃದ್ಧೆ ಸಾವು
ಚುನಾವಣಾ ಸಿಬ್ಬಂದಿ ಮನೆಗೆ ಆಗಮಿಸಿದ್ದ ಸಂದರ್ಭದಲ್ಲೇ ಮತದಾನಕ್ಕೂ ಮುನ್ನವೇ ವೃದ್ಧೆ ಒಬ್ಬರು ಸಾವನ್ನಪ್ಪಿರುವಂತಹ ಘಟನೆ ಕೊಪ್ಪಳ ತಾಲೂಕಿನ ಹಲಗೇರಿ ಗ್ರಾಮದಲ್ಲಿ ನಡೆದಿದೆ. ವಯೋಸಹಜ ಕಾಯಿಲೆಯಿಂದ ಪಾರ್ವತಮ್ಮ ಸಜ್ಜನ(95) ನಿಧನ ಹೊಂದಿದ್ದಾರೆ. ಮೇ 7ರಂದು 3ನೇ ಹಂತದ ಲೋಕಸಭಾ ಚುನಾವಣೆ ಹಿನ್ನೆಲೆ ಇಂದಿನಿಂದ ಮನೆಗೆ ತೆರಳಿ 85 ವರ್ಷ ಮೇಲ್ಪಟ್ಟ ವೃದ್ಧರು, ವಿಶೇಷ ಚೇತನರಿಗೆ ಮನೆಯಿಂದಲೇ ಮತದಾನಕ್ಕೆ ಚುನಾವಣಾ ಆಯೋಗ ಅವಕಾಶ ನೀಡಿದೆ.
ಕೊಪ್ಪಳ, ಏಪ್ರಿಲ್ 25: ಚುನಾವಣಾ ಸಿಬ್ಬಂದಿ ಮನೆಗೆ ಆಗಮಿಸಿದ್ದ ಸಂದರ್ಭದಲ್ಲೇ ಮತದಾನಕ್ಕೂ (Voting) ಮುನ್ನವೇ ವೃದ್ಧೆ ಒಬ್ಬರು ಸಾವನ್ನಪ್ಪಿರುವಂತಹ ಘಟನೆ ಕೊಪ್ಪಳ ತಾಲೂಕಿನ ಹಲಗೇರಿ ಗ್ರಾಮದಲ್ಲಿ ನಡೆದಿದೆ. ವಯೋಸಹಜ ಕಾಯಿಲೆಯಿಂದ ಪಾರ್ವತಮ್ಮ ಸಜ್ಜನ(95) ನಿಧನ ಹೊಂದಿದ್ದಾರೆ. ಮನೆಯಲ್ಲೇ ಮತದಾನ ಮಾಡಲು ಪಾರ್ವತಮ್ಮ ಸಜ್ಜನ ನೋಂದಾಯಿಸಿಕೊಂಡಿದ್ದರು. ಈ ಹಿನ್ನೆಲೆ ಇಂದು ಚುನಾವಣಾ (Election Commission) ಸಿಬ್ಬಂದಿ ಮತ ಪಡೆಯಲು ಮನೆಗೆ ಆಗಮಿಸಿದ್ದ ವೇಳೆಯೇ ಮೃತಪಟ್ಟಿದ್ದಾರೆ.
ಮೇ 7ರಂದು 3ನೇ ಹಂತದ ಲೋಕಸಭಾ ಚುನಾವಣೆ ಹಿನ್ನೆಲೆ ಇಂದಿನಿಂದ ಮನೆಗೆ ತೆರಳಿ 85 ವರ್ಷ ಮೇಲ್ಪಟ್ಟ ವೃದ್ಧರು, ವಿಶೇಷ ಚೇತನರಿಗೆ ಮನೆಯಿಂದಲೇ ಮತದಾನಕ್ಕೆ ಚುನಾವಣಾ ಆಯೋಗ ಅವಕಾಶ ನೀಡಿದೆ.
ಮತದಾನ ಮಾಡಿ ಕೆಲವೇ ಕ್ಷಣಗಳಲ್ಲಿ ವೃದ್ಧೆ ಸಾವು
ಇತ್ತೀಚೆಗೆ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಸಾಸ್ತಾನ ಪಾಂಡೇಶ್ವರ ಚಡಗರ ಅಗ್ರಹಾರದ ನಿವಾಸಿಯಾಗಿದ್ದ ಪಿ.ಯಶೋಧಾ ನಾರಾಯಣ ಉಪಾಧ್ಯ (83) ಅವರು ಮನೆಯಲ್ಲಿ ಮತದಾನ ಮಾಡಿ ಕೆಲವೇ ಕ್ಷಣಗಳಲ್ಲಿ ಮೃತಪಟ್ಟಿದ್ದಂತಹ ಘಟನೆ ನಡೆದಿತ್ತು.
ಇದನ್ನೂ ಓದಿ: ಮತದಾನ ಮಾಡಿ ಕೆಲವೇ ಕ್ಷಣಗಳಲ್ಲಿ ಪ್ರಾಣ ಬಿಟ್ಟ ವಯೋವೃದ್ಧೆ
ಮತದಾನಕ್ಕೂ ಮುನ್ನ ಪಿ.ಯಶೋಧಾ ನಾರಾಯಣ ಉಪಾಧ್ಯ ಅವರಿಗೆ ಎದೆ ನೋವು ಕಾಣಿಸಿಕೊಂಡಿದೆ. ಆದರೂ ಅವರು ಮತದಾನ ಮಾಡಿ ಬಳಿಕ ಆಸ್ಪತ್ರೆಗೆ ತೆರಳಿದ್ದಾರೆ. ಆದರೆ ಚಿಕ್ಸತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ವಿಶೇಷ ಚೇತನರು, ಹಿರಿಯ ನಾಗರಿಕರಿಗೆ ಮನೆಯಲ್ಲಿಯೇ ಮತದಾನ ಮಾಡಲು ಚುನಾವಣಾ ಆಯೋಗ ಅವಕಾಶ ಕಲ್ಪಿಸಿರುವುದರಿಂದ ಹೀಗಾಗಿ ನಿವೃತ್ತ ಗ್ರಾಮ ಲೆಕ್ಕಾಧಿಕಾರಿ ದಿ.ನಾರಾಯಣ ಉಪಾಧ್ಯ ಅವರ ಪತ್ನಿ ಪಿ.ಯಶೋಧಾ ಅವರು ಮನೆಯಲ್ಲೆ ಮತದಾನ ಮಾಡಿದ್ದರು.
ಮದುವೆ ಮನೆಯಲ್ಲಿ ಮತದಾನ ಜಾಗೃತಿ
ದಾವಣಗೆರೆ: ಮದ್ವೆಯಲ್ಲಿಯೂ ಮತದಾನ ಜಾಗೃತಿ ವಿಶೇಷ ಕಾರ್ಯಕ್ರಮ ಮಾಡಲಾಗಿದೆ. ಮೇ 7 ರಂದು ತಪ್ಪದೇ ಮತದಾನ ಮಾಡಿ ಎಂದು ಮದುವೆಗೆ ಬಂದ ಸಂಬಂಧಿಕರಿಗೆ ವಧು- ವರ ವಿನಂತಿಸಿದ್ದಾರೆ. ಆ ಮೂಲಕ ರಾಮಕುಮಾರ-ತನುಜಾ ಜೋಡಿ ವಿಶೇಷ ರೀತಿಯಲ್ಲಿ ಮದುವೆ ಮಾಡಿಕೊಂಡಿದ್ದಾರೆ. ದಾವಣಗೆರೆ ನಗರದ ಎವಿಕೆ ಕಾಲೇಜು ರಸ್ತೆಯ ಅಕ್ಕ ಮಹಾದೇವಿ ಕಲ್ಯಾಣ ಮಂಟಪದಲ್ಲಿ ಮದುವೆ ನಡೆದಿದೆ.
ಇದನ್ನೂ ಓದಿ: ಲೋಕಸಭಾ ಚುನಾವಣೆ 2024: 14 ಲೋಕಸಭಾ ಕ್ಷೇತ್ರಗಳಲ್ಲಿ ಮಸ್ಟರಿಂಗ್, ಮತಯಂತ್ರ ವಿತರಣೆ
ದಾವಣಗೆರೆ ನಗರದ ಪಿಜೆ ಬಡಾವಣೆ ನಿವಾಸಿ ಮಂಗಳಾ- ಚಂದ್ರಶೇಖರ ಪುತ್ರ ರಾಮಕುಮಾರ ಹಾಗೂ ಪ್ರೇಮಾ – ನಿಂಗಪ್ಪ ಕರಿಗಾರ ದಂಪತಿಗಳ ಪುತ್ರಿ ತನುಜಾ ಮದುವೆಯಲ್ಲಿ ಮತದಾನ ಜಾಗೃತಿ ಮಾಡಲಾಗಿದೆ. ಮತದಾನ ಜಾಗೃತಿಗೆ ಜಿಲ್ಲಾ ಆಡಳಿತ ಸಹಕಾರ ನೀಡಲಾಗಿದೆ. ಮೇ 7 ರಂದು ನಡೆಯುವ ಮತದಾನದಲ್ಲಿ ಪಾಲ್ಗೊಳ್ಳುವಂತೆ ನವ ದಂಪತಿ ಹಾಗೂ ಸಂಬಂಧಿಕರು ಕೋರಿದ್ದಾರೆ.
ಮತ್ತಷ್ಟು ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.