Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಪ್ಪಳ: ಮನೆ ಮುಂದಿನ ಕಾಲುವೆಗೆ ಬಿದ್ದು 14 ತಿಂಗಳ ಮಗು ಸಾವು

ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ ಬಸವಣ್ಣ ಕ್ಯಾಂಪ್​ನಲ್ಲಿ ಮನೆ ಮುಂದೆ ಆಟವಾಡುತ್ತಿದ್ದ ವೇಳೆ 14 ತಿಂಗಳ ಗಂಡು ಮಗು ಕಾಲುವೆಗೆ ಬಿದ್ದು ಸಾವನ್ನಪ್ಪಿದೆ. ಈ ಕುರಿತು ಕಾರಟಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಕೊಪ್ಪಳ: ಮನೆ ಮುಂದಿನ ಕಾಲುವೆಗೆ ಬಿದ್ದು 14 ತಿಂಗಳ ಮಗು ಸಾವು
ಸಾಂದರ್ಭಿಕ ಚಿತ್ರ
Follow us
ದತ್ತಾತ್ರೇಯ ಪಾಟೀಲ, ಕಲಬುರಗಿ
| Updated By: ಕಿರಣ್ ಹನುಮಂತ್​ ಮಾದಾರ್

Updated on:Oct 24, 2023 | 8:29 PM

ಕೊಪ್ಪಳ, ಅ.24: ಮನೆ ಮುಂದಿನ ಕಾಲುವೆಗೆ ಬಿದ್ದು 14 ತಿಂಗಳ ಗಂಡು ಮಗು ಸಾವನ್ನಪ್ಪಿದ ಧಾರುಣ ಘಟನೆ ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ ಬಸವಣ್ಣ ಕ್ಯಾಂಪ್​ನಲ್ಲಿ ನಡೆದಿದೆ. ವಿಜಯೇಂದ್ರ ಮೃತ ಮಗು. ಶಿವಾನಂದ ಹಾಗೂ ಶಿಲ್ಪಾ ದಂಪತಿಯ ಮಗು ಇದಾಗಿದ್ದು, ಮನೆ ಮುಂದೆ ಆಟವಾಡುತ್ತಿದ್ದ ವೇಳೆ ಕಾಲುವೆಗೆ ಬಿದ್ದು ಸಾವನ್ನಪ್ಪಿದೆ. ಮಗುವನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಈ ಕುರಿತು ಕಾರಟಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ನದಿಯಲ್ಲಿ ಈಜಲು ಹೋಗಿ ಅಪ್ರಾಪ್ತ ಬಾಲಕ ಸಾವು

ಹಾವೇರಿ: ಜಿಲ್ಲೆಯ ಸವಣೂರು ತಾಲ್ಲೂಕಿನ ಕಳಸೂರು ಗ್ರಾಮದಲ್ಲಿ ನದಿಯಲ್ಲಿ ಈಜಲು ಹೋಗಿದ್ದ ಅಪ್ರಾಪ್ತ ಬಾಲಕ, ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ನಡೆದಿದೆ. ಕಳಸೂರು ಗ್ರಾಮದ ಅಮೋಘ ಹೊಸಮಣಿ(17) ಮೃತ ರ್ದುದೈವಿ. ಇನ್ನು ಇತ ವರದಾ ನದಿಯಲ್ಲಿ ಸ್ನೇಹಿತರೊಂದಿಗೆ ಸ್ನಾನ ಮಾಡುವ ವೇಳೆ ಈ ದುರ್ಘಟನೆ ನಡೆದಿದೆ. ಈ ಕುರಿತು ಸವಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಇದನ್ನೂ ಓದಿ:ಉತ್ತರ ಪ್ರದೇಶ: ಮಿರ್ಜಾಪುರದಲ್ಲಿ ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಬಸ್ ಪಲ್ಟಿಯಾಗಿ ಇಬ್ಬರು ಸಾವು, 15 ಮಂದಿಗೆ ಗಾಯ

ನೀರಿನಲ್ಲಿ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿ ಶವ ಪತ್ತೆ

ಹುಬ್ಬಳ್ಳಿ: ನಗರದ ಜನತಾ ಬಜಾರ್​​​ ಕಟ್ಟಡದ ನಿಂತಿರುವ ನೀರಿನಲ್ಲಿ ವ್ಯಕ್ತಿ ಶವ ಪತ್ತೆಯಾಗಿದೆ. ಮೃತನ ಗುರುತು ಪತ್ತೆ ಹಚ್ಚಲಾರದಷ್ಟು ಶವ ಕೊಳೆತು ಹೋಗಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಈ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದು, ಶವವನ್ನು ಕಿಮ್ಸ್ ಶವಾಗಾರಕ್ಕೆ ಸಾಗಿಸಲಾಗಿದೆ. ಈ ಕುರಿತು ಉಪ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:28 pm, Tue, 24 October 23

ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್
ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ
ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ
ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್
ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್