ಕೊಪ್ಪಳದಲ್ಲೊಂದು ಭೀಕರ ಅಪಘಾತ: ಬೈಕ್​ಗೆ ಅಪರಿಚಿತ ವಾಹನ ಡಿಕ್ಕಿ, ಬೈಕ್ ಸವಾರರಿಬ್ಬರು ಸ್ಥಳದಲ್ಲೇ ದುರ್ಮರಣ

ಬೈಕ್​ಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಸ್ಥಳದಲ್ಲೇ ಬೈಕ್ ಸವಾರರಿಬ್ಬರು ದುರ್ಮರಣ ಹೊಂದಿರುವಂತಹ ಘಟನೆ  ಜಿಲ್ಲೆಯ ವನಬಳ್ಳಾರಿ ಗ್ರಾಮದ ರಾಷ್ಟ್ರೀಯ ಹೆದ್ದಾರಿ 50ರ ಬಳಿ ನಡೆದಿದೆ.

ಕೊಪ್ಪಳದಲ್ಲೊಂದು ಭೀಕರ ಅಪಘಾತ: ಬೈಕ್​ಗೆ ಅಪರಿಚಿತ ವಾಹನ ಡಿಕ್ಕಿ, ಬೈಕ್ ಸವಾರರಿಬ್ಬರು ಸ್ಥಳದಲ್ಲೇ ದುರ್ಮರಣ
ಅಪಘಾತಕ್ಕೊಳಗಾದ ಬೈಕ್​
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on:Nov 14, 2022 | 8:23 PM

ಕೊಪ್ಪಳ: ಬೈಕ್​ಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಸ್ಥಳದಲ್ಲೇ ಬೈಕ್ (bike) ಸವಾರರಿಬ್ಬರು ದುರ್ಮರಣ ಹೊಂದಿರುವಂತಹ ಘಟನೆ  ಜಿಲ್ಲೆಯ ವನಬಳ್ಳಾರಿ ಗ್ರಾಮದ ರಾಷ್ಟ್ರೀಯ ಹೆದ್ದಾರಿ 50ರ ಬಳಿ ನಡೆದಿದೆ. ಹನುಮೇಶ (32), ರಮೇಶ ಮಾಲಿಗೌಡ್ರು (32) ಮೃತ ಯುವಕರು. ಮೃತರು ಯಲಬುರ್ಗಾ ತಾಲೂಕಿನ ಕುದರಿಕೊಟಗಿ ಗ್ರಾಮದವರು ಎಂದು ಗುರುತಿಸಲಾಗಿದೆ. ಬೈಕ್​ಗೆ ಡಿಕ್ಕಿ ಹೊಡೆದು ಅಪರಿಚಿತ ವಾಹನ ಚಾಲಕ ಪರಾರಿಯಾಗಿದ್ದಾನೆ. ಸ್ಥಳಕ್ಕೆ ಮುನಿರಾಬಾದ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಪೋಷಕರು ಬೈದಿದ್ದಕ್ಕೆ ಮನನೊಂದು ಬಾಲಕ ನೇಣಿಗೆ ಶರಣು

ಬೆಂಗಳೂರು: ಪೋಷಕರು ಬೈದಿದ್ದಕ್ಕೆ ಮನನೊಂದು ಬಾಲಕ ನೇಣಿಗೆ ಶರಣಾಗಿರುವಂತಹ ಘಟನೆ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. 7ನೇ ತರಗತಿಯ ಸಾಯಿಕುಮಾರ್(13) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಮನೆಯಲ್ಲಿ ಕೆಲಸ ಮಾಡದಿದ್ದಕ್ಕೆ ಪೋಷಕರು ಬೈದಿದ್ದಾರೆ. ಹಾಗಾಗಿ ಮನೆಯ ಟೆರಸ್ ಮೇಲೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ನಿನ್ನೆ (ಅ. 13) ಸಂಜೆ 7 ಗಂಟೆಗೆ ನಡೆದಿದ್ದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಮತ್ತೊಂದು ಪ್ರಕರಣದಲ್ಲಿ ಟ್ರ್ಯಾಕ್ಟರ್​ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ದುರ್ಮರಣ ಹೊಂದಿರುವಂತಹ ಘಟನೆ ನಡೆದಿದೆ. ಮಾರಪ್ಪನಪಾಳ್ಯದ ನಿವಾಸಿ ಕುಮಾರ್(35) ಮೃತ ಸವಾರ. ಅಪಘಾತದ ನಂತರ ಟ್ರ್ಯಾಕ್ಟರ್​ನೊಂದಿಗೆ ಚಾಲಕ ಪರಾರಿಯಾಗಿದ್ದಾನೆ. ಟ್ರ್ಯಾಕ್ಟರ್, ಚಾಲಕನಿಗಾಗಿ ಪೊಲೀಸರು ಶೋಧ ಕಾರ್ಯ ಆರಂಭಿಸಿದ್ದಾರೆ. ಮಲ್ಲೇಶ್ವರಂ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕರ್ತವ್ಯನಿರತ ಅಂಗನವಾಡಿ ಸಹಾಯಕಿ ಸ್ಥಳದಲ್ಲೆ ಸಾವು

ಚಿಕ್ಕಬಳ್ಳಾಪುರ: ಕರ್ತವ್ಯನಿರತ ಅಂಗನವಾಡಿ ಸಹಾಯಕಿ ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಬಂಡಹಳ್ಳಿ ಗ್ರಾಮದಲ್ಲಿ ನಡೆದಿದೆ. ಬೈರಮ್ಮ (54) ಮೃತ ದುರ್ದೈವಿ. ಮಕ್ಕಳ ದಿನಾಚರಣೆಗೆ ಹಿನ್ನೆಲೆ ಅಡುಗೆ ಮಾಡುವುದರದಲ್ಲಿ ಬೈರಮ್ಮ ತಲ್ಲಿನರಾಗಿದ್ದರು. ಈ ವೇಳೆ ಹೃದಯಾಘಾತದಿಂದ ಮೃತಪಟ್ಟಿರಬಹುದು ಎಂದು ಶಂಕೆ ವ್ಯಕ್ತವಾಗಿದೆ. ತಕ್ಷಣ ಅಂಗನವಾಡಿ ಶಿಕ್ಷಕಿ ಹಾಗೂ ಗ್ರಾಮಸ್ಥರು ಆರೈಕೆಗೆ ಆಗಮಿಸಿದ್ದು, ಆದರೆ ಯಾವುದೇ ಪ್ರಯೋಜನವಾಗಿಲ್ಲ. ಪೆರೇಸಂದ್ರ ಪೊಲೀಸ್ ಠಾಣೆ ವ್ಯಾಪ್ತಿ ಪ್ರಕರಣ ನಡೆದಿದೆ.

ಬೆಂಗಳೂರಿನಲ್ಲಿ ಯುವಕನ ಮೇಲೆ ಹಲ್ಲೆ ನಡೆಸಿದ್ದ ಆರೋಪಿಗಳು ಅರೆಸ್ಟ್

ಬೆಂಗಳೂರು: ನಗರದಲ್ಲಿ ಯುವಕನ ಮೇಲೆ ಮಾರಣಾಂತಿಕ‌ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಯೇಸುದಾಸ್ ಅಲಿಯಾಸ್ ಕ್ರಿಶ್, ಮನೋಜ್ ಬಂಧಿತ ಆರೋಪಿಗಳು. ನವಂಬರ್ 8 ರ ಮಧ್ಯರಾತ್ರಿ 1 ಗಂಟೆಗೆ ಬ್ಯಾಟರಾಯನಪುರ ವಿದ್ಯಾನಿಕೇತನ ಶಾಲೆ ಮುಂಭಾಗ ಆರೋಪಿಗಳು ಯುವಕನ ಮೇಲೆ ಲಾಂಗು ಮಚ್ಚುಗಳಿಂದ ಹಲ್ಲೆ ಮಾಡಿದ್ದರು. ಸ್ನೇಹಿತರಾದ ಪ್ರವೀಣ್, ದರ್ಶನ್ ಜೊತೆಗೆ ನಿಂತಿದ್ದ ಸಂದೀಪ್ ಮೇಲೆ ಆರೋಪಿಗಳಾದ ಯೇಸ್ ದಾಸ್ ಮತ್ತು ಮನೋಜ್ ಏಕಾ ಏಕಿ ಎರಗಿದ್ದರು. ಇದರಿಂದ ಸಂದೀಪ್ ಗಾಯಗೊಂಡಿದ್ದರು. ಹಲ್ಲೆ ಬಳಿಕ‌ ಪರಾರಿಯಾಗಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಕಾರವಾರದ ಕೆರೆಯೊಂದರಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನ ನಂದಿಕಟ್ಟಾ ಗ್ರಾಮದ ಹೊರವಲಯದ ಕೆರೆಯಲ್ಲಿ, ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆಯಾಗಿದ್ದಾರೆ. ಮಾಬುಸಾಬ್ ಅತ್ತಿವೇರಿ (47) ಮೃತ ವ್ಯಕ್ತಿ. ಕಳೆದ ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ಮಾಬುಸಾಬ್ ಅತ್ತಿವೇರಿ ಶವ ಕೆರೆಯಲ್ಲಿ ಪತ್ತೆಯಾಗಿದೆ. ಮಾಬುಸಾಬ್ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ಮುಂಡಗೋಡ ಪೊಲೀಸರು ಭೇಟಿ ನೀಡಿ ತನಿಖೆ ನಡೆಸಿದ್ದಾರೆ. ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 7:09 pm, Mon, 14 November 22

ದೇಗುಲದಲ್ಲಿ ಭಕ್ತನಂತೆ ಕೈ ಮುಗಿದು ಕುಳಿತು ಆಂಜನೇಯನ ಕಿರೀಟವನ್ನೇ ಕದ್ದ ಕಳ್ಳ
ದೇಗುಲದಲ್ಲಿ ಭಕ್ತನಂತೆ ಕೈ ಮುಗಿದು ಕುಳಿತು ಆಂಜನೇಯನ ಕಿರೀಟವನ್ನೇ ಕದ್ದ ಕಳ್ಳ
ಹೊಸವರ್ಷದ ಆಗಮನಕ್ಕಾಗಿ ಎಲ್ಲೆಡೆ ಶುರುವಾಗಿದೆ ಕ್ಷಣಗಣನೆ
ಹೊಸವರ್ಷದ ಆಗಮನಕ್ಕಾಗಿ ಎಲ್ಲೆಡೆ ಶುರುವಾಗಿದೆ ಕ್ಷಣಗಣನೆ
ರಜತ್​ಗೆ ರಿವರ್ಸ್​, ಧನರಾಜ್​-ಹನುಮಂತುಗೆ ಫಾಸ್ಟ್ ಫಾರ್ವರ್ಡ್
ರಜತ್​ಗೆ ರಿವರ್ಸ್​, ಧನರಾಜ್​-ಹನುಮಂತುಗೆ ಫಾಸ್ಟ್ ಫಾರ್ವರ್ಡ್
ಕೇಕ್ ಕತ್ತರಿಸಿ, ಪಟಾಕಿ ಸಿಡಿಸಿ ಹೊಸ ವರ್ಷ ಬರಮಾಡಿಕೊಂಡ ಆಕ್ಲೆಂಡ್ ಜನರು
ಕೇಕ್ ಕತ್ತರಿಸಿ, ಪಟಾಕಿ ಸಿಡಿಸಿ ಹೊಸ ವರ್ಷ ಬರಮಾಡಿಕೊಂಡ ಆಕ್ಲೆಂಡ್ ಜನರು
ಮೈಸೂರು ಅರಮನೆಯ ವಿದ್ಯುದ್ದೀಪ ಅಲಂಕಾರ ಇನ್ನೂ ಚೆಂದ: ರೈತರು
ಮೈಸೂರು ಅರಮನೆಯ ವಿದ್ಯುದ್ದೀಪ ಅಲಂಕಾರ ಇನ್ನೂ ಚೆಂದ: ರೈತರು
ಈ ವರ್ಷದ ಕೊನೆಯ ಸೂರ್ಯಾಸ್ತ: ಕ್ಯಾಮರಾ ಕಣ್ಣಲ್ಲಿ ಸೆರೆಯಾಯ್ತು ಮನಮೋಹಕ ದೃಶ್ಯ
ಈ ವರ್ಷದ ಕೊನೆಯ ಸೂರ್ಯಾಸ್ತ: ಕ್ಯಾಮರಾ ಕಣ್ಣಲ್ಲಿ ಸೆರೆಯಾಯ್ತು ಮನಮೋಹಕ ದೃಶ್ಯ
ಸಂಘದ ಸದಸ್ಯನಾಗಲು ಕುಡುಕನಾಗಿರುವುದು ಬೇಸಿಕ್ ಅರ್ಹತೆ ಮತ್ತು ಅನಿವಾರ್ಯತೆ!
ಸಂಘದ ಸದಸ್ಯನಾಗಲು ಕುಡುಕನಾಗಿರುವುದು ಬೇಸಿಕ್ ಅರ್ಹತೆ ಮತ್ತು ಅನಿವಾರ್ಯತೆ!
ಬೇಕರಿ ಮಾಲೀಕ ಹೇಳುವಂತೆ ಕೇಕ್ ಕಟ್ ಮಾಡುವ ಕ್ರೇಜ್ ಕಡಿಮೆಯಾಗಿದೆ!
ಬೇಕರಿ ಮಾಲೀಕ ಹೇಳುವಂತೆ ಕೇಕ್ ಕಟ್ ಮಾಡುವ ಕ್ರೇಜ್ ಕಡಿಮೆಯಾಗಿದೆ!
ಮೈಸೂರು; ಹುಚ್ಚು ಸಾಹಸಗಳನ್ನು ಸೆರೆಹಿಡಿಯಲು ಸಿಸಿಟಿವಿ ಕೆಮೆರಾಗಳು: ಡಿಸಿಪಿ
ಮೈಸೂರು; ಹುಚ್ಚು ಸಾಹಸಗಳನ್ನು ಸೆರೆಹಿಡಿಯಲು ಸಿಸಿಟಿವಿ ಕೆಮೆರಾಗಳು: ಡಿಸಿಪಿ
ಮರಳಿನಲ್ಲಿ ಸಿಲುಕಿಕೊಂಡ ಫೆರಾರಿ ಕಾರು; ರಸ್ತೆಗೆ ಎಳೆದು ತಂದ ಎತ್ತಿನ ಗಾಡಿ
ಮರಳಿನಲ್ಲಿ ಸಿಲುಕಿಕೊಂಡ ಫೆರಾರಿ ಕಾರು; ರಸ್ತೆಗೆ ಎಳೆದು ತಂದ ಎತ್ತಿನ ಗಾಡಿ