ಕೊಪ್ಪಳ, ಅ.24: ಮನೆ ಮುಂದಿನ ಕಾಲುವೆಗೆ ಬಿದ್ದು 14 ತಿಂಗಳ ಗಂಡು ಮಗು ಸಾವನ್ನಪ್ಪಿದ ಧಾರುಣ ಘಟನೆ ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ ಬಸವಣ್ಣ ಕ್ಯಾಂಪ್ನಲ್ಲಿ ನಡೆದಿದೆ. ವಿಜಯೇಂದ್ರ ಮೃತ ಮಗು. ಶಿವಾನಂದ ಹಾಗೂ ಶಿಲ್ಪಾ ದಂಪತಿಯ ಮಗು ಇದಾಗಿದ್ದು, ಮನೆ ಮುಂದೆ ಆಟವಾಡುತ್ತಿದ್ದ ವೇಳೆ ಕಾಲುವೆಗೆ ಬಿದ್ದು ಸಾವನ್ನಪ್ಪಿದೆ. ಮಗುವನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಈ ಕುರಿತು ಕಾರಟಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಹಾವೇರಿ: ಜಿಲ್ಲೆಯ ಸವಣೂರು ತಾಲ್ಲೂಕಿನ ಕಳಸೂರು ಗ್ರಾಮದಲ್ಲಿ ನದಿಯಲ್ಲಿ ಈಜಲು ಹೋಗಿದ್ದ ಅಪ್ರಾಪ್ತ ಬಾಲಕ, ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ನಡೆದಿದೆ. ಕಳಸೂರು ಗ್ರಾಮದ ಅಮೋಘ ಹೊಸಮಣಿ(17) ಮೃತ ರ್ದುದೈವಿ. ಇನ್ನು ಇತ ವರದಾ ನದಿಯಲ್ಲಿ ಸ್ನೇಹಿತರೊಂದಿಗೆ ಸ್ನಾನ ಮಾಡುವ ವೇಳೆ ಈ ದುರ್ಘಟನೆ ನಡೆದಿದೆ. ಈ ಕುರಿತು ಸವಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ಹುಬ್ಬಳ್ಳಿ: ನಗರದ ಜನತಾ ಬಜಾರ್ ಕಟ್ಟಡದ ನಿಂತಿರುವ ನೀರಿನಲ್ಲಿ ವ್ಯಕ್ತಿ ಶವ ಪತ್ತೆಯಾಗಿದೆ. ಮೃತನ ಗುರುತು ಪತ್ತೆ ಹಚ್ಚಲಾರದಷ್ಟು ಶವ ಕೊಳೆತು ಹೋಗಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಈ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದು, ಶವವನ್ನು ಕಿಮ್ಸ್ ಶವಾಗಾರಕ್ಕೆ ಸಾಗಿಸಲಾಗಿದೆ. ಈ ಕುರಿತು ಉಪ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 8:28 pm, Tue, 24 October 23