ಶೈಕ್ಷಣಿಕ ಪ್ರವಾಸದ ವೇಳೆ ವಿದ್ಯಾರ್ಥಿ ಸಾವು: ಮುಖ್ಯೋಪಾಧ್ಯಾಯ ಸೇರಿ 6 ಶಿಕ್ಷಕರು ಅಮಾನತು

ಕೊಪ್ಪಳ ಜಿಲ್ಲೆಯ ಗಾಣದಾಳ ಸರ್ಕಾರಿ ಶಾಲೆಯ ವಿದ್ಯಾರ್ಥಿ ಶೈಕ್ಷಣಿಕ ಪ್ರವಾಸದ ವೇಳೆ ಬಾವಿಯಲ್ಲಿ ಬಿದ್ದು ಮೃತಪಟ್ಟ ದುರ್ಘಟನೆಯಲ್ಲಿ ಆರು ಶಿಕ್ಷಕರನ್ನು ಅಮಾನತು ಮಾಡಲಾಗಿದೆ. ಶಿಕ್ಷಕರ ನಿರ್ಲಕ್ಷ್ಯದಿಂದ ವಿದ್ಯಾರ್ಥಿಯ ಸಾವು ಸಂಭವಿಸಿದೆ ಎಂದು ಆರೋಪಿಸಲಾಗಿದೆ. ಡಿಡಿಪಿಐ ಶ್ರೀಶೈಲ್ ಬಿರಾದರ್ ಅವರು ಅಮಾನತು ಆದೇಶ ಹೊರಡಿಸಿದ್ದಾರೆ.

ಶೈಕ್ಷಣಿಕ ಪ್ರವಾಸದ ವೇಳೆ ವಿದ್ಯಾರ್ಥಿ ಸಾವು: ಮುಖ್ಯೋಪಾಧ್ಯಾಯ ಸೇರಿ 6 ಶಿಕ್ಷಕರು ಅಮಾನತು
ಶೈಕ್ಷಣಿಕ ಪ್ರವಾಸದ ವೇಳೆ ವಿದ್ಯಾರ್ಥಿ ಸಾವು: ಮುಖ್ಯೋಪಾಧ್ಯಾಯ ಸೇರಿ 6 ಶಿಕ್ಷಕರು ಅಮಾನತು
Follow us
ಸಂಜಯ್ಯಾ ಚಿಕ್ಕಮಠ, ಕೊಪ್ಪಳ
| Updated By: ಗಂಗಾಧರ​ ಬ. ಸಾಬೋಜಿ

Updated on: Dec 22, 2024 | 2:55 PM

ಕೊಪ್ಪಳ, ಡಿಸೆಂಬರ್ 22: ಶೈಕ್ಷಣಿಕ ಪ್ರವಾಸಕ್ಕೆ ಹೋಗಿದ್ದ ವೇಳೆ ಮೂತ್ರ ವಿಸರ್ಜನೆಗೆ ತೆರಳಿದ್ದ ವಿದ್ಯಾರ್ಥಿ ತೆರೆದ ಬಾವಿಗೆ ಬಿದ್ದು ಮೃತಪಟ್ಟಿದ್ದ ಘಟನೆ ಭಟ್ಕಳದಲ್ಲಿ ನಡೆದಿತ್ತು. ಸದ್ಯ ಈ ಪ್ರಕರಣಕ್ಕೆ ಸಂಬಂಧಿಸಿದಂತೆ  ಕರ್ತವ್ಯಲೋಪವೆಸಗಿದ ಜಿಲ್ಲೆಯ ಯಲಬುರ್ಗಾ ತಾಲೂಕಿನ ಗಾಣದಾಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆರು ಶಿಕ್ಷಕರನ್ನು (teachers) ಅಮಾನತು ಮಾಡಿ ಕೊಪ್ಪಳ ಡಿಡಿಪಿಐ ಶ್ರೀಶೈಲ್ ಬಿರಾದರ್ ಆದೇಶ ಹೊರಡಿಸಿದ್ದಾರೆ.

ಬಾವಿಗೆ ಬಿದ್ದ 8 ತರಗತಿ ವಿದ್ಯಾರ್ಥಿ 

ಗಾಣಗಾಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ನೂರು ವಿದ್ಯಾರ್ಥಿಗಳು ಮತ್ತು ಹದಿಮೂರು ಶಿಕ್ಷಕರು ಡಿಸೆಂಬರ್ 18 ರಂದು ಶೈಕ್ಷಣಿಕ ಪ್ರವಾಸಕ್ಕೆ ಹೋಗಿದ್ದರು. ಆದರೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಮಾತ್ರೆಗಳನ್ನು ಖರೀದಿಸಲು ಬಸ್ ನಿಲ್ಲಿಸಿದಾಗ ಕೆಲ ವಿದ್ಯಾರ್ಥಿಗಳು ಮೂತ್ರ ವಿಸರ್ಜನೆಗೆ ಮೆಡಿಕಲ್ ಶಾಪ್​ ಹಿಂಭಾಗದಲ್ಲಿ ಹೋಗಿದ್ದರು. ಆದರೆ ಬಾವಿ ಇರುವುದು ಗೊತ್ತಾಗದೇ ನಿರುಪಾದಿ ಹರಿಜನ್ ಎಂಬ ವಿದ್ಯಾರ್ಥಿ ಬಾವಿಗೆ ಬಿದ್ದಿದ್ದ. ಎಂಟನೇ ತರಗತಿಯಲ್ಲಿ ಓದುತ್ತಿದ್ದ ನಿರುಪಾದಿ ಜೀವ ಉಳಿಸಲು ಪ್ರಯತ್ನಿಸಿದರು  ಫಲಪ್ರದವಾಗಿರಲಿಲ್ಲ.

ಇದನ್ನೂ ಓದಿ: ಉತ್ತರ ಕನ್ನಡದಲ್ಲಿ ಮತ್ತೊಂದು ದುರಂತ: ಪ್ರವಾಸಕ್ಕೆಂದು ಬಂದಿದ್ದ ಮತ್ತೋರ್ವ ವಿದ್ಯಾರ್ಥಿ ಸಾವು!

ಘಟನೆಗೆ ಸಂಬಂಧಿಸಿದಂತೆ ಕರ್ತವ್ಯಲೋಪ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಪ್ರಭಾರಿ ಮುಖ್ಯೋಪಾಧ್ಯಾಯ ಸೇರಿ ಆರು ಶಿಕ್ಷಕರನ್ನು ಅಮಾನತು ಮಾಡಲಾಗಿದೆ. ಡಿಸೆಂಬರ್ 18ರ ರಾತ್ರಿ ಗಾಣದಾಳದಿಂದ ಎರಡು ಬಸ್​​ಗಳಲ್ಲಿ ಹೊರಟಿದ್ದ ವಿದ್ಯಾರ್ಥಿಗಳು ಡಿಸೆಂಬರ್ 19ರ ಬೆಳಿಗ್ಗೆ ಜೋಗ ಜಲಪಾತ ವೀಕ್ಷಿಸಿಕೊಂಡು ಅರಬೈಲ್ ಘಟ್ಟದ ಮೂಲಕ ಹೊನ್ನಾವರ ಮಾರ್ಗವಾಗಿ ಕೊಲ್ಲೂರಿಗೆ ತೆರಳುತ್ತಿದ್ದರು.

ಪ್ರಯಾಣದ ಮಧ್ಯ ಭಟ್ಕಳ ತಾಲೂಕು ಪಂಚಾಯತ್ ಕಚೇರಿ ಮುಂಭಾಗದ ಔಷಧಿ ಅಂಗಡಿಯ ಮುಂದೆ ವಾಹನ ನಿಲ್ಲಿಸಲಾಗಿತ್ತು. ಈ ವೇಳೆ ಕೆಲವು ಬಾಲಕರು ಮೂತ್ರ ವಿಸರ್ಜನೆಗಾಗಿ ಔಷಧಿ ಅಂಗಡಿ ಹಿಂದಿರುವ ಖಾಲಿ ಜಾಗಕ್ಕೆ ತೆರಳಿದ್ದಾರೆ. ಆದರೆ ಕತ್ತಲಾಗಿದ್ದರಿಂದ ವಿದ್ಯಾರ್ಥಿಗೆ ತಡೆಗೋಡೆ ಇಲ್ಲದ ಬಾವಿ ಕಂಡಿಲ್ಲ. ಅವಸರಲ್ಲಿ ಹೋಗಿ ಬಾವಿಯೊಳಗೆ ಬಿದಿದ್ದ.

ಇದನ್ನೂ ಓದಿ: ಶೈಕ್ಷಣಿಕ ಪ್ರವಾಸಕ್ಕೆ ವಿಮಾನದಲ್ಲಿ ಹೋದ ಕೊಪ್ಪಳದ ಸರ್ಕಾರಿ ಶಾಲೆ ಮಕ್ಕಳು

ಆತ ಬಾವಿಗೆ ಬಿದ್ದ ತಕ್ಷಣ ಜೊತೆಗಿದ್ದ ವಿದ್ಯಾರ್ಥಿಗಳು ಕೂಗಿಕೊಂಡಿದ್ದಾರೆ. ಕೂಡಲೇ ಸ್ಥಳೀಯರು ಸ್ಥಳಕ್ಕೆ ದೌಡಾಯಿಸಿದ್ದು, ಅಗ್ನಿ ಶಾಮಕ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿಗಳು ಬಾವಿಗೆ ಬಿದ್ದಿದ್ದ ವಿದ್ಯಾರ್ಥಿಯನ್ನು ಮೇಲಕ್ಕೆ ಎತ್ತಿದ್ದಾರೆ. ಆದರೆ ಅಷ್ಟರಲ್ಲಿ ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿ ಕೊನೆಯುಸಿರೆಳೆದಿದ್ದ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ರಥೋತ್ಸವದ ವೇಳೆ ವಿಟ್ಲದಲ್ಲಿ ದೇವರ ಮೂರ್ತಿ, ಅರ್ಚಕರಿಗೆ ಬಡಿದ ಡ್ರೋನ್​
ರಥೋತ್ಸವದ ವೇಳೆ ವಿಟ್ಲದಲ್ಲಿ ದೇವರ ಮೂರ್ತಿ, ಅರ್ಚಕರಿಗೆ ಬಡಿದ ಡ್ರೋನ್​
ಜಿಂಕೆಯ ವೇಗ, ಹದ್ದಿನ ಕಣ್ಣು... ನಿತೀಶ್ ಕುಮಾರ್ ರೆಡ್ಡಿ ಸೂಪರ್ ಕ್ಯಾಚ್
ಜಿಂಕೆಯ ವೇಗ, ಹದ್ದಿನ ಕಣ್ಣು... ನಿತೀಶ್ ಕುಮಾರ್ ರೆಡ್ಡಿ ಸೂಪರ್ ಕ್ಯಾಚ್
ಬಿಗ್ ಬಾಸ್ ಮನೆಗೆ ನುಗ್ಗಿದ ಅಭಿಮಾನಿಗಳು; ಭಯಬಿದ್ದ ಸ್ಪರ್ಧಿಗಳು
ಬಿಗ್ ಬಾಸ್ ಮನೆಗೆ ನುಗ್ಗಿದ ಅಭಿಮಾನಿಗಳು; ಭಯಬಿದ್ದ ಸ್ಪರ್ಧಿಗಳು
Hanuman Chalisa: ಹನುಮಾನ್ ಚಾಲಿಸಾದ ವಿಶೇಷ ಹಾಗೂ ಮಹತ್ವ
Hanuman Chalisa: ಹನುಮಾನ್ ಚಾಲಿಸಾದ ವಿಶೇಷ ಹಾಗೂ ಮಹತ್ವ
ರವಿ ಮಕರ ರಾಶಿಯಲ್ಲಿ, ಚಂದ್ರ ತುಲಾ ರಾಶಿಯಲ್ಲಿ ಸಂಚಾರ: ದಿನ ಭವಿಷ್ಯ ಇಲ್ಲಿದೆ
ರವಿ ಮಕರ ರಾಶಿಯಲ್ಲಿ, ಚಂದ್ರ ತುಲಾ ರಾಶಿಯಲ್ಲಿ ಸಂಚಾರ: ದಿನ ಭವಿಷ್ಯ ಇಲ್ಲಿದೆ
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ಸಂಜು; ವಿಡಿಯೋ
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ಸಂಜು; ವಿಡಿಯೋ
ಅತಿ ಎತ್ತರದ ಮಾನವ ಪಿರಮಿಡ್ ನಿರ್ಮಿಸಿ ಭಾರತೀಯ ಸೇನೆಯಿಂದ ವಿಶ್ವ ದಾಖಲೆ
ಅತಿ ಎತ್ತರದ ಮಾನವ ಪಿರಮಿಡ್ ನಿರ್ಮಿಸಿ ಭಾರತೀಯ ಸೇನೆಯಿಂದ ವಿಶ್ವ ದಾಖಲೆ
ಕುಡಿದ ನಶೆಯಲ್ಲಿ ಏನೇನೋ ಮಾತನಾಡಿದ ಎನ್ನುವ ಕಾರಣಕ್ಕೆ ಹೊಡೆದು ಕೊಂದರು!
ಕುಡಿದ ನಶೆಯಲ್ಲಿ ಏನೇನೋ ಮಾತನಾಡಿದ ಎನ್ನುವ ಕಾರಣಕ್ಕೆ ಹೊಡೆದು ಕೊಂದರು!
ಶ್ರೀರಾಮುಲು-ಜನಾರ್ಧನ ರೆಡ್ಡಿ ಜಗಳದ ಹಿನ್ನೆಲೆಯಲ್ಲಿ ಹಿರಿಯರ ಸಭೆ?
ಶ್ರೀರಾಮುಲು-ಜನಾರ್ಧನ ರೆಡ್ಡಿ ಜಗಳದ ಹಿನ್ನೆಲೆಯಲ್ಲಿ ಹಿರಿಯರ ಸಭೆ?
ಯಾರು ಬಿಗ್ ಬಾಸ್ ಗೆಲ್ತಾರೆ ಅಂತ ನಾನು ಹೇಳಲ್ಲ: ಪ್ರಥಮ್ ಖಡಕ್ ಮಾತು
ಯಾರು ಬಿಗ್ ಬಾಸ್ ಗೆಲ್ತಾರೆ ಅಂತ ನಾನು ಹೇಳಲ್ಲ: ಪ್ರಥಮ್ ಖಡಕ್ ಮಾತು