ದೆಹಲಿಯಲ್ಲಿ ಧರಣಿ ಮಾಡುವ ರೈತರು ಭಯೋತ್ಪಾದಕರು, ಇವರಿಗೆ ಪಾಕ್ ಬೆಂಬಲ ಇದೆ: ಕೃಷಿ ಸಚಿವ ಬಿ.ಸಿ.ಪಾಟೀಲ್ ವಿವಾದಿತ ಹೇಳಿಕೆ
ದೆಹಲಿಯಲ್ಲಿ ಪ್ರತಿಭಟನೆ ಮಾಡುವ ರೈತರು ಸಂಪೂರ್ಣ ಭಯೋತ್ಪಾದಕರು. ಧರಣಿ ನಿರತ ರೈತರಿಗೆ ಪಾಕಿಸ್ತಾನ ಹಾಗೂ ಕಾಂಗ್ರೆಸ್ನವರ ಬೆಂಬಲವಿದೆ ಎಂದು ಬಿಸಿ ಪಾಟಿಲ್ ಆರೋಪಿಸಿದ್ದಾರೆ.
ಕೊಪ್ಪಳ: ಕೇಂದ್ರ ಸರ್ಕಾರ ಜಾರಿಗೆ ತರಲು ಮುಂದಾಗಿರುವ ಕೃಷಿ ತಿದ್ದುಪಡಿ ಕಾಯ್ದೆ ವಿರುದ್ಧ ರೈತರ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. ದೆಹಲಿಯ ಕೆಂಪುಕೋಟೆ ಮೇಲೆ ರೈತರ ಧ್ವಜ ಹಾರಾಡಿದೆ. ಈ ಮಧ್ಯೆ ಕೊಪ್ಪಳದಲ್ಲಿ ಕೃಷಿ ಸಚಿವ ಬಿ.ಸಿ. ಪಾಟೀಲ್ ವಿವಾದಿತ ಹೇಳಿಕೆ ನೀಡಿದ್ದು, ದೆಹಲಿಯಲ್ಲಿ ಧರಣಿ ಮಾಡುವ ರೈತರು ಭಯೋತ್ಪಾದಕರು ಎಂದು ಜರಿದಿದಿದ್ದಾರೆ.
ದೆಹಲಿಯಲ್ಲಿ ಪ್ರತಿಭಟನೆ ಮಾಡುವ ರೈತರು ಸಂಪೂರ್ಣ ಭಯೋತ್ಪಾದಕರು. ಧರಣಿ ನಿರತ ರೈತರಿಗೆ ಪಾಕಿಸ್ತಾನ ಹಾಗೂ ಕಾಂಗ್ರೆಸ್ನವರ ಬೆಂಬಲವಿದೆ. ರೈತರು ಎಂದಿಗೂ ಕಾನೂನು ಕೈಗೆ ತೆಗೆದುಕೊಂಡವರಲ್ಲ. ಆದರೆ, ದೆಹಲಿ ರೈತ ಪ್ರತಿಭಟನಾಕಾರರು ಕೆಂಪುಕೋಟೆ ಬಳಿ ಹೋಗಿ ಬಾವುಟ ಹಾರಿಸಿದ್ದಾರೆ. ಇದನ್ನು ನೋಡಿದಾಗ ಇವರಿಗೆ ಭಯೋತ್ಪಾದಕರ ಬೆಂಬಲ ಇರುವುದು ಅರ್ಥವಾಗುತ್ತದೆ. ಇದೊಂದು ಭಯೋತ್ಪಾದಕ ಕೃತ್ಯ ಎನ್ನುವ ಮೂಲಕ ವಿವಾದ ಮೈಮೇಲೆ ಎಳೆದುಕೊಂಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಜನಪ್ರಿಯತೆ ಕಂಡು ಕಾಂಗ್ರೆಸ್ನವರು ಹತಾಶರಾಗಿದ್ದಾರೆ. ಮೋದಿ ಸರ್ಕಾರ ಅಲುಗಾಡಿಸಲು ಸಾಧ್ಯವಿಲ್ಲ ಅಂದುಕೊಂಡವರು, ಭಯೋತ್ಪಾದಕರನ್ನು ಕರೆತಂದು ಅವರಿಗೆ ರೈತರ ಹೆಸರಿಟ್ಟು ಭಯೋತ್ಪಾದನೆ ಮಾಡಿಸಿದ್ದಾರೆ. ನಾವು ಇದನ್ನು ಖಂಡಿಸುತ್ತೇವೆ. ಯಾರೇ ಕಾನೂನು ಕೈಗೆ ತಗೆದುಕೊಂಡರು ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವದು ಎಂದು ಎಚ್ಚರಿಕೆ ನೀಡಿದರು.
Published On - 3:49 pm, Tue, 26 January 21