AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟ ಯಶ್​ ಯಶೋಮಾರ್ಗದ ಕನಸು ನನಸು: ಕೋಡಿ ತುಂಬಿ ಹರಿದ ತಲ್ಲೂರು ಕೆರೆ, ರೈತರ ಮೊಗದಲ್ಲಿ ಮಂದಹಾಸ

ಯಶೋಮಾರ್ಗದ ಮೂಲಕ ತಲ್ಲೂರು ಕೆರೆಯನ್ನು ಸುಮಾರು 4 ಕೋಟಿ ರೂಪಾಯಿ ವೆಚ್ಚದಲ್ಲಿ ಕೆರೆ ಅಭಿವೃದ್ಧಿ ಮಾಡಲಾಗಿದೆ. ರಾಕಿಂಗ್ ಸ್ಟಾರ್ ಯಶ್​ರ ಸಮಾಜಿಕ ಕಾರ್ಯಕ್ಕೆ ಇಲ್ಲಿನ ಜನರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

ನಟ ಯಶ್​ ಯಶೋಮಾರ್ಗದ ಕನಸು ನನಸು: ಕೋಡಿ ತುಂಬಿ ಹರಿದ ತಲ್ಲೂರು ಕೆರೆ, ರೈತರ ಮೊಗದಲ್ಲಿ ಮಂದಹಾಸ
ರಾಕಿಂಗ್ ಸ್ಟಾರ್ ಯಶ್, ತಲ್ಲೂರು ಕೆರೆ
TV9 Web
| Edited By: |

Updated on: Oct 01, 2022 | 9:00 AM

Share

ಕೊಪ್ಪಳ: ಸ್ಯಾಂಡಲವುಡ್​ನ ರಾಕಿಂಗ್ ಸ್ಟಾರ್ ಕೆಜಿಎಫ್​ನ ರಾಕಿಭಾಯ್ ಅಂತಲೇ ಫೆಮಸ್ ಆಗಿರೋ ನಟ ಯಶ್ (Yash) ಅಭಿವೃದ್ಧಿ ಪಡಿಸಿದ ಕೊಪ್ಪಳ ಜಿಲ್ಲೆ ಯಲಬುರ್ಗಾ ತಾಲೂಕಿನ ತಲ್ಲೂರು ಕೆರೆ ತುಂಬಿ ಕೋಡಿ ಬಿದ್ದಿದ್ದು, ಈ ಭಾಗದ ರೈತರ ಮೊಗದಲ್ಲಿ ಮಂದಹಾಸ ಮೂಡಿಸಿದೆ. ಕಳೆದ ಹಲವು ದಿನಗಳಿಂದ ಬಿಡುವು ನೀಡಿದ್ದ ಮಳೆರಾಯ ನಿನ್ನೆ ರಾತ್ರಿ ಧರೆಗೆ ಮತ್ತೊಮ್ಮೆ ಅಪ್ಪಳಿಸಿದ್ದರಿಂದ‌, ಮತ್ತು ನಿರಂತರವಾಗಿ ಸುರಿದ ಮಳೆಯಿಂದಾಗಿ ತಲ್ಲೂರು ಕೆರೆ ಭರ್ತಿಯಾಗಿದೆ. ಹೀಗಾಗಿ ಅಂದು ನಟ ಯಶ್ ಅವರ ಯಶೋಮಾರ್ಗದ ಕನಸು ನನಸಾಗಿದೆ. ಯಾಕೆಂದ್ರೆ ಅಂದು ಈ ಭಾಗದ ರೈತರಿಗೆ ಹಾಗೂ ಜಾ‌ನುವಾರಗಳಿಗೆ ನೀರಿನ ಸಮಸ್ಯೆಯಾದಾಗ 2017ರಲ್ಲಿ ಯಶೋಮಾರ್ಗ ಫೌಂಡೇಶನ್‌ನಿಂದ ಕೆರೆಯನ್ನು ಅಭಿವೃದ್ಧಿ ಮಾಡಲಾಗಿತ್ತು. ಅಂದು ಖುದ್ದು ಯಶ್ ಕೊಪ್ಪಳ ಜಿಲ್ಲೆಗೆ ಬಂದು ಕೆರೆಯನ್ನ ಅಭಿವೃದ್ಧಿ ಪಡಿಸೊ ಶಪಥ ಮಾಡಿದ್ದರು. ಅದರಂತೆ ಕೆರೆಯನ್ನ ತಮ್ಮ ಫೌಂಡೇಶನ್ ಮೂಲಕವೆ ಅಭಿವೃದ್ಧಿ ಪಡಿಸಿದ್ದರು. ಅಭಿವೃದ್ದಿ ಪಡಿಸಿದ ನಂತರ ಇದೇ ಮೊದಲ ಬಾರಿಗೆ ಕೆರೆ ಸಂಪೂರ್ಣ ತುಂಬಿ ಕೋಡಿ ಬಿದ್ದಿದೆ.

ಯಶೋಮಾರ್ಗದ ಮಹತ್ವದ ಯೋಜನೆಯಾಗಿದ್ದ ತಲ್ಲೂರು ಕೆರೆಯ ತುಂಬಾ ನೀರು ಬಂದಿದ್ದು, ನೋಡಲು ಸುಂದರಮಯವಾಗಿದ್ದು ಸುತ್ತಮುತ್ತಲಿನ ಜನರಲ್ಲಿ ನೀರಿನ ದಾಹ ತೀರಿ ಮಂದಹಾಸ ಮೂಡಿಸಿದೆ..! 2008 ರಲ್ಲಿ ಈ ಕೆರೆ ಕೋಡಿ ಬಿದ್ದಿತ್ತು. ಅದಾದ ಮೇಲೆ ವಪರಿತ ಬರಗಾಲದಿಂದ ಕೆರೆಯಲ್ಲಿ ನೀರೇ ಇಲ್ಲದಂತಾಗಿತ್ತು. ಸದ್ಯ ಈಗ ಕೋಡಿ ಬಿದ್ದ ಹಿನ್ನೆಲೆಯಲ್ಲಿ ಗ್ರಾಮಸ್ಥರು ಸಂತಸ ವ್ಯಕ್ತಪಡಿಸಿದ್ದಾರೆ. ಸತತ ಮೂರ್ನಾಲ್ಕು ವರ್ಷಗಳ ಬರದಿಂದ ಸಂಪೂರ್ಣವಾಗಿ 96 ಎಕರೆ ವಿಸ್ತೀರ್ಣದ ತಲ್ಲೂರು ಕೆರೆ ಬತ್ತಿ ಹೋಗಿತ್ತು. ಅಲ್ಲದೇ ಸಂಪೂರ್ಣವಾಗಿ ಹೂಳು ಕೂಡಾ ತುಂಬಿಕೊಂಡಿತ್ತು. ಕೆರೆಯಲ್ಲಿ ತುಂಬಿರುವ ಹೂಳು ತಗೆಯಲು 2017 ಫೆಬ್ರವರಿ ತಿಂಗಳಲ್ಲಿ ಹೂಳು ತಗೆಯಲು ಯಶ್ ದಂಪತಿ ಚಾಲನೆ ನೀಡಿದ್ದರು. ಅಂದು ನೀಡಿದ್ದ ಕೆರೆ ಕಾಯಕಕ್ಕೆ ಈಗ ಸಾರ್ಥಕತೆ ಸಿಕ್ಕಿದೆ. ಇದರಿಂದ ಸುಮಾರು 10 ಕ್ಕೂ ಹೆಚ್ಚು ಗ್ರಾಮದ ರೈತರಿಗೆ ಅನುಕೂಲವಾಗಿದೆ.

ನಟ ಯಶ್ ಮಾಡಿರುವ ಈ ಕಾರ್ಯವನ್ನ ರೈತರು ಕೊಂಡಾಡುತ್ತಿದ್ದು, ಬರದ ನಾಡಿನ ಭಗೀರಥ ಬಂದಂಗ ಬಂದು ನಮ್ಮೂರು ಕೆರೆ ಅಭಿವೃದ್ಧಿ ಪಡಿಸಿದ್ದಾರೆ. ಈ ಬಾರಿ ಮಳೆಯೂ ಚೆನ್ನಾಗಿ ಆಯ್ತು, ಕೆರೆನೂ ತುಂಬಿದೆ ಎಂದು ಗ್ರಾಮಸ್ಥರು ಸಂತಸವನ್ನು ಹಂಚಿಕೊಂಡಿದ್ದಾರೆ. ಯಶೋಮಾರ್ಗದ ಮೂಲಕ ತಲ್ಲೂರು ಕೆರೆಯನ್ನು ಸುಮಾರು 4 ಕೋಟಿ ರೂಪಾಯಿ ವೆಚ್ಚದಲ್ಲಿ ಕೆರೆ ಅಭಿವೃದ್ಧಿ ಮಾಡಲಾಗಿದೆ. ರಾಕಿಂಗ್ ಸ್ಟಾರ್ ಯಶ್​ರ ಸಮಾಜಿಕ ಕಾರ್ಯಕ್ಕೆ ಇಲ್ಲಿನ ಜನರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

ವರದಿ: ದತ್ತಾತ್ರೇಯ ಪಾಟೀಲ್​ ಟಿವಿ 9 ಕೊಪ್ಪಳ.

ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
Ashes 2025: ಮೂರಕ್ಕೆ ಮೂರು... ಆಸ್ಟ್ರೇಲಿಯಾ ಪಾಲಾದ ಆ್ಯಶಸ್
Ashes 2025: ಮೂರಕ್ಕೆ ಮೂರು... ಆಸ್ಟ್ರೇಲಿಯಾ ಪಾಲಾದ ಆ್ಯಶಸ್
ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ
ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ
ನಾಯಕತ್ವ ಬದಲಾವಣೆ ಗೊಂದಲ ಬಗೆಹರಿಸಿ: ಖರ್ಗೆಗೆ VR ಸುದರ್ಶನ್ ಪತ್ರ
ನಾಯಕತ್ವ ಬದಲಾವಣೆ ಗೊಂದಲ ಬಗೆಹರಿಸಿ: ಖರ್ಗೆಗೆ VR ಸುದರ್ಶನ್ ಪತ್ರ