ಕೊಪ್ಪಳದಲ್ಲಿ ಚಲಿಸುವ ರೈಲಿನಿಂದ ಹಾರಿ ಮೆಡಿಕಲ್ ವಿದ್ಯಾರ್ಥಿನಿ ಆತ್ಮಹತ್ಯೆ

| Updated By: sandhya thejappa

Updated on: Jul 03, 2022 | 2:51 PM

ತೇಜಶ್ರೀ ಕಳೆದ 3 ತಿಂಗಳಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದರಂತೆ. ನಿನ್ನೆ (ಜುಲೈ 2) ಸಂಜೆ ಹೊತ್ತಿಗೆ ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಇಂದು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವಿಗೀಡಾಗಿದ್ದಾರೆ.

ಕೊಪ್ಪಳದಲ್ಲಿ ಚಲಿಸುವ ರೈಲಿನಿಂದ ಹಾರಿ ಮೆಡಿಕಲ್ ವಿದ್ಯಾರ್ಥಿನಿ ಆತ್ಮಹತ್ಯೆ
ಮೃತ ವಿದ್ಯಾರ್ಥಿನಿ ತೇಜಶ್ರೀ
Follow us on

ಕೊಪ್ಪಳ: ಚಲಿಸುತ್ತಿದ್ದ ರೈಲಿನಿಂದ (Rail) ಹಾರಿ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಕಿಡದಾಳ್ ರೈಲ್ವೆ ಗೇಟ್ ಬಳಿ ಸಂಭವಿಸಿದೆ. ಬಳ್ಳಾರಿ ಮೂಲದ ತೇಜಶ್ರೀ(22) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ತೇಜಶ್ರೀ ಕಳೆದ 3 ತಿಂಗಳಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದರಂತೆ. ನಿನ್ನೆ (ಜುಲೈ 2) ಸಂಜೆ ಹೊತ್ತಿಗೆ ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಇಂದು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವಿಗೀಡಾಗಿದ್ದಾರೆ. ಸದ್ಯ ಈ ಬಗ್ಗೆ ಗದಗ ರೇಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾರಿನಲ್ಲಿದ್ದ ಇಬ್ಬರು ದುರ್ಮರಣ:
ಕಲಬುರಗಿ: ಕ್ರೂಸರ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಇಬ್ಬರು ದುರ್ಮರಣ ಹೊಂದಿದ್ದಾರೆ. ಈ ದುರ್ಘಟನೆ ಕಮಲಾಪುರ ತಾಲೂಕಿನ ಭೀಮನಾಳ ಕ್ರಾಸ್ ಬಳಿ ನಡೆದಿದೆ. ತೆಲಂಗಾಣದ ಮೊಹಮ್ಮದ್ ಅಬ್ದುಲ್ ಮಜೀದ ಸಿದ್ಧಿಖಿ(71), ಸಾದಯಾ ಖುನ್ನಿಸಾ ಬೇಗಂ(55) ಮೃತ ದುರ್ದೈವಿಗಳು. ಮೂವರಿಗೆ ಗಂಭೀರ ಗಾಯವಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಮಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: IND vs ENG: ಸಿರಾಜ್, ಶಮಿ, ಬುಮ್ರಾ ಬೆಂಕಿ ಬೌಲಿಂಗ್​: ಟೆಸ್ಟ್​ ಕ್ರಿಕೆಟ್​ನಲ್ಲಿ ಹೊಸ ದಾಖಲೆ

ಇದನ್ನೂ ಓದಿ
IND vs ENG: ಕೊರೊನಾದಿಂದ ಚೇತರಿಸಿಕೊಂಡ ಹಿಟ್‌ಮ್ಯಾನ್ ರೋಹಿತ್; ಸೀಮಿತ ಓವರ್‌ಗಳ ಸರಣಿಗೆ ಸಿದ್ಧತೆ
Swollen Gums: ಮಕ್ಕಳ ವಸಡಿನಲ್ಲಿ ಊತ ಕಾಣಿಸಿಕೊಳ್ಳಲು ಕಾರಣಗಳೇನು?
ಕೊಪ್ಪಳದಲ್ಲಿ ಚಲಿಸುವ ರೈಲಿನಿಂದ ಹಾರಿ ಮೆಡಿಕಲ್ ವಿದ್ಯಾರ್ಥಿನಿ ಆತ್ಮಹತ್ಯೆ
IND vs ENG: ಸಿರಾಜ್, ಶಮಿ, ಬುಮ್ರಾ ಬೆಂಕಿ ಬೌಲಿಂಗ್​: ಟೆಸ್ಟ್​ ಕ್ರಿಕೆಟ್​ನಲ್ಲಿ ಹೊಸ ದಾಖಲೆ

ಕಾರಾಗೃಹದ ಮೇಲೆ ಪೊಲೀಸರ ದಾಳಿ:
ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರು ಇಂದು ದಾಳಿ ನಡೆಸಿದ್ದಾರೆ. ದಾಳಿ ವೇಳೆ ಸಿಮ್ ಕಾರ್ಡ್,‌ ನಗದು,‌ ಮೊಬೈಲ್ ಫೋನ್​ ಪತ್ತೆಯಾಗಿದ್ದು, ವಶಕ್ಕೆ ಪಡೆಯಲಾಗಿದೆ. ಇನ್ನು  ಪಾತ್ರೆಗಳಿಂದ ಮಾಡಿದ ಚಾಕು ಪತ್ತೆಯಾಗಿದೆ. ಡಿಸಿಪಿ ಸುನಿಲ್ ಜೋಶಿ ನೇತೃತ್ವದಲ್ಲಿ 50ಕ್ಕೂ ಹೆಚ್ಚು ಪೊಲೀಸರು ದಾಳಿ ನಡೆಸಿ, ಪರಿಶೀಲನೆ ಮಾಡಿದ್ದಾರೆ. ಜೈಲಿನ ಒಳಗೆ ಅಕ್ರಮ ಚಟುವಟಿಕೆ ಬಗ್ಗೆ ಆರೋಪ ಕೇಳಿಬಂದ ಹಿನ್ನೆಲೆ ಜೈಲಿನಲ್ಲಿದ್ದ ಅಧಿಕಾರಿಗಳನ್ನು ವರ್ಗಾವಣೆಗೊಳಿಸಲಾಗಿತ್ತು. ವರ್ಗಾವಣೆಯಾದ 2 ವಾರಗಳ ಬಳಿಕ ಪೊಲೀಸರು ದಾಳಿ ನಡೆಸಿದ್ದಾರೆ.

ಇದನ್ನೂ ಓದಿ: Swollen Gums: ಮಕ್ಕಳ ವಸಡಿನಲ್ಲಿ ಊತ ಕಾಣಿಸಿಕೊಳ್ಳಲು ಕಾರಣಗಳೇನು?

Published On - 2:37 pm, Sun, 3 July 22