AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Selling Kidney to Lead Life ಜೀವನ ನಿರ್ವಹಣೆಗೆ ಕಿಡ್ನಿ ಮಾರಲು ಮುಂದಾದ ಸಾರಿಗೆ ನೌಕರ …

ಕಳೆದ ನಾಲ್ಕು ವರ್ಷದಿಂದ ಗಂಗಾವತಿ ಡಿಪೋದಲ್ಲಿ ನಿರ್ವಾಕಹನಾಗಿ ಕೆಲಸ ಮಾಡ್ತಿರೋ ಹನುಮಂತಪ್ಪ ಜೀವನ ನಿರ್ವಹಣೆಗೆ ಕಿಡ್ನಿ ಮಾರಲು ಮುಂದಾಗಿದ್ದಾರೆ. ಮನೆ ಬಾಡಿಗೆ, ರೇಷನ್ ತರಲು ಹಣ ಇಲ್ಲದೆ ಈ ನಿರ್ಧಾರ ಕೈಗೊಂಡಿದ್ದಾರೆ. ಈ ಬಗ್ಗೆ ಫೇಸ್​ಬುಕ್​ನಲ್ಲಿ ಪೋಸ್ಟ್ ಹಾಕಿಕೊಂಡಿದ್ದಾರೆ.

Selling Kidney to Lead Life ಜೀವನ ನಿರ್ವಹಣೆಗೆ ಕಿಡ್ನಿ ಮಾರಲು ಮುಂದಾದ ಸಾರಿಗೆ ನೌಕರ ...
ಹನುಮಂತಪ್ಪ ಮತ್ತು ಕುಟುಂಬ
ಆಯೇಷಾ ಬಾನು
|

Updated on: Feb 10, 2021 | 2:34 PM

Share

ಕೊಪ್ಪಳ: ಕರ್ನಾಟಕ ಸಾರಿಗೆ ಇಲಾಖೆ ದಿವಾಳಿ ಎದ್ದಿದೆ. ನೌಕರರಂತೂ ಪೂರ್ಣ ಸಂಬಳವಿಲ್ಲದೆ ಬರ್ಬಾದ್ ಆಗಿದ್ದಾರೆ. ಅವರ ಸ್ಥಿತಿ ಹೇಗಿದೆ ಎಂಬ ಬಗ್ಗೆ ತಾಜಾ ಉದಾಹರಣೆ ಇಲ್ಲಿದೆ. ಕೊಪ್ಪಳ ಜಿಲ್ಲೆಯ ಗಂಗಾವತಿ ವಾಯವ್ಯ ಸಾರಿಗೆ ಡಿಪೋ ನಿರ್ವಾಹಕ ಹನುಮಂತಪ್ಪನ ಪರಿಸ್ಥಿತಿ ಆ ದೇವರಿಗೇ ಪ್ರೀತಿ ಎಂಬಂತಿದೆ. ಏಕೆಂದರೆ ಈತ ಮನೆಯ ಬಾಡಿಗೆ ಕಟ್ಟಲೂ ಹಣವಿಲ್ಲದೆ ಕುಳಿತಿದ್ದಾನೆ. ಒಂದು ಹೊತ್ತಿನ ಊಟಕ್ಕೂ ಪರಿತಪಿಸುವಂತಹ ಪರಿಸ್ಥಿತಿ ಈತನ ಕುಟುಂಬಕ್ಕೆ ಬಂದಿದೆ. ಹೀಗಾಗಿ ಈತ ಕೈಗೊಂಡ ನಿರ್ಧಾರವೆಂತದು ಗೊತ್ತಾ? ಈತ ತನ್ನ ಕಿಡ್ನಿ ಮಾರಿ ಜೀವನ ನಿರ್ವಾಹಣೆಗೆ ಮುಂದಾಗಿದ್ದಾನೆ.

ಹೌದು ಕಳೆದ ನಾಲ್ಕು ವರ್ಷದಿಂದ ಗಂಗಾವತಿ ಡಿಪೋದಲ್ಲಿ ನಿರ್ವಾಹಕನಾಗಿ ಕೆಲಸ ಮಾಡ್ತಿರೋ ಹನುಮಂತಪ್ಪ ಜೀವನ ನಿರ್ವಹಣೆಗೆ ಕಿಡ್ನಿ ಮಾರಲು ಮುಂದಾಗಿದ್ದಾರೆ. ಮನೆ ಬಾಡಿಗೆ, ರೇಷನ್ ತರಲು ಹಣ ಇಲ್ಲದೆ ಈ ನಿರ್ಧಾರ ಕೈಗೊಂಡಿದ್ದಾರೆ. ಈ ಬಗ್ಗೆ ಫೇಸ್​ಬುಕ್​ನಲ್ಲಿ ಪೋಸ್ಟ್ ಹಾಕಿಕೊಂಡಿದ್ದು ತನ್ನ ಪರಿಸ್ಥಿತಿಯನ್ನು ವ್ಯಕ್ತಪಡಿಸಿದ್ದಾನೆ. ಮೂಲತಃ ರಾಯಚೂರು ಜಿಲ್ಲೆಯವರಾಗಿರುವ ಹನುಮಂತಪ್ಪ 3 ತಿಂಗಳಿಂದ ಸಂಬಳ ಇಲ್ಲದೆ ಜೀವನ ನಿರ್ವಹಣೆಗೆ ಪರದಾಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ.

ಡಿಸೆಂಬರ್​ ತಿಂಗಳಲ್ಲಿ ಕೇವಲ ಅರ್ಧ ಸಂಬಳ ಮಾತ್ರ ಸಾರಿಗೆ ಇಲಾಖೆ ನೀಡಿತ್ತು. ಹೀಗಾಗಿ ಸಾರಿಗೆ ಸಿಬ್ಬಂದಿ ಜೀವನ ನಡೆಸುವುದೇ ಕಷ್ಟಕರವಾಗಿದೆ. ಇದಲ್ಲದೆ ಸಾರಿಗೆ ನೌಕರರು ಸಹ ಫೆಬ್ರವರಿ 10ರಂದು ಸಾರಿಗೆ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದರು. ಆದ್ರೆ ಡಿಸಿಎಂ ಲಕ್ಷ್ಮಣ ಸವದಿ ನೌಕರರ ಮನವೊಲಿಸಿ ಪ್ರತಿಭಟನೆಯನ್ನು ಹಿಂಪಡೆಯುವಂತೆ ಮಾಡಿದ್ರು. ಆದ್ರೆ ನೌಕರರ ಕಷ್ಟ ನೌಕರರಿಗೆ ಮಾತ್ರ ಗೊತ್ತು. ತುತ್ತು ಜನ್ನಕ್ಕೂ ಪರದಾಡುತ್ತ ಜೀವನ ನಡೆಸುವುದು ಕಷ್ಟಕರವಾಗಿದೆ.

Koppal Selling kidney to lead Life

ಹನುಮಂತಪ್ಪರ ಫೇಸ್​ಬುಕ್​ ಪೋಸ್ಟ್

Bus strike in Bengaluru ಸರ್ಕಾರದ ವಿರುದ್ಧ ಮತ್ತೆ ಸಿಡಿದೇಳಲಿದ್ದಾರಾ ಸಾರಿಗೆ ಸಿಬ್ಬಂದಿ? ನಾಳೆ ಸಾರಿಗೆ ನೌಕರರಿಂದ ಪ್ರತಿಭಟನೆ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್