AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಂಗಭದ್ರಾ ಸೇತುವೆ ಮೇಲಿಂದ ಕೆಳಗೆ ಬಿದ್ದ ಟ್ರ್ಯಾಕ್ಟರ್: 6 ಮಂದಿ ದಾರುಣ ಸಾವು, ಹಲವರ ಸ್ಥಿತಿ ಗಂಭೀರ

ಮುನಿರಾಬಾದ್ ಬಳಿ ತುಂಗಭದ್ರಾ ಸೇತುವೆಯಿಂದ ಟ್ರ್ಯಾಕ್ಟರ್ ಕೆಳಗೆ ಬಿದ್ದು 6 ಮಂದಿ ಸಾವನ್ನಪ್ಪಿದ್ದಾರೆ. ಹಿಂಬದಿಯಿಂದ ಟ್ಯಾಂಕರ್ ಗುದ್ದಿದ ಪರಿಣಾಮ ದುರಂತ ಸಂಭವಿಸಿದ್ದು, ಮೃತರೆಲ್ಲರೂ ಕೂಡ್ಲಿಗಿ ತಾಲೂಕಿನ ಮರ್ಲಾಯನಹಳ್ಳಿಯ ಒಂದೇ ಕುಟುಂಬದವರು ಎನ್ನಲಾಗಿದೆ. ಘಟನೆಯಲ್ಲಿ 10ಕ್ಕೂ ಹೆಚ್ಚುಮಂದಿ ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ತುಂಗಭದ್ರಾ ಸೇತುವೆ ಮೇಲಿಂದ ಕೆಳಗೆ ಬಿದ್ದ ಟ್ರ್ಯಾಕ್ಟರ್: 6 ಮಂದಿ ದಾರುಣ ಸಾವು, ಹಲವರ ಸ್ಥಿತಿ ಗಂಭೀರ
ಸೇತುವೆ ಮೇಲಿಂದ ಕೆಳಗೆ ಬಿದ್ದ ಟ್ರ್ಯಾಕ್ಟರ್Image Credit source: Tv9 Kannada
ಶಿವಕುಮಾರ್ ಪತ್ತಾರ್
| Edited By: |

Updated on:May 15, 2026 | 6:00 PM

Share

ಕೊಪ್ಪಳ, ಮೇ 15: ಸೇತುವೆ ಮೇಲಿಂದ ಟ್ರ್ಯಾಕ್ಟರ್‌ ಕೆಳಗೆಬಿದ್ದ ಪರಿಣಾಮ 6 ಜನರು ದುರ್ಮಣ ಹೊಂದಿರುವ ಘಟನೆ ಕೊಪ್ಪಳ ತಾಲೂಕಿನ ಮುನಿರಾಬಾದ್ ಬಳಿ ನಡೆದಿದೆ.   ಮುನಿರಾಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ತುಂಗಭದ್ರಾ ಸೇತುವೆ ಮೇಲಿಂದ ಟ್ರ್ಯಾಕ್ಟರ್ ಕೆಳಗೆಬಿದ್ದು ದುರಂತ ಸಂಭವಿಸಿದ್ದು, ಸ್ಥಳದಲ್ಲೇ ಕೆಂಚಪ್ಪ (35), ಮಹಾಂತೇಶ್ (18) ಭರತ್ (01) ಸವಿತಾ (12) ಮಾರೇಶ್ ಹಾಗೂ ಗೌರಮ್ಮ ಎನ್ನುವರು ಮೃತಪಟ್ಟಿದ್ದಾರೆ. ಇನ್ನು ಘಟನೆಯಲ್ಲಿ ಗಾಯಗೊಂಡಿರುವ ಹತ್ತಕ್ಕೂ ಹೆಚ್ಚು ಜನರನ್ನು ಹೊಸಪೇಟೆ ಹಾಗೂ ಕೊಪ್ಪಳ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.

ಮುಖ್ಯಾಂಶಗಳು

  • ಮುನಿರಾಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಭೀಕರ ಅಪಘಾತ
  • ಟ್ಯಾಂಕರ್​​ ಗುದ್ದಿದ ಪರಿಣಾಮ ಸೇತುವೆಯಿಂದ ಕೆಳಗೆ ಬಿದ್ದ ಟ್ರ್ಯಾಕ್ಟರ್​​
  • ಮಗು ಸೇರಿ ಆರು ಮಂದಿ ದಾರುಣ ಸಾವು, ಹಲವರ ಸ್ಥಿತಿ ಗಂಭೀರ

ಟ್ಯಾಂಕರ್​​ ಗುದ್ದಿದ ರಭಸಕ್ಕೆ ನಡೆದ ದುರಂತ

ಹುಲಿಗೆಮ್ಮ ಜಾತ್ರೆಗೆ ತೆರಳುತ್ತಿರುವಾಗ  ಟ್ರ್ಯಾಕ್ಟರ್​​ಗೆ ಹಿಂಬದಿಯಿಂದ ಟ್ಯಾಂಕರ್​ ಗುದ್ದಿದೆ. ಪರಿಣಾಮ ಟ್ರ್ಯಾಕ್ಟರ್ ನಿಯಂತ್ರಣ ಕಳೆದುಕೊಂಡು ಸೇತುವೆ ಮೇಲಿಂದ ಕೆಳಕ್ಕೆ ಬಿದ್ದಿದೆ. ಮೃತರೆಲ್ಲರೂ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಮರ್ಲಾಯನಹಳ್ಳಿ ಗ್ರಾಮದವರು ಎಂಬುದು ತಿಳಿದುಬಂದಿದೆ.  ಮೃತದೇಹಗಳನ್ನು ಹೊಸಪೇಟೆ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಗಾಯಾಳುಗಳನ್ನು ಹೊಸಪೇಟೆ ಮತ್ತು ಕೊಪ್ಪಳ ಆಸ್ಪತ್ರೆಗಳಿಗೆ ರವಾನಿಸಲಾಗಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ.

ಇದನ್ನೂ ಓದಿ: ಗಂಗಾವತಿ ಬಿಜೆಪಿ ಮುಖಂಡನ ಹತ್ಯೆ ಪ್ರಕರಣ; ಆರು ಜನ ಹಂತಕರಿಗೆ ಗಲ್ಲು ಶಿಕ್ಷೆ

ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

ಅಪಘಾತದಲ್ಲಿ ಮೃತಪಟ್ಟವರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಹೊಸಪೇಟೆ ಆಸ್ಪತ್ರೆಯ ಶವಾಗಾರದ ಎದುರು ಮನೆಯವರನ್ನು ಕಳೆದುಕೊಂಡು ತಂದೆ, ಮಗನ ಆಕ್ರಂದನ ಹೇಳತೀರದಾಗಿದೆ. ಶವಾಗಾರದ ಎದುರು ಒಬ್ಬರಿಗೊಬ್ಬರು ತಬ್ಬಿಕೊಂಡು ರೋದಿಸುತ್ತಂತಿರುವ ದೃಶ್ಯ ನೋಡುಗರ ಕಣ್ಣಂಚಲ್ಲೂ ನೀರು ತರಿಸುವಂತಿದೆ. ಹೊಸಪೇಟೆ ಸರ್ಕಾರಿ ಆಸ್ಪತ್ರೆ ಶವಾಗಾರಕ್ಕೆ ಕೊಪ್ಪಳ ಎಸ್ಪಿ ಎಲ್.‌ ಅರಸಿದ್ದಿ ಭೇಟಿ ನೀಡಿದ್ದು, ಗಾಯಾಳುಗಳಿಂದ ಮಾಹಿತಿ ಪಡೆದಿದ್ದಾರೆ.

ಮೃತರ ಕುಟುಂಬಗಳಿಗೆ ಪರಿಹಾರ ಘೋಷಣೆ

ಸಿಎಂ ಪರಿಹಾರ ನಿಧಿಯಿಂದ ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಲಾಗಿದೆ. ಅಪಘಾತದ ಬಗ್ಗೆ ಕರೆ ಮಾಡಿ ಸಿಎಂ ಜತೆ ಮಾತನಾಡಿದ ಸಂಸದ ತುಕಾರಾಂ, ಅವರ ಒಪ್ಪಿಗೆಯ ಮೇರೆಗೆ ಪರಿಹಾರ ಘೋಷಿಸಿದ್ದಾರೆ. ಅಲ್ಲದೆ ಗಾಯಾಳುಗಳಿಗೆ ಸಂಸದರ ಅನುದಾನದಡಿ ಪರಿಹಾರ ನೀಡ್ತೇನೆ ಎಂದವರು ತಿಳಿಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 4:24 pm, Fri, 15 May 26

Follow Us
ಶಿವಕುಮಾರ್ ಪತ್ತಾರ್
ಶಿವಕುಮಾರ್ ಪತ್ತಾರ್

ಶಿವಕುಮಾರ್ ಎಸ್ ಪತ್ತಾರ.. ಹುಟ್ಟಿದ್ದು ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಕೊಪ್ಪಳದಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಹುಬ್ಬಳ್ಳಿಗೆ ಬಂದು ನಿಂತಿದೆ.ಈ ಮದ್ಯೆ ರಾಯಚೂರು,ಬಳ್ಳಾರಿ,ವರದಿಗಾರನಾಗಿ ಕೆಲಸ ಮಾಡಿದ್ದೇನೆ.ರಹಸ್ಯ ಕಾರ್ಯಾಚರಣೆ ನನಗಿಷ್ಟ.ಟಿವಿ9 ನಲ್ಲಿ ಕೆಲ ರಹಸ್ಯ ಕಾರ್ಯಾಚರಣೆಗಳ ವರದಿಯನ್ನು ಮಾಡಿದ್ದೇನೆ.ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ
ಮುಸ್ಲಿಂ ಮತದಾರರ ಹೆಸರು ಡಿಲೀಟ್ ಆರೋಪ
ಮುಸ್ಲಿಂ ಮತದಾರರ ಹೆಸರು ಡಿಲೀಟ್ ಆರೋಪ
ಡೀಸೆಲ್​ ಟ್ಯಾಂಕರ್​​ನಲ್ಲಿ ತಾಂತ್ರಿಕ ದೋಷ, ಬಸ್​ ಸಂಚಾರ ಸ್ಥಗಿತ
ಡೀಸೆಲ್​ ಟ್ಯಾಂಕರ್​​ನಲ್ಲಿ ತಾಂತ್ರಿಕ ದೋಷ, ಬಸ್​ ಸಂಚಾರ ಸ್ಥಗಿತ
ಮಂತ್ರಿಗಳ ಮೇಲೆ ರಹಸ್ಯ ಕ್ಯಾಮೆರಾ ಕಣ್ಣು: ಸಚಿವರನ್ನ ಎಚ್ಚರಿಸಿದ ಡಿಕೆಶಿ
ಮಂತ್ರಿಗಳ ಮೇಲೆ ರಹಸ್ಯ ಕ್ಯಾಮೆರಾ ಕಣ್ಣು: ಸಚಿವರನ್ನ ಎಚ್ಚರಿಸಿದ ಡಿಕೆಶಿ
'ಸಿಎಂ ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್ ಮಾಡಿದ್ದರು'
'ಸಿಎಂ ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್ ಮಾಡಿದ್ದರು'
ಕಬ್ಬು ಬೆಳೆಗಾರರ ಮೀಟಿಂಗ್‌ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೀಗಂದ್ರು
ಕಬ್ಬು ಬೆಳೆಗಾರರ ಮೀಟಿಂಗ್‌ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೀಗಂದ್ರು
ಸಾರಿಗೆ ನೌಕರರಿಂದ ಮತ್ತೆ ಪ್ರತಿಭಟನೆ: ವೇತನ ಪರಿಷ್ಕರಣೆಗೆ ಆಗ್ರಹ
ಸಾರಿಗೆ ನೌಕರರಿಂದ ಮತ್ತೆ ಪ್ರತಿಭಟನೆ: ವೇತನ ಪರಿಷ್ಕರಣೆಗೆ ಆಗ್ರಹ
ಮೈಸೂರು: ಚಾಮುಂಡೇಶ್ವರಿ ದರ್ಶನ ಪಡೆದ ತೆಲುಗು ನಟ ಮಂಚು ಮನೋಜ್
ಮೈಸೂರು: ಚಾಮುಂಡೇಶ್ವರಿ ದರ್ಶನ ಪಡೆದ ತೆಲುಗು ನಟ ಮಂಚು ಮನೋಜ್
ಗಾಲ್ಫ್​​ನಲ್ಲಿ ಚಿನ್ನದ ಪದಕ ವಿಜೇತೆ ಪ್ರಣವಿ​ಗೆ ಅದ್ದೂರಿ ಸ್ವಾಗತ
ಗಾಲ್ಫ್​​ನಲ್ಲಿ ಚಿನ್ನದ ಪದಕ ವಿಜೇತೆ ಪ್ರಣವಿ​ಗೆ ಅದ್ದೂರಿ ಸ್ವಾಗತ