ಕೊಪ್ಪಳ, (ನವೆಂಬರ್ 19): ದೇಶದಾದ್ಯಂತ ವಿಶ್ವಕಪ್ ಕ್ರಿಕೆಟ್ ಫೀವರ್ ಜೋರಾಗಿದೆ. ಗುಜರಾತ್ನ ಅಹಮದಾಬಾದ್ನಲ್ಲಿರೋ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾರತ- ಆಸ್ಟ್ರೇಲಿಯಾ ಅಖಾಡಕ್ಕಿಳಿಯಲಿವೆ. ಮದಗಜಗಳ ಕಾಳಗವನ್ನ ಕಣ್ತುಂಬಿಕೊಳ್ಳಲು ಅಭಿಮಾನಿಗಳಿಗೆ ರಾಜ್ಯ ಸರ್ಕಾರ ಗಿಫ್ಟ್ ನೀಡ್ತಿದೆ. ಫೈನಲ್ ಪಂದ್ಯದ ನೇರಪ್ರಸಾರವನ್ನ ಜಿಲ್ಲಾ ಕೇಂದ್ರಗಳಲ್ಲಿ ಮಾಡುವಂತೆ ರಾಜ್ಯ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಸುತ್ತೋಲೆ ಹೊರಡಿಸಿದೆ. ಈ ಹಿನ್ನೆಲೆಯಲ್ಲಿ ಅಭಿಮಾನಿಯೋರ್ವ, 90 ಕಿ.ಮೀ. ದೂರದ ಹಳ್ಳಿಯಿಂದ ಕೊಪ್ಪಳ ನಗರಕ್ಕೆ ಆಗಮಿಸಿದ್ದಾನೆ.
ಕುಷ್ಟಗಿ ತಾಲೂಕಿನ ಅಡವಿಬಾವಿ ಗ್ರಾಮದ ನಿವಾಸಿ ರಮೇಶ್ , ತಮ್ಮೂರಲ್ಲಿ ವಿದ್ಯುತ್ ಸಮಸ್ಯೆಯಿಂದಾಗಿ 90 ಕಿ.ಮೀ. ದೂರದ ಕೊಪ್ಪಳ ನಗರಕ್ಕೆ ಬಂದಿದ್ದಾನೆ. ಇನ್ನು ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ರಮೇಶ್, ನಮ್ಮೂರಲ್ಲಿ ಕರೆಂಟ್ ಇರಲ್ಲ. ಹೀಗಾಗಿ ಕೊಪ್ಪಳಕ್ಕೆ ಬಂದಿದ್ದೇನೆ. ಸಂಬಂಧಿ ಮದುವೆ ಇತ್ತು. ಆದರೂ ಬಿಟ್ಟು ಕ್ರಿಕೆಟ್ ನೋಡಲು ಬಂದಿದ್ದೇನೆ. ನೂರು ರೂಪಾಯಿ ಬಸ್ ಚಾರ್ಜ್ ಹಾಕಿಕೊಂಡು ಕೊಪ್ಪಳಕ್ಕೆ ಬಂದಿದ್ದೇನೆ ಎಂದಿದ್ದಾರೆ.
ರಾಜ್ಯದ ಎಲ್ಲ ಜಿಲ್ಲಾ ಕ್ರೀಡಾಂಗಣಗಳಲ್ಲಿ ಸಾರ್ವಜನಿಕರು ಹಾಗೂ ಕ್ರೀಡಾಪಟುಗಳಿಗೆ ಪಂದ್ಯ ವೀಕ್ಷಿಸಲು ಅನುಕೂಲ ಕಲ್ಪಿಸುವಂತೆ ಸುತ್ತೋಲೆ ಹೊರಡಿಸಿದ್ದು, ಎಲ್ಇಡಿ ಸ್ಕ್ರೀನ್ ಅಳವಡಿಸುವಂತೆ ಸೂಚನೆ ನೀಡಿದೆ. ಸರ್ಕಾರದ ಆದೇಶದಂತೆ ಆಯಾ ಜಿಲ್ಲಾ ಕ್ರೀಡಾಂಗಣದಲ್ಲಿ ನೇರಪ್ರಸಾರಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಸಾರ್ವಜನಿಕ ಉಚಿತವಾಗಿ ನೋಡಲು ಜಿಲ್ಲಾಡಳಿತವೂ ಬೃಹತ್ ಎಲ್ಇಡಿ ಸ್ಕ್ರೀನ್ನನ್ನು ಅಳವಡಿಸಲು ಸಿದ್ಧತೆ ಮಾಡಿಕೊಂಡಿದೆ. ಜೊತೆಗೆ ಭದ್ರತೆಗೆ ಪೊಲೀಸರನ್ನ ನಿಯೋಜಿಸಿದೆ.
ಇನ್ನಷ್ಟು ಕ್ರಿಕೆಟ್ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 11:33 am, Sun, 19 November 23